ಪುತ್ತೂರು
ರಜಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಶಿಬಿರ – ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳು ಮತ್ತು ವಿದ್ಯಾರ್ಥಿವೇತನಗಳಿಗಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ವಿಶಿಷ್ಟ ತರಬೇತಿ ಶಿಬಿರ
ರಜಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಶಿಬಿರ ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳು / ವಿದ್ಯಾರ್ಥಿವೇತನಗಳಿಗಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ವಿಶಿಷ್ಟ ತರಬೇತಿ ಶಿಬಿರ
ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು 5ನೇ ತರಗತಿ ವಿದ್ಯಾರ್ಥಿಗಳಿಂದ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯಕೊಂದು ಅಡಿಗಲ್ಲು ಹಾಕುವ ನಿಟ್ಟಿನಲ್ಲಿ ವಿಶಿಷ್ಟವಾದ ತರಬೇತಿ ಶಿಬಿರವನ್ನು ಆಯೋಜಿಸುತ್ತಿದೆ.
ನವೋದಯ /ಸೈನಿಕ್ / ಆದರ್ಶ / ಮೊರಾರ್ಜಿ / ಒಲಂಪಿಯಾಡ್ ಪ್ರವೇಶ ಪರೀಕ್ಷೆಗಳು ಮತ್ತು ಜೆಇಇ / ನೀಟ್ / ಎನ್ ಡಿ ಎ / ಕ್ಲಾಟ್ / ಎನ್.ಎಂ.ಎಂ.ಎಸ್ / ಕೆ.ಎ.ಎಸ್ / ಐ.ಎ.ಎಸ್ ವರೆಗಿನ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ರಿಲಯನ್ಸ್ / ಗೂಗಲ್ / ಬಿರ್ಲಾ / ಇಂಟ್ಯೂಟ್ / ಇನ್ಫೋಸಿಸ್ / ಕೋಟಕ್ ಸುರಕ್ಷಾ / ಒ.ಎನ್.ಜಿ.ಸಿ / ಕೊಡೆನ್ಸ್ ವಿದ್ಯಾರ್ಥಿವೇತನಗಳ ಪರೀಕ್ಷೆಗಳನ್ನು ಗಮನದಲ್ಲಿರಿಸಿಕೊಂಡು ಸಂಪೂರ್ಣವಾಗಿ ಚಿಕ್ಕಂದಿನಿಂದಲೇ ವಿದ್ಯಾರ್ಥಿಗಳನ್ನು ತಯಾರು ಮಾಡುವ ಯೋಜನೆಯೊಂದಿಗೆ ಈ ತರಬೇತಿ ಶಿಬಿರವನ್ನು ಏಪ್ರಿಲ್ 21ರಿಂದ ಮೇ 21 ರವರೆಗೆ ವಿದ್ಯಾಮಾತಾ ಅಕಾಡೆಮಿಯ ಪುತ್ತೂರು ಮತ್ತು ಸುಳ್ಯ ತರಬೇತಿ ಕೇಂದ್ರಗಳಲ್ಲಿ ಬೆಳಗ್ಗೆ 10:00ರಿಂದ ಮಧ್ಯಾಹ್ನ 3:00 ರವರಿಗೆ (ವಾರದ 5 ದಿನ) ನುರಿತ ತರಬೇತುದಾರರ ನೇತೃತ್ವದಲ್ಲಿ ನಡೆಸಲಾಗುತ್ತದೆ.
ಈಗಾಗಲೇ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದ್ದು ಆಸಕ್ತ ವಿದ್ಯಾರ್ಥಿಗಳು ವಿದ್ಯಾಮಾತಾ ಅಕಾಡೆಮಿಯ ತರಬೇತಿ ಕೇಂದ್ರದಲ್ಲಿ ಆಧಾರ್ ಪ್ರತಿ ಹಾಗೂ ಪಾಸ್ಪೋರ್ಟ್ ಸೈಜ್ ಫೋಟೋ ನೀಡಿ ಹೆಸರನ್ನು ನೋಂದಾಯಿಸಬೇಕಾಗಿದೆ.ಹೆಚ್ಚಿನ ಮಾಹಿತಿಗಾಗಿ :
*
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಚೇತನ, ರವೀಂದ್ರ, ವಿದ್ಯಾ ಅವರುಗಳು ಆಯ್ಕೆಯಾದರು.
2025-2026 ನೇ ಸಾಲಿನ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು.
ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಬಿಗ್ ನ್ಯೂಸ್
SDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್‌ಡಿಪಿಐ ಅಸಮಾಧಾನ
ಮಕ್ಕಳ ಆಟೋಟ ಹಾಗೂ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಬೇಕಿದ್ದ ಪರ್ಲಡ್ಕದ ಡಾ. ಶಿವರಾಮ ಕಾರಂತರ ಬಾಲವನ ನಿರ್ವಹಣೆಯ ಕೊರತೆಯಿಂದ ಹದಗೆಟ್ಟಿದೆ ಎಂದು ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಆರೋಪಿಸಿದೆ.

ಪುತ್ತೂರು: ಮಕ್ಕಳ ಆಟೋಟ ಹಾಗೂ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಬೇಕಿದ್ದ ಪರ್ಲಡ್ಕದ ಡಾ. ಶಿವರಾಮ ಕಾರಂತರ ಬಾಲವನ ನಿರ್ವಹಣೆಯ ಕೊರತೆಯಿಂದ ಹದಗೆಟ್ಟಿದೆ ಎಂದು ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಆರೋಪಿಸಿದೆ.
ಬಾಲವನದ ಹಲವು ಆಟೋಟದ ಉಪಕರಣಗಳು ದುರಸ್ತಿಗೊಳಗಾಗದೆ ಬಳಕೆಗೆ ಅಯೋಗ್ಯವಾಗಿವೆ. ಆವರಣದ ನಿರ್ವಹಣೆಯೂ ಸಮರ್ಪಕವಾಗಿಲ್ಲ. ಹಲವು ವರ್ಷಗಳಿಂದ ಇದೇ ಸ್ಥಿತಿ ಮುಂದುವರಿದಿದ್ದರೂ, ಬಾಲವನದ ಅಭಿವೃದ್ಧಿಗೆ ಸಂಬಂಧಪಟ್ಟವರು ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಸಮಿತಿ ದೂರಿದೆ.

ಈ ಹಿನ್ನೆಲೆಯಲ್ಲಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯ ತಂಡವು ಬಾಲವನಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿತು. ಬಾಲವನದ ದುರಸ್ತಿ ಮತ್ತು ಅಭಿವೃದ್ಧಿಗೆ ಜನಪ್ರತಿನಿಧಿಗಳು ಈ ಹಿಂದೆ ಹಲವು ಬಾರಿ ಭರವಸೆ ನೀಡಿದ್ದರೂ, ನಿರೀಕ್ಷಿತ ಮಟ್ಟದ ಕಾಮಗಾರಿಗಳು ನಡೆದಿಲ್ಲ ಎಂದು ಸಮಿತಿ ತಿಳಿಸಿದೆ.
ಬಾಲವನವು ಪುತ್ತೂರಿನ ಪ್ರಮುಖ ಪ್ರವಾಸಿ ತಾಣವಾಗಿದ್ದು, ಮಕ್ಕಳಿಗೆ ಮನರಂಜನೆ ಹಾಗೂ ಪ್ರಕೃತಿಯ ನಡುವೆ ಸಮಯ ಕಳೆಯಲು ಅನುಕೂಲವಾಗುವ ಸ್ಥಳವಾಗಿದೆ. ಹೀಗಾಗಿ, ಹದಗೆಟ್ಟಿರುವ ಆಟೋಟದ ಉಪಕರಣಗಳನ್ನು ತಕ್ಷಣ ದುರಸ್ತಿಗೊಳಿಸಿ, ಬಾಲವನದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಆಗ್ರಹಿಸಿದೆ.

ಡಾ. ಶಿವರಾಮ ಕಾರಂತರ ನಿವಾಸ ಹಾಗೂ ಬಾಲವನದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಅದರ ಸಂರಕ್ಷಣೆ ಹಾಗೂ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದು ಸಮಿತಿ ಒತ್ತಾಯಿಸಿದೆ.
ನಿಯೋಗದಲ್ಲಿ ನಗರ ಸಮಿತಿ ಉಪಾಧ್ಯಕ್ಷ ಶಮೀರ್ ನಾಜೂಕ್, ಕಾರ್ಯದರ್ಶಿ ಇಫಾಝ್ ಬನ್ನೂರು, ಜೊತೆ ಕಾರ್ಯದರ್ಶಿ ಹರ್ಷದ್ ಹುಸೇನ್, ಸಮಿತಿ ಸದಸ್ಯ ಅಶ್ರಫ್ ಪರ್ಲಡ್ಕ, ಗೋಳಿಕಟ್ಟೆ ಬ್ರಾಂಚ್ ಅಧ್ಯಕ್ಷ ಇಶಾನ್, ಆರೀಫ್ ಮತ್ತಿತ್ತರರು ಇದ್ದರು
-
Uncategorized20 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized22 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized8 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
Uncategorized7 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ7 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ಮಂಗಳೂರು6 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ನಿಧನ ವಾರ್ತೆ6 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ನಿಧನ ವಾರ್ತೆ6 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು


















