ನಿಧನ ವಾರ್ತೆ
Natasha Didi-‘ದ ಗಟ್ಲೆಸ್ ಫುಡೀ’ ಖ್ಯಾತಿಯ ಹೊಟ್ಟೆಯಿಲ್ಲದೇ 12 ವರ್ಷ ಜೀವನ ಸಾಗಿಸಿದ ಜನಪ್ರಿಯ ಫುಡ್ ಬ್ಲಾಗರ್ ನತಾಶಾ ದೀದಿ ನಿಧನ..!
ಪುಣೆ : ಜನಪ್ರಿಯ ಆಹಾರ ಬ್ಲಾಗರ್ ನತಾಶಾ ದೀದಿ (50) ಅಲ್ಪಕಾಲದ ಅಸೌಖ್ಯದಿಂದ ಪುಣೆಯಲ್ಲಿ ನಿಧನರಾಗಿದ್ದಾರೆ. ಖ್ಯಾತ ಬಾಣಸಿಗರಾಗಿದ್ದ ನತಾಶಾ ಕಳೆದ 12 ವರ್ಷಗಳಿಂದ ಸಂಪೂರ್ಣ ಹೊಟ್ಟೆಯೇ ಇಲ್ಲದೆ ಬದುಕುತ್ತಿದ್ದರು. ಆದರೂ ಆಕೆ ನೂರಾರು ಜನರಿಗೆ ಸ್ಪೂರ್ತಿಯ ಚಿಲುಮೆಯಾಗಿದ್ದರು.
ಭಾರತದ ಪುಣೆಯ ನತಾಶಾ ‘ದ ಗಟ್ಲೆಸ್ ಫುಡೀ’ ನಿಂದ ಜನಪ್ರಿಯವಾಗಿದ್ದರು. ಅವರ Instagram ಫೀಡ್ ನತಾಶಾ ಅವರೇ ಬೇಯಿಸಿದ ರುಚಿಕರವಾದ ಆಹಾರದ ಚಿತ್ರಗಳಿಂದ ತುಂಬಿದೆ. ನತಾಶಾ ರಾಯಭಾರ ಕಚೇರಿಯಲ್ಲಿ ಸ್ವೀಡಿಷ್ ಬ್ರ್ಯಾಂಡ್ ಅನ್ನು ನಿರ್ವಹಿಸುವಾಗ ಸ್ವೀಡಿಷ್ ಟ್ರೇಡ್ ಕಮಿಷನರ್ ಬೆಂಗ್ಟ್ ಜಾನ್ಸನ್ ಅವರನ್ನು ಎರಡನೇ ವಿವಾಹವಾಗಿದ್ದರು. ಒಟ್ಟಿಗೆ, ಅವರು ಬೆಂಗಳೂರಿನಲ್ಲಿ ಕೆಲಸ ಮಾಡಿದರು ಮತ್ತು ನಂತರ ಅವರು ತಮ್ಮ ನೆಲೆಯನ್ನು ಪುಣೆಗೆ ಬದಲಾಯಿಸಿದರು.
ಹೊಟ್ಟೆ ತೆಗೆದು ಹಾಕಿದ್ದರು.
ನತಾಶಾ ತನ್ನ ಮೊದಲ ಮದುವೆಯಿಂದ ಹೊರಬಂದ ಒಂದು ವರ್ಷದ ನಂತರ ವಿಪರೀತ ಹೊಟ್ಟೆ ನೋವು, ಭುಜ ನೋವು ಅನುಭವಿಸಲು ಪ್ರಾರಂಭಿಸಿದರು. ಆಕೆಯ ಭುಜದ ಮೇಲೆ ಎರಡು ಶಸ್ತ್ರಚಿಕಿತ್ಸೆಗಳು ಮತ್ತು ಮೂರು ಬಾರಿ ವಿಕಿರಣ ಚಿಕಿತ್ಸೆ ಮಾಡಲಾಗಿತ್ತು. ಆ ಬಳಿಕವು ವೈದ್ಯರಿಗೆ ಅವಳ ನೋವನ್ನು ಪರಿಹರಿಸಲು ಸಾಧ್ಯವಾಗಲಿಲ್ಲ. ಕಡೆಗೆ ವೈದ್ಯರು ಹೊಟ್ಟೆಯಲ್ಲಿ ಟ್ಯೂಮರ್ ಪತ್ತೆ ಹಚ್ಚಿದರು. ಬಳಿಕ ಎಂಟು ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ, ನತಾಶಾ ಅವರ ಹೊಟ್ಟೆಯನ್ನು ತೆಗೆದುಹಾಕಿದ್ದರು.
ದಿಡ್ಡೀಗೆ, ಇದು ತನ್ನ ಆಹಾರವನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಕಾರಣ ಕಳೆದ ಕೆಲ ವರ್ಷಗಳಿಂದ ಆಹಾರ ಸೇವನೆಯಲ್ಲಿ ಸಮಸ್ಯೆಗಳನ್ನು ಎಸದುರಿಸಿದ್ದರು. ನತಾಶಾ ಅವರು ಏನು ತಿಂದರೂ ಅದು ನೇರವಾಗಿ ತನ್ನ ಕರುಳಿಗೆ ಹೋಗುತ್ತಿತ್ತು. ವಿಪರೀತವಾಗಿ ಬೆವರುವುದು, ವ್ಯಾಪಕವಾಗಿ ಆಕಳಿಕೆ ಮತ್ತು ಶೌಚಾಲಯಕ್ಕೆ ಅನೇಕ ಬಾರಿ ಓಡಾಡುವುದು ಇದರ ಅಡ್ಡ ಪರಿಣಾಮಗಳಾಗಿದ್ದವು. ಇಷ್ಟೆಲ್ಲ ಸಮಸ್ಯೆ ಇದ್ದರೂ ಅವರು ರುಚಿರುಚಿಯಾದ ಅಡುಗೆಗಳನ್ನು ತಯಾರಿಸಿ ರೆಸಿಪಿಯನ್ನು ತಮ್ಮ ಪೇಜ್ನಲ್ಲಿ ಹಂಚಿಕೊಳ್ಳುತ್ತಿದ್ದರು.
ನತಾಶ ಸಾವಿನ ಸುದ್ದಿಯನ್ನು ಅವರ ಪತಿ ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ್ದಾರೆ.‘ನನ್ನ ಪತ್ನಿ ನತಾಶಾ ದೀದಿ ಅವರ ನಿಧನವನ್ನು ಘೋಷಿಸಲು ದುಃಖವಾಗುತ್ತಿದೆ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ. ‘ದಿ ಗಟ್ಲೆಸ್ ಫುಡೀ’ ಎಂಬ ಇನ್ಸ್ಟಾಗ್ರಾಮ್ ಖಾತೆಯನ್ನು ಸಕ್ರಿಯವಾಗಿರಿಸಿಕೊಳ್ಳುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. “ನತಾಶಾ ಅವರ ಪೋಸ್ಟ್ಗಳು ಮತ್ತು ಕಥೆಗಳು ಅನೇಕ ಜನರಿಗೆ ಸ್ಫೂರ್ತಿ ನೀಡುತ್ತವೆ. ಆಕೆಯ ಅನೇಕ ಅನುಯಾಯಿಗಳು ಆಕೆಯ ಪಾಕವಿಧಾನಗಳನ್ನು ಎದುರು ನೋಡುತ್ತಿದ್ದಾರೆ.
ನತಾಶಾ ಅವರ ಪತಿ, “ಹಲವಾರು ವೀಡಿಯೊಗಳು ಅನೇಕ ಜನರಿಗೆ ಸ್ಫೂರ್ತಿ ನೀಡಿವೆ ಎಂದು ನನಗೆ ತಿಳಿದಿದೆ” ಎಂದು ಹೇಳಿದ್ದಾರೆ. ನತಾಶಾ ಸಾವಿನ ಕಾರಣ ಇನ್ನೂ ಬಹಿರಂಗಗೊಂಡಿಲ್ಲ. ಆದರೆ ಅವರು ಅನೇಕ ಸಂದರ್ಶನಗಳಲ್ಲಿ, ತನಗೆ ಆರೋಗ್ಯ ಸಮಸ್ಯೆಗಳಿವೆ ಎಂದು ಬಹಿರಂಗಪಡಿಸಿದರು. ಹೊಟ್ಟೆಯಲ್ಲಿ ಗೆಡ್ಡೆಗಳು ಕಾಣಿಸಿಕೊಂಡ ನಂತರ, ಸಂಪೂರ್ಣ ಹೊಟ್ಟೆಯನ್ನು ಶಸ್ತ್ರಚಿಕಿತ್ಸೆಯಿಂದ ತೆಗೆದುಹಾಕಲಾಯಿತು. ಇದರ ನಂತರ ಅವರು ಬಹಳ ಕಡಿಮೆ ಆಹಾರವನ್ನು ಸೇವಿಸಿದರು. ತಿಂದ ನಂತರ ತನಗೆ ತಲೆತಿರುಗುವಿಕೆ ಮತ್ತು ಸುಸ್ತಾಗುತ್ತಿದೆ ಎಂದು ನತಾಶಾ ಹೇಳಿದ್ದರು. ಹೊಟ್ಟೆಯಿಲ್ಲದೆ ಅವರು 12 ವರ್ಷಗಳ ಕಾಲ ಬದುಕಿದ್ದರು.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್‌ನ ಫುಟ್‌ಬೋರ್ಡ್‌ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್‌ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್‌ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್‌ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.
ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
-
ಬಿಗ್ ನ್ಯೂಸ್20 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್12 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ18 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು21 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized19 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್21 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ19 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್19 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















