ಬಿಗ್ ನ್ಯೂಸ್
ಮಂಗಳೂರಿನ ಕಾಂಗ್ರೇಸ್ ಕಛೇರಿ ಮುಂಭಾಗ ಬಿಜೆಪಿ ಯುವಮೋರ್ಚಾ ಪ್ರತಿಭಟನೆ – ಪಕ್ಷದ ಧ್ವಜ ಹಾರಿಸಿ ಪ್ರತಿರೋಧ ಒಡ್ಡಿದ್ದ ಕಾಂಗ್ರೇಸ್ ಕಾರ್ಯಕರ್ತ | ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಸಂಘರ್ಷ – Exclusive ವಿಡಿಯೋ ನೋಡಿ
ಮಂಗಳೂರು :ಇಲ್ಲಿನ ಕಾಂಗ್ರೇಸ್ ಕಛೇರಿ ಮುಂಭಾಗ ಜ 6 ರಂದು ಪ್ರತಿಭಟನೆ ನಡೆಸಲು ಮುಂದಾದ ದ.ಕ. ಜಿಲ್ಲೆಯ ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ಹಾಗೂ ಕಾಂಗ್ರೇಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಬಳಿಕ ಪರಿಸ್ಥಿತಿ ಇನ್ನಷ್ಟು ವಿಷಮಿಸಿ ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿದ್ದು ಈ ವೇಳೆ ಮಧ್ಯೆ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು
ಜ 5 ರಂದು ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ಅವರು ಪ್ಲೈ ಓವರ್ ಬಳಿ 20 ನಿಮಿಷಕ್ಕೂ ಹೆಚ್ಚು ಕಾಲ ರಸ್ತೆ ಮಧ್ಯೆ ನಿಲ್ಲಬೇಕಾಗಿ ಬಂದ ಘಟನೆಯನ್ನು ಖಂಡಿಸಿ ಇದು ಅಲ್ಲಿನ ರಾಜ್ಯ ಸರಕಾರದ ಭದ್ರತಾ ವೈಫಲ್ಯ ವೆಂದು ಆರೋಪಿಸಿ ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೇಸ್ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು
ಬಿಜೆಪಿ ಮುಖಂಡರು ಭಾಷಣ ಮಾಡಿ ಬಳಿಕ ಕಾರ್ಯಕರ್ತರು ಕಾಂಗ್ರೇಸ್ ವಿರುದ್ದ ದಿಕ್ಕಾರ ಕೂಗಿದರು . ಈ ವೇಳೆ ಇದನ್ನು ಪ್ರತಿರೋಧಿಸಿ ಕಾರ್ಯಕರ್ತರು ಪಕ್ಷದ ಧ್ವಜ ಹಾರಿಸಿದರು ಹಾಗೂ ಕಾಂಗ್ರೇಸ್ ಪರ ಘೋಷಣೆ ಕೂಗಿದರು. ಈ ಹಂತದಲ್ಲಿ ಎರಡು ಕಡೆಯಿಂದ ಜೋರಾದ ಘೋಷಣೆಗಳ ಕೂಗಾಟ ನಡೆಯಿತು . ಒಂದಷ್ಟು ಸಮಯದ ಬಳಿಕ ಕಾಂಗ್ರೇಸ್ ಪಾಳಯದಲ್ಲೂ ಒಂದಷ್ಟು ಕಾರ್ಯಕರ್ತರು ಜತೆಗೊಡಿದರು. ಈ ವೇಳೆ ಎರಡು ಕಡೆಯಿಂದಲೂ ಮಾತಿನ ಚಕಮಕಿ ನಡೆಯಿತು.

ಪ್ರತಿಭಟನೆಯ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ :
ಬಳಿಕ ವಾಗ್ವಾದ ಇನ್ನಷ್ಟು ಜೋರಾಗಿ ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿತು . ಈ ಹಂತದಲ್ಲಿ ಮಧ್ಯೆ ಪ್ರವೇಶಿಸಿದ ಪೊಲೀಸರು ಪ್ರತಿಭಟನೆಯನ್ನು ತಡೆದರು . ಬಿಜೆಪಿ ಯುವಮೋರ್ಚಾದ ಈ ಪ್ರತಿಭಟನೆಗೆ ಪೊಲೀಸರ ಅನುಮತಿ ಇರಲಿಲ್ಲ ಎಂದು ಹೇಳಲಾಗುತ್ತಿದೆ.
ಅಂತರ ರಾಜ್ಯ
Supreme Court-ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ..!
ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಹೊಸದಿಲ್ಲಿ: ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಪ್ರತಿಭಟನೆಯಿಂದ ಹಬ್ಬದ ವ್ಯಾಪಾರಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದ ವರ್ತಕರು, ಪ್ರತಿಭಟನೆಗೆ ತಡೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದರು.
ಈ ಮನವಿಯ ವಿಚಾರವಾಗಿ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ವಿವೇಕವನ್ನು ಪ್ರತಿಭಟನಾಕಾರರು ಹೊಂದಿರುತ್ತಾರೆ ಎಂದು ಆಶಿಸಿರುವುದಾಗಿ ತಿಳಿಸಿದೆ.
ಹಬ್ಬದ ಸಂದರ್ಭದಲ್ಲಿ ವ್ಯಾಪಾರ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಬೇಕೆಂಬ ವರ್ತಕರ ಆತಂಕದ ನಡುವೆಯೇ, ಪ್ರತಿಭಟನೆಗೆ ಸಂಬಂಧಿಸಿದಂತೆ ತುರ್ತು ನಿರ್ಬಂಧಗಳನ್ನು ವಿಧಿಸಲು ನ್ಯಾಯಾಲಯ ನಿರಾಕರಿಸಿರುವುದು ಗಮನ ಸೆಳೆದಿದೆ.
ಬಿಗ್ ನ್ಯೂಸ್
Puttur-ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ
ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್ಟೇಕ್ ಮಾಡುವ ಭರದಲ್ಲಿ ಈ ದುರಂತ ನಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.
ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್ಟೇಕ್ ಮಾಡುವ ಭರದಲ್ಲಿ ಈ ದುರಂತ ನಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಯು ಮುಂಭಾಗದಲ್ಲಿದ್ದ ಕಾರನ್ನು ಓವರ್ಟೇಕ್ ಮಾಡಲು ಯತ್ನಿಸಿದಾಗ ಈ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಲಾರಿಯು ಹೆದ್ದಾರಿಗೆ ಅಡ್ಡಲಾಗಿ ಮಗುಚಿಬಿದ್ದಿದೆ.
ಅಪಘಾತದಿಂದಾಗಿ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ಸಾರ್ವಜನಿಕರು ಹಾಗೂ ಹಾದಿಹೋಕರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದಾರೆ.
ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ತಬ್ಧಗೊಂಡು, ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೇನ್ ಬಳಸಿ ರಸ್ತೆಯಲ್ಲಿದ್ದ ಲಾರಿಯನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಸುಗಮಗೊಳಿಸಿದರು. ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅಂತರ ರಾಜ್ಯ
Supreme Court-ಇಸ್ಲಾಂಗೆ ಮತಾಂತರಗೊಂಡ ಬಳಿಕ ಹಿಂದುಳಿದ ವರ್ಗಗಳ ಮೀಸಲಾತಿಯಿಲ್ಲ; ಸುಪ್ರೀಂಕೋರ್ಟ್
ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು, ಮತಾಂತರಕ್ಕೂ ಮುನ್ನ ಹೊಂದಿದ್ದ ಸಾಮಾಜಿಕ ವರ್ಗದ ಆಧಾರದಲ್ಲಿ ಹಿಂದುಳಿದ ವರ್ಗಗಳ (BC) ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬಹುದೇ ಎಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.
ನವದೆಹಲಿ: ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು, ಮತಾಂತರಕ್ಕೂ ಮುನ್ನ ಹೊಂದಿದ್ದ ಸಾಮಾಜಿಕ ವರ್ಗದ ಆಧಾರದಲ್ಲಿ ಹಿಂದುಳಿದ ವರ್ಗಗಳ (BC) ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬಹುದೇ ಎಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಶ್ರೀ ಚಂದ್ರಶೇಖರ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿದೆ. ಮತಾಂತರದ ನಂತರ ವ್ಯಕ್ತಿಯ ಸಾಮಾಜಿಕ ವರ್ಗದ ಸ್ಥಾನಮಾನ ಮತ್ತು ಮೀಸಲಾತಿ ಅರ್ಹತೆಯನ್ನು ಅನ್ವಯಿಸುವ ಕುರಿತು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.
ಮೀಸಲಾತಿ ಅರ್ಹತೆ ಕುರಿತು ನ್ಯಾಯಾಲಯದ ಅಭಿಪ್ರಾಯ
ಮತಾಂತರ ಪೂರ್ವದ ಜಾತಿ ಅಥವಾ ಸಮುದಾಯದ ಸ್ಥಿತಿಯನ್ನು, ಮತಾಂತರದ ನಂತರದ ವ್ಯವಸ್ಥೆಯಲ್ಲಿ ಅಧಿಸೂಚಿತ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿಸಲು ಸಾಧ್ಯವಿಲ್ಲ.
ಹಿಂದುಳಿದ ವರ್ಗದಿಂದ, ಇಸ್ಲಾಂ ಅಥವಾ ಹಿಂದೂಯೇತರ ಜಾತಿಗೆ ಕನ್ವರ್ಟ್ ಆಗಲು ಇದ್ದಂತಹ ಪರಿಸ್ಥಿತಿಯು ಏನೇ ಇದ್ದರೂ, ಮತಾಂತರದ ನಂತರ ಬೇರೊಂದು ಹಿಂದುಳಿದ ವರ್ಗದ ಸದಸ್ಯತ್ವನ್ನು ನೀಡಲು ಕಾನೂನಾತ್ಮಕವಾಗಿ ಸಾಧ್ಯವಿಲ್ಲ.
ಸಂವಿಧಾನದ ಪರಿಶಿಷ್ಟ ಜಾತಿಗಳ ಆದೇಶದ ಪ್ರಕಾರ, ಹಿಂದೂ, ಸಿಖ್ ಅಥವಾ ಬೌದ್ದ ಧರ್ಮವನ್ನು ಹೊರತು ಪಡಿಸಿ ಇತರ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ (SC) ಸದಸ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ.
ಈ ಮೂರು ಜಾತಿಯನ್ನು ಹೊರತು ಪಡಿಸಿ, ಇತರ ಧರ್ಮಕ್ಕೆ ಮತಾಂತರಗೊಂಡ ತಕ್ಷಣವೇ ಆ ವ್ಯಕ್ತಿಯ ಪರಿಶಿಷ್ಠ ಜಾತಿಯ ಸದಸ್ಯತ್ವಕ್ಕೆ ಆಧರಿಸಿ ಇರುವ ಮೀಸಲಾತಿ ವಿಧಿ 16(4) ಮತ್ತು ಸೌಲಭ್ಯಗಳನ್ನು ಕಳೆದುಕೊಳ್ಳುತ್ತಾನೆ.
ಒಂದು ವೇಳೆ, ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡು, ನಂತರ ಮತ್ತೆ ಹಿಂದೂ ಧರ್ಮಕ್ಕೆ ಕನ್ವರ್ಟ್ ಆದರೆ, ಮರುಮತಾಂತರದ ನಂತರ ಮೀಸಲಾತಿ ಆಟೊಮೆಟಿಕ್ ಆಗಿ ಬರುವುದಿಲ್ಲ. ಮರುಮತಾಂತರ ನಂತರದ ಆತನ ಮೂಲ ಜಾತಿಯ ದಾಖಲೆಗಳು ಬದಲಾಗಿರುವುದು ಮುಖ್ಯ.
ಇಸ್ಲಾಂ, ಕ್ರಿಶ್ಚಿಯನ್ ಅಥವಾ ಇತರ ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡ ನಂತರ, ಶಾಸನಬದ್ದ ಸೌಲಭ್ಯ, ರಕ್ಷಣೆ, ಮೀಸಲಾತಿ, ಅರ್ಹತೆಯನ್ನು, ಕನ್ವರ್ಟ್ ಆಗುವ ಮುನ್ನ ಇದ್ದ ಸಾಂವಿಧಾನಿಕ ಆಧಾರದ ಮೇಲೆ ಪಡೆಯಲು ಸಾಧ್ಯವಿಲ್ಲ.
ಪ್ರಕರಣದ ಹಿನ್ನೆಲೆ ಏನು?
ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು ಅಥವಾ ಪರಿಶಿಷ್ಟ ಜಾತಿಗಳಿಗೆ ಸೇರಿದ ವ್ಯಕ್ತಿಗಳು ಇಸ್ಲಾಂ ಅಥವಾ ಇತರ ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡ ಬಳಿಕವೂ ಹಿಂದುಳಿದ ವರ್ಗದ (ಮುಸ್ಲಿಂ) ಮೀಸಲಾತಿ ಪಡೆಯಲು ಅವಕಾಶ ನೀಡುವ ಸಂಬಂಧ ತಮಿಳುನಾಡು ಸರ್ಕಾರ 2024ರಲ್ಲಿ ಸರ್ಕಾರಿ ಆದೇಶ ಹೊರಡಿಸಿತ್ತು ಎನ್ನಲಾಗಿದೆ.
ಈ ಆದೇಶವನ್ನು ಪ್ರಶ್ನಿಸಲಾಗಿತ್ತು. ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಸರ್ಕಾರದ ಆದೇಶವನ್ನು ಅಸಂವಿಧಾನಿಕ ಎಂದು ಪರಿಗಣಿಸಿತ್ತು. ಈ ಆದೇಶದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ ಎಂದು ವರದಿಯಾಗಿದೆ.
ತಮಿಳುನಾಡಿನ ಮುಸ್ಲಿಂ ಹಿಂದುಳಿದ ವರ್ಗಗಳ ಪಟ್ಟಿ
1993ರ ಸರ್ಕಾರಿ ಆದೇಶದಡಿ ಮುಸ್ಲಿಂ ಸಮುದಾಯದ ಏಳು ವಿಭಾಗಗಳನ್ನು ಗುರುತಿಸಲಾಗಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅವುಗಳೆಂದರೆ ಅನ್ಸಾರ್, ಡೆಕ್ಕನಿ ಮುಸ್ಲಿಮರು, ದುಬೇಕುಲ, ಲಬ್ಬೈ, ಮಾಪಿಳೈ, ಶೇಕ್ ಮತ್ತು ಸೈಯದ್.
ಮತಾಂತರದ ಬಳಿಕ ವ್ಯಕ್ತಿಯ ಸಾಮಾಜಿಕ ವರ್ಗದ ಗುರುತು ಮತ್ತು ಮೀಸಲಾತಿ ಅರ್ಹತೆಯನ್ನು ಹೇಗೆ ನಿರ್ಧರಿಸಬೇಕು ಎಂಬ ವಿಚಾರದಲ್ಲಿ ಈ ಪ್ರಕರಣ ಮಹತ್ವ ಪಡೆದಿದೆ.
-
ಬಿಗ್ ನ್ಯೂಸ್12 hours agoPuttur-ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ
-
ನಿಧನ ವಾರ್ತೆ15 hours agoಪುತ್ತೂರು: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಶಿವಪ್ರಸಾದ್ ಜಿ.ಎಸ್. ನಿಧನ
-
ಸ್ಥಳೀಯ10 hours agoKadaba-ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಕಡಬ ನಿವಾಸಿ ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹50 ಸಾವಿರ ದಂಡ..!
-
ಅಂತರ ರಾಜ್ಯ15 hours agoBJP minister-ಪತಿ ಎರಡು ಮದುವೆಯಾಗಿದ್ದರೆಂದು ದೂರು ದಾಖಲಿಸಿದ ಬಿಜೆಪಿ ಸಚಿವೆ..!
-
ಅಂತರ ರಾಜ್ಯ14 hours agoRamleela-ನವದೆಹಲಿ: ರಾಮಲೀಲಾದಲ್ಲಿ ಈ ಬಾರಿ ಅಸುರರ ಜತೆಗೆ ʻಜಿರಳೆʼಯೂ ದಹನ..!
-
ಕಾರ್ಯಕ್ರಮಗಳು14 hours agoMangalore-ಮಂಗಳೂರಿಗೆ ಲಗ್ಗೆ ಇಟ್ಟ ಅಲರ್ಜಿ ಪರೀಕ್ಷೆಯ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ರಾಜ್ಯದ ಪ್ರತಿಷ್ಠಿತ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ : ಅ.19ರಂದು 11ನೇ ಶಾಖೆ ಉದ್ಘಾಟನೆ
-
ಅಪರಾಧ14 hours agoUdupi-ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಸಹಚರನ ಬಂಧನ
-
ಅಂತರ ರಾಜ್ಯ14 hours agoTruecaller service-ಟೆಲಿಕಾಂ ಸಂಸ್ಥೆಗಳೇ ಒದಗಿಸಲಿವೆ ಟ್ರೂ ಕಾಲರ್ ಸೇವೆ; ಅಪರಿಚಿತ ನಂಬರ್ನಿಂದ ಕರೆ ಬಂದರೂ ಹೆಸರು ಪ್ರದರ್ಶನ ಕಡ್ಡಾಯ?



















