ಬಿಗ್ ನ್ಯೂಸ್
Violent Cattle Transportation | ಪುತ್ತೂರು : ಹಿಂಸಾತ್ಮಕವಾಗಿ ದನ ಸಾಗಿಸುತ್ತಿದ್ದ ಕಾರಿನ ಮೇಲೆ ದಾಳಿ ಮಾಡಿ ಗೋವುಗಳನ್ನು ರಕ್ಷಿಸಿದ ಸಾರ್ವಜನಿಕರು; ಕಬಕ ಚೆಕ್ ಪೋಸ್ಟ್ ದಾಟಿ ಬಂದಿತೇ ಕಾರು..?
ಪುತ್ತೂರು: ಹಿಂಸಾತ್ಮಕವಾಗಿ ದನ ಸಾಗಾಟ (Violent Cattle Transportation) ಮಾಡುತ್ತಿದ್ದ ಕಾರು ಜಖಂಗೊಂಡ ಸ್ಥಿತಿಯಲ್ಲಿ ಕಬಕದಿಂದ ಪದ್ನಡ್ಕ ಕಲ್ಲಂಡ್ಕ ಸಂಪರ್ಕ ರಸ್ತೆಯಲ್ಲಿ ಭಾನುವಾರ ರಾತ್ರಿ ಪತ್ತೆಯಾಗಿದೆ.
ಅಕ್ರಮ ಗೋ ಸಾಗಾಟಗಾರರು ದನಗಳನ್ನು ಸಾಗಿಸುತ್ತಿದ್ದ ವೇಳೆ ಸಾರ್ವಜನಿಕರು ಕಾರಿನ ಮೇಲೆ ದಾಳಿ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಈ ವೇಳೆ ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.
ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದೆ . ಅದರ ಕೈ ಕಾಲುಗಳನ್ನು ಹಿಂಸಾತ್ಮಕ ರಿತಿಯಲ್ಲಿ ಕಟ್ಟಲಾಗಿತ್ತು.
ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದ ಸಾರ್ವಜನಿಕರು ಕಾರನ್ನು ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ಜನರ ಕಣ್ಣಿಗೆ ಮಣ್ಣೆರೆಚಿ ಕಾರು ಚಾಲಕ ಪರಾರಿಯಾಗಲು ಯತ್ನಿಸಿದ್ದು, ಇದರಿಂದ ಉದ್ರಿಕ್ತಗೊಂಡ ಸಾರ್ವಜನಿಕರು ಕಾರಿನ ಮೇಲೆ ದಾಳಿ ಮಾಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಇದರಿಂದ ಕಾರಿನ ಮುಂಭಾಗದ ಗಾಜು ಒಡೆದು ಹೋಗಿದೆ ಹಾಗೂ ಕಾರು ಕಾಂಕ್ರೀಟ್ ರಸ್ತೆಯಿಂದ ಬದಿಗೆ ಸರಿದಿದೆ.
ಕಾರಿನೊಳಗಡೆ ಗೋವುಗಳ ಕಾಲುಗಳನ್ನು ಕಟ್ಟಿ ಹಿಂಸಾತ್ಮಕವಾಗಿ ಹಾಕಲಾಗಿತ್ತು . ಇವುಗಳನ್ನು ಕಾರಿನಿಂದ ಹೊರ ತೆಗೆಯುವ ಹಾಗೂ ಇವುಗಳ ಕಾಲಿಗೆ ಕಟ್ಟಿದ್ದ ಕಟ್ಟುಗಳನ್ನು ಬಿಡಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಲಭ್ಯವಾಗಿದೆ.
ಚುನಾವಣಾ ಸಮಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ಇರುವ ಸಂದರ್ಭದಲ್ಲೂ ಕಾರಿನಲ್ಲಿ ಗೋವುಗಳನ್ನು ಸಾಗಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಹಿಂಸಾತ್ಮಕ ಗೋ ಸಾಗಾಟಕ್ಕೆ ಇಲಾಖೆಯ ಅಧಿಕಾರಿಗಳ ಪ್ರೋತ್ಸಾಹವಿದೆ ಎಂಬ ಮಾತುಗಳು ಸ್ಥಳೀಯವಾಗಿ ಕೇಳಿ ಬರುತ್ತಿದೆ.ಕಬಕದಲ್ಲಿ ಚೆಕ್ ಪೋಸ್ಟ್ ಇದ್ದರೂ ಗೋ ಸಾಗಾಟಗಾರರಿಗೆ ಅದರ ಭಯವಿಲ್ಲದಿರುವುದು ಸಾರ್ವಜನಿಕರಿಗೆ ಆಘಾತ ಉಂಟು ಮಾಡಿದೆ .
ಇನ್ನೂ ಗೋ ಸಾಗಿಸುತ್ತಿದ್ದ ಕಾರಿಗೆ ಅಳವಡಿಸಿದ ನಂಬರ್ ಪ್ಲೇಟ್ ದ್ವಿಚಕ್ರ ವಾಹನವೊಂದರ ರಿಜಿಸ್ಟ್ರೇಷನ್ ಸಂಖ್ಯೆ ಎಂ ಮಾತುಗಳು ಕೇಳಿ ಬಂದಿವೆ . ಇದನ್ನು ಸಾರಿಗೆ ಇಲಾಖೆ ಯಾ ಪೊಳೀಸ್ ಇಲಾಖೆ ಖಚಿತ ಪಡಿಸಬೇಕಿದೆ
ಕಲ್ಲಂಡ್ಕ – ಪದ್ನಡ್ಕ ಭಾಗಕ್ಕೆ ನಿತ್ಯ ಅಪರಿಚಿತ ವ್ಯಕ್ತಿಗಳು ಹೊರ ಭಾಗದ ವಾಹನಗಳಲ್ಲಿ ಬಂದು ಹೋಗುತ್ತಿರುತ್ತಾರೆ.
ಕೆಲವು ವರ್ಷಗಳಿಂದ ಈ ಭಾಗದಲ್ಲಿ ಮಾಧ್ಯಕ ವಸ್ತುಗಳ ಮಾರಾಟ ನಡೆಯುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿದೆ.
ಸ್ಥಳಕ್ಕೆ ಪುತ್ತೂರು ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಬಿಗ್ ನ್ಯೂಸ್
Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
-
Uncategorized15 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized17 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು20 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ19 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ21 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್20 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ20 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಬಿಗ್ ನ್ಯೂಸ್21 hours agoಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ


















