ಪುತ್ತೂರು
ಸಹಕಾರಿ ಕ್ಷೇತ್ರದಲ್ಲಿ 48 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಮಂಗಳೂರಿನ ಶ್ರೀ ಭಗವತೀ ಸಹಕಾರ ಬ್ಯಾಂಕ್ ನ 8ನೇ ಶಾಖೆ ಪುತ್ತೂರಿನಲ್ಲಿ ಮಾ.28ರಂದು ಉದ್ಘಾಟನೆ
ಪುತ್ತೂರು: ಕಳೆದ 48 ವರ್ಷಗಳಿಂದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಾ ಬಂದಿರುವ ಶ್ರೀ ಭಗವತೀ ಸಹಕಾರ ಬ್ಯಾಂಕ್‌ನ ಪುತ್ತೂರು ಶಾಖೆ ಮಾ.28ರಂದು ಪುತ್ತೂರು ಏಳ್ಳುಡಿಯಲ್ಲಿರುವ ಮಹಾದೇವಿ ಸಂಕೀರ್ಣದ ಪ್ರಥಮ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಮಾಧವ ಬಿ.ಎಮ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
1977ರಲ್ಲಿ ಶ್ರೀ ಭಗವತೀ ಶ್ರೇಯೋಭಿವೃದ್ಧಿ ಸಹಕಾರ ಸಂಘ ನೋಂದಣಿ ಮಾಡಿಕೊಂಡು 1984ರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ ಕಾನೂನು ಪ್ರಕಾರ ಶ್ರೀ ಭಗವತೀ ಶ್ರೇಯೋಭಿವೃದ್ಧಿ ಸಹಕಾರ ಸಂಘವು ಒಂದು ಬ್ಯಾಂಕ್ ಆಗಿ ಪರಿವರ್ತನೆಗೊಂಡಿತ್ತು. ನಂತರದ ಬೆಳವಣಿಗೆಯಲ್ಲಿ ಬ್ಯಾಂಕಿನ ಶಾಖೆಗಳು ವಿಸ್ತರಣೆಗೊಂಡು 2ಸಾವಿರ ಇಸವಿಯಲ್ಲಿ ವಿಟ್ಲದಲ್ಲಿ 7ನೇ ಶಾಖೆಯನ್ನು ಇದೀಗ ಪುತ್ತೂರನಲ್ಲಿ 8ನೇ ಶಾಖೆಯನ್ನು ಆರಂಭಿಸಲಾಗುತ್ತಿದೆ.

ನೂತನ ಬ್ಯಾಂಕ್‌ನ ಉದ್ಘಾಟನೆ ಕಾರ್ಯಕ್ರಮ ನಿಶ್ಚಯ ಮಾಡಿ ಆಮಂತ್ರಣ ಪತ್ರ ನೀಡುವ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ನೀತಿ ಸಂಹಿತೆ ಇರಲಿಲ್ಲ. ಹಾಗಾಗಿ ಜನಪ್ರತಿನಿಧಿಗಳನ್ನು ಆಹ್ವಾನಿಸಿದ್ದೆವು. ಬಳಿಕದ ಬೆಳವಣಿಗೆಯಲ್ಲಿ ನೀತಿ ಸಂಹಿತೆ ಬಂದಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳಿಗೆ ಭಾಗವಹಿಸಲು ಅನಾನುಕೂಲ ಆಗಿದೆ.
ಈ ನಿಟ್ಟಿನಲ್ಲಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಮನ್ ಪೈ, ಉದ್ಯಮಿ ಕಿಶೋರ್ ಕುಮಾರ್, ವಕೀಲರಾದ ಪಾಝೀಲ್, ಪಿ.ಕೆ.ಸತೀಶನ್, ಸುದಾನ ವಸತಿಯುತ ಶಾಲೆಯ ಸಂಚಾಲಕ ವಿಜಯ ಹಾರ್ವೀನ್, ಉಳ್ಳಾಲದ ಚಂದ್ರಹಾಸ ಸಹಿತ ಹಲವಾರು ಮಂದಿ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದವರು ಹೇಳಿದರು.
29,840 ಸದಸ್ಯರು
ಶ್ರೀ ಭಗವತೀ ಸಹಕಾರ ಬ್ಯಾಂಕ್ ಎಲ್ಲಾ ವರ್ಷಗಳಲ್ಲಿ ಲಾಭಗಳಿಸುತ್ತಾ ಬಂದಿದ್ದು, 2024ರಲ್ಲಿ ಪಸ್ತುತ 29,840 ಮಂದಿ ಸದಸ್ಯರಿದ್ದು, ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಯಲ್ಲಿ ಬ್ಯಾಂಕ್ ಅನ್ನು 2ನೇ ಟಯರ್‌ನಲ್ಲಿ ವರ್ಗೀಕರಿಸಲಾಗಿದೆ ಮಾತ್ರವಲ್ಲ ಉತ್ತಮ ಆರ್ಥಿಕ ಸಂಸ್ಥೆ ಎಂದು ಪರಿಗಣಿಸಲಾಗಿದೆ ಎಂದು ಮಾಧವ ಬಿ.ಎಮ್ ಹೇಳಿದರು.
ಸೌಲಭ್ಯಗಳು:
ಬ್ಯಾಂಕಿನಲ್ಲಿ ಇರುವ ಠೇವಣಿಗಳಿಗೆ ಶೇ.3 ರಿಂದ 8.60 ಬಡ್ಡಿ ನೀಡಲಾಗುತ್ತದೆ. ಹಿರಿಯ ನಾಗರಿಕರಿಗೆ 0.5 ಅಧಿಕ ಬಡ್ಡಿ ನೀಡಲಾಗುತ್ತದೆ. ಮಹಿಳೆಯರಿಗೆ 3 ವರ್ಷಗಳಿಗಿಂತ ಹೆಚ್ಚಿನ ಅವಧಿಯ ಠೇವಣಿಗಳಿಗೆ ಕೂಡಾ 0.5 ಅಧಿಕ ಬಡ್ಡಿ ನೀಡಲಾಗುತ್ತದೆ. ಪಾಲು ಬಂಡವಾಳಕ್ಕೆ ಬ್ಯಾಂಕಿನ ಲಾಭದಲ್ಲಿ ಡಿವಿಡೆಂಡ್ ನೀಡಲಾಗುತ್ತದೆ. ಗೃಹ ಸಾಲ, ಅಡವು ಸಾಲ, ವಾಹನ ಸಾಲ, ಚಿನ್ನಾಭರಣ ಅಡವು ಸಾಲ ಹಾಗೂ ಸಂಬಳದ ಆಧಾರದಲ್ಲಿ ಸಾಲಗಳನ್ನು ಶೀಘ್ರವಾಗಿ ನೀಡಲಾಗುತ್ತದೆ.
ಗ್ರಾಹಕರಿಗೆ ಸನ್ಮಾನ, ವಿದ್ಯಾರ್ಥಿವೇತನ ಸಹಿತ ಇತರ ಸೌಲಭ್ಯಗಳನ್ನು ಬ್ಯಾಂಕ್‌ನಿಂದ ನೀಡಲಾಗುವುದು ಎಂದು ಮಾಧವ ಬಿ.ಎಮ್ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಬ್ಯಾಂಕ್‌ನ ಉಪಾಧ್ಯಕ್ಷ ದೇವದಾಸ್ ಕೊಲ್ಯ, ಪ್ರಧಾನ ವ್ಯವಸ್ಥಾಪಕಿ ಸುಷ್ಮಾ ರಾಜೇಶ್, ನಿರ್ದೇಶಕ ಕಿರಣ್, ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕ ರಾಘವ, ಪುತ್ತೂರು ನೂತನ ಶಾಖೆಯ ಮೆನೇಜರ್ ರಮೇಶ್ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
Uncategorized4 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized3 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized2 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized2 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized2 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |


















