ಸುಳ್ಯ
‘Development tongue’-ಸುಳ್ಯ ಕ್ಷೇತ್ರ ಅಭಿವೃದ್ದಿ ಆಗಿಲ್ಲ ಎಂದ ಶಾಸಕಿ ಭಾಗೀರಥಿ ..! ಸಾಕಷ್ಟು ಅಭಿವೃದ್ದಿ ಆಗಿದೆ – ಅಂಕಿ ಅಂಶ ಸಹಿತ ಸಾಬೀತು ಮಾಡಲು ಸಿದ್ದ ಎಂದ ಅಂಗಾರ..! ಬಿಜೆಪಿ ಸಮಾವೇಶದ ವೇದಿಕೆಯಲ್ಲಿ ‘ಅಭಿವೃದ್ದಿ ಟಾಂಗ್’
ಸುಳ್ಯ: ರಾಜಕೀಯ ವೇದಿಕೆಯಲ್ಲಿ ಅದರಲ್ಲೂ ಚುನಾವಣಾ ಸಂದರ್ಭದಲ್ಲಿ ಅಭಿವೃದ್ಧಿ ವಿಚಾರಗಳು ಚರ್ಚೆಯಾಗುವುದು ಸಾಮಾನ್ಯ. ಇಂದು ಸುಳ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿಯೂ ಅಭಿವೃದ್ಧಿ ಕುರಿತ ಭಾಷಣಗಳು, ಹೇಳಿಕೆಗಳು ತುಂಬಿದ್ದವು. ಶಾಸಕಿ ಭಾಗೀರಥಿ ಮುರುಳ್ಯ ಅವರು ತಮ್ಮ ಭಾಷಣದಲ್ಲಿ ಸುಳ್ಯ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಆಗಿಲ್ಲ, ಸರಿಯಾಗಿ ಅನುದಾನಗಳು ನೀಡದೆ ಸರಕಾರಗಳು ಮೀಸಲು ಕ್ಷೇತ್ರವನ್ನು
ಕಡೆಗಣಿಸಿವೆ. ಕ್ಷೇತ್ರದ ಬಹುತೇಕ ಗ್ರಾಮಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಕಾಣದೇ ಕುಗ್ರಾಮಗಳಾಗಿಯೇ ಉಳಿದಿದೆ ಎಂದು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ಎಲ್ಲಾ ಗ್ರಾಮಗಳಲ್ಲಿಯೂ ಸಾಕಷ್ಟು ಅಭಿವೃದ್ಧಿ ಬೇಡಿಕೆಗಳು ಇನ್ನೂ ಇದೆ ಎಂದು ಹೇಳಿದರು.
ಇದಕ್ಕೆ ತಮ್ಮ ಭಾಷಣದಲ್ಲಿ ಉತ್ತರಿಸಿದ ಮಾಜಿ ಸಚಿವ ಎಸ್.ಅಂಗಾರ ದಕ್ಷಿಣ ಕನ್ನಡ ಜಿಲ್ಲೆಯ ಇತರ ಯಾವುದೇ ಕ್ಷೇತ್ರಗಳಲ್ಲಿ ಆಗಿರುವುದಕ್ಕಿಂತ ಹೆಚ್ಚಿನ ಅಭಿವೃದ್ಧಿ ಸುಳ್ಯ ಕ್ಷೇತ್ರದಲ್ಲಿ ಆಗಿದೆ. ಇದನ್ನು ಅಂಕಿ ಅಂಶಗಳ ಸಮೇತ ಸಾಬೀತು ಮಾಡಲು ಸಿದ್ಧ ಎಂದು ಹೇಳಿದರು. 1994ಕ್ಕಿಂತ ಮೊದಲು ಸುಳ್ಯ ಕ್ಷೇತ್ರ ಯಾವ ರೀತಿ ಇತ್ತು, ಆ ಬಳಿಕ ಎಷ್ಟು ಅಭಿವೃದ್ಧಿ ಆಗಿದೆ ಎಂಬುದು ಎಲ್ಲರ ಮುಂದಿದೆ. ಬಿಜೆಪಿ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ಅತೀ ಹೆಚ್ಚಿನ ಅನುದಾನ ಬಂದಿದೆ. ಎಲ್ಲಾ ಸರಕಾರಗಳೂ ತನಗೆ ಅನುದಾನ ನೀಡಿದೆ ಎಂದ ಅವರು ತನ್ನ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಂಕಿ ಅಂಶಗಳ ಸಮೇತ ಸಾಬೀತು ಮಾಡಲು ಸಿದ್ಧ ಅಭಿವೃದ್ಧಿ ಆಗಿಲ್ಲ ಎಂದು ಹೇಳುವವರಿಗೆ ಈ ಅಂಕಿ ಅಂಶಗಳೇ ಉತ್ತರ ಎಂದರು.
ಸಂಸದ ನಳಿನ್ ಕುಮಾರ್ ಕಟೀಲ್ ಕೂಡ ತನ್ನ ಭಾಷಣದಲ್ಲಿ ಅಭಿವೃದ್ಧಿ ವಿಚಾರ ಉಲ್ಲೇಖಿಸಿದರು. ದಕ್ಷಿಣ ಕನ್ನಡ ಜಿಲ್ಲೆಗೆ ನರೇಂದ್ರ ಮೋದಿ ಸರಕಾರದ ಅವಧಿಯಲ್ಲಿ ಒಂದು ಲಕ್ಷ ಕೋಟಿಗೂ ಮಿಕ್ಕಿ ಅನುದಾನ ಬಂದಿದೆ ಎಂದು ಹೇಳಿದರು. ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ವಿವಿಧ ಯೋಜನೆಗಳಡಿಯಲ್ಲಿ ಕೇಂದ್ರ ಸರಕಾರದಿಂದ ಮೂರು ಸಾವಿರ ಕೋಟಿ ಅನುದಾನ ಬಂದಿದೆ ಎಂದರು.
ಸುಳ್ಯ
Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.
ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
-
Uncategorized51 minutes ago
ಪುತ್ತೂರು : ಅಡಿಕೆ ತೆಗೆಯುವಾಗ ಕಂಗಿನಿಂದ ಬಿದ್ದು ಗಂಭೀರ ಗಾಯ: ಚಿಕಿತ್ಸೆಗೆ ₹8 ಲಕ್ಷದ ಅಗತ್ಯ; ದಾನಿಗಳ ನೆರವಿನ ನಿರೀಕ್ಷೆಯಲ್ಲಿ ಬಡ ಕುಟುಂಬ
-
Uncategorized8 hours ago
ಕಾರ್ಯಕರ್ತರ ಶ್ರಮದಲ್ಲಿ ನೆಲಪ್ಪಾಲು ವೀರಾಂಜನೇಯ ಕ್ಷೇತ್ರ ನಿರ್ಮಾಣ: ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ | ಶ್ರೀ ಪಂಚಮುಖಿ ಆಂಜನೇಯ ಯಾಗದ ಅಂಗವಾಗಿ ಧರ್ಮಸಭೆ
-
Uncategorized36 minutes ago
ಗ್ರಾಮೀಣ ವಿದ್ಯಾರ್ಥಿಗಳಿಗೆ ಮಡಿಯಾಲದಲ್ಲಿ ಉಚಿತ ಎಐ ಪದವಿ ಶಿಕ್ಷಣ ಕೇಂದ್ರ; ನ. 30ರಂದು ನಾರಾಯಣ ಭಟ್ ಜನ್ಮಶತಾಬ್ದಿ ಸ್ಮರಣಾರ್ಥ ಭೂಮಿಪೂಜೆ; 2027–28ರಿಂದ 30 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಯೋಜನೆ















