Connect with us

ಸುಳ್ಯ

Padmaraj R-ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಭದ್ರಕೋಟೆಯೆಂದು ತಲೆಯಲ್ಲಿದ್ದರೆ ತೆಗೆದುಹಾಕಿ : ಕಾರ್ಯಕರ್ತರಿಗೆ ಪದ್ಮರಾಜ್ ಆರ್. ಕರೆ

Published

on

Ad Widget

Ad Widget

Ad Widget

Ad Widget

ಸುಳ್ಯ: ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಚುನಾವಣಾ ಕಚೇರಿ ಶನಿವಾರ ಸುಳ್ಯ ಹಳೆ ಬಸ್ ನಿಲ್ದಾಣ ಸಮೀಪದ ಹಿಂದೂಸ್ಥಾನ್ ಸಿಟಿ ಡೆವಲಪರ್ಸ್ ನಲ್ಲಿ ಉದ್ಘಾಟನೆಗೊಂಡಿತು.

Ad Widget

Ad Widget

Ad Widget

Ad Widget

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯನ್ನು ಸರ್ವತೋಮುಖ ಅಭಿವೃದ್ಧಿಯೆಡೆಗೆ ಕೊಂಡೊಯ್ದಿರುವುದು ಕಾಂಗ್ರೆಸ್ ಲೋಕಸಭಾ ಸದಸ್ಯರ ಸಾಧನೆ. ನಂತರ ಅಧಿಕಾರ ಹಿಡಿಯಲೋಸುಗ ಜನರನ್ನು ದಾರಿ ತಪ್ಪಿಸಿ, ಅಪಪ್ರಚಾರ ಮಾಡಿದ ಬಿಜೆಪಿ ಅಧಿಕಾರ ತೆಗೆದುಕೊಂಡಿತು. ಇದೇ ಕಾಯಕವನ್ನು ಮುಂದುವರಿಸಿಕೊಂಡು ಬಂದಿದ್ದು, ಅಧಿಕಾರ ಹಿಡಿದುಕೊಂಡುದೆ. ಹಾಗಾಗಿ ದ.ಕ. ಬಿಜೆಪಿಯ ಭದ್ರಕೋಟೆ ಎಂದೇ ಭಾವಿಸಿಕೊಂಡಿದ್ದಾರೆ. ಇಂತಹ ಆಲೋಚನೆ ತಲೆಯಲ್ಲಿದ್ದರೆ ಮೊದಲು ತೆಗೆದುಹಾಕಿ. ಕಾಂಗ್ರೆಸ್ ಸಾಧನೆಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗಿ ಎಂದರು.

Ad Widget

Ad Widget alt="Ad Widget"/>

Ad Widget

ಪದ್ಮರಾಜ್ ಎಂದಿಗೂ ಅಪಪ್ರಚಾರ, ಕೆಟ್ಟ ಕೆಲಸಗಳನ್ನು ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷ ಅಭಿವೃದ್ಧಿಯ ರಾಜಕೀಯ ಮಾಡಿಕೊಂಡು ಬಂದಿದೆ. ಹಾಗಾಗಿ ಧೈರ್ಯದಿಂದ ಜನರ ಬಳಿಗೆ ತೆರಳಿ ಎಂದ ಅವರು, ಪ್ರತಿ ಮನೆಗೂ ತೆರಳಿ ಮತ ಕೇಳಬೇಕು. ಕಾಂಗ್ರೆಸ್ ಸರಕಾರ ಕೇಂದ್ರದಲ್ಲಿ ಅಧಿಕಾರಕ್ಕೇರಲು ಶ್ರಮಿಸಬೇಕು ಎಂದು ಕರೆ ನೀಡಿದರು.

Ad Widget

Ad Widget <> Ad Widget

ಕಾಂಗ್ರೆಸ್ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಮಾತನಾಡಿ, ಯುವಕ, ಉತ್ಸಾಹಿ ಪದ್ಮರಾಜ್ ಅವರನ್ನು ಪಾರ್ಲಿಮೆಂಟಿಗೆ ಕಳುಹಿಸಿಕೊಡಬೇಕು. ಈ ಮೂಲಕ ನೆಮ್ಮದಿಯ, ಶಾಂತಿಯ ಜೀವನಕ್ಕೆ ಮುನ್ನುಡಿ ಹಾಡುವಂತೆ ಕೇಳಿಕೊಂಡರು.

ವಿರೋಧ ಪಕ್ಷದ ಶೋಷಣೆ ಇದ್ದರೂ ಸುಳ್ಯದ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಘನತೆಯನ್ನು ಎತ್ತಿ‌ ಹಿಡಿದಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಗುಪ್ತಚರ ಇಲಾಖೆ ವರದಿ ನೀಡಿದ್ದು, ಕರ್ನಾಟಕದಲ್ಲಿ ಬಿಜೆಪಿ 10 ಕ್ಷೇತ್ರ ಗೆಲ್ಲುವುದು ಕಷ್ಟ ಎಂದು ತಿಳಿಸಿದೆ. ಅಂದರೆ ರಾಜ್ಯದ ಕಾಂಗ್ರೆಸ್ ನಾಯಕರ ಎಣಿಕೆಯಂತೆ 20ಕ್ಕೂ ಅಧಿಕ ಕ್ಷೇತ್ರಗಳನ್ನು ರಾಜ್ಯದಲ್ಲಿ ಕಾಂಗ್ರೆಸ್ ಪಡೆದುಕೊಳ್ಳಲಿದೆ ಎಂದರು.

Ad Widget

Ad Widget

ಜಿಲ್ಲಾ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಮಾನಾಥ ರೈ ಮಾತನಾಡಿ, ಸಿದ್ದರಾಮಯ್ಯ ಅವರ ಹಿಂದಿನ ಮುಖ್ಯಮಂತ್ರಿ ಅವಧಿಯಲ್ಲಿ ಸುಳ್ಯದಲ್ಲಿ ಅನೇಕ ಸೇತುವೆಗಳು ನಿರ್ಮಾಣಗೊಂಡಿವೆ. ನಮ್ಮ ಪ್ರತಿನಿಧಿ ಇಲ್ಲದೇ ಹೋದರೂ ಸಾಕಷ್ಟು ಜನಪರ ಕೆಲಸ ನಡೆದಿವೆ. ಕಾಂಗ್ರೆಸ್ ಎಂದೂ ಕೂಡ ಜನಪರ ಕೆಲಸ ಮಾಡಿದೆ ಎಂದರು.

ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಈ ಚುನಾವಣೆಯನ್ನು ಗೆಲ್ಲುವ ಉತ್ಸಾಹದಲ್ಲಿ ಕಾರ್ಯಕರ್ತರಿದ್ದಾರೆ. ಇದಕ್ಕೆ ಪೂರಕವಾಗಿ ಉತ್ತಮ ಅಭ್ಯರ್ಥಿಯನ್ನು ಪಕ್ಷ ನೀಡಿದೆ. ಇನ್ನು ಮತ ಕೇಳಲು ಜನರ ಬಳಿಗೆ ಹೋಗುವಾಗ ಅಧೈರ್ಯವೂ ಬೇಡ. ಕಾರಣ, ರಾಜ್ಯ ಕಾಂಗ್ರೆಸ್ ಸರಕಾರದ ಸಾಧನೆ. ಹಾಗಾಗಿ ಈ ಲೋಕಸಭಾ ಚುನಾವಣೆಯನ್ನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಐಸಿಸಿ ಸದಸ್ಯ ಐವನ್ ಡಿಸೋಜಾ ಮಾತನಾಡಿ, ರಾಜ್ಯದ ನಂಬರ್ ವನ್ ಸಂಸದರಿಗೇ ಟಿಕೇಟ್ ನೀಡದ ಬಿಜೆಪಿಯಲ್ಲಿ, ಇನ್ನು ಅದೆಂತಹ ಜನಪ್ರತಿನಿಧಿಗಳು ಇರಬಹುದು ನೀವೇ ಯೋಚಿಸಿ. ಗ್ಯಾರೆಂಟಿ ಯೋಜನೆಗಳನ್ನು ಘೋಷಿಸುವ ಸಂದರ್ಭ ಇದು ಜಾರಿಯಾಗದೇ ಇದ್ದರೆ ಶಾಸಕತ್ವಕ್ಕೇ ರಾಜೀನಾಮೆ ನೀಡುತ್ತೇನೆ ಎಂದವರು ಯು.ಟಿ. ಖಾದರ್ ಅವರು. ಇಂತಹ ಉತ್ತಮ ನಾಯಕರನ್ನು ನೀಡಿದ್ದು ಕಾಂಗ್ರೆಸಿನ ಹೆಗ್ಗಳಿಕೆ. ಇದೀಗ ಲೋಕಸಭಾ ಚುನಾವಣೆಗೂ ಉತ್ತಮ ಅಭ್ಯರ್ಥಿ ಪದ್ಮರಾಜ್ ಅವರನ್ನು ಕಣಕ್ಕಿಳಿಸಿದೆ‌. ಇವರನ್ನು ಗೆಲ್ಲಿಸಿಕೊಡಬೇಕಾದ ಜವಾಬ್ದಾರಿ ನಮ್ಮದು ಎಂದರು.

ಕಾಂಗ್ರೆಸ್ ಮುಖಂಡ ಧನಂಜಯ ಅಡ್ಪಂಗಾಯ ಮಾತನಾಡಿ, ಈ ಚುನಾವಣೆಯಲ್ಲಿ ಖಂಡಿತವಾಗಿಯೂ ಗೆಲ್ಲಬೇಕು. ಈ ದೇಶ ಉಳಿಯಬೇಕಾದರೆ ಕಾಂಗ್ರೆಸನ್ನು ಗೆಲ್ಲಿಸಲೇಬೇಕಾಗಿದೆ ಎಂದರು.

ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿ. ಕೃಷ್ಣಪ್ಪ, ಜಿ.ಪಂ. ಮಾಜಿ ಸದಸ್ಯರಾದ ಸರ್ವೋತ್ತಮ ಗೌಡ, ಸರಸ್ವತಿ ಕಾಮತ್, ಪ್ರಚಾರ ಸಮಿತಿ ಅಧ್ಯಕ್ಷ ವೆಂಕಪ್ಪ ಗೌಡ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಇಸಾಕ್ ಸಾಹೇಬ್, ಕಿರಣ್ ಬುಡ್ಲೆಗುತ್ತು, ಡಾ. ರಘು, ಇಸಾಕ್ ಮೊದಲಾದವರು ಉಪಸ್ಥಿತರಿದ್ದರು. ಪಿ.ಸಿ. ಜಯರಾಂ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಅಶೋಕ್ ಚೂಂತಾರು ಕಾರ್ಯಕ್ರಮ ನಿರೂಪಿಸಿದರು.

Ad Widget
Click to comment

Leave a Reply

ಸುಳ್ಯ

Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ

Published

on

Ad Widget

Ad Widget

Ad Widget

Ad Widget

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್‌’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.

Ad Widget

Ad Widget

Ad Widget

Ad Widget

ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.

Ad Widget

Ad Widget alt="Ad Widget"/>

Ad Widget

ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್‌’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.

Ad Widget

Ad Widget

ರೈನಾ ಮಡಿಕೇರಿಯ ಲೀಲಾ ಪ್ಯಾಲೇಸ್ ಗೆ ತೆರಳಿದರು.

Ad Widget
Continue Reading

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಸುಳ್ಯ

Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ

Published

on

Ad Widget

Ad Widget

Ad Widget

Ad Widget

ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

Ad Widget

Ad Widget

Ad Widget

Ad Widget

ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.

Ad Widget

Ad Widget alt="Ad Widget"/>

Ad Widget

ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.

Ad Widget

Ad Widget <> Ad Widget

ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!