ಸ್ಥಳೀಯ
Suicide attempt-ಹಾಲ್ ಟಿಕೆಟ್ ಕುರಿ ತಿಂದಿದ್ದರಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ ಶಾಲಾ ವಿದ್ಯಾರ್ಥಿನಿ
ಬೀದರ್; ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರ (ಹಾಲ್ ಟಿಕೆಟ್) ಕುರಿ ತಿಂದ ಕಾರಣದಿಂದ ನೊಂದ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೋಕುಳ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಖಾಸಗಿ ಶಾಲೆಯಲ್ಲಿ9ನೇ ತರಗತಿಯಲ್ಲಿ ಓದುತ್ತಿರುವ ಪೂಜಾ ಮಾರುತಿ ಮೇತ್ರ (14) ಅತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ. ಪೂಜಾಳ ಹಾಲ್ ಟಿಕೆಟ್ ಅನ್ನು ಸೋಮವಾರ ರಾತ್ರಿ ಕುರಿ ತಿಂದು ಹಾಕಿದೆ. ಇದರಿಂದ ನೊಂದ ಆಕೆ “ಹಾಲ್ ಟಿಕೆಟ್ ಕುರಿ ತಿಂದ ಕಾರಣ ಶಾಲೆಗೆ ಬರಲು ಆಗಲ್ಲ ನಾನು ಸತ್ತು ಹೋಗುತ್ತಿದ್ದೇನೆ. ನನ್ನನ್ನು ಕ್ರಮಿಸಿ,” ಎಂದು ಶಾಲೆಯ ಮುಖ್ಯಶಿಕ್ಷಕರಿಗೆ ಪತ್ರ ಬರೆದು ಅದನ್ನು ತನ್ನ ಅಣ್ಣನ ಕೈಗೆ ನೀಡಿದ್ದಳು.
ನಂತರ ಸಂಜೆ 7ರ ಸುಮಾರಿಗೆ ಮನೆಯಿಂದ ನಾಪತ್ತೆಯಾದಳು. ಇದನ್ನು ಗಮನಿಸಿದ ಸ್ಥಳೀಯರು ಗ್ರಾಮದಲ್ಲಿನ ಬಾವಿಗಳಲ್ಲಿ ಹುಡುಕಾಟ ನಡೆಸಿದರು. ರಾತ್ರಿ 11.30ರ ಸುಮಾರಿಗೆ ಈಕೆ ತನ್ನ ಸಂಬಂಧಿಕರ ಜಮೀನಿನಲ್ಲಿ ಬಾವಿಯೊಳಗಡೆ ಆಳುತ್ತಾ ಕೂತಿದ್ದಳು. ಹುಡುಕಾಟಕ್ಕೆ ಇಳಿದಿದ್ದ ಸ್ಥಳೀಯರು ಆಕೆಯನ್ನು ರಕ್ಷಿಸಿದರು.
30 ಅಡಿ ಆಳೆದ ಬಾವಿಯಲ್ಲಿ ನೀರು ಕಡಿಮೆ ಇದ್ದ ಕಾರಣ ಜೀವಕ್ಕೆ ತೊಂದರೆಯಾಗಿಲ್ಲ. ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಅಲ್ಲದೆ ಮಂಗಳವಾರ ವಿದ್ಯಾರ್ಥಿನಿ ಪರೀಕ್ಷೆಯನ್ನೂ ಬರೆದಿದ್ದಾಳೆ.
ಬಿಗ್ ನ್ಯೂಸ್
Railway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
ಮದುವೆ, ಪ್ರವಾಸ, ತೀರ್ಥಯಾತ್ರೆ, ಶೈಕ್ಷಣಿಕ ಪ್ರವಾಸ, ಕ್ರೀಡಾಕೂಟ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಸಡಿಲಿಕೆ ನೀಡಿದೆ. ಗುಂಪು ಹಾಗೂ ಬೃಹತ್ ಟಿಕೆಟ್ ಕಾಯ್ದಿರಿಸುವಿಕೆಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದ್ದು, ಗುಂಪು ಬುಕಿಂಗ್ನಲ್ಲಿ ಬರ್ತ್ಗಳ ಸಂಖ್ಯೆಗೆ ಈ ಹಿಂದೆ ಇದ್ದ ನಿರ್ದಿಷ್ಟ ಮಿತಿಯನ್ನು ತೆಗೆದುಹಾಕಲಾಗಿದೆ.
ಬೆಂಗಳೂರು: ಮದುವೆ, ಪ್ರವಾಸ, ತೀರ್ಥಯಾತ್ರೆ, ಶೈಕ್ಷಣಿಕ ಪ್ರವಾಸ, ಕ್ರೀಡಾಕೂಟ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಸಡಿಲಿಕೆ ನೀಡಿದೆ. ಗುಂಪು ಹಾಗೂ ಬೃಹತ್ ಟಿಕೆಟ್ ಕಾಯ್ದಿರಿಸುವಿಕೆಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದ್ದು, ಗುಂಪು ಬುಕಿಂಗ್ನಲ್ಲಿ ಬರ್ತ್ಗಳ ಸಂಖ್ಯೆಗೆ ಈ ಹಿಂದೆ ಇದ್ದ ನಿರ್ದಿಷ್ಟ ಮಿತಿಯನ್ನು ತೆಗೆದುಹಾಕಲಾಗಿದೆ.
2026ರ ನವೆಂಬರ್ 18ರಂದು ನೈಋತ್ಯ ರೈಲ್ವೆ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇದರ ಅನ್ವಯ ಪ್ರಮುಖ ಕಾಯ್ದಿರಿಸುವಿಕೆ ಕೇಂದ್ರಗಳಲ್ಲಿ ಗುಂಪು ಬುಕಿಂಗ್ಗೆ ಬೆಳಗ್ಗೆ 9 ಗಂಟೆಯಿಂದ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಪ್ರಯಾಣಿಕರ ಮುಂಗಡ ಕಾಯ್ದಿರಿಸುವಿಕೆ ಆರಂಭವಾದ ಒಂದು ಗಂಟೆಯ ಬಳಿಕ ಈ ಸೌಲಭ್ಯ ಲಭ್ಯವಾಗಲಿದೆ.
ನವೆಂಬರ್ 19ರಂದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾದ ಸುತ್ತೋಲೆಯ ಪ್ರಕಾರ, ಮದುವೆ ಸಮಾರಂಭಗಳು, ಹಬ್ಬಗಳು, ಯಾತ್ರೆಗಳು, ಕ್ರೀಡಾ ತಂಡಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಇತರ ಸಮಾನ ಉದ್ದೇಶಗಳಿಗಾಗಿ ಗುಂಪಾಗಿ ಪ್ರಯಾಣಿಸುವವರು ನಿಲ್ದಾಣದ ಕಾಯ್ದಿರಿಸುವಿಕೆ ಕಚೇರಿಯಲ್ಲಿ ಬೃಹತ್ ಪ್ರಮಾಣದ ಟಿಕೆಟ್ಗಳನ್ನು ಕಾಯ್ದಿರಿಸಬಹುದು. ಈ ಸೌಲಭ್ಯ ಖಚಿತಗೊಂಡ (Confirmed), ಆರ್ಎಸಿ (RAC) ಹಾಗೂ ಕಾಯುವ ಪಟ್ಟಿಯ (Waitlisted) ಟಿಕೆಟ್ಗಳಿಗೂ ಅನ್ವಯಿಸುತ್ತದೆ.
ಗುಂಪು ಬುಕಿಂಗ್ಗೆ ಬರ್ತ್ಗಳ ಸಂಖ್ಯೆಯ ಮಿತಿ ಇಲ್ಲ
ಪರಿಷ್ಕೃತ ಮಾರ್ಗಸೂಚಿಯ ಪ್ರಮುಖ ಬದಲಾವಣೆಯೆಂದರೆ, ಗುಂಪು ಕಾಯ್ದಿರಿಸುವಿಕೆಯಲ್ಲಿ ಅನುಮತಿಸಲಾದ ಬರ್ತ್ಗಳು ಅಥವಾ ಆಸನಗಳ ಸಂಖ್ಯೆಗೆ ಯಾವುದೇ ಗರಿಷ್ಠ ಮಿತಿ ಇರುವುದಿಲ್ಲ. ಈ ಹಿಂದೆ ಇದ್ದ ನಿರ್ದಿಷ್ಟ ಸಂಖ್ಯೆಯ ಮಿತಿಯನ್ನು ತೆಗೆದುಹಾಕಲಾಗಿದೆ. ಮಂಗಳೂರು ಸೇರಿದಂತೆ ಪ್ರಮುಖ ನಿಲ್ದಾಣಗಳ ಕಾಯ್ದಿರಿಸುವಿಕೆ ಅಧಿಕಾರಿಗಳಿಗೆ ಇಂತಹ ಗುಂಪು ಬುಕಿಂಗ್ಗಳನ್ನು ಅನುಮೋದಿಸುವ ಅಧಿಕಾರವನ್ನೂ ನೀಡಲಾಗಿದೆ.
ಗುಂಪು ಟಿಕೆಟ್ಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಕಾರಿಗಳಿಗೆ ನೇರ ಅರ್ಜಿ: ಗುಂಪು ಬುಕಿಂಗ್ಗಾಗಿ ಅರ್ಜಿದಾರರು ಸಂಬಂಧಪಟ್ಟ ನಿಲ್ದಾಣದ ಮುಖ್ಯ ಕಾಯ್ದಿರಿಸುವಿಕೆ ಮೇಲ್ವಿಚಾರಕರು (CRS) ಅಥವಾ ನಿಲ್ದಾಣ ವ್ಯವಸ್ಥಾಪಕರಿಗೆ (SM) ನೇರವಾಗಿ ಅರ್ಜಿ ಸಲ್ಲಿಸಬೇಕು. ಇವರಿಗೆ ಗುಂಪು ಕಾಯ್ದಿರಿಸುವಿಕೆಯನ್ನು ಅನುಮೋದಿಸುವ ಅಧಿಕಾರ ನೀಡಲಾಗಿದೆ.
- ಪ್ರಯಾಣಿಕರ ಸಂಖ್ಯೆಗೆ ಮಿತಿ ಇಲ್ಲ: ಗುಂಪು ಬುಕಿಂಗ್ನಲ್ಲಿ ಬರ್ತ್ ಅಥವಾ ಆಸನಗಳ ಸಂಖ್ಯೆಗೆ ಯಾವುದೇ ಗರಿಷ್ಠ ಮಿತಿ ಇರುವುದಿಲ್ಲ. ಎಲ್ಲಾ ಪ್ರಯಾಣ ದರ್ಜೆಗಳಲ್ಲೂ ಗುಂಪು ಕಾಯ್ದಿರಿಸುವಿಕೆ ಮಾಡಿಕೊಳ್ಳಬಹುದು.
- ಟ್ರಾವೆಲ್ ಏಜೆನ್ಸಿಗಳ ಮೂಲಕ ಅರ್ಜಿ ಸಲ್ಲಿಸುವಂತಿಲ್ಲ: ವಿದೇಶಿ ಪ್ರವಾಸಿಗರು ಹಾಗೂ ಅನಿವಾಸಿ ಭಾರತೀಯರ (NRI) ಪರವಾಗಿ ಸಲ್ಲಿಸುವ ಅರ್ಜಿಗಳನ್ನು ಹೊರತುಪಡಿಸಿ, ಇತರ ಗುಂಪು ಬುಕಿಂಗ್ ಅರ್ಜಿಗಳನ್ನು ಸ್ಥಳೀಯ ಪ್ರವಾಸ ಸಂಸ್ಥೆಗಳ ಮೂಲಕ ಸಲ್ಲಿಸಲು ಅವಕಾಶವಿಲ್ಲ. ಅರ್ಜಿದಾರರು ನೇರವಾಗಿ ರೈಲ್ವೆ ಅಧಿಕಾರಿಗಳನ್ನು ಸಂಪರ್ಕಿಸಬೇಕು.
- ಪ್ರಯಾಣದ ಉದ್ದೇಶ ಕಡ್ಡಾಯ: ಗುಂಪು ಪ್ರಯಾಣದ ಉದ್ದೇಶವನ್ನು ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಪ್ರಯಾಣದ ಉದ್ದೇಶವನ್ನು ತಿಳಿಸದಿದ್ದರೆ ಅನುಮತಿ ನೀಡಲಾಗುವುದಿಲ್ಲ.
- ಪ್ರಯಾಣಿಕರ ವಿವರ ಸಲ್ಲಿಕೆ: ಅರ್ಜಿ ಸಲ್ಲಿಸುವಾಗ ಗುಂಪಿನಲ್ಲಿರುವ ಎಲ್ಲಾ ಪ್ರಯಾಣಿಕರ ಹೆಸರು, ವಯಸ್ಸು, ಲಿಂಗ, ವಿಳಾಸ ಹಾಗೂ ಪ್ರಯಾಣದ ಉದ್ದೇಶದ ವಿವರಗಳನ್ನು ಒದಗಿಸಬೇಕು.
- ಹಿಂತಿರುಗುವ ಪ್ರಯಾಣಕ್ಕೂ ಅವಕಾಶ: ಹಿಂದಿರುಗುವ ಪ್ರಯಾಣಕ್ಕೂ ಅದೇ ಕಾಯ್ದಿರಿಸುವಿಕೆ ಕಚೇರಿಯಲ್ಲಿ ಗುಂಪು ಬುಕಿಂಗ್ಗೆ ಅನುಮತಿ ಪಡೆಯಬಹುದು. ಆದರೆ, ಹಿಂದಿರುಗುವ ಪ್ರಯಾಣವನ್ನು ಪ್ರತ್ಯೇಕ ಕಾಯ್ದಿರಿಸುವಿಕೆಯಾಗಿ ಪರಿಗಣಿಸಲಾಗುತ್ತದೆ.
- ದಾಖಲೆಗಳ ನಿರ್ವಹಣೆ: ಅನುಮೋದಿಸಲಾದ ಎಲ್ಲಾ ಗುಂಪು ಬುಕಿಂಗ್ಗಳ ಪ್ರತ್ಯೇಕ ದಾಖಲೆ ಪುಸ್ತಕವನ್ನು ಮುಖ್ಯ ಕಾಯ್ದಿರಿಸುವಿಕೆ ಮೇಲ್ವಿಚಾರಕರು ಅಥವಾ ನಿಲ್ದಾಣ ವ್ಯವಸ್ಥಾಪಕರು ನಿರ್ವಹಿಸಬೇಕು. ಅರ್ಜಿ ನಮೂನೆ ಹಾಗೂ ಪ್ರಯಾಣಿಕರ ಪಟ್ಟಿಯ ಪ್ರತಿ ಪುಟಕ್ಕೂ ಮೊಹರು ಮತ್ತು ಸಹಿ ಹಾಕಬೇಕು.
- ದುರುಪಯೋಗ ತಡೆಯಲು ಎಚ್ಚರಿಕೆ
- ಗುಂಪು ಬುಕಿಂಗ್ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು ಬರ್ತ್ಗಳನ್ನು ಅಕ್ರಮವಾಗಿ ಕಾಯ್ದಿರಿಸುವುದಕ್ಕೆ ಅವಕಾಶ ನೀಡದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ನೈಜ ಗುಂಪು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವುದು ಹಾಗೂ ಕಾಯ್ದಿರಿಸುವಿಕೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವುದು ಈ ಪರಿಷ್ಕೃತ ನಿಯಮಗಳ ಉದ್ದೇಶವಾಗಿದೆ.
- ಉಪ ಮುಖ್ಯ ವಾಣಿಜ್ಯ ವ್ಯವಸ್ಥಾಪಕ (ಪ್ರಯಾಣಿಕರ ಸೇವೆಗಳು) ಪಿ. ಕಿರಣ್ ಕುಮಾರ್ ಅವರು ನವೆಂಬರ್ 18ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಈ ಹೊಸ ಮಾರ್ಗಸೂಚಿಗಳನ್ನು ವಿವರಿಸಿದ್ದಾರೆ. ಸಾಮಾನ್ಯ ಮುಂಗಡ ಕಾಯ್ದಿರಿಸುವಿಕೆ ಕೌಂಟರ್ಗಳು ಆರಂಭವಾದ ಒಂದು ಗಂಟೆಯ ಬಳಿಕ, ಅಂದರೆ ಬೆಳಗ್ಗೆ 9 ಗಂಟೆಯಿಂದ ಗುಂಪು ಕಾಯ್ದಿರಿಸುವಿಕೆಗಳನ್ನು ಸ್ವೀಕರಿಸಬಹುದು. ಪ್ರತ್ಯೇಕ ಗುಂಪು ಬುಕಿಂಗ್ ಕೌಂಟರ್ ಇದ್ದಲ್ಲಿ ಅಲ್ಲಿಯೇ ಅಥವಾ ಸಾಮಾನ್ಯ ಕೌಂಟರ್ಗಳ ಮೂಲಕವೂ ಅರ್ಜಿ ಸಲ್ಲಿಸಲು ವ್ಯವಸ್ಥೆ ಕಲ್ಪಿಸಬಹುದು ಎಂದು ಸೂಚಿಸಲಾಗಿದೆ.
ಸ್ಥಳೀಯ
Wedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.
ಉಜಿರೆ: ಕ್ಯಾಸೆಟ್ಗಳ ಅಬ್ಬರ, ಮೈಕಾಸುರನ ಹಾವಳಿಯಿಂದ ಶಬ್ದ ಮಾಲಿನ್ಯವಿಲ್ಲ. ಸಿನೆಮಾ ಹಾಡು, ಬ್ರೇಕ್ಡ್ಯಾನ್ಸ್ ಉಪಟಳವಿಲ್ಲ. ಅತ್ಯಂತ ಸರಳವಾಗಿ, ಶಿಸ್ತುಬದ್ಧವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.
ಮದುಮಗ ಕೆ.ಜೆ. ಸುದರ್ಶನ್ ತಾಯಿ-ತಂದೆ ಬಗ್ಯೆ ಅಪಾರ ಗೌರವ, ಪ್ರೀತಿ-ವಿಶ್ವಾಸವನ್ನು ವ್ಯಕ್ತಪಡಿಸಿ ಅವರೇ ತನಗೆ ಪ್ರತ್ಯಕ್ಷ ದೇವರು ಎಂದು ಗೌರವ ಸಲ್ಲಿಸಿದರು.
ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ಭಾವುಕರಾಗಿ ಆನಂದಭಾಷ್ಪ ಸುರಿಸಿದರು. ಇಂತಹ ಮಗನನ್ನು ಪಡೆದ ತಾವೇ ಭಾಗ್ಯವಂತರು ಎಂದು ಸಂತಸವ್ಯಕ್ತಪಡಿಸಿದರು.
ಉಷಾಜನಾರ್ಧನ ಗಣೇಶನ ಸ್ತುತಿಯನ್ನು ಸುಶ್ರಾವ್ಯವಾಗಿ ಹಾಡಿದರು. ಸೊಸೆಯನ್ನು ಕೂಡಾ ಮಗಳಂತೆ ಪ್ರೀತಿಯಿಂದ ನೋಡಿಕೊಳ್ಳುವುದಾಗಿ ತಿಳಿಸಿದರು.
ಹಿರಿಯ ದಂಪತಿ ಮತ್ತು ನವದಂಪತಿ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿ, ಗೌರವಿಸಿದರು. ಎಲ್ಲರಿಗೂ ಸರಳ, ಶುದ್ಧ ಹಾಗೂ ಶುಚಿ-ರುಚಿಯಾದ ಶಾಕಾಹಾರ ಭೋಜನ ನೀಡಿದರು.
ಉಜಿರೆ ಜನಾರ್ದನಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ಕೃಷ್ಣ ಪಡ್ವೇಟ್ನಾಯ, ಶಾಸಕ ಕೆ. ಹರೀಶ್ ಪೂಂಜ, ಮಾಜಿ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮೂಡಬಿದ್ರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಮತ್ತು ರಶ್ಮಿತಾ ಜೈನ್ ನಾರಾವಿ ಸೇರಿದಂತೆ ಅನೇಕ ಗಣ್ಯರು, ಹಿರಿಯರು ಆಗಮಿಸಿ ನೂತನ ದಂಪತಿಗೆ ಶುಭ ಹಾರೈಸಿದರು.
ಶಿಕ್ಷಣ
Science Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
ಆಕಾಂಕ್ಷಾ ಚಾರಿಟಬಲ್ ಟ್ರಸ್ಟ್ (ರಿ.), ಪುತ್ತೂರು ಹಾಗೂ ಕೋಡ್ಕ್ರಾಫ್ಟ್ ಟೆಕ್ನಾಲಜೀಸ್, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ – 2026’ ಶನಿವಾರ, ನವೆಂಬರ್ 21ರಂದು ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಯಶಸ್ವಿಯಾಗಿ ಜರುಗಿತು.
ಪುತ್ತೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಕುತೂಹಲ ಹಾಗೂ ಪ್ರಾಯೋಗಿಕ ಕಲಿಕೆಯನ್ನು ಬೆಳೆಸುವ ಉದ್ದೇಶದಿಂದ ಆಕಾಂಕ್ಷಾ ಚಾರಿಟಬಲ್ ಟ್ರಸ್ಟ್ (ರಿ.), ಪುತ್ತೂರು ಹಾಗೂ ಕೋಡ್ಕ್ರಾಫ್ಟ್ ಟೆಕ್ನಾಲಜೀಸ್, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ – 2026’ ಶನಿವಾರ, ನವೆಂಬರ್ 21ರಂದು ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಯಶಸ್ವಿಯಾಗಿ ಜರುಗಿತು.

ಶಾಲಾ ಮಟ್ಟದಿಂದ ಜಿಲ್ಲಾ ಮಟ್ಟದವರೆಗಿನ ಯಶಸ್ವಿ ಪಯಣ:
“ಉತ್ತಮ ಜೀವನಕ್ಕಾಗಿ ವಿಜ್ಞಾನ” ಎಂಬ ಆಶಯದೊಂದಿಗೆ ಆರಂಭಗೊಂಡ ಈ ಅಭಿಯಾನದ ಮೊದಲ ಹಂತದಲ್ಲಿ ಜಿಲ್ಲೆಯ 41 ಗ್ರಾಮೀಣ ಶಾಲೆಗಳಲ್ಲಿ ಶಾಲಾ ಮಟ್ಟದ ವಿಜ್ಞಾನ ಮೇಳಗಳನ್ನು ಆಯೋಜಿಸಲಾಗಿತ್ತು. ಇದರಲ್ಲಿ 1,189 ವಿದ್ಯಾರ್ಥಿಗಳು ಭಾಗವಹಿಸಿ ಸುಮಾರು 650 ವಿನೂತನ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದ್ದರು. ಶಾಲಾ ಮಟ್ಟದಲ್ಲಿ ವಿಜೇತರಾದ ತಂಡಗಳು ಜಿಲ್ಲಾ ಮಟ್ಟದ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು.

ಜಿಲ್ಲಾ ಮಟ್ಟದ ಅಂತಿಮ ಸ್ಪರ್ಧೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ 66 ಹಾಗೂ ಪ್ರೌಢಶಾಲಾ ವಿಭಾಗದ 57 ತಂಡಗಳು ಸೇರಿದಂತೆ ಒಟ್ಟು 123 ತಂಡಗಳು ಭಾಗವಹಿಸಿದ್ದವು. ಇದೇ ಸಂದರ್ಭದಲ್ಲಿ ಬಂಟರ ಭವನದಲ್ಲಿ ಸಂಪನ್ಮೂಲ ವ್ಯಕ್ತಿ ಅನಿರುದ್ಧ್ ವಾಗ್ಳೆ ವಿದ್ಯಾರ್ಥಿಗಳಿಗೆ ವಿಶೇಷ ಪ್ರೇರಣಾದಾಯಕ ಅವಧಿ ನಡೆಸಿಕೊಟ್ಟರು. ಮಾರ್ಗದರ್ಶಿ ಶಿಕ್ಷಕರಿಗಾಗಿ ಶಾಲೆಯ ಅಟಲ್ ಟಿಂಕರಿಂಗ್ ಪ್ರಯೋಗಾಲಯದಲ್ಲಿ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ನಿರಂತರ ಪರಿಶ್ರಮವಿದ್ದಾಗ ಮಾತ್ರ ಹೊಸ ಆವಿಷ್ಕಾರಗಳು ಸಾಧ್ಯವಾಗುತ್ತವೆ. ನಿರಂತರ ಕಲಿಕೆಯಿಂದ ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು” ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಕೋಡ್ಕ್ರಾಫ್ಟ್ ಟೆಕ್ನಾಲಜೀಸ್ನ ಸಹ-ಸಂಸ್ಥಾಪಕ ಶ್ರೀ ಪ್ರವೀಣ್ ಕ್ಯಾಸ್ಟಲಿನೋ, “ವಿದ್ಯಾರ್ಥಿಗಳಲ್ಲಿರುವ ಕುತೂಹಲವೇ ಹೊಸ ಆವಿಷ್ಕಾರಗಳಿಗೆ ದಾರಿ ಮಾಡಿಕೊಡುತ್ತದೆ. ಪ್ರಶ್ನಿಸುವ ಹಾಗೂ ಪ್ರಯೋಗ ಮಾಡುವ ಮನೋಭಾವ ಬೆಳೆಸಿಕೊಂಡಾಗ ಗ್ರಾಮೀಣ ಪ್ರತಿಭೆಗಳು ದೊಡ್ಡ ಮಟ್ಟದ ಸಾಧನೆ ಮಾಡಲು ಸಾಧ್ಯ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕೋಡ್ಕ್ರಾಫ್ಟ್ ಟೆಕ್ನಾಲಜೀಸ್ನ ಆಪರೇಷನ್ಸ್ ಲೀಡ್ ಜೋಬಿನ್ ಜೋಸೆಫ್ ಹಾಗೂ ಆಕಾಂಕ್ಷಾ ಚಾರಿಟಬಲ್ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಡಾ. ಶ್ರೀಶ ಬೈಪದವು ಉಪಸ್ಥಿತರಿದ್ದರು. ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎಸ್. ಸ್ವಾಗತಿಸಿದರು. ರಾಜೇಶ್ವರಿ ಎನ್. ನಿರೂಪಿಸಿ, ನೇತ್ರಾ ಡಿ. ರಾವ್ ವಂದಿಸಿದರು.
-
ಸ್ಥಳೀಯ5 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್4 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಶಿಕ್ಷಣ6 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಶಿಕ್ಷಣ5 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ















