Connect with us

ನಿಧನ ವಾರ್ತೆ

Bantwal- ಮಾಹಿತಿ ಹಕ್ಕು ಹೋರಾಟಗಾರ ಪದ್ಮನಾಭ ಸಾಮಂತ್ ಅನುಮಾನಸ್ಪದ ಸಾವು: ಸೂಕ್ತ ತನಿಖೆ ಮಾಡಬೇಕೆಂದು ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮುಖಂಡರ ನಿಯೋಗ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ

Published

on

Ad Widget

Ad Widget

Ad Widget

Ad Widget

ಇತ್ತೀಚೆಗೆ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಪದ್ಮನಾಭ ಸಾಮಂತ್ ರವರ ಮೃತ ದೇಹ ಮಾ.31 ರಂದು ಅವರ ಮನೆಯ ಸ್ವಲ್ಪ ದೂರದಲ್ಲಿನ ನಿರ್ಜನ ಗುಡ್ಡ ಪ್ರದೇಶದಲ್ಲಿನ ಮರದ ತುದಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ.

Ad Widget

Ad Widget

Ad Widget

Ad Widget

ಪದ್ಮನಾಭ ಸಾಮಂತ್‌ರವರು ಒಬ್ಬ RTI ಕಾರ್ಯಕರ್ತನಾಗಿದ್ದು, ಬಂಟ್ವಾಳ ತಾಲೂಕಿನಲ್ಲಿನ ಹಲವಾರು ಭ್ರಷ್ಟಚಾರ ಹಗರಣಗಳನ್ನು ಬಯಲಿಗೆಳಂತಹ ವ್ಯಕ್ತಿ ಎಂಬ ಹೆಗ್ಗಳಿಕೆ ಇವರದ್ದಾಗಿತ್ತು. ಬಂಟ್ವಾಳ ಅಕ್ರಮ ಸಕ್ರಮ ಸಮಿತಿ 2019 ರಿಂದ 2023 ರವರೆಗಿನ ನಡೆಸಿದಂತಹ ಅಕ್ರಮ-ಸಕ್ರಮ ಭೂಮಂಜೂರಾತಿಗೆ ಸಂಬಂಧಪಟ್ಟಂತೆ ಸಮಿತಿಯು ನಡೆಸಿದಂತಹ ಅಕ್ರಮ ವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಸರಕಾರವನ್ನು ಒತ್ತಾಯಿಸಿ ದೂರು ದಾಖಲಿಸಿದ್ದರು.

Ad Widget

Ad Widget alt="Ad Widget"/>

Ad Widget

ಬಂಟ್ವಾಳ ಕ್ಷೇತ್ರದ ಶಾಸಕರ ಆಪ್ತರೊಬ್ಬರು ಬಂಟ್ವಾಳ ಬೈಪಾಸ್‌ನಲ್ಲಿ ನಿರ್ಮಿಸಿದ ಅನಧಿಕೃತ ಕಟ್ಟಡದ ವಿರುದ್ದ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿಯವರ ವಿರುದ್ದ ಕ್ರಮಕೈಗೊಳ್ಳುವಂತೆ ದೂರು ನೀಡುವಲ್ಲಿ ಕೂಡ ಪ್ರಮುಖ ಪಾತ್ರ ವಹಿಸಿದ್ದರು. ಬಂಟ್ವಾಳ ಕ್ಷೇತ್ರದ ಹಲವಾರು ಕಡೆಗಳಲ್ಲಿ ಕಳಪೆ ರಸ್ತೆ ಡಾಮಾರೀಕರಣ/ಕಾಂಕ್ರೀಟಿಕರಣ ಬಗ್ಗೆ ಸಾರ್ವಜನಿಕರ ಪರವಾಗಿ ಧ್ವನಿ ಎತ್ತಿ ಸಂಬಂಧಿಸಿದ ವ್ಯಕ್ತಿಗಳ ವಿರುದ್ಧ ದೂರನ್ನು ಸಲ್ಲಿಸಿದ್ದರು.

Ad Widget

Ad Widget <> Ad Widget

ಸಿದ್ದಕಟ್ಟೆ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರ ಬ್ಯಾಂಕ್ ಅವ್ಯವಹಾರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ಪ್ರಶ್ನೆಯನ್ನು ಮಾಡಿದ್ದರು.ಹೀಗೆ ತಾಲೂಕಿನಾಧ್ಯಂತ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳ ಬಗ್ಗೆ ಪ್ರಶ್ನೆಯನ್ನು ಮಾಡುತ್ತಾ ಭ್ರಷ್ಟರಿಗೆ ಸಿಂಹಸ್ವಪ್ನರಾಗಿದ್ದರು.

ಹೀಗಿರುವಲ್ಲಿ ಪದ್ಮನಾಭ ಸಾಮಂತ್‌ರವರು ಒಬ್ಬ ಧೃಡ ಮನಸ್ಸಿನ ವ್ಯಕ್ತಿಯಾಗಿದ್ದು, ಯಾವುದೇ ರೀತಿಯಲ್ಲಿ ಆತ್ಮಹತ್ಯೆ ಮಾಡತಕ್ಕಂತಹ ದುರ್ಬಲ ಮನಸ್ಸಿನ ವ್ಯಕ್ತಿಯಲ್ಲ ಎಂಬುದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರುವ ವಿಚಾರವಾಗಿರುತ್ತದೆ. ಆದರೆ ಅವರ ಸಾವಿನ ರೀತಿ ಮತ್ತು ಮೃತದೇಹ ಇದ್ದಂತಹ ಸ್ಥಿತಿಗತಿ ಅವರ ಸಾವಿನ ಬಗ್ಗೆ ಸಂಶಯವನ್ನು ವ್ಯಕ್ತಪಡಿಸುತ್ತಾ ಇದೆ. ಅವರು ಕೆಲವೊಂದು ರಾಜಕೀಯ ಪ್ರಭಾವಿ ವ್ಯಕ್ತಿಗಳ ವಿರುದ್ದ ಮತ್ತು ಅವರ ಅಕ್ರಮಗಳ ವಿರುದ್ದ ಯಾವುದೇ ಮುಲಾಜಿಲ್ಲದೆ ಸಂಬಂಧಿಸಿದ ಮೇಲಾಧಿಕಾರಿಗಳಿಗೆ ದೂರನ್ನು ಸಲ್ಲಿಸುತ್ತಾ ಇದ್ದರು. ಆ ಕಾರಣಕ್ಕಾಗಿ ಪದ್ಮನಾಭ ಸಾಮಂತ್‌ರವರಿಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದವು.

Ad Widget

Ad Widget

ಈ ಬಾಬ್ತು ಪೋಲಿಸ್ ಮೇಲಾಧಿಕಾರಿಗಳಿಗೆ ದೂರನ್ನು ಸಲ್ಲಿಸಿ ಸೂಕ್ತ ರಕ್ಷಣೆಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಆದುದರಿಂದ ಈ ಎಲ್ಲಾ ಸನ್ನಿವೇಶಗಳು ಪದ್ಮನಾಭ ಸಾಮಂತ್‌ರವರ ಸಾವಿನ ಬಗ್ಗೆ ಅನುಮಾನವನ್ನು ವ್ಯಕ್ತಪಡಿಸುತ್ತಿದ್ದು, ರಾಜಕೀಯ ವಲಯದಲ್ಲಿ ಕೂಡ ಅವರ ಮೇಲೆ ವೈಯಕ್ತಿಕ ದ್ವೇಷವನ್ನು ಹೊಂದಿದ್ದ ವ್ಯಕ್ತಿಗಳು ಅವರ ಸಾವಿನ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ, ಅಪಮಾನಕಾರಕವಾಗಿ, ನಿಂದನಕಾರಿಯಾಗಿ ಮತ್ತು ಅಪಹಾಸ್ಯದ ಸುದ್ದಿಗಳನ್ನು ಪದ್ಮನಾಭ ಸಾಮಂತ್‌ರವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿದ್ದರು. ಈ ಎಲ್ಲಾ ವ್ಯಕ್ತಿಗಳ ಬಗ್ಗೆ ಸೂಕ್ತ ರೀತಿಯ ತನಿಖೆಯ ಅಗತ್ಯವಿರುತ್ತದೆ .

ಆದುದರಿಂದ ವ್ಯಾಪಕ ಚರ್ಚೆಗೆ ಕಾರಣವಾಗಿರುವ ಪದ್ಮನಾಭ ಸಾಮಂತ್‌ರವರ ಸಾವು ಹೇಗೆ ಸಂಭವಿಸಿತೆಂದು ಹಾಗೂ ಅದರ ಹಿಂದಿನ ಕಾರಣವನ್ನು ಕಂಡು ಹಿಡಿಯಲು ಸೂಕ್ತ ತನಿಖೆಯನ್ನು ಕೈಗೊಳ್ಳಬೇಕು, ಈ ಕಾರಣಕ್ಕಾಗಿ ಪ್ರತ್ಯೇಕ ವಿಶೇಷ ಪೋಲಿಸ್ ತಂಡವನ್ನು ರಚಿಸಿ ತನಿಖೆ ಮಾಡಬೇಕೆಂದು ಈ ಮೂಲಕ ಕೇಳಿಕೊಳ್ಳುವುದಾಗಿದೆ ಎಂದು ಮನವಿ ನಿಯೋಗ ದಕ್ಷಿಣಕನ್ನಡ ಎಲ್ಲಿಯವರಿಗೆ ಮನವಿ ಮಾಡಿದೆ.

ಒಂದು ವೇಳೆ ಆತ್ಮಹತ್ಯೆಯ ಸಂದರ್ಭಗಳೇನಾದರೂ ತನಿಖೆಯಲ್ಲಿ ಕಂಡುಬಂದಲ್ಲಿ, ಇದಕ್ಕೆ ಪ್ರಚೋದನೆಗೈದು ಘಟನೆಗೆ ಕಾರಣರಾದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ದ ಕೂಡಲೇ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಾಗಿ ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರವರಿಗೆ ವಿನಂತಿಸಿದರು.

ಈ ಸಂದರ್ಭದಲ್ಲಿ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಿಯೂಸ್ ರೊಡ್ರಿಗಸ್, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ,ಎಂ ಎಸ್ ಮೊಹಮ್ಮದ್, ಅಬ್ಬಾಸ್ ಅಲಿ,ನಾರಾಯಣ ನಾಯ್ಕ್,ಪ್ರಶಾಂತ್ ಕುಲಾಲ್, ಸುರೇಶ್ ನಾವೂರ ವಕೀಲರು, ಉಮಾಕರ್ ಬಂಗೇರ, ಪ್ರವೀಣ್ ರೊಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು.

Ad Widget
Click to comment

Leave a Reply

ನಿಧನ ವಾರ್ತೆ

One-sided love-ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಮೇಲಿನ ಒನ್‌ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು

Published

on

Ad Widget

Ad Widget

Ad Widget

Ad Widget

ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget alt="Ad Widget"/>

Ad Widget

ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.

Ad Widget

Ad Widget <> Ad Widget

ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್‌ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್‌ಐಆರ್‌ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.

ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್‌ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.

ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.

ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ

Published

on

Ad Widget

Ad Widget

Ad Widget

Ad Widget

ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget <> Ad Widget

ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.

Ad Widget

Ad Widget

ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!