ಸುಳ್ಯ
Bumper rate-ಹಸಿ ಕೊಕ್ಕೊಗೆ ಬಂಪರ್ ರೇಟ್ – ಈ ಹಿಂದೆ ಕಂಡು ಕೇಳರಿಯದ ಧಾರಣೆ ; ಅಡಿಕೆ ಧಾರಣೆ ಕುಸಿದ ಕಾಲದಲ್ಲಿ ಕೈ ಹಿಡಿದ ಉಪ ಬೆಳೆ
ಸುಳ್ಯ/ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯ ಜತೆ ತೋಟದಲ್ಲಿ ಉಪ ಬೆಳೆಯಾಗಿ ಬೆಳೆಸುವ ಕೊಕ್ಕೋ ದರ ಇತಿಹಾಸದಲ್ಲೆ ಮೊದಲ ಬಾರಿ ರೂ 200 ದಾಟಿದೆ. ಈ ಮೂಲಕ ಚಾಕಲೇಟ್ಗಳು, ಪೇಯಗಳ ತಯಾರಿಕೆಗೆ ಬಳಕೆಯಾಗುವ ಕೊಕ್ಕೊಗೆ ಚಿನ್ನದ ಬೆಲೆ ಬಂದಿದೆ. ಸಾಮಾನ್ಯವಾಗಿ ಹಸಿ ಕೊಕ್ಕೋ ಬೆಳೆಗೆ ಮಾರುಕಟ್ಟೆಯಲ್ಲಿ ರೂ.50-70ರವರೆಗೆ ಧಾರಣೆ ಇತ್ತು. ಕಳೆದ ಕೆಲವು ತಿಂಗಳಿನಿಂದ ಕೊಕ್ಕೋ ಧಾರಣೆ ಏರಿಕೆ ಕಂಡಿದೆ.
ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಮಾ. 25ರಂದು ಹಸಿ ಕೊಕ್ಕೊ ಕೆ.ಜಿ.ಗೆ 205ಕ್ಕೆ ಖರೀದಿಯಾಗಿದೆ. ಕೆಲ ವರ್ಷಗಳ ಹಿಂದೆ ಕೆಜಿಗೆ ರೂ 30 ಇದ್ದ ಕೊಕ್ಕೊ ರೇಟ್ ಈ ಪಾಟಿ ನೆಗೆದಿರುವುದು ಇದೆ ಮೊದಲು. ಯಾವುದೇ ಸೀಸನಲ್ಲೂ ಕೊಕ್ಕೊ ದರ ಪ್ರತೀ ಕೆ.ಜಿ.ಗೆ 125 ರೂ ದಾಟಿದ್ದು ತೀರ ಅಪರೂಪ. ಹೀಗಾಗಿ ಸದಾ ನಷ್ಟದ ಬಾಬ್ತು ಆಗಿದ್ದ ಕೊಕ್ಕೊ ಬೆಳೆಗಾರರ ಮುಖದಲ್ಲಿ ಮಂದ ಹಾಸ ಬಂದಿದೆ. ಅಡಿಕೆ ಧಾರಣೆ ತೀರಾ ಸುಖಕರವಾಗಿಲ್ಲದ ದಿನಮಾನದಲ್ಲಿ ಉಪಬೆಳೆ ಕೈ ಹಿಡಿದಿರುವುದು ಕೃಷಿ ಕ್ಷೇತ್ರದ ಮಟ್ಟಿಗೆ ಉತ್ತಮ ಬೆಳವಣಿಗೆ.
ರೈತಾಪಿ ವರ್ಗ ಯಾವತ್ತೂ ಒಂದು ಬೆಳೆಯನ್ನು ನಂಬಿ ಕೃಷಿ ಮಾಡಬಾರದು. ತೋಟ ಯಾವುತ್ತೂ ಹಲವು ಬೆಳೆಗಳಿಂದ ಕೂಡಿರಬೇಕು. ಆಗ ಮಾತ್ರ ಕೃಷಿಕ ನೆಮ್ಮದಿಯ ಬದುಕು ಸಾಗಿಸಲು ಸಾಧ್ಯ ಎಂಬ ಕೃಷಿ ತಜ್ಞರ ಮಾತಿಗೆ ಕೊಕ್ಕೋ ಬೆಲೆಯೆರಿಕೆ ಪುಷ್ಟಿ ನೀಡುತ್ತಿದೆ. ಕೆಲವು ವರ್ಷದ ಹಿಂದೆ ಅಡಿಕೆ ಧಾರಣೆ ರೂ.500 ಮೀರಿದಾಗ ಬೆಳೆಗಾರರು ಕೊಕ್ಕೂ ಬೆಳೆಯನ್ನು ಕೈಬಿಟ್ಟು ಅಡಿಕೆ ಬೆಳೆಗೆ ಹೆಚ್ಚಿನ ಗಮನ ಕೊಟ್ಟರು.. ಅಡಿಕೆ ತೋಟದ ಮಧ್ಯೆ ಕೊಕ್ಕೊ ಬೆಳೆದರೇ , ತೋಟಕ್ಕೆ ಹಾಕಿದ ಗೊಬ್ಬರ ತಿನ್ನುತ್ತದೆ, ಮದ್ದು ಸಿಂಪಡನೆಗೆ, ಸ್ಪಿಂಕ್ಲರ್ ಆಧಾರಿತ ನೀರಾವರಿಗೆ ತೊಂದರೆಯಾಗುತ್ತದೆ ಎಂದು ಅಡಿಕೆ ತೋಟದಲ್ಲಿದ್ದ ಕೊಕ್ಕೋ ಗಿಡಗಳನ್ನು ಕಡಿಯುವುದರ ಮೂಲಕ ಕೊಕ್ಕೋ ಬೆಳೆಯನ್ನು ನಾಶ ಮಾಡಿದರು.
ವಿದೇಶಗಳಲ್ಲಿ ಕೊಕ್ಕೊ ಉತ್ಪಾದನೆ ಮತ್ತು ದಾಸ್ತಾನು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿರುವುದು, ದೇಶೀಯವಾಗಿ ಕೊಕ್ಕೊ ಉತ್ಪಾದನೆಯಲ್ಲಿ ಕುಸಿತ ಆಗಿರುವುದರಿಂದ ಮಾರುಕಟ್ಟೆಯಲ್ಲಿ ಕೊಕ್ಕೊ ಕೊರತೆ ಕಂಡುಬಂದಿದ್ದು, ಬೇಡಿಕೆ ಹೆಚ್ಚಾಗಿದೆ. ಬೇಡಿಕೆಗೆ ತಕ್ಕಂತೆ ಕೊಕ್ಕೊ ಪೂರೈಕೆ ಇಲ್ಲದಿರುವುದರಿಂದ ಧಾರಣೆ ಹೆಚ್ಚಾಗಿದೆ ಎನ್ನುತ್ತಾರೆ ಮಾರುಕಟ್ಟೆ ವಿಶ್ಲೇಷಕರು.
ಪ್ರಸ್ತುತ ಹಸಿ ಕೊಕ್ಕೋ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿಲ್ಲ. ಇರುವಲ್ಲಿಯೂ ಈಗಷ್ಟೇ ಕಟಾವಿಗೆ ಬರುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ತೋಟಗಳಲ್ಲಿ ಹಣ್ಣು ಕಟಾವಿಗೆ ಬರಲಿದ್ದು, ಆಗಲೂ ಇದೇ ಧಾರಣೆ ಸ್ಥಿರವಾಗಿದ್ದಲ್ಲಿ ಉತ್ತಮ ಆದಾಯ ಸಿಗಲಿದೆ ಎಂಬ ಅಭಿಪ್ರಾಯ ಕೃಷಿಕರದು.
ಒಣ ಕೊಕ್ಕೊ
ಮಾ. 6ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊಕೆ.ಜಿ.ಗೆ 150 ದಾಖಲಾಗಿತ್ತು. ಮಾ. 18 ರಂದು ಕೆ.ಜಿ.ಗೆ 170ರೂ., ಮಾ. 22ರಂದು ಹೊರ ಮಾರುಕಟ್ಟೆಯಲ್ಲಿ 190 ರೂ.ಗೆ ಖರೀದಿಸಲಾ ಗಿತ್ತು. ಅದಾದ ಎರಡೇದಿನದಲ್ಲಿ ಧಾರಣೆ 200 ಗಡಿ ದಾಟಿದೆ.
ಮಾ. 18ರಂದು 170 ರೂ. ಧಾರಣೆ ಇದ್ದ ಕ್ಯಾಂಪ್ಕೋದಲ್ಲಿ ಮಾ. 25ರಂದು 205 ರೂ.ಗೆ ಏರಿಕೆ ಕಂಡಿದೆ. ಹಸಿ ಕೊಕ್ಕೊ ಮಾತ್ರವಲ್ಲದೆ ಒಣ ಕೊಕ್ಕೊ ಧಾರಣೆಯಲ್ಲಿಯೂ ಹೆಚ್ಚಳ ಆಗಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಮಾ. 23ರಂದು ಒಣ ಕೊಕ್ಕೊಗೆ ಕೆ.ಜಿ. ಗೆ 500-575 ರೂ. ಇತ್ತು. ಮಾ. 25ರಂದು 575-650 ರೂ. ಆಗಿದೆ. ಅಂದರೆ ಕೆ.ಜಿ.ಗೆ 75 ರೂ.ನಷ್ಟು ಏರಿಕೆ ಕಂಡಿದೆ.
ಆವಕ ನಿರಾಶಾದಾಯಕ
ಪ್ರಸ್ತುತ ದಕ್ಷಿಣ ಕನ್ನಡ ಮಾರುಕಟ್ಟೆಯಲ್ಲಿ ಕೊಕ್ಕೊ ಧಾರಣೆ ಐತಿಹಾಸಿಕ ದಾಖಲೆ ಕಂಡಿದ್ದರೂ, ಮಾರುಕಟ್ಟೆಗೆ ಆವಕ ನಿರೀಕ್ಷಿತ ಪ್ರಮಾಣದಲ್ಲಾಗುತ್ತಿಲ್ಲ. ಜಿಲ್ಲೆಯ ಬೆಳೆಗಾರರು ಬಹುತೇಕ ಕೊಕ್ಕೊ ಬೆಳೆಯುವುದನ್ನು ನಿಲ್ಲಿಸಿದ್ದು, ಬೆರಳೆಣಿಕೆಯಷ್ಟು ರೈತರು ಮಾತ್ರ ಬೆಳೆಯುತ್ತಿದ್ದಾರೆ. ದಶಕಗಳ ಹಿಂದೆ ಅಡಕೆ ತೋಟದ ಮಧ್ಯೆ ಹೇರಳವಾಗಿ ಕೊಕ್ಕೊ ಬೆಳೆಸುತ್ತಿದ್ದ ರೈತರು ಇತ್ತೀಚಿನ ವರ್ಷಗಳಲ್ಲಿ ಕೊಕ್ಕೊ ಗಿಡಗಳನ್ನು ಕಡಿದು ಅಡಕೆ ತೋಟ ಮಾತ್ರ ಉಳಿಸಿಕೊಂಡಿದ್ದಾರೆ. ಏಷ್ಯಾದಲ್ಲೇ ಸಹಕಾರಿ ಕ್ಷೇತ್ರದ ಅತಿ ದೊಡ್ಡ ಚಾಕಲೇಟ್ ಕಾರ್ಖಾನೆ ಎಂಬ ಕೀರ್ತಿಯೊಂದಿಗೆ ಆರಂಭಗೊಂಡ ಕ್ಯಾಂಸ್ಕೋ ಚಾಕಲೇಟ್ ಕಾರ್ಖಾನೆ ಪುತ್ತೂರಿನಲ್ಲಿದ್ದರೂ, ಅದು ತನ್ನ ಚಾಕಲೇಟ್ ಉತ್ಪಾದನೆಗೆ ಬೇಕಾದ ಕೊಕ್ಕೊವನ್ನು ತಮಿಳುನಾಡು ಮತ್ತು ಆಂಧ್ರಪ್ರದೇಶವನ್ನು ಆಶ್ರಯಿಸಿದೆ.
ರೈತರ ನಿರಾಸಕ್ತಿಗೆ ಕಾರಣ
ಅಡಕೆ ತೋಟದ ಮಧ್ಯೆ ಕೊಕ್ಕೋ ಗಿಡಗಳಿದ್ದ ಕಾರಣ ಕೊಕ್ಕೋ ತಿನ್ನಲು ಅಪಾರ ಪ್ರಮಾಣದಲ್ಲಿ ಮಂಗಗಳು ದಾಳಿ ಮಾಡುತ್ತವೆ. ತೋಟಕ್ಕೆ ನುಗ್ಗಿದ ಮಂಗಗಳು ಕೇವಲ ಕೊಕ್ಕೊವನ್ನಷ್ಟೇ ತಿನ್ನದೆ ಅಡಕೆ ಮರಗಳ ಮೇಲೂ ದಾಳಿ ಮಾಡಲಾರಂಭಿಸಿದ ಕಾರಣ ಭಾರಿ ನಷ್ಟಕ್ಕೆ ಕಾರಣವಾಗತೊಡಗಿತು. ಅಡಕೆ ಮರಗಳಿಗೆ ಹಾಕಿದ ರಸಗೊಬ್ಬರವನ್ನು ಕೊಕ್ಕೊ ಗಿಡಗಳು ಹೇರಳವಾಗಿ ಹೀರಿಕೊಳ್ಳುವ ಕಾರಣ ಇದು ರೈತರಿಗೆ ನಷ್ಟದಾಯಕವಾಯಿತು. ಎಷ್ಟು ಬೆಳೆದರೂ ಕೊಕ್ಕೊಬೀಜಕ್ಕೆ ಧಾರಣೆ ನಿರಾಶದಾಯಕವಾಗಿದ್ದ ಕಾರಣ ರೈತರ ಆಸಕ್ತಿ ಕುಸಿಯಲಾರಂಭಿಸಿತು. ಈ ಎಲ್ಲ ಕಾರಣಗಳಿಂದ ವರ್ಷದಿಂದ ವರ್ಷಕ್ಕೆ ರೈತರು ಕೊಕ್ಕೊ ಗಿಡಗಳನ್ನು ಕಡಿಯುವ ಪ್ರಮಾಣ ಹೆಚ್ಚಾಗಿದ್ದು, ಹೊಸದಾಗಿ ಬೆಳೆಯುವವರು ಇಲ್ಲವೇ ಇಲ್ಲ ಎನ್ನುವಷ್ಟು ಕಡಿಮೆಯಾಗಿದೆ.
ಸುಳ್ಯ
Sullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸುಳ್ಯ, ಅ.11: ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೇರಳದ ಕೋಝಿಕ್ಕೋಡ್ ನಿವಾಸಿ ಮಹಮ್ಮದ್ ಅಲಿ (67) ಬಂಧಿತ ಆರೋಪಿ.
ಬಾಲಕೃಷ್ಣ ಎಂಬವರ ಮನೆಗೆ ಬೆಳಗ್ಗೆ ಬಂದ ಆರೋಪಿ, ಮನೆಯ ಬೀಗ ಮುರಿದು ಒಳನುಗ್ಗಿದ್ದಾನೆ. ಮನೆಯವರು ಕೆಲಸಕ್ಕೆ ತೆರಳುವಾಗ ಶಾಲೆಗೆ ರಜೆ ಇದ್ದ ಕಾರಣ ತಮ್ಮ ಮೂವರು ಮಕ್ಕಳನ್ನು ಮನೆಯೊಳಗೆ ಇರಿಸಿ ಹೊರಗಿನಿಂದ ಬೀಗ ಹಾಕಿ ಹೋಗಿದ್ದರು ಎನ್ನಲಾಗಿದೆ.
ಕಳ್ಳತನದ ಉದ್ದೇಶದಿಂದ ಮನೆಗೆ ನುಗ್ಗಿದ ವ್ಯಕ್ತಿಗೆ ಒಳಗಿದ್ದ ಮಕ್ಕಳು ಕಾಣಿಸಿಕೊಂಡಿದ್ದಾರೆ. ಇದರಿಂದ ಗಾಬರಿಗೊಂಡ ಆತ, ಮನೆಯ ಬಾಗಿಲಿನ ಚಿಲಕವನ್ನು ಹೊರಗಿನಿಂದ ಹಾಕಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಮಕ್ಕಳು ತಕ್ಷಣ ತಂದೆ ಬಾಲಕೃಷ್ಣ ಅವರಿಗೆ ಫೋನ್ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ಬಂದ ಬಾಲಕೃಷ್ಣ ಅವರು ಮಕ್ಕಳಿಂದ ಸಂಪೂರ್ಣ ಮಾಹಿತಿ ಪಡೆದು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಸುಳ್ಯ ಪೊಲೀಸರು ತನಿಖೆ ನಡೆಸಿ, ಆಲೆಟ್ಟಿ ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
-
ಅಂತರ ರಾಜ್ಯ13 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
ಮಂಗಳೂರು7 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್13 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
-
ಬಿಗ್ ನ್ಯೂಸ್8 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
ಸುಳ್ಯ10 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಅಪರಾಧ10 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
ಸ್ಥಳೀಯ13 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಅಂತರ ರಾಜ್ಯ10 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್


















