ಸಾಮಾಜಿಕ ಮಾಧ್ಯಮ
New calculation-ಇಂದಿನಿಂದ ಹಣಕಾಸು ದುನಿಯಾ ಬದಲು: ಇನ್ನೇನಿದ್ದರೂ ಹೊಸ ಲೆಕ್ಕ; ಹಲವು ಬದಲಾವಣೆ
ಹೊಸದಿಲ್ಲಿ: ಏ. 1 ಸೋಮವಾರದಿಂದ ಹೊಸ ವಿತ್ತ ವರ್ಷಆರಂಭವಾಗಲಿದ್ದು ಹಲವು ಬದಲಾವಣೆಗಳಿಗೆ ನಾಂದಿ ಹಾಡಲಿದೆ. ರಾಷ್ಟ್ರೀಯ ಪಿಂಚಣಿ ಯೋಜನೆ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಪಿಎಫ್ಒ, ಫಾಸ್ಟ್ ಟ್ಯಾಗ್ ಇತ್ಯಾದಿಗಳ ವಿಚಾರದಲ್ಲಿ ಮಹತ್ತರ ಬದಲಾವಣೆಯಾಗಲಿದೆ. ಹೀಗಾಗಿ ಯಾವುದಕ್ಕೆಲ್ಲಾ ಸೇವಾ ಶುಲ್ಕ ಏರಿಕೆಯಾಗಲಿದೆ? ಯಾವುದಕ್ಕೆಲ್ಲಾ ಇಳಿಕೆ? ಯಾವುದಕ್ಕೆ ಅನುಕೂಲ? ಯಾವ ಸಂಗತಿ ನಿಮ್ಮ ಜೇಬಿಗೆ ಕತ್ತರಿ ತಂದು ಹಾಕಲಿದೆ ಎಂಬಿದ್ಯಾತಿಗಳ ಬಗ್ಗೆ ಇಲ್ಲಿದೆ ಮಾಹಿತಿ.
ಎಸ್‌ಬಿಐ ಡೆಬಿಟ್ ಕಾರ್ಡ್ ಶುಲ್ಕ ಹೆಚ್ಚಳ
ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸರಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಡೆಬಿಟ್ ಕಾರ್ಡ್‌ಗಳ ವಾರ್ಷಿಕ ನಿರ್ವಹಣೆ ಶುಲ್ಕವನ್ನು ಸುಮಾರು 75 ರೂ. ಹೆಚ್ಚಿಸಿದೆ. ಈ ಶುಲ್ಕಗಳು ಏ. 1ರಿಂದ ಜಾರಿಗೆ ಬರಲಿವೆ. ಇದಲ್ಲದೆ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೂ ಆಘಾತ ನೀಡಿದ್ದು, ಬಾಡಿಗೆ ಪಾವತಿಗೆ ಏ. 1ರ ನಂತರ ರಿವಾರ್ಡ್ ಪಾಯಿಂಟ್ ಲಭ್ಯವಿರುವುದಿಲ್ಲ. ಇದು ಔರಮ್, ಎಸ್‌ಬಿಐ ಕಾರ್ಡ್ ಎಲೈಟ್, ಎಸ್‌ಬಿಐ ಕಾರ್ಡ್ ಪಲ್ಸ್, ಎಸ್‌ಬಿಐ ಕಾರ್ಡ್ ಎಲೈಟ್ ಅಡ್ವಾಂಟೇಜ್ ಮತ್ತು ಸಿಂಪ್ಲಿ ಸೇವ್ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಬಳಕೆದಾರರ ಮೇಲೆ ಪರಿಣಾಮ ಬೀರುತ್ತದೆ.
ಕಾರುಗಳ ದರ
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯು ತನ್ನ ಆಯ್ದ ಮಾಡೆಲ್‌ಗಳ ದರವನ್ನು ಶೇ.1ರಷ್ಟು ಹೆಚ್ಚಿಸಿದೆ. ಕಳೆದ ಜನವರಿಯಲ್ಲಷ್ಟೇ ದರ ಏರಿಕೆಯಾಗಿತ್ತು. ಕಿಯಾ ಇಂಡಿಯಾ ಏಪ್ರಿಲ್ 1ರಿಂದ ತನ್ನ ವಾಹನಗಳ ದರವನ್ನು ಶೇ.3ರಷ್ಟು ಏರಿಕೆ ಮಾಡಿದೆ.
ಔಷಧಗಳು
ಭಾರತೀಯ ಔಷಧಿ ಬೆಲೆ ನಿಯಂತ್ರಣ ಪ್ರಾಧಿಕಾರವು ರಾಷ್ಟ್ರೀಯ ಅಗತ್ಯ ಔಷಧಿಗಶಳ ಪಟ್ಟಿ (ಎನ್‌ಎಲ್‌ಇಎಂ)ಯ ಅಡಿಯಲ್ಲಿ ಕೆಲವು ಅಗತ್ಯ ಔಷಧಿಗಳ ಬೆಲೆಗಳಲ್ಲಿ ವಾರ್ಷಿಕ ಶೇ. 0.0055ರಷ್ಟು ಹೆಚ್ಚಳವನ್ನು ಘೋಷಿಸಿದೆ. ಇದರಿಂದ ನೋವು ನಿವಾರಕಗಳು, ಇಮ್ಯೂನಿಟಿ ಬೂಸ್ಟರ್ ಮತ್ತು ಸೋಂಕು ನಿವಾರಕ ಔಷಧಿಗಳು ಸೇರಿದಂತೆ ಅನೇಕ ಅಗತ್ಯ ಔಷಧಿಗಳ ಬೆಲೆಗಳು ಏ. 1 ರಿಂದ ಹೆಚ್ಚಲಿವೆ. ಕಳೆದ ವರ್ಷ ಶೇ.12, ಇದರ ಹಿಂದಿನ 2022ರಲ್ಲಿ ಶೇ.10ರಷ್ಟು ದರ ಏರಿಕೆಯಾಗಿತ್ತು.
ಪ್ಯಾರಸಿಟಮಾಲ್, ಅಜಿಥ್ರೊಮೈಸಿನ್, ವಿಟಮಿನ್‌ಗಳು, ಮಿನರಲ್‌ಗಳು, ಕೋವಿಡ್-19 ಅನ್ನು ಎದುರಿಸುವ ಔಷಧಗಳೂ ಮತ್ತು ಸ್ಟೀರಾಯ್ಡ್‌ಗಳೂ ಸೇರಿದಂತೆ 800 ಔಷಧಗಳ ದರದಲ್ಲಿ ಅಲ್ಪ ಏರಿಕೆಯಾಗಲಿದೆ.
ಅಮೆರಿಕ ವೀಸಾ
ಬಹಳ ಅಗತ್ಯದ ಎಚ್-1ಬಿ, ಎಲ್-1 ಮತ್ತು ಇಬಿ-5 ಸೇರಿದಂತೆ ಅಮೆರಿಕದ ವೀಸಾ ಶುಲ್ಕಗಳು ಏರಿಕೆಯಾಗಲಿವೆ.
ಫಾಸ್ಟ್‌ಟ್ಯಾಗ್‌ನ ಹೊಸ ನಿಯಮ
ಏ. 1ಕ್ಕೂ ಮೊದಲು ಫಾಸ್ಟ್‌ಟ್ಯಾಗ್ ಕೆವೈಸಿ ಅನ್ನು ಅಪ್‌ಡೇಟ್ ಮಾಡುವಂತೆ ಎನ್‌ಎಚ್‌ಎಐ ಸೂಚನೆ ನೀಡಿದೆ. ಒಂದೊಮ್ಮೆ ಕೆವೈಸಿ ಮಾಡಲು ವಿಫಲವಾದರೆ ನಿಮ್ಮ ಫಾಸ್ಟ್‌ಟ್ಯಾಗ್ ಖಾತೆ ನಿಷ್ಕ್ರಿಯವಾಗಲಿದೆ. ನಂತರ ನಿಮ್ಮ ಖಾತೆಯಲ್ಲಿ ಹಣವಿದ್ದರೂ, ನಿಮ್ಮ ಟೋಲ್ ಪಾವತಿಸಲು ನಿಮಗೆ ಸಾಧ್ಯವಾಗುವುದಿಲ್ಲ. ಕೆವೈಸಿ ಮಾಡಿಸದಿ ದ್ದವರು ಹೆದ್ದಾರಿಯಲ್ಲಿ ದುಪ್ಪಟ್ಟು ಟೋಲ್ ಕಟ್ಟಬೇಕಾಗುತ್ತದೆ.
ಮ್ಯೂಚುವಲ್ ಫಂಡ್
ಮ್ಯೂಚುವಲ್ ಫಂಡ್‌ಗಳಿಗೂ ಕೆವೈಸಿ ಏ.1ರಿಂದ ಕಡ್ಡಾಯವಾಗಲಿದೆ. ಯಾರು ಕೆವೈಸಿ ಮಾಡಿಸಿಲ್ಲವೋ ಅವರ ಎಂಎಫ್ ವಹಿವಾಟುಗಳು ಸ್ಥಗಿತಗೊಳ್ಳಲಿವೆ.
ವಿಮೆ ಪಾಲಿಸಿ ಡಿಜಿಟಲೀಕರಣ ಕಡ್ಡಾಯ
ಏ.1ರಿಂದ ವಿಮಾ ಪಾಲಿಸಿಗಳ ಡಿಜಿಟಲೀಕರಣ ಕಡ್ಡಾಯವಾಗಲಿದೆ ಎಂದು ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಹೇಳಿದೆ. ಇದರ ಅಡಿ ಜೀವ, ಆರೋಗ್ಯ ಮತ್ತು ಸಾಮಾನ್ಯ ವಿಮೆ ಸೇರಿದಂತೆ ವಿವಿಧ ವರ್ಗಗಳ ಎಲ್ಲಾ ವಿಮಾ ಪಾಲಿಸಿಗಳನ್ನು ವಿದ್ಯುನ್ಮಾನವಾಗನ ನೀಡಲಾಗುವುದು.
ಏ 1ರಿಂದ ವಿಮಾ ಕ್ಷೇತ್ರದಲ್ಲೂ ಮಹತ್ವದ ಬದಲಾವಣೆ ಆಗಲಿದೆ. ಐಆರ್‌ಡಿಎಐ ನಿಯಮಗಳನ್ನು ಬದಲಾಯಿಸುವ ಮೂಲಕ ಸರೆಂಡರ್ ಮೌಲ್ಯದ ನಿಯಮಗಳನ್ನು ಬದಲಾಯಿಸಿದೆ. ಇನ್ನು ಮುಂದೆ ಗ್ರಾಹಕರು ಪಾಲಿಸಿಯನ್ನು ಎಷ್ಟು ತಡವಾಗಿ ಸರೆಂಡರ್ …ಮಾಡುತ್ತಾರೋ ಅಷ್ಟು ಹೆಚ್ಚು ಸರೆಂಡರ್ ಮೌಲ್ಯವನ್ನು ಪಡೆಯಲಿದ್ದಾರೆ. ನೀವು 3 ವರ್ಷಗಳೊಳಗೆ ಪಾಲಿಸಿಯನ್ನು ಸರೆಂಡರ್ ಮಾಡಿದರೆ, ನೀವು ಮುಖಬೆಲೆಗಿಂತ ಕಡಿಮೆ ಸರೆಂಡರ್ ಮೌಲ್ಯವನ್ನು ಪಡೆಯುತ್ತೀರಿ. ಆದಾಗ್ಯೂ, ಪಾಲಿಸಿಯನ್ನು 4ರಿಂದ 7 ವರ್ಷಗಳೊಳಗೆ ಸರೆಂಡರ್ ಮಾಡಿದರೆ, ಸರೆಂಡರ್ ಮೌಲ್ಯದಲ್ಲಿ ಸ್ವಲ್ಪ ಹೆಚ್ಚಳವಾಗುತ್ತದೆ.
ಇನ್ಮುಂದೆ ಇ-ಇನ್ಶೂರೆನ್ಸ್ ಅಷ್ಟೇ!
ಏ.1ರ ಬಳಿಕ ಲೈಫ್, ಹೆಲ್ತ್ ಅಥವಾ ಯಾವುದೇ ಜನರಲ್ ವಿಮೆ ಪಾಲಿಸಿ ಖರೀದಿಸಿದರೂ, ವಿಮಾ ಕಂಪನಿಗಳು ಕಾಗದದ ರೂಪದ ದಾಖಲೆ ಪತ್ರಗಳನ್ನು ನೀಡುವುದಿಲ್ಲ. ಕೇವಲ ಡಿಜಿಟಲ್ ಫಾರ್ಮೆಟ್‌ನಲ್ಲಷ್ಟೇ ಪಾಲಿಸಿಯನ್ನು ಗ್ರಾಹಕರಿಗೆ ನೀಡುತ್ತವೆ.
ಎನ್‌ಪಿಎಸ್‌ಗೆ ಭದ್ರತೆ
ಎನ್‌ಪಿಎಸ್ ಖಾತೆಗೆ ಲಾಗಿನ್ ಆಗುವ ನಿಯಮಗಳನ್ನು ಪಿಂಚಣಿ ನಿಯಂತ್ರಕ ಸಂಸ್ಥೆ ಪಿಇಆರ್‌ಡಿಎ ಬದಲಾಯಿಸಿದೆ. ಇನ್ನು ಮುಂದೆ ‘ಎನ್‌ಪಿಎಸ್’ ಖಾತೆಗೆ ಲಾಗಿನ್ ಆಗಲು ಬಳಕೆದಾರರ ಐಡಿ ಮತ್ತು ಪಾಸ್‌ವರ್ಡ್ ಅಲ್ಲದೆ ಆಧಾರ್‌ಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯೂ ಅಗತ್ಯವಾಗಿದೆ. ನಿಮ್ಮ ಆಧಾರ್‌ಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಗೆ ಒಟಿಪಿ ಬರಲಿದ್ದು, ಇದನ್ನು ನಮೂದಿಸಿದ ನಂತರವೇ ನೀವು ಎನ್‌ಪಿಎಸ್ ಖಾತೆಗೆ ಲಾಗಿನ್ ಆಗಬಹುದು.
ಇಪಿಎಫ್‌ಒ ನಿಯಮಗಳು ಬದಲು
ಏಪ್ರಿಲ್ 1ರಿಂದ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ) ನಿಯಮಗಳಲ್ಲಿದೊಡ್ಡ ಬದಲಾವಣೆಯೊಂದು ಜಾರಿಗೆ ಬರುತ್ತಿದೆ. ಇನ್ನು ಮುಂದೆ ಉದ್ಯೋಗ ಬದಲಾವಣೆಯ ಸಂದರ್ಭದಲ್ಲಿಉದ್ಯೋಗಿಯ ಇಪಿಎಫ್‌ಒ ಖಾತೆಯನ್ನು ಸ್ವಯಂಚಾಲಿತವಾಗಿ ಹೊಸ ಉದ್ಯೋಗದಾತರಿಗೆ ವರ್ಗಾಯಿಸಲಾಗುತ್ತದೆ. ಈ ಹಿಂದೆ ಖಾತೆದಾರರ ಕೋರಿಕೆಯ ಮೇರೆಗೆ ಮಾತ್ರ ಖಾತೆಗಳನ್ನು ವರ್ಗಾಯಿಸಲಾಗುತ್ತಿತ್ತು.
ಹೊಸ ಆದಾಯ ತೆರಿಗೆ ಪದ್ಧತಿ ಆರಂಭ
ಏ. 1ರಿಂದ ಆದಾಯ ತೆರಿಗೆ ನಿಯಮಗಳಲ್ಲಿಯೂ ಪ್ರಮುಖ ಬದಲಾವಣೆ ಜಾರಿಗೆ ಬರಲಿದೆ. ಇದರ ಅಡಿಯಲ್ಲಿ ಹೊಸ ತೆರಿಗೆ ಪದ್ಧತಿಯು ಡೀಫಾಲ್ಟ್ ತೆರಿಗೆ ಪದ್ಧತಿಯಾಗಿರಲಿದೆ. ಅಂದರೆ, ನೀವು ಹಳೆಯ ಮತ್ತು ಹೊಸ ತೆರಿಗೆ ಪದ್ಧತಿಯ ನಡುವೆ ನಿಮಗೆ ಬೇಕಾದ ಆಯ್ಕೆಯನ್ನು ಆಯ್ದುಕೊಳ್ಳದೇ ಇದ್ದಲ್ಲಿ ನಿಮ್ಮ ಐಟಿಆರ್ ಅನ್ನು ಹೊಸ ತೆರಿಗೆ ಪದ್ಧತಿಯ ಅಡಿಯಲ್ಲಿ ಸಲ್ಲಿಸಲಾಗುತ್ತದೆ. ಒಮ್ಮೆ ಹೊಸ ತೆರಿಗೆ ಪದ್ಧತಿ ಆಯ್ದುಕೊಂಡರೆ ಹಳೆ ತೆರಿಗೆ ಪದ್ಧತಿ ಆಯ್ದುಕೊಳ್ಳುವ ಆಯ್ಕೆ ಇರುವುದಿಲ್ಲ. ಹೊಸ ತೆರಿಗೆ ಪದ್ಧತಿಯಲ್ಲಿ7 ಲಕ್ಷ ರೂ.ವರೆಗೂ ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ.
ಕ್ರೆಡಿಟ್ ಕಾರ್ಡ್‌ದಾರರಿಗೆ ಸೌಲಭ್ಯ
‘ಯೆಸ್ ಬ್ಯಾಂಕ್’ ತನ್ನ ಕ್ರೆಡಿಟ್ ಕಾರ್ಡ್ ನಿಯಮಗಳನ್ನು ಬದಲಾಯಿಸಿದೆ. ಕ್ರೆಡಿಟ್ ಕಾರ್ಡ್ ಬಳಕೆದಾರರು ತ್ರೈಮಾಸಿಕದಲ್ಲಿ ಕನಿಷ್ಠ 10,000 ರೂ.ಗಳನ್ನು ಖರ್ಚು ಮಾಡಿದರೆ, ಅವರು ದೇಶೀಯ ವಿಮಾನ ನಿಲ್ದಾಣದ ಲಾಂಜ್ ಪ್ರವೇಶವನ್ನು ಪಡೆಯುತ್ತಾರೆ. ಈ ಸೌಲಭ್ಯ ಏ.1ರಿಂದ ಜಾರಿಗೆ ಬರಲಿದೆ.
ದೇಶದ ಪ್ರಮುಖ ಖಾಸಗಿ ಬ್ಯಾಂಕ್ ‘ಐಸಿಐಸಿಐ’ ತನ್ನ ಗ್ರಾಹಕರಿಗೆ ಒಂದು ತ್ರೈಮಾಸಿಕದಲ್ಲಿ 35,000 ರೂ.ವರೆಗೆ ವೆಚ್ಚ ಮಾಡಿದಲ್ಲಿ ಕಾಂಪ್ಲಿಮೆಂಟರಿ ಏರ್‌ಪೋರ್ಟ್ ಲಾಂಜ್ ಪ್ರವೇಶವನ್ನು ನೀಡುತ್ತಿದೆ.
ಸಾಮಾಜಿಕ ಮಾಧ್ಯಮ
ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ : ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ – ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.
ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.
ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.
ಸಂಘದ ಬೇಡಿಕೆ
ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಸಿನೆಮಾ
Kiara Advani War 2 bikini look: ಕಿಯಾರಾ ಬಿಕಿನಿ ಕಿಡಿ – ಎಲ್ಲರ ಕಣ್ಣು ಅಲ್ಲೇ! ‘ವಾರ್ 2’ ಟೀಸರ್‌ನಿಂದ ಇಂಟರ್ನೆಟ್‌ನಲ್ಲಿ ಅಲ್ಲೋಲ ಕಲ್ಲೋಲ

ವಾರ್ 2′ ಟೀಸರ್‌ನಲ್ಲಿ ಕಿಯಾರಾ ಅಡ್ವಾಣಿಯವರ ಚಿನ್ನದ ಬಿಕಿನಿ ಲುಕ್ ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅವರ ಕೇವಲ ಎರಡು ಸೆಕೆಂಡ್‌ಗಳ ಹಾಟ್ ದೃಶ್ಯವು ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದೆ.
Kiara Advani War 2 bikini look ಬಾಲಿವುಡ್‌ನ ಬ್ಯೂಟಿ ಕ್ವೀನ್ ಕಿಯಾರಾ ಅಡ್ವಾಣಿ ಇದೀಗ ಇಂಟರ್ನೆಟ್‌ನಲ್ಲಿ ಅಕ್ಷರಶಃ ಬೆಂಕಿ ಹಚ್ಚಿದ್ದಾರೆ! “ವಾರ್ 2” ಚಿತ್ರದ ಟೀಸರ್‌ನಲ್ಲಿ ಅವರು ತೊಟ್ಟ ಚಿನ್ನದ ಬಿಕಿನಿ ಇದೀಗ ನ್ಯಾಷನಲ್ ಹಾಟ್ ಟಾಪಿಕ್. ಜೂನಿಯರ್ ಎನ್‌ಟಿಆರ್ ಹುಟ್ಟುಹಬ್ಬದ ಗಿಫ್ಟ್ ಆಗಿ ರಿಲೀಸ್ ಆದ ಈ ಟೀಸರ್‌ನಲ್ಲಿ ಹೃತಿಕ್ ರೋಷನ್‌ರವರ ಮೈ ಜುಮ್ಮೆನ್ನಿಸೋ ಆಕ್ಷನ್ ಸೀಕ್ವೆನ್ಸ್‌ಗಳಿವೆ, ನಿಜ. ಆದರೆ, ಎಲ್ಲರ ಕಣ್ಣು, ಮನಸ್ಸು ಕದ್ದಿದ್ದು ಮಾತ್ರ ಕಿಯಾರಾ ಅವರ ಹಾಟ್ ಅವತಾರ!
ಬರೀ ಎರಡೇ ಎರಡು ಸೆಕೆಂಡುಗಳ ಕಾಲ ಕಡಲತೀರದಲ್ಲಿ, ಚಿನ್ನದ ಬಿಕಿನಿಯಲ್ಲಿ ಕಂಗೊಳಿಸಿರುವ ಕಿಯಾರಾ, ತಮ್ಮ ಫಿಟ್ ದೇಹ ಮತ್ತು ಆಕರ್ಷಕ ಮೈಮಾಟದಿಂದ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ರೆಡ್ಡಿಟ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಕಾಳ್ಗಿಚ್ಚಿನಂತೆ ಹಬ್ಬಿದೆ. ‘ಕಿಯಾರಾ ಎರಡೇ ಸೆಕೆಂಡ್‌ನಲ್ಲಿ ಇಡೀ ಶೋ ಕದ್ದಿದ್ದಾರೆ’ ಎಂದು ಕೆಲವರು ಹೊಗಳಿದರೆ, ‘ಗರ್ಭಿಣಿಯಾಗಿದ್ದರೂ ಕಿಯಾರಾ ದೇವತೆಯಂತೆ ಕಾಣುತ್ತಿದ್ದಾರೆ’ ಎಂದು ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ.ಅವರ ಫಿಟ್ನೆಸ್, ಆಕರ್ಷಕ ಮೈಮಾಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಸದ್ಯ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಿಯಾರಾಗೆ, ‘ವಾರ್ 2’ ಹಲವು ಪ್ರಥಮಗಳ ಚಿತ್ರ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್‌ನಲ್ಲಿ ಮೊದಲ ಸಿನಿಮಾ, ಮೊದಲ ಪಕ್ಕಾ ಆಕ್ಷನ್ ಸಿನಿಮಾ, ಮತ್ತು ಹೌದು, ತೆರೆಮೇಲೆ ಮೊದಲ ಬಿಕಿನಿ ದೃಶ್ಯ ಕೂಡಾ ಇದೇ! ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರ 2025ರ ಆಗಸ್ಟ್ 14ಕ್ಕೆ ತೆರೆಗೆ ಅಪ್ಪಳಿಸಲಿದೆ.

ಆದರೆ, ಇಲ್ಲೊಂದು ಸಣ್ಣ ಟ್ವಿಸ್ಟ್! ಈ ಹಾಟ್ ಲುಕ್ ಕೆಲವರಲ್ಲಿ ಅನುಮಾನದ ಕಿಡಿಯನ್ನೂ ಹತ್ತಿಸಿದೆ. ಕೆಲವರು ಇದನ್ನು ಸಿಜಿಐ (ಕಂಪ್ಯೂಟರ್ ಜನರೇಟೆಡ್ ಇಮೇಜರಿ) ಇರಬೇಕು “ಇಲ್ಲ, ಬಾಡಿ ಡಬಲ್ ಇರಬಹುದು” ಅಂತೆಲ್ಲಾ ಕೆಲ ನೆಟ್ಟಿಗರು ಗುಸುಗುಸು ಶುರುಮಾಡಿದ್ದಾರೆ. ಆದರೆ, ಕಿಯಾರಾ ಅವರ ತಂಡ, “ಅದೆಲ್ಲಾ ಸುಳ್ಳು, ಕಿಯಾರಾ ಈ ಲುಕ್‌ಗಾಗಿ ಸಖತ್ ಆಗಿ ಜಿಮ್‌ನಲ್ಲಿ ಬೆವರು ಹರಿಸಿದ್ದಾರೆ” ಅಂತ ಸ್ಪಷ್ಟನೆ ಕೊಟ್ಟಿದೆ.
ಸಾಮಾಜಿಕ ಮಾಧ್ಯಮ
ದೂರು ನೀಡಲು ಬಂದ ಮಹಿಳೆಯ ಜತೆ ಡಿವೈಎಸ್ಪಿ ಬಲವಂತದ ಸೆಕ್ಸ್ ! ಕಛೇರಿಯಲ್ಲೆ ರಾಸಲೀಲೆ ನಡೆಸುತ್ತಿರುವ ವಿಡಿಯೋ ವೈರಲ್ – ಗೃಹ ಸಚಿವರ ತವರು ಜಿಲ್ಲೆಯಲ್ಲಿ ಶಾಕಿಂಗ್ ಘಟನೆ

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
ತುಮಕೂರು : ಜ 2ಡಿವೈಎಸ್ಪಿಯೊಬ್ಬರು ರಾಜ್ಯ ಪೊಲೀಸ್ ಇಲಾಖೆಯ ಮಾನ ಹಾಗೂ ಗೌರವವನ್ನು ಹರಾಜು ಹಾಕಿದ ಘಟನೆಯೊಂದು ಗೃಹ ಸಚಿವ ಡಾ| ಪರಮೇಶ್ವರ್ ಅವರ ತವರು ಜಿಲ್ಲೆಯಿಂದ ವರದಿಯಾಗಿದೆ. ದೂರು ನೀಡಲು ಬಂದ ಸಂತ್ರಸ್ತ ಮಹಿಳೆಯನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ತನ್ನ ಕಾಮತೃಷೆ ತೀರಿಸಲು ಬಲವಂತವಾಗಿ ಬಳಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ.ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಘಿದೆ.
ಏನಿದು ಪ್ರಕರಣ ?
ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.
ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.
ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ. ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ.
ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
‘ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್‌ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತುಮಕೂರು ಜಿಲ್ಲೆ ಎಸ್‌ಪಿ ಕೆ.ವಿ. ಅಶೋಕ್ ಪ್ರತಿಕ್ರಿಯಿಸಿದ್ದಾರೆ
-
ಬಿಗ್ ನ್ಯೂಸ್20 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ24 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
Uncategorized21 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ20 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized20 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಅಂತರ ರಾಜ್ಯ24 hours agoYouTuber-89 ವರ್ಷದ ವೃದ್ಧನ 5 ಸವರನ್ ಚಿನ್ನದ ಸರ ಕಳವು ಆರೋಪ; 118 ಸವರನ್ ಚಿನ್ನ ಕಳವು ಪ್ರಕರಣದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲು
-
ಸ್ಥಳೀಯ24 hours agoUT Khader-ಚನ್ನಪಟ್ಟಣ: ನಡುರಾತ್ರಿ 2 ಗಂಟೆಗೆ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ದಿಢೀರ್ ಭೇಟಿ: ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಗರಂ



















