Connect with us

ಬಿಗ್ ನ್ಯೂಸ್

ತಾನು ಹುಟ್ಟಿ ಬೆಳೆದ ಮನೆಯಲ್ಲಿಯೇ ಸರಳವಾಗಿ ವಿವಾಹವಾಗುವ ಮೂಲಕ ಮಾದರಿಯಾದ ತುಳುನಾಡ ಕುವರಿ ಶುಭಾ ಪೂಂಜಾ –ಬಹುಕಾಲದ ಗೆಳೆಯ ಚಿನ್ನಿ ಬಾಂಬ್ ಜತೆ ಹಸೆಮಣೆ ಏರಿದ ಸ್ಯಾಂಡಲ್ ವುಡ್ ನಟಿ

Published

on



Ad Widget

Ad Widget

Ad Widget

Ad Widget

ಉಡುಪಿ: ಡಿ 6:  ಕನ್ನಡ ಚಿತ್ರ ಮೊಗ್ಗಿನ ಮನಸ್ಸಿನ ಮೂಲಕ ಜನಪ್ರಿಯತೆ ಗಿಟ್ಟಿಸಿದ ಬಹುಭಾಷ ನಟಿ, ತುಳುನಾಡ ಚೆಲುವೆ  ಶುಭಾ ಪೂಂಜಾ ತನ್ನ ಬಹುಕಾಲದ ಗೆಳೆಯ ಸುಮಂತ್ ಜತೆ ಸಪ್ತಪದಿ ತುಳಿದಿದ್ದಾರೆ. ಬುಧವಾರ ಶುಭಾಳ ಅಜ್ಜಿ ಮನೆ  ಶಿರ್ವದ ಮಜಲಬೆಟ್ಟು ಬೀಡುವಿನಲ್ಲಿ ನಡೆದ ಸರಳ ಮದುವೆ ಸಮಾರಂಭದಲ್ಲಿ ಈ ಜೋಡಿ ವಿವಾಹವಾದರು. ಕೋವಿಡ್ ಹಿನ್ನೆಲೆಯಲ್ಲಿ  ಸರಳವಾಗಿ  ಈ ಮದುವೆ  ಕಾರ್ಯಕ್ರಮ  ಜರುಗಿದ್ದು, ಅದರ ಪೋಟೊಗಳನ್ನು ಆಕೆ ತನ್ನ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಂಡಿದ್ದಾರೆ

Ad Widget

Ad Widget

Ad Widget

Ad Widget

ಕಳೆದ ವರ್ಷವೇ ಇವರಿಬ್ಬರ ಮದುವೆ ಸುದ್ದಿ ಹಬ್ಬಿತ್ತು . ಆದರೆ ಲಾಕ್ ಡೌನ್ ನಿಂದಾಗಿ ವಿವಾಹ ಮುಂದೂಡಲಾಗಿತ್ತು.  ಜ .5 ಸುಮಂತ್ ಮತ್ತು ಶುಭಾ ಪೂಂಜಾ ಹಸೆಮಣೆ ಏರುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಆ ಮೂಲಕ ವದಂತಿಗಳಿಗೆ ಇತಿಶ್ರೀ ಹಾಡಿದ್ದಾರೆ. ಅಲ್ಲದೇ ಸರಳವಾಗಿ ವಿವಾಹವಾಗುವ ಮೂಲಕ ಇತರರಿಗು ಮಾದರಿಯಾಗಿದ್ದಾರೆ

Ad Widget

Ad Widget

Ad Widget alt="Ad Widget"/>

Ad Widget

ಪತಿ ಸುಮಂತ್‌  ತನ್ನ ಮದುವೆ  ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಶುಭಾ ಪೂಂಜಾ, ‘ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು.. ಇಂದು (ಜ.5) ನಾನು ಮತ್ತು ಸುಮಂತ್ ಮಹಾಬಲ, ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ..’ ಎಂದು ಬರೆದುಕೊಂಡಿದ್ದಾರೆ.

Ad Widget

Ad Widget <> Ad Widget

ಇನ್‌ ಸ್ಟಾಗ್ರಾಮ್‌ ನಲ್ಲಿ ಪೋಸ್ಟ್‌ ಹಾಕುತ್ತಲೇ ಸಾಮಾಜಿಕ ಜಾಲತಾಣದಲ್ಲಿ ಈ ನವ ಜೋಡಿಗೆ    ಅಭಿಮಾನಿಗಳು, ಆತ್ಮೀಯರು ಹಿತೈಷಿಗಳಿಂದ  ಶುಭ ಹಾರೈಕೆಯ ಮಹಾಪೂರವೇ ಹರಿದಿದೆ.



Ad Widget

“ಇದು ನನ್ನ ಊರು, ಇದು ಅಜ್ಜಿ ಮನೆ, ನಾನು ಹುಟ್ಟಿ ಬೆಳೆದ ಮನೆಯಲ್ಲಿಯೇ ಮದುವೆ ಆಗಬೇಕು ಎನ್ನುವ ಆಸೆ ಇತ್ತು. ಹಾಗಾಗಿ ಇಲ್ಲೇ ಮದುವೆ ಆಗಿದ್ದೇವೆ” ಎಂದು ವಿವಾಹದ ಬಳಿಕ ಆಕೆ ತನ್ನ ಮನದಿಂಗಿತವನ್ನು ಮಾಧ್ಯಮವೊಂದಕ್ಕೆ  ಹಂಚಿಕೊಂಡಿದ್ದಾರೆ.  ಕುಟುಂಬಸ್ಥರು, ಗುರು ಹಿರಿಯರ ಸಮ್ಮುಖದಲ್ಲಿ ಜೋಡಿ  ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ.

Ad Widget

Ad Widget

ಮಂಗಳೂರು ಮೂಲದ ಹುಡುಗ ಸುಮಂತ್ ಮಹಾಬಲ ಅವರನ್ನು ಶುಭಾ ಕಳೆದೆರಡು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಸುಮಂತ್ ಅವರನ್ನು ಶುಭಾ ಪೂಂಜಾ ಪ್ರೀತಿಯಿಂದ ಚಿನ್ನಿ ಬಾಂಬ್ ಎಂದು ಕರೆಯುತ್ತಾರೆ.   ಸುಮಂತ್ ಒರ್ವ ಉದ್ಯಮಿ ಆಗಿದ್ದು, ಶುಭಾ ಪೂಂಜಾ ಜೊತೆಗೆ ಆಗಾಗ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದರು.  ಇಬ್ಬರು  ಮನೆಯವರ ಒಪ್ಪಿಗೆ ಪಡೆದೆ ಮೇರೆಗೆ ವೈವಾಹಿಕ ಜೀವನಕ್ಕೆ  ಕಾಲಿಟ್ಟಿದ್ದಾರೆ.

ಪ್ರೀತಿ ಹಾಗೂ ಮದುವೆ ಮಧ್ಯದ ಗ್ಯಾಪಿನಲ್ಲಿ  ಶುಭಾ  ಬಿಗ್‌ ಬಾಸ್‌ಗೂ ಹೋಗಿ ಬಂದರು. ಆಕೆಯನ್ನು ಬಿಗ್‌ ಬಾಸ್‌ ಗೆ ತೆರಳುವಂತೆ ಒತ್ತಾಯ ಮಾಡಿ ಕಳುಹಿಸಿದ್ದೇ ಸುಮಂತ್‌ ಅಂತ ಆಕೆ ಹೇಳಿಕೊಂಡಿದ್ದರು.  100ಕ್ಕೂ ಹೆಚ್ಚು ದಿನಗಳನ್ನು ಅಲ್ಲಿ ಕಳೆದ ಆಕೆ ತನ್ನ ವಿವಾಹದ  ಗುಟ್ಟನ್ನು ರಟ್ಟು ಮಾಡಿದ್ದರು.

ನನಗಾಗಿ ಸುಮಂತ್‌ ತುಂಬಾ ಕಾದಿದ್ದಾನೆ. ಇನ್ನು ಹೆಚ್ಚು ಕಾಯಿಸೊಲ್ಲ. ನಾವಿಬ್ಬರು ಶೀಘ್ರದಲ್ಲಿ ವಿವಾಹವಾಗಲಿದ್ದೇವೆ ಎಂದು ಸುದೀಪ್‌ ಮುಂದೆ ಬಿಗ್‌ ಬಾಸ್‌ ವೇದಿಕೆಯಲ್ಲಿ ಶುಭಾ ತನ್ನ ಬಚ್ಚಿಟ್ಟಿದ್ದ ಪ್ರೀತಿಯನ್ನು ಬಹಿರಂಗಗೊಳಿಸಿದ್ದರು.

ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮಿಬ್ಬರ ವಿವಾಹ ಡಿಸೆಂಬರ್‌ ತಿಂಗಳಿನಲ್ಲಿ ನಡೆಯಲಿದೆ. ತಪ್ಪಿದ್ರೆ ಜ .10ರೊಳಗೆ ಖಂಡಿತ ಆಗುತ್ತೆ.. ನಾನು ಉಡುಪಿಯವಳು. ಸುಮಂತ್‌ ಕುಂದಾಪುರದವರು. ಹಾಗಾಗಿ ನಮ್ಮ ವಿವಾಹ  ಮಂಗಳೂರಿನ ದೇವಸ್ಥಾನವೊಂದರಲ್ಲಿ ಸರಳವಾಗಿ ಆಗಲಿದೆ. ಸರಳವಾಗಿ ವಿವಾಹವಾಗಬೇಕು ಎನ್ನುವುದು ನಮ್ಮಿಬ್ಬರ ಇಚ್ಚೆಯೂ ಕೂಡ ಎಂದಿದ್ದರು.

ನಟಿ ಶುಭಾ ಪೂಂಜಾ ಮದುವೆ ಬಳಿಕವು ಚಿತ್ರರಂಗದಲ್ಲಿ ಸಕ್ರಿಯವಾಗಿ ಇರಲಿದ್ದಾರೆ. ಸದ್ಯ ಅವರು ಅಭಿನಯದ ತ್ರಿದೇವಿ, ಅಂಬುಜ ಚಿತ್ರಗಳು ಸದ್ದು ಮಾಡುತ್ತಿವೆ. ಜೊತೆಗೆ ರೈಮ್ಸ್‌ ಚಿತ್ರದಲ್ಲೂ ಶುಭಾ ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

Ad Widget
Click to comment

Leave a Reply

ಅಂತರ ರಾಜ್ಯ

Supreme Court-ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ..!

Published

on



Ad Widget

Ad Widget

Ad Widget

Ad Widget

ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರತಿಭಟನೆಯಿಂದ ಹಬ್ಬದ ವ್ಯಾಪಾರಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದ ವರ್ತಕರು, ಪ್ರತಿಭಟನೆಗೆ ತಡೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಈ ಮನವಿಯ ವಿಚಾರವಾಗಿ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ವಿವೇಕವನ್ನು ಪ್ರತಿಭಟನಾಕಾರರು ಹೊಂದಿರುತ್ತಾರೆ ಎಂದು ಆಶಿಸಿರುವುದಾಗಿ ತಿಳಿಸಿದೆ.



Ad Widget

ಹಬ್ಬದ ಸಂದರ್ಭದಲ್ಲಿ ವ್ಯಾಪಾರ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಬೇಕೆಂಬ ವರ್ತಕರ ಆತಂಕದ ನಡುವೆಯೇ, ಪ್ರತಿಭಟನೆಗೆ ಸಂಬಂಧಿಸಿದಂತೆ ತುರ್ತು ನಿರ್ಬಂಧಗಳನ್ನು ವಿಧಿಸಲು ನ್ಯಾಯಾಲಯ ನಿರಾಕರಿಸಿರುವುದು ಗಮನ ಸೆಳೆದಿದೆ.

Continue Reading

ಬಿಗ್ ನ್ಯೂಸ್

Puttur-ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ

Published

on



Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾ‌ರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್‌ಟೇಕ್ ಮಾಡುವ ಭರದಲ್ಲಿ ಈ ದುರಂತ ನಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.

Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾ‌ರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್‌ಟೇಕ್ ಮಾಡುವ ಭರದಲ್ಲಿ ಈ ದುರಂತ ನಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಯು ಮುಂಭಾಗದಲ್ಲಿದ್ದ ಕಾರನ್ನು ಓವರ್‌ಟೇಕ್ ಮಾಡಲು ಯತ್ನಿಸಿದಾಗ ಈ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಲಾರಿಯು ಹೆದ್ದಾರಿಗೆ ಅಡ್ಡಲಾಗಿ ಮಗುಚಿಬಿದ್ದಿದೆ.

Ad Widget

Ad Widget <> Ad Widget

ಅಪಘಾತದಿಂದಾಗಿ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ಸಾರ್ವಜನಿಕರು ಹಾಗೂ ಹಾದಿಹೋಕರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದಾರೆ.
ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ತಬ್ಧಗೊಂಡು, ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೇನ್ ಬಳಸಿ ರಸ್ತೆಯಲ್ಲಿದ್ದ ಲಾರಿಯನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಸುಗಮಗೊಳಿಸಿದರು. ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.



Ad Widget
Ad Widget
Continue Reading

ಅಂತರ ರಾಜ್ಯ

Supreme Court-ಇಸ್ಲಾಂಗೆ ಮತಾಂತರಗೊಂಡ ಬಳಿಕ ಹಿಂದುಳಿದ ವರ್ಗಗಳ ಮೀಸಲಾತಿಯಿಲ್ಲ; ಸುಪ್ರೀಂಕೋರ್ಟ್

Published

on



Ad Widget

Ad Widget

Ad Widget

Ad Widget

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು, ಮತಾಂತರಕ್ಕೂ ಮುನ್ನ ಹೊಂದಿದ್ದ ಸಾಮಾಜಿಕ ವರ್ಗದ ಆಧಾರದಲ್ಲಿ ಹಿಂದುಳಿದ ವರ್ಗಗಳ (BC) ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬಹುದೇ ಎಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು, ಮತಾಂತರಕ್ಕೂ ಮುನ್ನ ಹೊಂದಿದ್ದ ಸಾಮಾಜಿಕ ವರ್ಗದ ಆಧಾರದಲ್ಲಿ ಹಿಂದುಳಿದ ವರ್ಗಗಳ (BC) ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬಹುದೇ ಎಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಶ್ರೀ ಚಂದ್ರಶೇಖರ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿದೆ. ಮತಾಂತರದ ನಂತರ ವ್ಯಕ್ತಿಯ ಸಾಮಾಜಿಕ ವರ್ಗದ ಸ್ಥಾನಮಾನ ಮತ್ತು ಮೀಸಲಾತಿ ಅರ್ಹತೆಯನ್ನು ಅನ್ವಯಿಸುವ ಕುರಿತು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.

Ad Widget

Ad Widget <> Ad Widget

ಮೀಸಲಾತಿ ಅರ್ಹತೆ ಕುರಿತು ನ್ಯಾಯಾಲಯದ ಅಭಿಪ್ರಾಯ
ಮತಾಂತರ ಪೂರ್ವದ ಜಾತಿ ಅಥವಾ ಸಮುದಾಯದ ಸ್ಥಿತಿಯನ್ನು, ಮತಾಂತರದ ನಂತರದ ವ್ಯವಸ್ಥೆಯಲ್ಲಿ ಅಧಿಸೂಚಿತ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿಸಲು ಸಾಧ್ಯವಿಲ್ಲ.
ಹಿಂದುಳಿದ ವರ್ಗದಿಂದ, ಇಸ್ಲಾಂ ಅಥವಾ ಹಿಂದೂಯೇತರ ಜಾತಿಗೆ ಕನ್ವರ್ಟ್ ಆಗಲು ಇದ್ದಂತಹ ಪರಿಸ್ಥಿತಿಯು ಏನೇ ಇದ್ದರೂ, ಮತಾಂತರದ ನಂತರ ಬೇರೊಂದು ಹಿಂದುಳಿದ ವರ್ಗದ ಸದಸ್ಯತ್ವನ್ನು ನೀಡಲು ಕಾನೂನಾತ್ಮಕವಾಗಿ ಸಾಧ್ಯವಿಲ್ಲ.



Ad Widget

ಸಂವಿಧಾನದ ಪರಿಶಿಷ್ಟ ಜಾತಿಗಳ ಆದೇಶದ ಪ್ರಕಾರ, ಹಿಂದೂ, ಸಿಖ್ ಅಥವಾ ಬೌದ್ದ ಧರ್ಮವನ್ನು ಹೊರತು ಪಡಿಸಿ ಇತರ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ (SC) ಸದಸ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ.

Ad Widget

Ad Widget

ಈ ಮೂರು ಜಾತಿಯನ್ನು ಹೊರತು ಪಡಿಸಿ, ಇತರ ಧರ್ಮಕ್ಕೆ ಮತಾಂತರಗೊಂಡ ತಕ್ಷಣವೇ ಆ ವ್ಯಕ್ತಿಯ ಪರಿಶಿಷ್ಠ ಜಾತಿಯ ಸದಸ್ಯತ್ವಕ್ಕೆ ಆಧರಿಸಿ ಇರುವ ಮೀಸಲಾತಿ ವಿಧಿ 16(4) ಮತ್ತು ಸೌಲಭ್ಯಗಳನ್ನು ಕಳೆದುಕೊಳ್ಳುತ್ತಾನೆ.

ಒಂದು ವೇಳೆ, ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡು, ನಂತರ ಮತ್ತೆ ಹಿಂದೂ ಧರ್ಮಕ್ಕೆ ಕನ್ವರ್ಟ್ ಆದರೆ, ಮರುಮತಾಂತರದ ನಂತರ ಮೀಸಲಾತಿ ಆಟೊಮೆಟಿಕ್ ಆಗಿ ಬರುವುದಿಲ್ಲ. ಮರುಮತಾಂತರ ನಂತರದ ಆತನ ಮೂಲ ಜಾತಿಯ ದಾಖಲೆಗಳು ಬದಲಾಗಿರುವುದು ಮುಖ್ಯ.

ಇಸ್ಲಾಂ, ಕ್ರಿಶ್ಚಿಯನ್ ಅಥವಾ ಇತರ ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡ ನಂತರ, ಶಾಸನಬದ್ದ ಸೌಲಭ್ಯ, ರಕ್ಷಣೆ, ಮೀಸಲಾತಿ, ಅರ್ಹತೆಯನ್ನು, ಕನ್ವರ್ಟ್ ಆಗುವ ಮುನ್ನ ಇದ್ದ ಸಾಂವಿಧಾನಿಕ ಆಧಾರದ ಮೇಲೆ ಪಡೆಯಲು ಸಾಧ್ಯವಿಲ್ಲ.

ಪ್ರಕರಣದ ಹಿನ್ನೆಲೆ ಏನು?
ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು ಅಥವಾ ಪರಿಶಿಷ್ಟ ಜಾತಿಗಳಿಗೆ ಸೇರಿದ ವ್ಯಕ್ತಿಗಳು ಇಸ್ಲಾಂ ಅಥವಾ ಇತರ ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡ ಬಳಿಕವೂ ಹಿಂದುಳಿದ ವರ್ಗದ (ಮುಸ್ಲಿಂ) ಮೀಸಲಾತಿ ಪಡೆಯಲು ಅವಕಾಶ ನೀಡುವ ಸಂಬಂಧ ತಮಿಳುನಾಡು ಸರ್ಕಾರ 2024ರಲ್ಲಿ ಸರ್ಕಾರಿ ಆದೇಶ ಹೊರಡಿಸಿತ್ತು ಎನ್ನಲಾಗಿದೆ.

ಈ ಆದೇಶವನ್ನು ಪ್ರಶ್ನಿಸಲಾಗಿತ್ತು. ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಸರ್ಕಾರದ ಆದೇಶವನ್ನು ಅಸಂವಿಧಾನಿಕ ಎಂದು ಪರಿಗಣಿಸಿತ್ತು. ಈ ಆದೇಶದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ ಎಂದು ವರದಿಯಾಗಿದೆ.

ತಮಿಳುನಾಡಿನ ಮುಸ್ಲಿಂ ಹಿಂದುಳಿದ ವರ್ಗಗಳ ಪಟ್ಟಿ
1993ರ ಸರ್ಕಾರಿ ಆದೇಶದಡಿ ಮುಸ್ಲಿಂ ಸಮುದಾಯದ ಏಳು ವಿಭಾಗಗಳನ್ನು ಗುರುತಿಸಲಾಗಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅವುಗಳೆಂದರೆ ಅನ್ಸಾರ್, ಡೆಕ್ಕನಿ ಮುಸ್ಲಿಮರು, ದುಬೇಕುಲ, ಲಬ್ಬೈ, ಮಾಪಿಳೈ, ಶೇಕ್ ಮತ್ತು ಸೈಯದ್.

ಮತಾಂತರದ ಬಳಿಕ ವ್ಯಕ್ತಿಯ ಸಾಮಾಜಿಕ ವರ್ಗದ ಗುರುತು ಮತ್ತು ಮೀಸಲಾತಿ ಅರ್ಹತೆಯನ್ನು ಹೇಗೆ ನಿರ್ಧರಿಸಬೇಕು ಎಂಬ ವಿಚಾರದಲ್ಲಿ ಈ ಪ್ರಕರಣ ಮಹತ್ವ ಪಡೆದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading