ರಾಜಕೀಯ
Brijesh Chowta-ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಭದ್ರಕೋಟೆ, ಹಿಂದುತ್ವದ ಆಧಾರ ಮೇಲೆ ಅಭಿವೃದ್ದಿ ಪಡಿಸುತ್ತೇವೆ-ಕ್ಯಾಪ್ಟನ್ ಬ್ರಿಜೇಶ್ ಚೌಟ; ದಿ. ಶರತ್ ಮಡಿವಾಳ ನಿವಾಸಕ್ಕೆ ಭೇಟಿ
ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಭದ್ರಕೋಟೆ, ಹಿಂದುತ್ವದ ಆಧಾರ ಮೇಲೆ ಅಭಿವೃದ್ದಿ ಪಡಿಸಲು ಸಂಕಲ್ಪ ಮಾಡಿದ್ದೇನೆ. ಮುಂದೆಯೂ ಹಿಂದುತ್ವದ ಭದ್ರಕೋಟೆಯಾಗಿ ಮುಂದುವರಿಸುವ ಜವಾಬ್ಧಾರಿ ನಮ್ಮ ಮೇಲಿದೆ, ಅದಕ್ಕಾಗಿ ನಾವೆಲ್ಲ ಪಣತೊಡಬೇಕಿದೆ ಎಂದು ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಂಗಳೂರು ಮಂಡಲದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಕರೆ ನೀಡಿದರು.
ದಕ್ಷಿಣ ಕನ್ನಡವೆಂಬ ಸಂಘಟನಾತ್ಮಕ ಜಿಲ್ಲೆಯಲ್ಲಿ ಸಾಮಾನ್ಯ ಮನೆಯ ಹುಡುಗನಿಗೆ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಸಿಕ್ಕ ಬಹುದೊಡ್ಡ ಅವಕಾಶ ದೈವ-ದೇವರುಗಳ ಆಶೀರ್ವಾದ, ನನ್ನ ಪೂರ್ವಜನ್ಮದ ಪುಣ್ಯ ಹಾಗೂ ಕಾರ್ಯಕರ್ತರ ಹಾರೈಕೆಯಿಂದ ನನಗೆ ದೊರೆತಿದೆ ಎಂದರು.
ಯುವಕನಾದ ನನಗೆ ಸಿಕ್ಕ ದೊಡ್ಡ ಅವಕಾಶ ಕೊಟ್ಟಿರುವ ಪಕ್ಷ ಯುವನಾಯಕತ್ವದ ಮೇಲೆ ಇಟ್ಟಿರುವ ವಿಶ್ವಾಸದ ಕಾರಣಕ್ಕೆ, ಮೇರುನಾಯಕ ನರೇಂದ್ರ ಮೋದಿಯವರು ಯುವನಾಯಕತ್ವಕ್ಕೆ ಅವಕಾಶ ನೀಡಬೇಕು, ಯುವಕರು ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು, ರಾಷ್ಟ್ರದ ಅಭ್ಯುದಯದಲ್ಲಿ ಪಾಲುದಾರರನ್ನಾಗಿ ಮಾಡಬೇಕೆನ್ನುವ ಉದ್ದೇಶದಿಂದ ನನ್ನಂತಹ ಯುವಕನಿಗೆ ಅವಕಾಶ ಸಿಕ್ಕಿದೆ. ಇಂತಹದು ಬಾರತೀಯ ಜನತಾ ಪಾರ್ಟಿ ಹಾಗೂ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಮಾತ್ರ ಸಾಧ್ಯ ಎಂದರು.
ಪ್ರಜಾಪ್ರಭುತ್ವದ ನಿಜವಾದ ಅರ್ಥವನ್ನು ಮತ್ತು ನಿಜವಾದ ಮೌಲ್ಯವನ್ನು ಪ್ರತಿಪಾದಿಸಿದ್ದರೆ ಅದು ಬಾರತೀಯ ಜನತಾ ಪಾರ್ಟಿ ಮಾತ್ರ, ದಕ್ಷಿಣ ಕನ್ನಡ ಜಿಲ್ಲೆಯನ್ನು ಅಭಿವೃದ್ಧಿಶೀಲ ಜಿಲ್ಲೆಯನ್ನಾಗಿಸುವ ಮೂಲಕ ರಾಜ್ಯದ ಅಭಿವೃದ್ಧಿ ಹಾಗೂ ದೇಶದ ಅಭಿವೃದ್ಧಿ ಮಾಡುವ ಕನಸನ್ನು ನನಸಾಗಿಸುವ ಪರಿಕಲ್ಪನೆ ನನ್ನದು, ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ ಹಾಗೂ ಉದ್ಯಮಿಗಳಾಗಿ ಯಶಸ್ಸಿನ ಸಾಧನೆ ಮಾಡಿದ ಸಾಮಾರ್ಥ್ಯವಂತರ ಜಿಲ್ಲೆಯನ್ನು ಪ್ರತಿನಿಧಿಸುವುದು ನನ್ನ ಹೆಮ್ಮಯಾಗಿದೆ, ಹಿಂದುತ್ವದ ಬದ್ಧತೆಯೊಂದಿಗೆ ಅಭಿವೃದ್ಧಿಯ ಆದ್ಯತೆಯಾಗಿಸುವ ಭರವಸೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿಯವರ ಅವಧಿಯಲ್ಲಿ ಸಂಸದರಾದ ನಳಿನ್ಕುಮಾರ್ ಅವರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಸೇರಿದಂತೆ ಹಲವಾರು ಯೋಜನೆಗಳನ್ನು ತಂದಿದ್ದಾರೆ, ಅನುಷ್ಠಾನದ ಹಂತದಲ್ಲಿರುವ ಯೋಜನೆಗಳನ್ನು ಎಲ್ಲಾ ಜನಪ್ರತಿನಿಧಿಗಳ ಸಹಕಾರದೊಂದಿಗೆ ಶೀಘ್ರವಾಗಿ ಪೂರ್ಣಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದರು. ತಜ್ಞರು ಹಾಗೂ ವಿಶೇಷ ಪರಿಣಿತರ ಸಲಹೆ, ಸಹಕಾರದೊಂದಿಗೆ ಮಂಗಳೂರು-ಬೆಂಗಳೂರು ಹೆದ್ದಾರಿ ಯೋಜನೆಯನ್ನು ಅಭಿವೃದ್ಧಿಪಡಿಸಲು ಜೊತೆಗೆ ಮಂಗಳೂರು-ಬೆಂಗಳೂರು ರೈಲಿನ ಯೋಜನೆಯನ್ನು ಹೊಸ ಪರಿಕಲ್ಪನೆಯೊಂದಿಗೆ ಅಭಿವೃದ್ಧಿಪಡಿಸಲು ಆದ್ಯತೆಯಾಗಿ ಪರಿಗಣಿಸಿ, ಮಂಗಳೂರು ಎಂಬ ಬಂದರು ನಗರವನ್ನು ಕರ್ನಾಟಕ ಆರ್ಥಿಕ ಶಕ್ತಿಯನ್ನಾಗಿಸುವ ನಗರವಾಗಿ ಅಭಿವೃದ್ದಿಪಡಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್, ಮಂಗಳೂರು ನಗರ ಬಿಜೆಪಿ ಅಧ್ಯಕ್ಷರಾದ ಜಗದೀಶ ಆಳ್ವ, ವಿಧಾನಪರಿಷತ್ಸದಸ್ಯರಾದ ಪ್ರತಾಪ್ಸಿಂಹ ನಾಯಕ್, ಮಾಜಿ ಶಾಸಕ ಜಯರಾಮ ಶೆಟ್ಟಿ, ಬಿಜೆಪಿ ಜಿಲ್ಲಾ ಚುನಾವಣಾ ಸಂಚಲಕರಾದ ನಿತಿನ್ಕುಮಾರ್, ಉಪಾಧ್ಯಕ್ಷರಾದ ರವೀಂದ್ರ ಶಟ್ಟಿ ಉಳಿದೊಟ್ಟು, ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ದಿ. ಶರತ್ ಮಡಿವಾಳ ಅವರ ನಿವಾಸಕ್ಕೆ ಭೇಟಿ:
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಹಿಂದೂ ಕಾರ್ಯಕರ್ತ ದಿ. ಶರತ್ ಮಡಿವಾಳ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬದ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ನಾಗರಾಜ್ ಶೆಟ್ಟಿ, ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜಕೀಯ
BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.
ಮಂಗಳೂರು
Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.















