ಉಡುಪಿ
Udupi-Chikkamagaluru-ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ। ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗಿಂತ ಅವರ ಪತ್ನಿ ಶ್ರೀಮಂತೆ
ಉಡುಪಿ, ಎ.3: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಒಟ್ಟು ಸುಮಾರು 1.11 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ, ಸ್ಥಿರ ಹಾಗೂ ಚರ ಆಸ್ತಿಗಳನ್ನು ಹೊಂದಿರುವುದಾಗಿ ಚುನಾವಣಾಧಿಕಾರಿಗೆ ಸಲ್ಲಿಸಿರುವ ಅಫಿದಾವತ್‌ನಲ್ಲಿ ತಿಳಿಸಿದ್ದಾರೆ.
ಆದರೆ ಕೋಟ ಅವರು ಬ್ಯಾಂಕಿನಲ್ಲಿ 40.64 ಲಕ್ಷ ರೂ.ಗಳ ಸಾಲವನ್ನು ತೋರಿಸಿದ್ದಾರೆ. ಕೋಟರ ಪತ್ನಿ ಶಾಂತ ಅವರ ಹೆಸರಿನಲ್ಲಿ ಒಟ್ಟು 1.73 ಕೋಟಿ ರೂ. ಸಂಪತ್ತಿದ್ದರೂ, ಅವರ ಹೆಸರಿನಲ್ಲೂ 35.43 ಲಕ್ಷ ರೂ. ಸಾಲವನ್ನೂ ತೋರಿಸಲಾಗಿದೆ. ಮಗ ಶಶಿಧರ ಬಳಿ 47.59 ಲಕ್ಷ ರೂ., ಮಗಳು ಸ್ವಾತಿ ಬಳಿ 3.70 ಲಕ್ಷ ರೂ. ಹಾಗೂ ಮಗಳು ಶೃತಿ ಬಳಿ 66,466ರೂ. ಸಂಪತ್ತಿದೆ.
ಅಫಿದಾವತ್‌ನಲ್ಲಿ ಕೋಟ ತಿಳಿಸಿದಂತೆ ಅವರ ಬಳಿ 90,000 ರೂ., ಪತ್ನಿ ಶಾಂತ ಬಳಿ 20,000ರೂ., ಮಗಳು ಸ್ವಾತಿ ಬಳಿ 10ಸಾವಿರ ರೂ., ಮಗ ಶಶಿಧರ ಬಳಿ 25 ಸಾವಿರ ರೂ. ನಗದು ಹಣ ಬ್ಯಾಂಕಿನಲ್ಲಿದೆ. ಮಗಳು ಶೃತಿ ಅವರಲ್ಲಿ ಯಾವುದೇ ಹಣವಿಲ್ಲ. ಕೋಟ ಅವರಲ್ಲಿ ಮಾರುತಿ ಅಲ್ಲೋ ಹಾಗೂ 22 ಲಕ್ಷ ರೂ. ಮೌಲ್ಯದ ಇನ್ನೋವಾ ಕಾರಿದೆ. ಮಗ ಶಶಿಧರನ ಹೆಸರಿನಲ್ಲಿ 16.5 ಲಕ್ಷ ರೂ. ಮೌಲ್ಯದ ಹೊಂಡಾ ಸಿಟಿ ಕಾರಿದೆ.
ಕೋಟ ಅವರ ಹೆಸರಿನಲ್ಲಿ ಕೋಟತಟ್ಟು ಗ್ರಾಮದಲ್ಲಿ 13 ಸೆನ್ಸ್ ಹಾಗೂ ಪತ್ನಿಯ ಹೆಸರಿನಲ್ಲಿ 56 ಸೆನ್ಸ್ ಜಾಗವಿದೆ. ಇದನ್ನವರು 20110 ನವೆಂಬರ್ ತಿಂಗಳಲ್ಲಿ ಖರೀದಿಸಿದ್ದರು. ಅದರ ಮೌಲ್ಯ ಈಗ ಕ್ರಮವಾಗಿ 8 ಲಕ್ಷ ರೂ. ಹಾಗೂ 55ಲಕ್ಷ ರೂ.ಗಳಾಗಿದೆ.
ಕೋಟ ಶ್ರೀನಿವಾಸ ಪೂಜಾರಿ ಅವರಲ್ಲಿ 63,850 ರೂ.ಮೌಲ್ಯದ 10 ಗ್ರಾಂ ತೂಕದ ಚಿನ್ನದ ಉಂಗುರವಿದೆ. ಪತ್ನಿ ಬಳಿ 9.57ಲಕ್ಷ ರೂ.ಮೌಲ್ಯದ 150 ಚಿನ್ನಾಭರಣವಿದ್ದರೆ, ಮಗಳು ಸ್ವಾತಿ ಬಳಿ 3.19ಲಕ್ಷ ರೂ.ಮೌಲ್ಯದ ಚಿನ್ನಾಭರಣ, ಮಗ ಶಶಿಧರ ಹಾಗೂ ಪುತ್ರಿ ಶೃತಿ ಬಳಿ ತಲಾ 10ಗ್ರಾಂ (63,850ರೂ.) ತೂಕದ ಚಿನ್ನಾಭರಣಗಳಿವೆ.
ಕೋಟ ಅವರಿಗೆ ಬೆಂಗಳೂರಿನ ಬನಶಂಕರಿ ಬಡಾವಣೆಯಲ್ಲಿ ಸರಕಾರ ನೀಡಿದ 50+8 ಅಡಿ ವಿಸ್ತೀರ್ಣದ ಜಾಗವಿದ್ದು, ಈಗ ಅದರ ಮೌಲ್ಯ 40 ಲಕ್ಷ ರೂ. ಪತ್ನಿ ಶಾಂತ ಅವರ ಹೆಸರಿನಲ್ಲಿ ಗಿಳಿಯಾರುಗ್ರಾಮದಲ್ಲಿ 2019ರಲ್ಲಿ ಖರೀದಿಸಿದ 13.5 ಸೆನ್ಸ್ ಜಾಗವೂ ಇದೆ. ಈಗ ಅದರ ಮೌಲ್ಯ ಐದು ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಗಿಳಿಯಾರು ಜಾಗದಲ್ಲಿ ಕಟ್ಟಡ ನಿರ್ಮಿಸಿದ್ದು ಅದರ ಅಂದಾಜು ಮೌಲ್ಯ 97.50 ಲಕ್ಷ ರೂ. ಎಂದು ಅಫಿದಾತ್‌ನಲ್ಲಿ ತಿಳಿಸಲಾಗಿದೆ. ಕೋಟ ಅವರಿಗೆ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕಿನಲ್ಲಿ 40.64 ಲಕ್ಷ ರೂ. ಹಾಗೂ ಪತ್ನಿ ಶಾಂತರಿಗೆ ಬ್ರಹ್ಮಾವರದ ಸ್ಟೇಟ್‌ಬ್ಯಾಂಕಿನಲ್ಲಿ 35.43 ಲಕ್ಷ ಸಾಲವಿದೆ. ಮಗ ಶಶಿಧರರ ಹೆಸರಿನಲ್ಲೂ ವಿವಿಧ ಬ್ಯಾಂಕುಗಳಲ್ಲಿ 28.35 ಲಕ್ಷ ರೂ. ಸಾಲವಿದೆ.
ಅಪರಾಧ
Udupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ, ಅ.8: ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೊಲೆಯಾದ ಉದ್ಯಮಿ ಡೇವಿಡ್ ಡಿಸೋಜಾ ಅವರ ಪುತ್ರನಿಗೆ ವಾಟ್ಸಾಪ್ ಕರೆ ಮಾಡಿರುವ ಅಪರಿಚಿತ ವ್ಯಕ್ತಿಯೊಬ್ಬ, ₹5 ಕೋಟಿ ನೀಡುವಂತೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
“ನಿನ್ನ ತಂದೆಯಿಂದ ನನ್ನ ಸಹೋದರನಿಗೆ ಸಾಕಷ್ಟು ನಷ್ಟವಾಗಿತ್ತು. ಆ ಕಾರಣಕ್ಕೆ ನಾನೇ ಕೊಲೆ ಮಾಡಿಸಿದ್ದೆ. ನಮಗಾಗಿರುವ ನಷ್ಟವನ್ನು ತುಂಬಿಕೊಡಲು ₹5 ಕೋಟಿ ನೀಡಬೇಕು” ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಬ್ಬ ಉದ್ಯಮಿ ಹಾಗೂ ಖಾಸಗಿ ಸಂಸ್ಥೆಯ ವ್ಯಕ್ತಿಗೂ ಹೇಮಂತ್ ಪೂಜಾರಿ ಹೆಸರಿನಲ್ಲಿ ವಾಟ್ಸಾಪ್ ಕರೆಗಳು ಬಂದಿದ್ದು, ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿವೆ.
25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಆರೋಪಿ
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಹೇಮಂತ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಆತನ ಸಹೋದರ ಹಾಗೂ ಇತರ ಸಹಚರರ ನೆರವಿನಿಂದ ಹೊರರಾಜ್ಯದ ಶೂಟರ್‌ಗಳನ್ನು ಕರೆಸಿ ಕೊಲೆ ಮಾಡಿಸಲಾಗಿದೆ ಎಂಬ ಆರೋಪ ಪ್ರಕರಣದಲ್ಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಪೂಜಾರಿಯನ್ನು ಹೊರತುಪಡಿಸಿ ಉಳಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಕಳೆದ 25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಹೇಮಂತ್ ಪೂಜಾರಿ ಬಗ್ಗೆ ಇದುವರೆಗೂ ಸ್ಪಷ್ಟ ಸುಳಿವು ಲಭ್ಯವಾಗಿಲ್ಲ. ಈ ನಡುವೆ ಆತನ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬಂದಿರುವುದು ಪೊಲೀಸರ ಗಮನ ಸೆಳೆದಿದೆ.
ಕರೆ ಮಾಡುತ್ತಿರುವವರು ಯಾರು?
ಹೇಮಂತ್ ಪೂಜಾರಿಯೇ ಕರೆ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಬೇರೆಯವರು ಬೆದರಿಕೆ ಹಾಕುತ್ತಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕರೆಗಳ ಮೂಲ, ಹಣದ ಬೇಡಿಕೆಯ ಹಿಂದಿನ ಉದ್ದೇಶ ಹಾಗೂ ಪ್ರಕರಣಗಳ ನಡುವಿನ ಸಂಬಂಧದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Mangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಉಡುಪಿ: ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
2011ರ ಡಿಸೆಂಬರ್ 3ರಂದು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜಾರು ಗ್ರಾಮದ ಉಡುಪಿ ಜಿಲ್ಲಾ ಕಾರಾಗೃಹದ ಮೊದಲ ಬ್ಯಾರಕ್ ಎದುರಿನ ವರಾಂಡದಲ್ಲಿ ಘಟನೆ ನಡೆದಿತ್ತು. ಜೈಲ್ ವಾರ್ಡನ್ ಅವರು ಪ್ರಭಾರ ವಹಿಸಿಕೊಳ್ಳುವ ಸಲುವಾಗಿ ಬಂಧಿಗಳ ಲೆಕ್ಕ ತೆಗೆದುಕೊಳ್ಳಲು ತಮ್ಮ ತಮ್ಮ ಬ್ಯಾರಕ್‌ಗಳಿಗೆ ತೆರಳುವಂತೆ ಸೂಚಿಸಿದ್ದರು. ಈ ವೇಳೆ ಅಡುಗೆ ಕೋಣೆಯ ಎದುರುಗಡೆ ಇದ್ದ ವಿಚಾರಣಾ ಬಂಧಿ ಸಫಾನ್ ಹುಸೈನ್ ಅಲಿಯಾಸ್ ರಜಾಕ್ ಎಂಬಾತ ಜೈಲ್ ವಾರ್ಡನ್ ಅವರನ್ನು ಉದ್ದೇಶಿಸಿ ಅವಾಚ್ಯವಾಗಿ ನಿಂದಿಸಿ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ್ದ.
ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು 2012ರ ಜನವರಿ 10ರಂದು ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ನ್ಯಾಯಾಲಯ ಆರೋಪಿಗೆ 2013ರ ಮೇ 29ರಂದು ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣೆಗೆ ಹಾಜರಾಗದೆ ಆರೋಪಿ ತಲೆಮರೆಸಿಕೊಂಡಿದ್ದರಿಂದ ಪ್ರಕರಣವು 2022ರ ಜೂನ್ 24ರಂದು ಎಲ್‌ಪಿಸಿ ನಂ.02/2022ರಂತೆ ದಾಖಲಾಗಿತ್ತು.
ತಲೆಮರೆಸಿಕೊಂಡಿದ್ದ ಸಫಾನ್ ಹುಸೈನ್‌ನನ್ನು 2026ರ ಏಪ್ರಿಲ್ 23ರಂದು ಬಾಡಿ ವಾರಂಟ್ ಮೂಲಕ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆರೋಪಿಗೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40,000 ದಂಡ ವಿಧಿಸಿ ತೀರ್ಪು ನೀಡಿದೆ
ಉಡುಪಿ
Malpe-ಮಲ್ಪೆ: ದಸರಾ ರಜೆಗೂ ಮುನ್ನವೇ ಬೀಚ್‌ನಲ್ಲಿ ಪ್ರವಾಸಿಗರ ಮಹಾಪೂರ : ಕಿಮೀ ಉದ್ದ ಟ್ರಾಫಿಕ್ ಜಾಮ್ – ಪಾರ್ಕಿಂಗ್ ಗಿಲ್ಲ ಸ್ಥಳ..!
ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಮಲ್ಪೆ: ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಬಿಸಿಲಿನ ತೀವ್ರತೆ ಹೆಚ್ಚಿದ್ದರೂ ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಭಾಗಗಳಿಂದ ಕುಟುಂಬ ಸಮೇತರಾಗಿ ಪ್ರವಾಸಿಗರು ಮಲ್ಪೆಗೆ ಆಗಮಿಸುತ್ತಿದ್ದಾರೆ. ಬೀಚ್‌ನ ಮುಖ್ಯ ಭಾಗದಿಂದ ಸೀವಾಕ್‌ವರೆಗೂ ಕಡಲತೀರದಲ್ಲಿ ಜನಜಂಗುಳಿ ಕಂಡುಬರುತ್ತಿದೆ.
ಶುಕ್ರವಾರ ಬೆಳಗ್ಗೆಯಿಂದಲೇ ಮಲ್ಪೆಯತ್ತ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ಅಪರಾಹ್ನದ ವೇಳೆಗೆ ವಾಹನ ನಿಲುಗಡೆಗೂ ಜಾಗವಿಲ್ಲದಷ್ಟು ಒತ್ತಡ ನಿರ್ಮಾಣವಾಗಿತ್ತು. ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳನ್ನು ನಿಲ್ಲಿಸಿದ್ದರಿಂದ ಸುಗಮ ಸಂಚಾರಕ್ಕೂ ಅಡ್ಡಿಯಾಯಿತು.
ಬೀಚ್‌ಗೆ ಆಗಮಿಸಿದ ಪ್ರವಾಸಿಗರು ಬನಾನಾ ರೈಡ್, ಸ್ಪೀಡ್ ಬೋಟ್ ಸೇರಿದಂತೆ ವಿವಿಧ ಜಲಸಾಹಸ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪ್ರಸಿದ್ಧ ಸೈಂಟ್ ಮೇರಿಸ್ ದ್ವೀಪಕ್ಕೂ ದೋಣಿ ಮೂಲಕ ತೆರಳುವ ಪ್ರವಾಸಿಗರ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ.
ಆದಿ ಉಡುಪಿ-ಮಲ್ಪೆ ರಸ್ತೆಯಲ್ಲಿ ಸಂಚಾರ ಸಂಕಷ್ಟ
ಪ್ರವಾಸಿಗರ ವಾಹನಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಮಲ್ಪೆಗೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಆದಿಉಡುಪಿಯಿಂದ ಮಲ್ಪೆ ಬೀಚ್‌ವರೆಗಿನ ರಸ್ತೆಯಲ್ಲಿ ಶುಕ್ರವಾರ ಸಂಜೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶನಿವಾರ ಕಲ್ಮಾಡಿ ಭಾಗದಲ್ಲೂ ಇದೇ ಪರಿಸ್ಥಿತಿ ಕಂಡುಬಂತು.
ಮಲ್ಪೆ ಭಾಗದ ಕಿರಿದಾದ ರಸ್ತೆಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಮಂಜುಗಡ್ಡೆ ಹಾಗೂ ಮೀನಿನ ಲಾರಿಗಳ ಸಂಚಾರವೂ ಹೆಚ್ಚಿದ್ದು, ಪ್ರವಾಸಿಗರ ವಾಹನಗಳ ಒತ್ತಡದೊಂದಿಗೆ ಸಂಚಾರ ಮತ್ತಷ್ಟು ನಿಧಾನಗೊಂಡಿದೆ. ಇದರ ಜೊತೆಗೆ ಕಲ್ಮಾಡಿ ಸೇತುವೆ ಬಳಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ದಸರಾ ರಜೆಯಲ್ಲಿ ಮತ್ತಷ್ಟು ಪ್ರವಾಸಿಗರ ನಿರೀಕ್ಷೆ
ಶಾಲಾ-ಕಾಲೇಜುಗಳ ಪರೀಕ್ಷೆಗಳು ಮುಗಿದಿದ್ದು, ಅ.11ರಿಂದ ದಸರಾ ರಜೆ ಆರಂಭವಾಗಲಿದೆ. ಹೀಗಾಗಿ ರಜೆ ಅವಧಿಯಲ್ಲಿ ಮಲ್ಪೆ ಬೀಚ್‌ಗೆ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.
ಪಾರ್ಕಿಂಗ್, ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ ಅಗತ್ಯ
ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ವಾಹನ ಪಾರ್ಕಿಂಗ್ ಸ್ಥಳ ಸಾಕಾಗುತ್ತಿಲ್ಲ. ಕೆಲವರು ಪಾದಚಾರಿ ಮಾರ್ಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿದ್ದು, ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ ಹೇಳಿದ್ದಾರೆ.
ಬೀಚ್ ಸುತ್ತಮುತ್ತ ಸ್ವಚ್ಛತೆ ಹಾಗೂ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಬೀಚ್ ಪ್ರದೇಶದಲ್ಲಿ ಕಸದ ರಾಶಿ ಕಂಡುಬರುತ್ತಿದ್ದು, ಇದು ಪ್ರವಾಸಿಗರಿಗೆ ಅಸಹ್ಯ ಉಂಟುಮಾಡುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
-
ಮಂಗಳೂರು13 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ16 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ18 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್11 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಬಿಗ್ ನ್ಯೂಸ್18 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ11 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು11 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ13 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















