ಮಂಗಳೂರು
Padmaraj R ಪೂಜಾರಿಯವರು ಹಾಕಿಕೊಟ್ಟ ಹೆಜ್ಜೆಯಲ್ಲಿ ಮುಂದುವರಿಯುವೆ – “ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು”: ಪದ್ಮರಾಜ್ ಆರ್
ಮಂಗಳೂರು: “ರಾಜಕೀಯ ಗುರುಗಳಾದ ಜನಾರ್ದನ ಪೂಜಾರಿಯವರು ಹಾಕಿ ಕೊಟ್ಟ ಹಾದಿಯಲ್ಲಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಜಕಾರಣ ಮಾಡುತ್ತೇನೆ. ತುಳುನಾಡಿನ ಸಮಗ್ರ ಅಭಿವೃದ್ಧಿ ಜತೆಗೆ ಸೌಹಾರ್ದ ಪರಂಪರೆಯನ್ನು ಮರಳಿ ಕಟ್ಟುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಗತವೈಭವ ಮರುಕಳಿಸುವಂತೆ ಮಾಡುವುದು ನನ್ನ ಉದ್ದೇಶ” ಎಂದು ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತನ್ನನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಹೈಕಮಾಂಡ್ ನಾಯಕರಿಗೆ ಮತ್ತು ತನ್ನನ್ನು ಬೆಂಬಲಿಸಿದ ರಾಜ್ಯ ನಾಯಕರು ಮತ್ತು ಜಿಲ್ಲಾ ನಾಯಕರಿಗೆ ಧನ್ಯವಾದ ಸಲ್ಲಿಸಿದರು.

ಟಿಕೆಟ್ ಘೋಷಣೆಯಾಗಿ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಬಳಿಕ ಪದ್ಮರಾಜ್ ಆಧುನಿಕ ಮಂಗಳೂರು ಶಿಲ್ಪಿ ಉಳ್ಳಾಲ ಶ್ರೀನಿವಾಸ್ ಮಲ್ಯರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಮನ ಸಲ್ಲಿಸಿದರು. ಕದ್ರಿಯ ವೀರ ಯೋಧರ ಸ್ಮಾರಕ್ಕೆ ತೆರಳಿ ದೇಶಕ್ಕಾಗಿ ಮಡಿದ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಬಳಿಕ ಎಂ.ಜಿ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರಾಷ್ಟ್ರಪಿತ, ಮಂಗಳೂರು ಪುರಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಗೌರವ, ಬಾವುಡಗುಡ್ಡೆಯಲ್ಲಿ ಹಿರಿಯ ಸ್ವಾತಂತ್ರೃ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ನಮನ ಸಲ್ಲಿಸಿ, ಟಾಗೋರ್ ಪಾರ್ಕ್‌ನಲ್ಲಿ ರವೀಂದ್ರನಾಥ ಟಾಗೋರ್ ಪ್ರತಿಮೆಗೆ ನಮನ ಸಲ್ಲಿಸಿದರು.


ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪಾಲ್ಗೊಂಡರು.
ಮಾಜಿ ಸಚಿವ ಅಭಯ್ ಚಂದ್ರ ಜೈನ್, ಗೇರು ಬೀಜ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ದೇವಳದ ಆಡಳಿತ ಮೊಕ್ತೇಸರ ಲಕ್ಷ್ಮಣ್ ಅಮೀನ್ ಕೋಡಿಕಲ್, ಬ್ರಹ್ಮಕಲತ್ಸೋವ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಉರ್ವ ವಾಡ್೯ ಅಧ್ಯಕ್ಷ ಟಿ.ಸಿ ಗಣೇಶ್, ಪದ್ಮನಾಭ ಅಮೀನ್, ಮಹಿಳಾ ಜಿಲ್ಲಾಧ್ಯಕ್ಷರ ಶಾಲೆಟ್ ಪಿಂಟೋ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೂಪಾಚೇತನ್, ಮಾಜಿ ಅಧ್ಯಕ್ಷರಾದ ಶಾಂತಲಾ ಗಟ್ಟಿ, ಮನಪಾ ಸದಸ್ಯರಾದ ಚೇತನ್ ಕುಮಾರ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಬಿ.ಸಾಲಿಯಾನ್ , ಸತೀಶ್ ಪೂಜಾರಿ ಅಶೋಕ ನಗರ, ಜಯರಾಂ ಕಾರಂದೂರು, ಉರ್ವ ಹಾಗೂ ಅಶೋಕ ನಗರ ವಾಡ್೯ ಸದಸ್ಯರು ಉಪಸ್ಥಿತರಿದ್ದರು.

ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಇವರನ್ನು ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ರವಿಪೂಜಾರಿ ಚಿಲಿಂಬಿ ಅಭಿನಂದಿಸಿದರು. ಮಾಜಿ ಸಚಿವ ಅಭಯಚಂದ್ರ ಜೈನ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ, ಶ್ರೀ ನಾರಾಯಣ ಗುರು ಸಂಘ ಬೆಳ್ತಂಗಡಿ ಮಾಜಿ ಅಧ್ಯಕ್ಷ ಜಯರಾಮ ಬಂಗೇರ, ನಾರಾಯಣ ಮಚ್ಚಿನ, ದೀಪಕ್ ಪೆರ್ಮುದೆ, ಪದ್ಮನಾಭ ಅಮೀನ್, ಸಂತೋಷ್ ಶೆಟ್ಟಿ, ಯೋಗೀಶ್ ಮೂಲ್ಕಿ ಮುಂತಾದವರು ಉಪಸ್ಥಿತರಿದ್ದರು

ಮಂಗಳೂರು ರಥಬೀದಿಯ ಶ್ರೀ ವೆಂಕಟ್ರಮಣ ದೇವಸ್ಥಾನಕ್ಕೆ ಪದ್ಮರಾಜ್ ಆರ್. ಭೇಟಿ ನೀಡಿ ಕಠಾರಿ ವೀರ ವೆಂಕಟೇಶ ದೇವರ ಅನುಗ್ರಹ ಪಡೆದರು. ದೇವಳಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ, ಸತೀಶ್ ಪ್ರಭು, ಗಣೇಶ್ ಕಾಮತ್, ಮಂಜುಳಾ ನಾಯಕ್ , ಯೋಗೀಶ್ ನಾಯಕ್, ಸಮರ್ಥ ಭಟ್ , ರಾಯಿ ಗಣಪತಿ ಬಾಳಿಗಾ, ನಾಗರಾಜ್ ಭಂಡಾರಿ, ಕಂದೆಲ್ ವಸಂತ್ ಮತ್ತಿತರು ಉಪಸ್ಥಿತರಿದ್ದರು.
ಮಂಗಳೂರಿನ ಡೊಂಗರಕೇರಿಯ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಪದ್ಮರಾಜ್ ಆರ್ . ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಳದ ಆಡಳಿತ ಆಡಳಿತ ಮೊಕ್ತೇಸರರಾದ ಬಿ.ಎಸ್ .ವರದರಾಯ್ ನಾಗವೇಕರ್, ಅರ್ಚಕರಾದ ಸತೀಶ್ ಭಟ್ , ಮಂಜುಳಾ ನಾಯಕ್, ಯೋಗೀಶ್ ನಾಯಕ್ , ಸಮರ್ಥ್ ಭಟ್, ಉದಯ್ ಆಚಾರ್ ಮತ್ತಿತರು ಉಪಸ್ಥಿತರಿದ್ದರು.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
-
Uncategorized15 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized17 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು20 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ19 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ21 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್20 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ20 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಬಿಗ್ ನ್ಯೂಸ್20 hours agoಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ


















