Connect with us

Uncategorized

“ನಿಮ್ಮ ಠಾಣಾ ವ್ಯಾಪ್ತಿಯಲ್ಲಿ ಏನೇನೂ ಮಾಫಿಯಾ ನಡೆಯುತ್ತದೆ ಎಲ್ಲಾ ಪಿನ್ ಟು ಪಿನ್ ಡಿಟೈಲ್ ನನ್ನಲ್ಲಿದೆ” ಎಂದ ಖಡಕ್ ಐಪಿಎಸ್ ಅಧಿಕಾರಿ ದೀಪನ್ ಎರಡೇ ದಿನದಲ್ಲಿ ಮಂಗಳೂರಿನಿಂದ ವರ್ಗ

Published

on

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನಲ್ಲಿ ರಾಜಕಾರಣ ಹಾಗೂ ಮರಳು ಮಾಫಿಯಾ ಎಷ್ಟರ ಒಗ್ಗಟ್ಟಾಗಿ ಪೊಲೀಸ್ ಇಲಾಖೆಯನ್ನೇ ನಿಯಂತ್ರಿಸುತ್ತಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಮಂಗಳೂರು ನಗರ ದಕ್ಷಿಣ ಉಪ ವಿಭಾಗದ ಎಸಿಪಿ ರಂಜಿತ್ ಬಂಡಾರು ವರ್ಗಾವಣೆಗೊಂಡ ಜಾಗಕ್ಕೆ ಗುಲ್ಬರ್ಗ ನಗರ ಖಡಕ್ ಎಎಸ್ಪಿ ಆಗಿದ್ದ ಐಪಿಎಸ್ ಅಧಿಕಾರಿ ದೀಪನ್ ಎಂ.ಎನ್. ಅವರನ್ನು ನಿಯೋಜನೆ ಮಾಡಲಾಗಿತ್ತು.ಜನವರಿ 1ರಂದು ಕರ್ತವ್ಯಕ್ಕೆ ಹಾಜರಾಗಿದ್ದ ದೀಪನ್, ಒಂದು ಮೀಟಿಂಗ್ ಮಾಡಿದ ತಕ್ಷಣವೇ ಎರಡೇ ದಿನದಲ್ಲಿ ಎತ್ತಂಗಡಿ ಆಗಿದ್ದಾರೆ.

Ad Widget

Ad Widget

Ad Widget

Ad Widget

ಐಐಎಂ ಅಹಮದಾಬಾದ್ ನ ವಿದ್ಯಾರ್ಥಿ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ವಿಶೇಷ ಶ್ರೇಣಿಯಲ್ಲಿ ಪಾಸದ ಐಪಿಎಸ್ ದೀಪನ್ ಮಂಗಳೂರು ನಗರ ದಕ್ಷಿಣ ಎಸಿಪಿ ಹುದ್ದೆಗೆ ಕರ್ತವ್ಯಕ್ಕೆ ಹಾಜರಾಗುವ ಮೊದಲೇ ಇಲ್ಲಿನ ಮಾಫಿಯಾಗಳ ಬಗ್ಗೆ ತಿಳಿದುಕೊಂಡಿದ್ದರು.ಗುಲ್ಬರ್ಗದಲ್ಲಿ ದಕ್ಷ ಅಧಿಕಾರಿ ಎಂದು ಹೆಸರು ಮಾಡಿದ್ದ ದೀಪನ್, ದಕ್ಷಿಣ ಉಪವಿಭಾಗಕ್ಕೆ ಬರುವ ಉಳ್ಳಾಲ, ಕೊಣಾಜೆ, ಕಂಕನಾಡಿ ಗ್ರಾಮಾಂತರ ಠಾಣೆಗಳ ವ್ಯಾಪ್ತಿಯಲ್ಲಿ ನಡೆಯುವ ಮರಳು ಮಾಫಿಯಾ, ಬಾಕ್ಸೈಟ್ ಮಣ್ಣು ಮಾಫಿಯಾ ಇನ್ನಿತರ ಅಕ್ರಮ ದಂಧೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು.

Ad Widget

Ad Widget alt="Ad Widget"/>

Ad Widget

ನಾಲ್ಕು ಠಾಣೆಗಳಿಗೆ ಮೇಲಧಿಕಾರಿಯಾಗಿ ನಿಯೋಜನೆಗೊಂಡಿದ್ದ ಎಸಿಪಿ ದೀಪನ್, ಕರ್ತವ್ಯಕ್ಕೆ ಹಾಜರಾದ ದಿನವೇ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ಸ್ ಪೆಕ್ಟರ್ ಗಳನ್ನು ಕರೆದು ತಮ್ಮ ಕಚೇರಿಯಲ್ಲಿ ಮೀಟಿಂಗ್ ಮಾಡಿದ್ದರು. ನಿಮ್ಮ ಠಾಣೆಗಳ ವ್ಯಾಪ್ತಿಯಲ್ಲಿ ಏನೆಲ್ಲಾ ಮಾಫಿಯಾಗಳು ನಡೆಯುತ್ತವೆ ಅನ್ನೋದ್ರ ಪಿನ್ ಟು ಪಿನ್ ಡಿಟೈಲ್ಸ್ ನನ್ನಲ್ಲಿವೆ. ಉಳ್ಳಾಲದ ಸಮುದ್ರ ದಂಡೆಯಿಂದ ಹಗಲು- ರಾತ್ರಿ ಮರಳನ್ನು ಎತ್ತಿ ಕೇರಳಕ್ಕೆ ಸಾಗಿಸುವುದು, ಅದಕ್ಕೆ ಕೊಣಾಜೆ, ಉಳ್ಳಾಲ ಪೊಲೀಸರು ಸಾಥ್ ಕೊಡುವುದು, ತಲಪಾಡಿ ಗಡಿಯಲ್ಲಿ ಕೇರಳಕ್ಕೆ ಹೋಗುವುದು ಇತ್ಯಾದಿ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ.

Ad Widget

Ad Widget <> Ad Widget

ಉಳ್ಳಾಲದ ಎಸ್ಐ ಪ್ರದೀಪ್ ಅವರನ್ನು ಹೆಸರೆತ್ತಿ ಈ ಬಗ್ಗೆ ಪ್ರಶ್ನೆ ಮಾಡಿದ್ದಾರಂತೆ. ಏನೇ ಅಕ್ರಮ, ಮಾಫಿಯಾ ಇದ್ದರೂ ನನ್ನ ಉಸ್ತುವಾರಿ ಇದ್ದ ಮೇಲೆ ನಡೆಯಲ್ಲ. ಮರಳು ಹೇಗೆ ಹೋಗುತ್ತೆ ನೋಡ್ತೀನಿ.. ಕೂಡಲೇ ಏನೇನು ಪೆಂಡಿಂಗ್ ಕೇಸ್ ಗಳಿವೆ, ಎಲ್ಲವನ್ನೂ ಚುಕ್ತಾ ಮಾಡಿ ಎರಡು ದಿನದಲ್ಲಿ ವರದಿ ನೀಡಬೇಕು ಎಂದು ವಾರ್ನ್ ಮಾಡಿದ್ದರು. ಮೀಟಿಂಗ್ ಮುಗಿಸಿದ ದಿನವೇ ಐಪಿಎಸ್ ಅಧಿಕಾರಿ ದೀಪನ್ ಗೆ ಮೇಲಿನಿಂದ ಸೂಚನೆ ಬಂದಿತ್ತು.

ಆದರೆ ಮೇಲಧಿಕಾರಿಗಳ ವಾರ್ನ್ ಬಗ್ಗೆ ನಿರ್ಲಕ್ಷ್ಯ ತೋರಿದ ದೀಪನ್ ಅವರನ್ನು ಎರಡೇ ದಿನದಲ್ಲಿ ಮಂಗಳೂರಿನಿಂದ ಮತ್ತೆ ಗುಲ್ಬರ್ಗಕ್ಕೆ ಎತ್ತಂಗಡಿ ಮಾಡಲಾಗಿದೆ. ಜ.5ರಂದು ಬಂದಿರುವ ಆದೇಶದಲ್ಲಿ ಈ ಹಿಂದೆ ಇದ್ದ ಗುಲ್ಬರ್ಗ ನಗರ ಎಎಸ್ಪಿ ಹುದ್ದೆಯಲ್ಲಿ ಮುಂದುವರಿಯಲು ಸೂಚನೆ ನೀಡಲಾಗಿದೆ. ತನ್ನ ಕೈಕೆಳಗಿನ ಇನ್ ಸ್ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಗಳಿಗೆ ವಾರ್ನ್ ಮಾಡಿದರೆ, ಇಲ್ಲಿನ ಅಧಿಕಾರಿಗಳು ಮಾಫಿಯಾಗಳ ಕಿವಿಗೆ ತಲುಪಿಸಿ ಮೇಲಧಿಕಾರಿಯಾಗಿ ಬಂದ ಒಬ್ಬ ದಕ್ಷ ಐಪಿಎಸ್ ಅಧಿಕಾರಿಯನ್ನು ಬಂದ ಎರಡೇ ದಿವಸದಲ್ಲಿ ವರ್ಗ ಮಾಡಿಸುತ್ತಾರೆ ಅಂದರೆ ಇಲ್ಲಿನ ರಾಜಕಾರಣಿಗಳ ಕರಾಮತ್ತು ಹೇಗಿದೆ ನೋಡಿ.

Ad Widget

Ad Widget

ಉಳ್ಳಾಲ, ಕೊಣಾಜೆ, ಮಂಗಳೂರು ಗ್ರಾಮಾಂತರ ಠಾಣೆಯ ಭಾಗದಲ್ಲಿ ಬಿಜೆಪಿ- ಕಾಂಗ್ರೆಸ್ ಅನ್ನುವ ಭೇದ ಇಲ್ಲದೆ ಎಲ್ಲರೂ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾರೆ. ಬಿಜೆಪಿಯ ಪುಢಾರಿಗಳೇ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಕೊಣಾಜೆಯಲ್ಲಿ ಮಣ್ಣನ್ನು ಎತ್ತಿ ತಮಿಳುನಾಡಿಗೆ ಅಕ್ರಮವಾಗಿ ಒಯ್ಯುವ ಮಾಫಿಯಾ ಸಕ್ರಿಯವಾಗಿದೆ. ಉಳ್ಳಾಲದಲ್ಲಿ ಎಂಎಲ್ಸಿಯೊಬ್ಬರಿಗೆ ಸೇರಿದ ಯಾರ್ಡ್ ನಿಂದಲೂ ಮರಳು ಹೋಗುತ್ತಿದ್ದುದು ಇತ್ತೀಚೆಗೆ ಪತ್ತೆಯಾಗಿತ್ತು.

ಇದೆಲ್ಲದರ ಬಗ್ಗೆ ತಿಳಿದುಕೊಂಡು ಒಬ್ಬ ಐಪಿಎಸ್ ಅಧಿಕಾರಿ ಬರುತ್ತಾನೆ ಅಂದರೆ, ತಕ್ಕಮಟ್ಟಿಗೆ ಸಾಚಾತನ ಉಳಿಸಿಕೊಂಡಿರುವ ಅಧಿಕಾರಿ ಎನ್ನಬೇಕು. ಆದರೆ, ನಮ್ಮ ವ್ಯವಸ್ಥೆ ಹೇಗಿದೆ ಅಂದರೆ ಈ ಮಾಫಿಯಾಗಳ ಜೊತೆಗೆ ಶಾಮೀಲಾಗಿ ಏಗುತ್ತಾ ಹೋದರೆ ಮಾತ್ರ ಉಳಿಯಬಹುದು. ಪ್ರಶ್ನೆ ಮಾಡಲು ಹೋಗುವ ವ್ಯಕ್ತಿಯನ್ನು ಒಂದೇ ದಿನದಲ್ಲಿ ಎತ್ತಂಗಡಿ ಮಾಡಿಸುವಷ್ಟು ಇಲ್ಲಿನ ಮಾಫಿಯಾಗಳು ಪ್ರಬಲವಾಗಿವೆ ಅನ್ನೋದು ಈ ಪ್ರಕರಣದಿಂದ ವೇದ್ಯವಾಗುತ್ತದೆ.ಅಂದಹಾಗೆ, ದೀಪನ್ ಅವರನ್ನು ಎರಡು ದಿನಗಳಲ್ಲಿ ಎತ್ತಂಗಡಿ ಮಾಡಿದ ಬಳಿಕ ಖಾಲಿಯಾದ ಎಸಿಪಿ ಹುದ್ದೆಗೆ ಡಿಸಿಆರ್ ಬಿಯಲ್ಲಿದ್ದ ದಿನಕರ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಡಿವೈಎಸ್ಪಿ ದರ್ಜೆಯ ದಿನಕರ ಶೆಟ್ಟಿ ಹುದ್ದೆಗಾಗಿ ಕಾಯುತ್ತಿದ್ದರು. ದಕ್ಷಿಣ ಎಸಿಪಿ ಹುದ್ದೆಯ ಮೇಲೆ ಕಣ್ಣನ್ನೂ ನೆಟ್ಟಿದ್ದರು. ಇದೀಗ ದೀಪನ್ ಐಪಿಎಸ್ ಎತ್ತಂಗಡಿಯಾಗಿದ್ದು ದಿನಕರ ಶೆಟ್ಟಿಗೆ ಹೊಸ ಹುದ್ದೆಯನ್ನು ತೋರಿಸಿದಂತಾಗಿದೆ.

Ad Widget
Click to comment

Leave a Reply

Uncategorized

ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

Published

on

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ

Ad Widget

Ad Widget alt="Ad Widget"/>

Ad Widget

ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Ad Widget

Ad Widget <> Ad Widget

ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!

ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.

Ad Widget

Ad Widget

ದೂರು ದಾಖಲಿಸಲು ಹಿಂದೇಟು?

ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ

ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.

ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.

Ad Widget
Continue Reading

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!