ದಕ್ಷಿಣ ಕನ್ನಡ
Theft case ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯ ಬಂಧಿಸಿದ ಪುತ್ತೂರು ನಗರ ಪೊಲೀಸರು – ರೂ 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ
ಒಂದೂವರೆ ತಿಂಗಳ ಹಿಂದೆ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಯಂಬತ್ತೂರ್ ಜಿಲ್ಲೆ ಸೋಲವಂಪಳಯಂ, ಸಿಕ್ಕಲಂಪಳಯಂ ನಿವಾಸಿ ಈಶ್ವರಿ ಬಂಧಿತ ಆರೋಪಿ.
ಫೆ 12 ರಂದು ಪುತ್ತೂರು ನಗರದ KSRTC ಬಸ್ ನಿಲ್ದಾಣದಲ್ಲಿ ಫಿರ್ಯಾಧಿ ರೇಷ್ಮಾ ಎನ್ (41) ರವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣವನ್ನು ಪುತ್ತೂರು ನಗರ ಠಾಣಾ ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ನಡೆಸಿ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿ ಈಶ್ವರಿ (45) ಎಂಬವಳನ್ನು ವಶಕ್ಕೆ ಪಡೆದು, ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ.
ಈ ಪ್ರಕರಣವನ್ನು ಬೇದಿಸುವಲ್ಲಿ ದ ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯತ್ ಮತ್ತು ದ ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ ಎಮ್ ಎನ್ ರವರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ಮಾರ್ಗದರ್ಶನದಲ್ಲಿ, ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಸತೀಶ್ ಜಿ ಜೆ, ರವರ ಸಾರಥ್ಯದಲ್ಲಿ ಪುತ್ತೂರು ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕರುಗಳಾದ ನಂದಕುಮಾರ್ ಎಮ್ ಎಮ್ ಹಾಗೂ ಸುಬ್ರಹ್ಮಣ್ಯ ಹೆಚ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್ ಸಿ ಸ್ಕರಿಯ ಎಮ್ ಎ. ಹೆಚ್ ಸಿ ಕೆ ಬಸವರಾಜ, ಹೆಚ್ ಸಿ ಜಗದೀಶ್, ಹೆಚ್ ಸಿ ಸುಬ್ರಹ್ಮಣ್ಯ, ಪಿಸಿ ವಿನಾಯಕ ಎಸ್ ಬಾರ್ಕಿ, ಪಿಸಿ ಶರಣಪ್ಪ ಪಾಟೀಲ್, ಮಪಿಸಿ ರೇವತಿ ಹಾಗೂ ದ.ಕ ಜಿಲ್ಲಾ ಗಣಕ ಯಂತ್ರ ವಿಭಾಗದ ಎಹೆಚ್ ಸಿ ಸಂಪತ್ ಮತ್ತು ಸಿಪಿಸಿ ದಿವಾಕರ್ ರವರು ಭಾಗವಹಿಸಿರುತ್ತಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
ಸ್ಥಳೀಯ7 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್7 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ7 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಅಪರಾಧ5 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸಿನೆಮಾ6 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್6 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
-
ಮಂಗಳೂರು23 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
-
ಮಂಗಳೂರು2 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು


















