Connect with us

ದಕ್ಷಿಣ ಕನ್ನಡ

Brijesh Chouta : ಯುವಶಕ್ತಿಗೆ ಬೆಂಬಲ, ಮೂಲ ಸೌಕರ್ಯ, ಪ್ರವಾಸೋದ್ಯಮ, ಶಿಕ್ಷಣಕ್ಕೆ ಹೆಚ್ಚಿನ  ಒತ್ತು ಎಲ್ಲ ವರ್ಗಗಳ ಏಳ್ಗೆಗೆ ಸೈನಿಕನಂತೆ  ಕೆಲಸ : ಕ್ಯಾಪ್ಟನ್‌ ಚೌಟ; ಸುಖಾನಂದ ಶೆಟ್ಟಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ

Published

on



Ad Widget

Ad Widget

Ad Widget

Ad Widget

ಸಮಗ್ರ ದಕ್ಷಿಣ ಕನ್ನಡ ಅಭಿವೃದ್ಧಿ ನನ್ನ ಬಹುದೊಡ್ಡ ಕನಸಾಗಿದ್ದು, ನಮ್ಮ ಯುವಕರಿಗೆ ಉದ್ಯೋಗ, ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಬೇಕಾದ ಎಲ್ಲ ರೀತಿಯ ವೇದಿಕೆ ನಿರ್ಮಾಣ ಮಾಡಲು ನಾನು ಕಟಿ ಬದ್ಧನಾಗಿದ್ದೇನೆಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಹೇಳಿದರು.

Ad Widget

Ad Widget

Ad Widget

Ad Widget

ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ, ಮುಲ್ಕಿ, ಮೂಡಬಿದರೆ ಮಂಡಲದ ತಮ್ಮ ಪ್ರವಾಸದ ನಾಲ್ಕನೇ ದಿನವನ್ನು ಪೊರ್ಕೋಡಿ ಶ್ರೀ ಸೋಮನಾಥೇಶ್ವರನ ಆಶೀರ್ವಾದದೊಂದಿಗೆ ಪ್ರಚಾರ ಆರಂಭಿಸಿದ ಚೌಟ ಅವರನ್ನು ನೆರೆದಿದ್ದ ಕಾರ್ಯಕರ್ತರು ಸಂಭ್ರಮದಿಂದ ಬರಮಾಡಿಕೊಂಡರು.

Ad Widget

Ad Widget

Ad Widget alt="Ad Widget"/>

Ad Widget

ಶಾಸಕ ಕೋಟ್ಯಾನ್‌ ಮಾತನಾಡಿ, ʼದೇಶ ಸೇವೆ ಸಲ್ಲಿಸಿ, ಇಂದು ಸಾರ್ವಜನಿಕ ಸೇವೆಗೆ ನಮ್ಮ ಕ್ಯಾಪ್ಟನ್‌ ಇಳಿದಿದ್ದು ನಮ್ಮೆಲ್ಲರಿಗೂ ಸಂತಸ ತಂದಿದೆ. ಈ ಭಾಗದ ಜನರ ಕಷ್ಟ, ನೋವು-ನಲಿವುಗಳನ್ನು ಹತ್ತಿರದಿಂದ ಬಲ್ಲವರು. ಕನ್ನಡ, ತುಳು, ಇಂಗ್ಲೀಷ್‌, ಹಿಂದಿಯನ್ನು ಸುಲಲಿತವಾಗಿ ಮಾತನಾಡುವ ಇಂತಹ ಒಬ್ಬ ವಿದ್ಯಾವಂತ ನಮ್ಮನ್ನು ಅತ್ಯಂತ ಸಮರ್ಥವಾಗಿ ಲೋಕಸಭೆಯಲ್ಲಿ ಪ್ರತಿನಿಧಿಸಬಲ್ಲರುʼ ಎಂದರು.

Ad Widget

Ad Widget <> Ad Widget

ನಂತರ, ಬಜಪೆ, ಪೆರ್ಮುದೆ ಹಾಗೂ ಎಕ್ಕಾರು ಮಹಾಶಕ್ತಿ ಕೇಂದ್ರಗಳ ಕಾರ್ಯಕರ್ತರನ್ನು ಭೇಟಿ ಮಾಡಿ ಸಭೆಯಲ್ಲಿ ಪಾಲ್ಗೊಂಡರು. ಜೊತೆಗೆ, ಶ್ರೀ ಚೆನ್ನಮಲ್ಲಿಕಾರ್ಜುನ ಧರ್ಮಸಂಸ್ಥಾ ಮಠ, ಯಜ್ಞಾಶ್ರಮಕ್ಕೆ ಭೇಟಿ ನೀಡಿದಾಗ, ಮಹಿಳೆಯರು, ಕಾರ್ಯಕರ್ತರು ಸಂಭ್ರಮದಿಂದಲೇ ಬರಮಾಡಿಕೊಂಡರು.



Ad Widget

 ಇದೇ ಸಂದರ್ಭದಲ್ಲಿ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ಹಾಗೂ ಮುಲ್ಕಿಯ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ, ಆಶೀರ್ವಾದ ಪಡೆದರು. ಮೂಡುಬಿದಿರೆಯ ಜೈನಮಠಕ್ಕೆ ಭೇಟಿ ನೀಡಿ ಪರಮಪೂಜ್ಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳ ಆಶೀರ್ವಾದ ಪಡೆದು, ಶಿರ್ತಾಡಿ, ಮಂಡಲದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು. ಬಳಿಕ ಅಲಂಗಾರು, ಕೊಡ್ಯಡ್ಕ, ಪುತ್ತಿಗೆ, ಮೂಡುಬಿದಿರೆ ವೆಂಕಟರಮಣ ದೇವಸ್ಥಾನ, ಹನುಮಾನ್ ದೇವಸ್ಥಾನ ಸೇರಿದಂತೆ ಮೂಡುಬಿದಿರೆ ಆಸುಪಾಸಿನ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದರು.

Ad Widget

Ad Widget

ಇದೇ ಸಂದರ್ಭ ಕಿನ್ನಿಗೋಳಿಯ ಸುಖಾನಂದ ಶೆಟ್ಟಿ ವೃತ್ತದಲ್ಲಿ ದಶಕಗಳ ಹಿಂದೆ ಹತ್ಯೆಯಾದ ಸಂಘ ಪರಿವಾರದ ಮುಂಚೂಣಿ ನಾಯಕ ಸುಖಾನಂದ ಶೆಟ್ಟಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

Ad Widget
Click to comment

Leave a Reply

ಮಂಗಳೂರು

Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್‌ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ

Published

on



Ad Widget

Ad Widget

Ad Widget

Ad Widget

ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.

Ad Widget

Ad Widget <> Ad Widget

ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್‌ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.



Ad Widget

ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

ಶಿಕ್ಷಣ

Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Ad Widget

Ad Widget <> Ad Widget

ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.



Ad Widget

ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Continue Reading

ಅಪರಾಧ

Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on



Ad Widget

Ad Widget

Ad Widget

Ad Widget

ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.



Ad Widget

ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Ad Widget

Ad Widget

ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.

ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.

ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading