Connect with us

ಸುಳ್ಯ

Naxals in Kadaba-ಕಡಬದಲ್ಲಿ ಶಂಕಿತ ನಕ್ಸಲರ ಸಂಚಾರ – ಊಟ ಸೇವಿಸಿ ದಿನಸಿ ಪಡೆದು ಹೋದರು; 12 ವರ್ಷಗಳ ಹಿಂದೆ ನಕ್ಸಲ್ ಸೆಂಟ್ರಿ ಯಲ್ಲಪ್ಪನ ಎನ್ ಕೌಂಟರ್ ನಡೆದ ಸ್ಥಳದಲ್ಲೆ ಮತ್ತೆ ಪ್ರತ್ಯಕ್ಷ..!

Published

on

Ad Widget

Ad Widget

Ad Widget

Ad Widget

ಲೋಕಸಭಾ ಚುನಾವಣೆಗೆ 3 ವಾರ ಬಾಕಿಯಿರುವಾಗ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಹಾಗೂ ಸುಬ್ರಹ್ಮಣ್ಯ ತಾಲೂಕಿನ ಅರಣ್ಯದಂಚಿನಲ್ಲಿ ನಕ್ಸಲ್ ಚಲನವಲನ ಅಲ್ಲಲ್ಲಿ ಕಂಡು ಬರುತ್ತಿದೆ. ಕಳೆದೆರಡು ವಾರದಲ್ಲಿ ಮೂರು ಪ್ರತ್ಯೇಕ ಸ್ಥಳಗಳ ಜನವಸತಿ ಪ್ರದೇಶಗಳಲ್ಲಿ ಶಸ್ತ್ರಧಾರಿ ಶಂಕಿತ ನಕ್ಸಲರ ತಂಡ ಕಾಣಿಸಿಕೊಂಡಿದೆ. ಇದಕ್ಕೆ ಹೊಸದಾಗಿ ಸೇರ್ಪಡೆಯಾಗಿದ್ದು, ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊಂಬಾರು ಗ್ರಾಮದ ಚೇರು ಎಂಬಲ್ಲಿ. ಚೇರು 12 ವರ್ಷಗಳ ಹಿಂದೆ ಯಲ್ಲಪ್ಪ ಎಂಬ ನಕ್ಸಲ್ ಸೆಂಟ್ರಿಯ ಎನ್ ಕೌಂಟರ್ ನಡೆದ ಸ್ಥಳ.

Ad Widget

Ad Widget

Ad Widget

Ad Widget

ಗುರುವಾರ ಸಂಜೆ ಏಳು ಗಂಟೆ ವೇಳೆ ತಂಡ ಚೇರುವಿನ ಮನೆಗೆ ಆಗಮಿಸಿ ಸುಮಾರು 2 ಗಂಟೆ ಕಾಲ ಅಲ್ಲಿಯೇ ಕಾಲ ಕಳೆದಿದ್ದಾರೆ. ಅಲ್ಲಿಯೇ ಊಟ ಮಾಡಿದ ಶಂಕಿತರ ತಂಡ ಸುಮಾರು 9 ಗಂಟೆ ವೇಳೆ ದಿನಸಿ ಸಾಮಗ್ರಿಗಳನ್ನು ಪಡೆದು ಅಲ್ಲಿಂದ ತೆರಳಿದ್ದಾರೆ ಎಂದು ತಿಳಿದುಬಂದಿದೆ. ತಂಡದಲ್ಲಿ ನಾಲ್ಕರಿಂದ ಆರು ಮಂದಿ ಇದ್ದರು ಎನ್ನಲಾಗಿದೆ. ಮನೆಗೆ ಆಗಮಿಸಿದ ಶಂಕಿತರು ಶಸಾಸ್ತ್ರ ಹಿಡಿದುಕೊಂಡಿದ್ದರು ಎಂದು ತಿಳಿದುಬಂದಿದ್ದು, ಮನೆಯಲ್ಲಿದ್ದ ವೇಳೆ ಮನೆಯವರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೆಳಲಾಗುತ್ತಿದೆ.

Ad Widget

Ad Widget alt="Ad Widget"/>

Ad Widget

ಶೋಧ ಕಾರ್ಯ: ಶಂಕಿತರು ಮನೆಗೆ ಆಗಮಿಸಿರುವ ಮಾಹಿತಿ ಇಲಾಖೆಗೆ ಲಭ್ಯವಾಗುತ್ತಲೇ ನಕ್ಸಲ್ ನಿಗ್ರಹ ಪಡೆ, ಪೊಲೀಸರು ಮಾಹಿತಿ ಕಲೆ ಹಾಕುವ ಕೆಲಸ ಮಾಡುತ್ತಿದ್ದು, ಎಎನ್ಎಫ್ ತಂಡ ಮನೆಗೆ ಭೇಟಿ ನೀಡಲಾದ ಆಸು-ಪಾಸು ಪರಿಸರದಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಶಂಕಿತರು ಅದೇ ಪರಿಸರಕ್ಕೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದತ್ತ ತೆರಳಿರುವ ಶಂಕೆ ಇದೆ.

Ad Widget

Ad Widget <> Ad Widget

ಎರಡು ವಾರದ ಹಿಂದೆ ಸುಳ್ಯ ತಾಲೂಕಿನ ಕೂಜಿಮಲೆಗೆ ಹಾಗೂ 10 ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಐನೆಕಿದು ಪ್ರದೇಶಕ್ಕೆ ನಕ್ಸಲರು ಭೇಟಿ ನೀಡಿದ್ದರು. ಆ ತಂಡದಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಒಟ್ಟು ನಾಲ್ಕು ಮಂದಿ ಇದ್ದರು ಎಂಬುದು ಸ್ಪಷ್ಟವಾಗಿತ್ತು. ಆದರೆ ಚೇರು ಎಂಬಲ್ಲಿಗೆ ಬಂದ ತಂಡದಲ್ಲಿ ಸ್ಪಷ್ಟವಾಗಿ ಎಷ್ಟು ಮಂದಿ ಇದ್ದರು ಎಂದು ತಿಳಿದುಬಂದಿಲ್ಲ. 4 ಅಥವಾ 6 ಮಂದಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.

2012ರಲ್ಲಿ ನಕ್ಸಲರು ಭೇಟಿ ನೀಡಿದ್ದ ಪರಿಸರದಲ್ಲಿ ಶೂಟೌಟ್ ನಡೆದ ಪರಿಸರದ ಸಮೀಪದ ಪ್ರದೇಶ ಚೀರು. 2012ರಲ್ಲಿ ಸುಬ್ರಹ್ಮಣ್ಯ ಸಮೀಪದ ಚೀರು, ಭಾಗ್ಯ, ಎರ್ಮಾಯಿಲ್, ನಡುತೋಟ, ಪಳ್ಳಿಗದ್ದೆ ಭಾಗಕ್ಕೆ ನಕ್ಸಲರು ಭೇಟಿ ನೀಡಿದ್ದರು. ಬಳಿಕ ಪಳ್ಳಿಗದ್ದೆ ಕಾಡಿನಲ್ಲಿ ನಕ್ಸಲರು ಮತ್ತು ಎಎನ್ಎಫ್ ತಂಡಸ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಕೆಲವೇ ದಿನಗಳ ಅಂತರದಲ್ಲೇ ಬಿಸಿಲೆ ಸಮೀಪದ ಬಾಗಿಮಲೆ ಕಾಡಿನಲ್ಲಿ ಎನ್ಕೌಂಟರ್ನಲ್ಲಿ ನಕ್ಸಲ್ ತಂಡದ ಯಲ್ಲಪ್ಪ ಎಂಬಾತ ಸಾವನ್ನಪ್ಪಿದ್ದ. ಇದೀಗ ಇದೇ ಪರಿಸರದಲ್ಲಿ ಮತ್ತೂಮ್ಮೆ ಶಂಕಿತರು ಭೇಟಿ ನೀಡಿರುವುದು ಸ್ಥಳೀಯರಲ್ಲಿ ಆತಂಕ ಉಂಟು ಮಾಡಿದೆ.

Ad Widget

Ad Widget

ಶಂಕಿತರ ಸಂಚಾರ
ಶಂಕಿತ ನಕ್ಸಲರು ಮಾ.16ರಂದು ದಕ್ಷಿಣ ಕನ್ನಡ ಕೊಡಗು ಗಡಿ ಭಾಗದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆ ಎಸ್ಟೇಟ್ನ ಅಂಗಡಿಯೊಂದಕ್ಕೆ ಭೇಟಿ ನೀಡಿ ಸಾಮಗ್ರಿಗಳನ್ನು ಖರಿದಿಸಿ ತೆರಳಿದ್ದರು. ಮಾ.23ರಂದು ಶಂಕಿತರು ಕಡಬ ತಾಲೂಕಿನ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಐನೆಕಿದು ಗ್ರಾಮದ ಅರಣ್ಯದ ಅಂಚಿನ ಮನೆಗೆ ಭೇಟಿ ನೀಡಿ ಊಟ, ಸಾಮಗ್ರಿಗಳನ್ನು ಪಡೆದು ತೆರಳಿದ್ದರು. ಮಾ.18ರಿಂದಲೇ ಶಂಕಿತರು ಭೇಟಿ ನೀಡಿದ ಪರಿಸರ ಸೇರಿದಂತೆ ವಿವಿಧೆಡೆ ನಕ್ಸಲ್ ನಿಗ್ರಹ ಪಡೆ ಶೋಧ ಕಾರ್ಯ ಆರಂಭಿಸಿದ್ದರು.

Ad Widget
Click to comment

Leave a Reply

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಸುಳ್ಯ

Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ

Published

on

Ad Widget

Ad Widget

Ad Widget

Ad Widget

ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

Ad Widget

Ad Widget

Ad Widget

Ad Widget

ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.

Ad Widget

Ad Widget alt="Ad Widget"/>

Ad Widget

ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.

Ad Widget

Ad Widget <> Ad Widget

ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.

Continue Reading

ಸುಳ್ಯ

Areca nut-ಅಡಿಕೆ ರೇಟ್‌ ಜಂಪ್‌ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ

Published

on

Ad Widget

Ad Widget

Ad Widget

Ad Widget

ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget

Ad Widget

Ad Widget

ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget alt="Ad Widget"/>

Ad Widget

ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.

Ad Widget

Ad Widget <> Ad Widget

ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.

ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.

Ad Widget

Ad Widget

ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.

ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!