Connect with us

ಬೆಂಗಳೂರು

Gold Rate Today – ಗೋಲ್ಡ್‌ ಪ್ರಿಯರಿಗೆ ಸಿಹಿ ಸುದ್ದಿ; ಚಿನ್ನದ ಬೆಲೆ ಇಳಿಕೆ-ಬೆಳ್ಳಿ ದುಬಾರಿ; ಇಲ್ಲಿದೆ ಇವತ್ತಿನ ದರಪಟ್ಟಿ

Published

on



Ad Widget

Ad Widget

Ad Widget

Ad Widget

ಬೆಂಗಳೂರು, ಏ. 3: ಸಿಕ್ಕಾಪಟ್ಟೆ ಏರಿದ್ದ ಚಿನ್ನದ ಬೆಲೆ ಕೆಲ ವಿದೇಶೀ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾದ ಪರಿಣಾಮ ಬುಧವಾರ ಇಳಿಕೆಯಾಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆಯ ಏರಿಕೆ ಮುಂದುವರಿದಿದೆ. ಗ್ರಾಮ್​ಗೆ 40 ಪೈಸೆಯಷ್ಟು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,350 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,110 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,900 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 63,350 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,750 ರೂಪಾಯಿಯಲ್ಲಿ ಇದೆ.

Ad Widget

Ad Widget

Ad Widget

Ad Widget

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 3ಕ್ಕೆ)
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,350 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,110 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 790 ರೂ

Ad Widget

Ad Widget

Ad Widget alt="Ad Widget"/>

Ad Widget

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,350 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,110 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 775 ರೂ

Ad Widget

Ad Widget <> Ad Widget

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)
ಬೆಂಗಳೂರು: 63,350 ರೂ
ಚೆನ್ನೈ: 64,300 ರೂ
ಮುಂಬೈ: 63,350 ರೂ
ದೆಹಲಿ: 63,500 ರೂ
ಕೋಲ್ಕತಾ: 63,350 ರೂ
ಕೇರಳ: 63,350 ರೂ
ಅಹ್ಮದಾಬಾದ್: 63,400 ರೂ
ಜೈಪುರ್: 63,500 ರೂ
ಲಕ್ನೋ: 63,500 ರೂ
ಭುವನೇಶ್ವರ್: 63,350 ರೂ



Ad Widget

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)
ಬೆಂಗಳೂರು: 7,750 ರೂ
ಚೆನ್ನೈ: 8,200 ರೂು
ಮುಂಬೈ: 7,900 ರೂ
ದೆಹಲಿ: 7,900 ರೂ
ಕೋಲ್ಕತಾ: 7,900 ರೂ
ಕೇರಳ: 8,200 ರೂ
ಅಹ್ಮದಾಬಾದ್: 7,900 ರೂ
ಜೈಪುರ್: 7,900 ರೂ
ಲಕ್ನೋ: 7,900 ರೂ
ಭುವನೇಶ್ವರ್: 8,200 ರೂ

Ad Widget

Ad Widget

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)
ಮಲೇಷ್ಯಾ: 3,370 ರಿಂಗಿಟ್ (59,149 ರುಪಾಯಿ)
ದುಬೈ: 2,537.50 ಡಿರಾಮ್ (57,625 ರುಪಾಯಿ)
ಅಮೆರಿಕ: 685 ಡಾಲರ್ (57,129 ರುಪಾಯಿ)
ಸಿಂಗಾಪುರ: 945 ಸಿಂಗಾಪುರ್ ಡಾಲರ್ (58,282 ರುಪಾಯಿ)
ಕತಾರ್: 2,580 ಕತಾರಿ ರಿಯಾಲ್ (59,011 ರೂ)
ಸೌದಿ ಅರೇಬಿಯಾ: 2,600 ಸೌದಿ ರಿಯಾಲ್ (57,811 ರುಪಾಯಿ)
ಓಮನ್: 273.50 ಒಮಾನಿ ರಿಯಾಲ್ (59,246 ರುಪಾಯಿ)
ಕುವೇತ್: 214.50 ಕುವೇತಿ ದಿನಾರ್ (58,141 ರುಪಾಯಿ)

Ad Widget
Click to comment

Leave a Reply

ಬಿಗ್ ನ್ಯೂಸ್

Nagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಂವಾದವೊಂದರಲ್ಲಿ ಮಾತನಾಡಿದ ಚೌದರಿ , ಎಸ್‌ಐಟಿ ತನಿಖಾ ವರದಿಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳ ಸಂಖ್ಯೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ ದಾಖಲಾಗಿರುವ ಸಾವುಗಳ ವಿವರಗಳಲ್ಲಿ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಅಳವಾಗಿ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಎಸ್‌ಐಟಿ ತಿಳಿಸಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.

Ad Widget

Ad Widget <> Ad Widget

ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಅಸ್ತಿಪಂಜರಗಳು ಪತ್ತೆಯಾಗಿರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಂಗ್ಲೆ ಗುಡ್ಡೆ ಸ್ಮಶಾನವಲ್ಲದಿದ್ದರೂ ಅಲ್ಲಿ ಇಷ್ಟೊಂದು ಎಲುಬುಗಳು ಮತ್ತು ಅಸ್ತಿಪಂಜರಗಳು ಪತ್ತೆಯಾಗಿರುವುದು ಹೇಗೆ ಎಂಬುದರ ಕುರಿತು ಉನ್ನತ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.



Ad Widget

ಪತ್ತೆಯಾದ ಕೆಲವು ಅಸ್ತಿಪಂಜರಗಳ ಪರೀಕ್ಷೆಯಲ್ಲಿ ಅವು ಪುರುಷರದ್ದು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಒಂದು ಹುಡುಗಿಯ ಅಸ್ತಿಪಂಜರವನ್ನು ಆಸಿಡ್‌ನಿಂದ ಸುಟ್ಟಿರುವ ಸ್ಥಿತಿಯಲ್ಲಿ ಹೂತುಹಾಕಲಾಗಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಆ ವ್ಯಕ್ತಿ ಆಸಿಡ್‌ನಿಂದ ಮೃತಪಟ್ಟಿಲ್ಲ ಎಂಬುದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.

Ad Widget

Ad Widget

ಈ ರೀತಿಯಾಗಿ ವಿವಿಧ ವರದಿಗಳ ನಡುವೆ ವ್ಯತ್ಯಾಸ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿಗೆ ಪೂರಕ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರಕ್ಕೆ ಪತ್ರದ ಮೂಲಕ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.

ಪ್ರಸ್ತುತ ರಚನೆಯಾಗಿರುವ ಎಸ್‌ಐಟಿ ವ್ಯಾಪ್ತಿಗೆ ಈ ಹೊಸ ಮಾಹಿತಿಗಳು ಸ್ವಯಂಚಾಲಿತವಾಗಿ ಸೇರುತ್ತವೆಯೇ ಎಂಬ ಬಗ್ಗೆ ಕಾನೂನುಬದ್ಧ ಸ್ಪಷ್ಟತೆ ಅಗತ್ಯವಿದೆ. ಆದ್ದರಿಂದ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿ, ಈ ಎಲ್ಲ ವಿಷಯಗಳನ್ನು ಈಗಾಗಲೇ ರಚಿಸಿರುವ ಎಸ್‌ಐಟಿಗೆ ವಹಿಸಬೇಕು. ಅಗತ್ಯವಿದ್ದರೆ ಅದರ ‘ಟರ್ಮ್ಸ್ ಆಫ್ ರೆಫರೆನ್ಸ್’ (ತನಿಖೆಯ ವ್ಯಾಪ್ತಿ) ವಿಸ್ತರಿಸಬೇಕು ಎಂದು ಮಹಿಳಾ ಆಯೋಗ ಶಿಫಾರಸು ಮಾಡಿದೆ.

ಸರ್ಕಾರದ ಪ್ರತಿಕ್ರಿಯೆಗಾಗಿ ಇನ್ನೂ 15 ದಿನ ಕಾಯಲಾಗುವುದು. ಬಳಿಕ ಎರಡು ಬಾರಿ ಸರ್ಕಾರಕ್ಕೆ ನೆನಪಿನ ಪತ್ರ ಕಳುಹಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ.

Ad Widget
Continue Reading

ಶಿಕ್ಷಣ

Special classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ

Published

on



Ad Widget

Ad Widget

Ad Widget

Ad Widget

ಮಳೆಯಿಂದಾಗಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಹೊಂದಾಣಿಕೆ ಮಾಡುವ ಉದ್ದೇಶದಿಂದ ದಸರಾ ರಜೆಯ ಅವಧಿಯಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಅ.3ರಿಂದ ಅ.7ರವರೆಗೆ ಕೆಲವು ನಿಬಂಧನೆಗಳೊಂದಿಗೆ ವಿಶೇಷ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಳೆಯಿಂದಾಗಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಹೊಂದಾಣಿಕೆ ಮಾಡುವ ಉದ್ದೇಶದಿಂದ ದಸರಾ ರಜೆಯ ಅವಧಿಯಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಅ.3ರಿಂದ ಅ.7ರವರೆಗೆ ಕೆಲವು ನಿಬಂಧನೆಗಳೊಂದಿಗೆ ವಿಶೇಷ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ವಿಶೇಷ ತರಗತಿಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸಲು ಪೋಷಕರಿಂದ ಕಡ್ಡಾಯವಾಗಿ ಲಿಖಿತ ಒಪ್ಪಿಗೆ ಪತ್ರ ಪಡೆಯಬೇಕು ಎಂದು ಇಲಾಖೆ ಸೂಚಿಸಿದೆ.

Ad Widget

Ad Widget <> Ad Widget

ಅಲ್ಲದೆ, ವಿಶೇಷ ತರಗತಿಗಳನ್ನು ನಡೆಸುವ ಕುರಿತು ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ನಡವಳಿ ದಾಖಲಿಸಬೇಕು. ತರಗತಿಗಳನ್ನು ನಡೆಸುತ್ತಿರುವ ಮಾಹಿತಿಯನ್ನು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (ಬಿಇಒ) ನೀಡುವಂತೆ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.



Ad Widget

ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಇಲಾಖೆ ಸೂಚಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ.

Continue Reading

ಬಿಗ್ ನ್ಯೂಸ್

KRS-ಕೆಆರ್‌ಎಸ್‌ಗೆ ಎತ್ತಿನಹೊಳೆ ನೀರು..! ನೀರಿನ ಮಟ್ಟ ಹೆಚ್ಚಿಸಲು ಹೊಸ ಮಾರ್ಗ

Published

on



Ad Widget

Ad Widget

Ad Widget

Ad Widget

ಮಳೆ ಕೊರತೆ ಹಾಗೂ ಕೆಆರ್‌ಎಸ್‌ ಅಣೆಕಟ್ಟಿನ ನೀರಿನ ಮಟ್ಟ ಕಾಯ್ದುಕೊಳ್ಳುವ ಅಗತ್ಯದ ಹಿನ್ನೆಲೆಯಲ್ಲಿ ಎತ್ತಿನಹೊಳೆ ಯೋಜನೆಯ ನೀರನ್ನು ಹೇಮಾವತಿ ನದಿಗೆ ಹರಿಸಿ, ಅಲ್ಲಿಂದ ಗೊರೂರು ಅಣೆಕಟ್ಟಿನ ಮೂಲಕ ಕನ್ನಂಬಾಡಿ (ಕೆಆರ್‌ಎಸ್‌) ಅಣೆಕಟ್ಟಿಗೆ ಹರಿಸಲಾಗುತ್ತಿದೆ.

Ad Widget

Ad Widget

Ad Widget

Ad Widget

ಸಕಲೇಶಪುರ: ಮಳೆ ಕೊರತೆ ಹಾಗೂ ಕೆಆರ್‌ಎಸ್‌ ಅಣೆಕಟ್ಟಿನ ನೀರಿನ ಮಟ್ಟ ಕಾಯ್ದುಕೊಳ್ಳುವ ಅಗತ್ಯದ ಹಿನ್ನೆಲೆಯಲ್ಲಿ ಎತ್ತಿನಹೊಳೆ ಯೋಜನೆಯ ನೀರನ್ನು ಹೇಮಾವತಿ ನದಿಗೆ ಹರಿಸಿ, ಅಲ್ಲಿಂದ ಗೊರೂರು ಅಣೆಕಟ್ಟಿನ ಮೂಲಕ ಕನ್ನಂಬಾಡಿ (ಕೆಆರ್‌ಎಸ್‌) ಅಣೆಕಟ್ಟಿಗೆ ಹರಿಸಲಾಗುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ನಾಗರ ಗ್ರಾಮದ ವಿತರಣಾ ಘಟಕದಿಂದ ಕಳೆದ ಒಂದು ವಾರದಿಂದ ಎತ್ತಿನಹೊಳೆ ನೀರನ್ನು ಹೇಮಾವತಿ ನದಿಗೆ ಹರಿಸಲಾಗುತ್ತಿದೆ. ಅಲ್ಲಿಂದ ಗೊರೂರು ಜಲಾಶಯದ ಮೂಲಕ ಕಾವೇರಿ ನದಿಗೆ ಸೇರಿ ಕೆಆರ್‌ಎಸ್‌ ಅಣೆಕಟ್ಟಿನತ್ತ ನೀರು ಸಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Ad Widget

Ad Widget <> Ad Widget

ಪ್ರಸಕ್ತ ವರ್ಷ ಮಳೆ ಪ್ರಮಾಣ ಕಡಿಮೆಯಾಗಿದ್ದು, ಕಾವೇರಿ ನೀರಾವರಿ ನಿಯಂತ್ರಣ ಪ್ರಾಧಿಕಾರದ ನಿರ್ದೇಶನದಂತೆ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಹೀಗಾಗಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಾಯ್ದುಕೊಳ್ಳುವ ಉದ್ದೇಶದಿಂದ ಎತ್ತಿನಹೊಳೆ ನೀರನ್ನು ಪರ್ಯಾಯವಾಗಿ ಬಳಸಲಾಗುತ್ತಿದೆ ಎನ್ನಲಾಗಿದೆ.



Ad Widget

ಎತ್ತಿನಹೊಳೆ ಯೋಜನೆಯಡಿ ಮೇ 15ರಿಂದ ಅಕ್ಟೋಬರ್‌ ಅಂತ್ಯದವರೆಗೆ ಎಂಟು ಚೆಕ್‌ಡ್ಯಾಮ್‌ಗಳಿಂದ ನೀರನ್ನು ಮೇಲೆತ್ತಿ ಬೇಲೂರು-ಅರಸೀಕೆರೆ ಮಾರ್ಗವಾಗಿ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಬರಪೀಡಿತ ಏಳು ಜಿಲ್ಲೆಗಳಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಆದರೆ ಅರಸೀಕೆರೆ ಹಾಗೂ ತುಮಕೂರು ಭಾಗಗಳಲ್ಲಿ ಯೋಜನೆಯ ಕಾಮಗಾರಿಗಳು ಇನ್ನೂ ಸಂಪೂರ್ಣಗೊಂಡಿಲ್ಲ.

Ad Widget

Ad Widget

ಯೋಜನಾ ಪ್ರದೇಶದ 32ನೇ ಕಿ.ಮೀ. ವ್ಯಾಪ್ತಿಯ ಬೆಟ್ಟದಲೂರು ಸಮೀಪ ಕಾಗೇಹಳ್ಳಕ್ಕೆ ನೀರು ಹರಿಸಿ, ಮಾರಿಕಣಿವೆ ಮೂಲಕ ಎತ್ತಿನಹೊಳೆ ನೀರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರಕ್ಕೆ ತಲುಪಿಸುವ ವ್ಯವಸ್ಥೆ ಇದೆ. ಈ ಮಾರ್ಗದಲ್ಲಿರುವ ಬಹುತೇಕ ಕೆರೆಕಟ್ಟೆಗಳು ಈಗಾಗಲೇ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ಹೇಮಾವತಿ ನದಿಗೆ ಹರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

2024ರಲ್ಲಿ ಎತ್ತಿನಹೊಳೆ ಯೋಜನೆ ಉದ್ಘಾಟನೆಯಾಗಿದ್ದು, ಆ ವರ್ಷ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಮೇಲೆತ್ತಲು ಸಾಧ್ಯವಾಗಿರಲಿಲ್ಲ. 2025ರಲ್ಲಿ ಸುಮಾರು 4.5 ಟಿಎಂಸಿ ನೀರನ್ನು ಮೇಲೆತ್ತಲಾಗಿತ್ತು. ಪ್ರಸಕ್ತ ವರ್ಷದ ಸೆಪ್ಟೆಂಬರ್‌ ಅಂತ್ಯದವರೆಗೆ 1.57 ಟಿಎಂಸಿ ನೀರನ್ನು ಮಾತ್ರ ಮೇಲೆತ್ತಲಾಗಿದೆ ಎಂದು ತಿಳಿದುಬಂದಿದೆ.

ಇದರಲ್ಲಿ ಸುಮಾರು 57 ಕ್ಯುಸೆಕ್‌ ನೀರನ್ನು ಹೇಮಾವತಿ ನದಿಗೆ ಹರಿಸಲಾಗಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎತ್ತಿನಹೊಳೆ ಯೋಜನೆಯಡಿ ಮೇಲೆತ್ತಿದ ಸಂಪೂರ್ಣ ನೀರನ್ನು ಕಾಗೇಹಳ್ಳಕ್ಕೆ ಹರಿಸಿದರೆ ರೈತರ ಜಮೀನುಗಳು ಜಲಾವೃತವಾಗುವ ಸಾಧ್ಯತೆ ಇರುವುದರಿಂದ, ಸದ್ಯ ಅಲ್ಪ ಪ್ರಮಾಣದ ನೀರನ್ನು ಹೇಮಾವತಿ ನದಿಗೆ ಹರಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading