Uncategorized
ಯಾರಪ್ಪ ಗಂಡ್ಸು ಎಂದು ಕೆಣಕಿದ ಸಚಿವ ಅಶ್ವತ್ಥನಾರಾಯಣ, ನನ್ನ ಗಂಡಸ್ತನ ತೋರಿಸಲಾ? ಎಂದು ವೇದಿಕೆಯಲ್ಲಿಯೇ ನುಗ್ಗಿ ಬಂದ ಸಂಸದ ಡಿಕೆ ಸುರೇಶ್ – ಮುಖ್ಯಮಂತ್ರಿ ಸಮ್ಮುಖ ಹೈಡ್ರಾಮ | ಏನಿದು ವಿವಾದ ? ಯಾಕೀ ಗಲಾಟೆ ? ಇಲ್ಲಿದೆ ಸಂಪೂರ್ಣ ವಿವರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ. ಸುರೇಶ್ ಕೈ ಕೈ ಮಿಲಾಯಿಸಲು ಮುಂದಾದ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್ ರವಿ ಮೈಕ್ ಕಿತ್ತುಕೊಳ್ಳಲು ಮುಂದಾದ ಘಟನೆ ರಾಮನಗರ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಸೋಮವಾರ ಬೆಳಿಗ್ಗೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಭಾರೀ ಸದ್ದು ಮಾಡುತ್ತಿದೆ
ಪ್ರತಿಮೆಗಳ ಅನಾವರಣ ಹಾಗೂ ವಿವಿಧ ಕಾಮಗಾರಿಗಳ ಚಾಲನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಾಲ್ಗೊಂಡಿದ್ದರು. ಅಂಬೇಡ್ಕರ್ ಮತ್ತು ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಶ್ರಮಿಸಿದ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲ ಮುಖಂಡರನ್ನು ಜಿಲ್ಲಾಡಳಿತ ಕಡೆಗಣಿಸಿದ್ದು, ಕಾಟಾಚಾರಕ್ಕಾಗಿ ಆಹ್ವಾನಿಸಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ದಲಿತ ಮುಖಂಡರು ಕಪ್ಪು ಪಟ್ಟಿ ಧರಿಸಿ ಕಾರ್ಯಕ್ರಮದಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೆಲವರು ವೇದಿಕೆಗೆ ಏರಿ ಪ್ರತಿಭಟಿಸಿದರು.
ಈ ಎಲ್ಲ ಘಟನೆಗಳಿಂದ ಕುಪಿತರಾದ ಸಚಿವ ಅಶ್ವತ್ಥನಾರಾಯಣ ತಮ್ಮ ಭಾಷಣದಲ್ಲಿ ಹಿಂದಿನ ಕಾಂಗ್ರೇಸ್ ಸರಕಾರದ ಕಾರ್ಯ ವೈಖರಿಯನ್ನು ಟೀಕಿಸಿದರು.ಅಲ್ಲದೆ ಡಿ,ಕೆ ಸಹೋದರರ ಹೆಸರು ಎತ್ತದೆ ಅವರನ್ನು ಪರೋಕ್ಷವಾಗಿ ಕುಟುಕಿದರು.

‘ಮುಖ್ಯಮಂತ್ರಿಯಾಗಿ ಇದೇ ಮೊದಲ ಬಾರಿಗೆ ಬೊಮ್ಮಾಯಿ ನಮ್ಮ ಜಿಲ್ಲೆಗೆ ಬಂದಿದ್ದಾರೆ. ಅವರನ್ನು ಗೌರವದಿಂದ ನಡೆಸಿಕೊಳ್ಳಬೇಕಿತ್ತು. ಇವತ್ತು ಏನು ತಪ್ಪಾಗಿದೆ ಎಂದು ಘೋಷಣೆ ಕೂಗುತ್ತಿದ್ದೀರಿ. ನಾಲ್ಕು ಜನ ಕಟ್ಟಿಕೊಂಡು ಸಭೆಗೆ ಅಡ್ಡಿಪಡಿಸುತ್ತಿದ್ದೀರಿ. ಯಾರಪ್ಪ ಗಂಡು ಅದು, ಸಭೆಯಲ್ಲಿ ಗಲಾಟೆ ಮಾಡುವುದು ಬಿಟ್ಟು ಏನು ಕೆಲಸ ಮಾಡಿದ್ದೀರಿ ತೋರಿಸಿ. ನಾನೆಂದೂ ಯಾರ ಜಮೀನಿಗೂ ಬೇಲಿ ಹಾಕುವ ಕೆಲಸ ಮಾಡಿಲ್ಲ’ ಎಂದರು.
ಈ ವೇಳೆ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ವೇದಿಕೆಯಲ್ಲಿ ರಾಜಕೀಯ ಬೇಡ ಎಂಬ ಸಲಹೆ ನೀಡಿದರು . ಆದರೂ ಸುಮ್ಮನಾಗದ ಅಶ್ವತ್ಥನಾರಾಯಣ ಮುಖ್ಯಂತ್ರಿಗಳ ವಿರುದ್ದ ಘೋಷಣೆ ಕೂಗಿದ್ದು ಸರಿಯೇ ಎಂದು ಪ್ರಶ್ನಿಸಿ ವಾಗ್ದಾಳಿ ಮುಂದುವರಿಸಿದರು.
ವೇದಿಕೆಯಲ್ಲೇ ಸಂಸದ ಸುರೇಶ್ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು ನನ್ನ ಗಂಡಸ್ತನ ತೋರಿಸಲಾ ? ಎಂದು ಹೇಳುತ್ತಾ ಅಶ್ವತ್ಥನಾರಾಯಣ ಅವರತ್ತ ನುಗ್ಗಿ ಬಂದರು. ಈ ಸಂದರ್ಭ ಇಬ್ಬರ ನಡುವೆ ಮಾತಿನ ಜಟಾಪಟಿ ನಡೆದು ಕೈ ಕೈ ಮಿಲಾಯಿಸುವಲ್ಲಿಯವರೆಗೆ ತಲುಪಿತು. ಈ ವೇಳೆ ವಿಧಾನ ಪರಿಷತ್ ಸದಸ್ಯ ಎಸ್. ರವಿ ಮೈಕ್‌ನಲ್ಲಿ ಮಾತನಾಡಲು ಯತ್ನಿಸಿದ್ದು, ಅಶ್ವತ್ಥನಾರಾಯಣ ಅದಕ್ಕೆ ಅವಕಾಶ ನೀಡಲಿಲ್ಲ. ಇದರಿಂದ ಸಿಟ್ಟಿಗೆದ್ದ ರವಿ ಮೈಕ್ ಕಿತ್ತೆಸೆದರು. ಈ ಹಂತದಲ್ಲಿ ಮಧ್ಯೆ ಪ್ರವೇಶಿಸಿದ ಭದ್ರಾತ ಸಿಬಂದಿಗಳು ಹೆಚ್ಚಿನ ಅನಾಹುತವಾಗದಂತೆ ತಡೆದರು.
ವಿಡಿಯೋ ನೋಡಿ :
ಮುಖ್ಯಮಂತ್ರಿ ಸಹಿತ ವೇದಿಕೆಯಲ್ಲಿದ್ದವರು ಇಬ್ಬರನ್ನೂ ಸಮಾಧಾನ ಪಡಿಸುವ ಪ್ರಯತ್ನ ಮಾಡಿದರು. ನಂತರ ಡಿ.ಕೆ. ಸುರೇಶ್, ರವಿ ಮತ್ತಿತರರು ಮುಖ್ಯಮಂತ್ರಿ ಎದುರು ಧರಣಿ ಕುಳಿತರು.
‘ಪ್ರತಿಮೆಗಳ ನಿರ್ಮಾಣದ ಹಿಂದೆ ಇಡೀ ಜಿಲ್ಲೆಯ ನಾಗರಿಕರ ಕೊಡುಗೆ ಇದೆ. ಹೀಗಾಗಿ ಸಾಕಷ್ಟು ಮುಂಚಿತವಾಗಿಯೇ ಎಲ್ಲ ಜನಪ್ರತಿನಿಧಿಗಳ ಸಭೆ ಕರೆದು ಚರ್ಚಿಸಿ ಕಾರ್ಯಕ್ರಮ ರೂಪಿಸಿದ್ದರೆ ನಾವು ಪಕ್ಷಾತೀತವಾಗಿ ಬೆಂಬಲ ನೀಡುತ್ತಿದ್ದೆವು. ಆದರೆ ಕೇವಲ ಮೂರು ದಿನಗಳ ಹಿಂದೆ ಕಾಟಾಚಾರಕ್ಕೆ ಆಹ್ವಾನಪತ್ರಿಕೆ ಕಳುಹಿಸಿ ಕಾರ್ಯಕ್ರಮಕ್ಕೆ ಬನ್ನಿ ಎಂದು ಅವಮಾನ ಮಾಡಿದ್ದಾರೆ’ ಎಂದು ಡಿ.ಕೆ. ಸುರೇಶ್ ದೂರಿದರು.
, ‘ಬಿಜೆಪಿ ಬಂದ ಮೇಲೆ ರೇಷ್ಮೆಗೆ ಬೆಲೆ ಬರಲಿಲ್ಲ. ಜನಪ್ರತಿನಿಧಿಗಳ ಸಭೆ ಕರೆದಿಲ್ಲ. ‘ಕಾರ್ಯಕ್ರಮಕ್ಕೆ ಕನಿಷ್ಠ ಈ ಭಾಗದ ಸ್ವಾಮೀಜಿಗಳನ್ನು ಕರೆಯಿಸಬೇಕಿತ್ತು. ಇದೇನಾ ನಿಮ್ಮ ಆರ್‌ಎಸ್‌ಎಸ್ ಕಲಿಸಿದ ಸಂಸ್ಕೃತಿ’ ನಮ್ಮ ಸಂಸ್ಕೃತಿಯ ಬಗ್ಗೆ ಮಾತನಾಡುವುದು ಬೇಡ. ಆರೋಗ್ಯ ವಿವಿಗೆ ವಿರೋಧ ವ್ಯಕ್ತಪಡಿಸಿದ್ದು ಇದೇ ಸಚಿವ ಅಶ್ವತ್ಥ್ ನಾರಾಯಣ. ಸಿಂಡಿಕೇಟ್‌ನಲ್ಲಿ ವಿರೋಧ ವ್ಯಕ್ತಪಡಿಸಿದ್ದು ಸಚಿವ ಅಶ್ವತ್ಥ್ ನಾರಾಯಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ರಾಮನಗರವೂ ಸೇರಿದಂತೆ ಇಡೀ ರಾಜ್ಯಕ್ಕೆ ನೀವು ಯಾವ ಜಿಲ್ಲೆಗೂ ಉಸ್ತುವಾರಿ ಸಚಿವರನ್ನು ಅಧಿಕೃತವಾಗಿ ನೇಮಿಸಿಲ್ಲ. ಹೀಗಿರುವಾಗ ಇವರನ್ನು ಉಸ್ತುವಾರಿ ಸಚಿವ ಎಂದು ಹೇಗನ್ನುತ್ತೀರಿ’ ಎಂದು ಅಶ್ವತ್ಥನಾರಾಯಣ ಕುರಿತು ಮುಖ್ಯಮಂತ್ರಿಯನ್ನು ಪ್ರಶ್ನಿಸಿದರು.
ಈ ವೇಳೆ ವೇದಿಕೆಯ ಕೆಳಭಾಗದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ‘ಆರ್‌ಎಸ್‌ಎಸ್ ಬಗ್ಗೆ ಏಕೆ ಮಾತನಾಡುತ್ತೀರಿ’ ಎಂದು ಪ್ರಶ್ನಿಸಿದರು.
ಬೊಮ್ಮಾಯಿ ಕಿವಿಮಾತು:
ಮುಖ್ಯಮಂತ್ರಿ ಬೊಮ್ಮಾಯಿ ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದರು. ‘ರಾಜಕೀಯ ಇದ್ದದ್ದೇ. ಆದರೆ ನಾವು ಜನಪರವಾಗಿ ಕೆಲಸ ಮಾಡಬೇಕೇ ಹೊರತು ಭಿನ್ನಾಭಿಪ್ರಾಯವನ್ನೇ ದೊಡ್ಡದು ಮಾಡಬಾರದು. ಜನರು ಮುಗ್ಧರು. ನಮ್ಮ ವರ್ತನೆಗಳು ಅವರ ಮೇಲೆ ಪರಿಣಾಮ ಬೀರುತ್ತದೆ’ ಎಂದು ಇಬ್ಬರಿಗೂ ಕಿವಿಮಾತು ಹೇಳಿದರು.
‘ಹಳೆ ಮೈಸೂರು ಭಾಗದಿಂದ ಎಚ್.ಡಿ. ದೇವೇಗೌಡ, ಎಸ್.ಎಂ. ಕೃಷ್ಣ, ಎಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಇವರೆಲ್ಲ ನಮ್ಮ ಉತ್ತರ ಕರ್ನಾಟಕ ಭಾಗಕ್ಕೆ ಬಂದಾಗ ಅಪಾರ ಪ್ರೀತಿ ತೋರಿಸಿದ್ದೇವೆ’ ಎಂದೂ ಹೇಳಿದರು.
ಮಾಗಡಿಯಲ್ಲೂ ಮುಂದುವರಿಕೆ:
ಸಚಿವ ಅಶ್ವತ್ಥನಾರಾಯಣ ಅವರ ಹುಟ್ಟೂರಾದ ಮಾಗಡಿ ತಾಲ್ಲೂಕಿನ ಚಿಕ್ಕಕಲ್ಯಾ ಗ್ರಾಮದಲ್ಲಿ ಮಧ್ಯಾಹ್ನ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲೂ ಗಲಾಟೆ ಮುಂದುವರಿಯಿತು.
ಅಶ್ವತ್ಥನಾರಾಯಣ ಭಾಷಣದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ‘ಡಿ.ಕೆ… ಡಿ.ಕೆ’ ಎಂದು ಘೋಷಣೆ ಕೂಗಿದರು. ಆಗ ಸುರೇಶ್ ತಮ್ಮ ಬೆಂಬಲಿಗರನ್ನು ಗದರಿಸಿದರು. ಸುರೇಶ್ ಮಾತನಾಡುವ ವೇಳೆ ಬಿಜೆಪಿ ಬೆಂಬಲಿಗರು ಅಲ್ಲಿಂದ ಹೊರಡಲು ಮುಂದಾದಾಗ ಜೆಡಿಎಸ್ ಶಾಸಕ ಎ.ಮಂಜುನಾಥ ಮಧ್ಯ ಪ್ರವೇಶಿಸಿ ‘ಇದು ಬಲಾಬಲದ ವೇದಿಕೆಯಲ್ಲ. ಯಾರೂ ಹೋಗಬೇಡಿ’ ಎಂದು ಮನವಿ ಮಾಡಿದರು.
ಏನಿದು ಪ್ರತಿಮೆ ವಿವಾದ:
ಜಿಲ್ಲಾ ಕೇಂದ್ರವಾದ ರಾಮನಗರದಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಿಸಬೇಕು ಎಂದು ಸಂಘಟನೆಗಳು ಒತ್ತಾಯಿಸುತ್ತ ಬಂದಿದ್ದವು. ಮತ್ತೊಂದೆಡೆ, ಮಾಗಡಿಯವರೇ ಆದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೂ ಒತ್ತಾಯ ಕೇಳಿಬಂದಿತ್ತು. ನಂತರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ಅನುಮತಿ ನೀಡಿ, ನಿರ್ಮಾಣದ ಉಸ್ತುವಾರಿಗಾಗಿ ಸಮಿತಿಯನ್ನೂ ರಚಿಸಲಾಯಿತು. ₹59.60 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಪ್ರತಿಮೆ ಹಾಗೂ ₹63.82 ಲಕ್ಷ ವೆಚ್ಚದಲ್ಲಿ ಕೆಂಪೇಗೌಡರ ಪ್ರತಿಮೆ ಸಿದ್ಧವಾಗಿದ್ದು, ಇವುಗಳನ್ನು 2019ರ ಅಕ್ಟೋಬರ್‌ನಲ್ಲಿಯೇ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ನಿಲ್ಲಿಸಲಾಗಿತ್ತು. ಆದರೆ ಜನಪ್ರತಿನಿಧಿಗಳ ದಿನಾಂಕ ಹೊಂದಾಣಿಕೆ ಆಗದ ಕಾರಣಕ್ಕೆ ಉದ್ಘಾಟನೆಯನ್ನು ಮುಂದೂಡುತ್ತಲೇ ಬರಲಾಗಿತ್ತು.
ಪರ–ವಿರೋಧ ಪ್ರತಿಭಟನೆ:
ಸಚಿವ ಅಶ್ವತ್ಥನಾರಾಯಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಚನ್ನಪಟ್ಟಣದಲ್ಲಿ ಪ್ರತಿಭಟನೆ ಮಾಡಿದರು. ರಾಮನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಸಂಜೆ ಬಿಜೆಪಿ ಜಿಲ್ಲಾ ಕಾರ್ಯಕರ್ತರು ಡಿ.ಕೆ. ಸುರೇಶ್ ನಡೆ ಖಂಡಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು. ರಾಮನಗರದಲ್ಲಿ ಕಾರ್ಯಕ್ರಮದ ಮುಕ್ತಾಯದ ಬಳಿಕ ಹೆದ್ದಾರಿ ಮಧ್ಯದಲ್ಲಿ ಕಟ್ಟಿದ್ದ ಬಿಜೆಪಿ ನಾಯಕರ ಸ್ವಾಗತದ ಬ್ಯಾನರ್‌ಗಳನ್ನು ಡಿ.ಕೆ. ಸುರೇಶ್ ಬೆಂಬಲಿಗರು ಹರಿದುಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಬಳಿಕ ಡಿ.ಕೆ. ಸುರೇಶ್ ಹೇಳಿದ್ದೇನು?:
ರಾಮನಗರದ ಕಾರ್ಯಕ್ರಮದಲ್ಲಿ ನಡೆದ ವಾಕ್ಸಮ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ವಿರುದ್ಧ ಡಿಕೆ ಸುರೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸವಾಲೆಸೆದು ಆಹ್ವಾನ ಕೊಟ್ಟರೆ ಸಮ್ಮನೆ ಕೂರಲಾಗಲಿಲ್ಲ ಎಂದು ಹೇಳಿದ್ದಾರೆ.
‘ಮಂತ್ರಿಗಳು ಮಂತ್ರಿಗಳ ರೀತಿ ನಡೆದುಕೊಳ್ಳಲಿಲ್ಲ. ಸಚಿವರು ಸವಾಲೆಸೆದು ಕರೆದರೆ ಸುಮ್ಮನೆ ಕೂರಲು ಆಗಲಿಲ್ಲ. ಇದು ರಾಜ್ಯ ಸರ್ಕಾರದ ವತಿಯಿಂದ ನಡೆದ ಕಾರ್ಯಕ್ರಮ. ಆದರೆ, ಇದು ಬಿಜೆಪಿ ಕಾರ್ಯಕ್ರಮದಂತೆ ಕಾಣುತ್ತಿತ್ತು. ರಾಮನಗರ ಜಿಲ್ಲಾ ಪಂಚಾಯತ್ ವತಿಯಿಂದ ಅನುದಾನ ಪಡೆದಿದ್ದಾರೆ. ಇಲ್ಲಿ ಹಾಕಿರುವ ಎಲ್ಲಾ ಕಲ್ಲುಗಳನ್ನು ನಾವು ತಂದಿದ್ದೆವು. ಸಚಿವರು ಎಲ್ಲವನ್ನು ನಾವೇ ಮಾಡಿದ್ದೇವೆಂದು ವೀರಾವೇಷ ಪ್ರದರ್ಶಿಸಿದಾಗ ಸುಮ್ಮನಿರಲಾಗಲಿಲ್ಲ. ಸಿಎಂ ಸಮ್ಮುಖದಲ್ಲಿ ವೇದಿಕೆಯಲ್ಲೇ ಅವರಿಗೆ ಉತ್ತರ ಕೊಟ್ಟಿದ್ದೇವೆ ಎಂದು ಘಟನೆ ಬಳಿಕ ರಾಮನಗರದಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
ಸಿಎಂಗೆ ಕ್ಷಮೆಯಾಚನೆ
ಇದೇ ವೇಳೆ ವೇದಿಕೆಯಲ್ಲಿ ನಡೆದ ಘಟನೆಗೆ ಸಿಎಂರಲ್ಲಿ ಕ್ಷಮೆಯಾಚಿಸುವೆ ಎಂದ ಸುರೇಶ್, ಸಿಎಂ ಬಸವರಾಜ ಬೊಮ್ಮಾಯಿಗೆ ಮಾತ್ರ ಕ್ಷಮೆಯಾಚಿಸುವೆ. ನಾವು ಯಾರಿಂದಲೂ ಪಾಠ ಹೇಳಿಸಿಕೊಳ್ಳುವ ಅವಶ್ಯಕತೆಯಿಲ್ಲ. ರಾಮನಗರ ಜಿಲ್ಲೆಯ ಜನ ಯಾರಿಗೂ ಹೆದರಿಕೊಳ್ಳುವ ಜನರಲ್ಲ ಎಂದು ಸುರೇಶ್ ಹೇಳಿದ್ದಾರೆ.
ಅಂತೆಯೇ, ‘ರಾಮನಗರ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಸರ್ಕಾರಕ್ಕೆ ಸಹಕಾರ ನೀಡುವೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ಚಾಲನೆ ಕೊಡಿ. ನಮ್ಮ ಜಿಲ್ಲಾಸ್ಪತ್ರೆ ಉದ್ಘಾಟನೆಗೆ ಬರುತ್ತಿದ್ದಾರೆಂದು ಅಂದು ಕೊಂಡಿದ್ದೆ. ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಹಣಕಾಸಿನ ಅವಶ್ಯಕತೆಯಿದೆ. ರಾಮನಗರದಲ್ಲಿ ವಿಶೇಷ ಕಾರ್ಯಕ್ರಮಕ್ಕೆ ಸಿಎಂ ಬಂದಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಸಂದರ್ಭವಿದು. ಅಂಬೇಡ್ಕರ್ ಪ್ರತಿಮೆ ನಿರ್ಮಾಣ ರಾಮನಗರ ಜನರ ಕೊಡುಗೆ. ಪ್ರತಿಮೆ ಅನಾವರಣ ಕಾರ್ಯಕ್ರಮ ಹಬ್ಬದಂತೆ ಆಗಬೇಕಾಗಿತ್ತು. ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಬಂದಿದ್ದಕ್ಕೆ ಗೌರವವಿದೆ. ರಾಜಕೀಯ ಭಿನ್ನಾಭಿಪ್ರಾಯವಿದ್ದರೂ ಒಂದಾಗಿ ಅಭಿವೃದ್ಧಿ ಕೆಲಸ ಮಾಡಿದ್ದೇವೆ. ಅಭಿವೃದ್ಧಿ ವಿಚಾರದಲ್ಲಿ ನಾವೆಲ್ಲರೂ ಒಂದಾಗಿ ಕೆಲಸ ಮಾಡಿದ್ದೇವೆ. ಬಿಜೆಪಿಯವರು ರಾಮನಗರಕ್ಕೆ ಏನು ಕೊಟ್ಟಿದ್ದಾರೆಂಬ ಪಟ್ಟಿಯಿದೆ ಎಂದು ಡಿ.ಕೆ.ಸುರೇಶ್ ಹೇಳಿದರು.
Uncategorized
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ
ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರಿನ ಲಕ್ಷ್ಯ ಕೌನ್ಸೆಲಿಂಗ್ ಸೆಂಟರ್ ನ ಮಕ್ಕಳ
ಸಲಹೆಗಾರರಾದ ದುರ್ಗಾಪರಮೇಶ್ವರ ಭಟ್ ಮಾತನಾಡಿ, ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಮಾರ್ಗದರ್ಶಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪರೀಕ್ಷಾ ಸಿದ್ಧತೆ ಮತ್ತು ತರಗತಿಯ ಶಿಸ್ತು ಅತೀ ಮುಖ್ಯವಾಗಿದ್ದು, ಇಂದಿನ ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು ಸದಾ ಚುರುಕಾಗಿರಬೇಕು. ಕಾಲಕ್ಕೆ ತಕ್ಕಂತೆ ಆಗುವ ಬದಲಾವಣೆಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಉತ್ತಮ ಮಾಹಿತಿ ಹಾಗೂ ಜ್ಞಾನವನ್ನು ನಿರಂತರವಾಗಿ ಪಡೆದುಕೊಳ್ಳುತ್ತಿರಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ಮಾನಸಿಕವಾಗಿ ಅತ್ಯಂತ ದೃಢವಾಗಿರಬೇಕು. ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ, ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಕೌಶಲ್ಯ ಮತ್ತು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು.
ವಾಣಿಜ್ಯ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ವಿದ್ಯಾರ್ಥಿಗಳಿಗೆ ಸದೃಢವಾದ ಮನಸ್ಸು ಇರಬೇಕು. ಹೊಸ ಆಲೋಚನೆಗಳು, ಸೃಜನಶೀಲತೆ ಮತ್ತು ವೃತ್ತಿಪರ ಕೌಶಲ್ಯಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಹೇಳಿದರು.
ವೇದಿಕೆಯಲ್ಲಿ ವಾಣಿಜ್ಯ ಸಂಘದ ನಿರ್ದೇಶಕರಾದ ಭರತ್ ಜಿ ಫೈ ಹಾಗೂ ಪೂರ್ಣಿಮಾ ಡಿ. ಎಸ್ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗ ಮತ್ತು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ದೇಶ್ನ ಎ. ಎಲ್ ಸ್ವಾಗತಿಸಿ, ಸ್ವಿನಿಕಾ ಎಸ್ ಲೋಬೋ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.
Uncategorized
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ
ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!
ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.
ದೂರು ದಾಖಲಿಸಲು ಹಿಂದೇಟು?
ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ
ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.
ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.
Uncategorized
Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.
ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.
ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.
ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.
ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.
ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.
-
ಅಪರಾಧ24 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ಸುಳ್ಯ19 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ22 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ಅಂತರ ರಾಜ್ಯ22 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ಸ್ಥಳೀಯ19 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ನಿಧನ ವಾರ್ತೆ24 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಬಿಗ್ ನ್ಯೂಸ್22 hours agoTulu language-ತುಳು ಭಾಷೆ ಅನುಷ್ಠಾನಕ್ಕೆ ಸರ್ಕಾರದಿಂದ ಅಧಿಕೃತ ಆದೇಶ; ಸರ್ಕಾರಿ ಕಚೇರಿಗಳಲ್ಲೂ ತುಳುವಿಗೆ ಮನ್ನಣೆ..!
-
ಅಂತರ ರಾಜ್ಯ22 hours agoWhatsApp-ವಾಟ್ಸಾಪ್ನಲ್ಲಿ ಬಂತು ಹೊಸ ಫೀಚರ್; ಎರಡು ವಾರ ಮೊದಲೇ ಮೆಸೇಜ್ ಟೈಪ್ ಮಾಡಿ ಶೆಡ್ಯೂಲ್ ಮಾಡುವ ಅವಕಾಶ..!
















Pingback: ರಾಮನಗರವೇನು ಬಿಹಾರದಲ್ಲಿದೆಯಾ?- ಬಿಜೆಪಿ ರಾಜ್ಯಾಧ್ಯಕï¿
Pingback: ಕಾಂಗ್ರೇಸ್ ಏನೂ ಮಾಡೋದಿಲ್ಲ, ಮಾಡುವವರನ್ನೂ ಬಿಡೋದಿಲ್ï