ರಾಜಕೀಯ
BJP Rural-ಬಿಜೆಪಿ ಗ್ರಾಮಾಂತರ ಮಂಡಲ ಅಲ್ಪಸಂಖ್ಯಾತ ಮೋರ್ಚಾದ ಸಭೆ; ಬ್ರಿಜೇಶ್ ಚೌಟರನ್ನು ಲಕ್ಷಾಂತರ ಮತಗಳ ಅಂತರದಿಂದ ಗೆಲ್ಲಿಸಲು ಶ್ರಮಿಸಲು ಕರೆ
ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಪುತ್ತೂರು ಗ್ರಾಮಾಂತರ ಮಂಡಲ ಅಲ್ಪ ಸಂಖ್ಯಾತ ಮೋರ್ಚಾದ ಸಭೆಯು ಎ.5ರಂದು ಪಕ್ಷದ ಕಚೇರಿಯಲ್ಲಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಬಾರಿಯ ಲೋಕಸಭಾ ಚುನಾವಣೆ ಕಾರ್ಯಗಳಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಪ್ರಾಮಾಣಿಕವಾಗಿ ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಅಲ್ಪಸಂಖ್ಯಾತ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರ ಮತವನ್ನು ಪಡೆದು ಆಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟರನ್ನು ಲಕ್ಷಾಂತರ ಮತಗಳ ಅಂತರದಲ್ಲಿ ಗೆಲ್ಲಿಸಲು ಕೆಲಸ ಮಾಡಲು ಕರೆ ನೀಡಲಾಯಿತು.
ಮಾಜಿ ಶಾಸಕ ಸಂಜೀವ ಮಠಂದೂರು, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ, ಸಹ ಸಂಚಾಲಕ ಉಮೇಶ್ ಕೋಡಿಬೈಲು, ಮುಖಂಡ ಅರುಣ್ ಕುಮಾರ್ ಪುತ್ತಿಲ, ರಾಜ್ಯ ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಜೋಯೆಲ್ ಮೆಂಡೋನ್ಸಾ, ಕೆಎಂಡಿಸಿ ಮಾಜಿ ಅಧ್ಯಕ್ಷ ಅಬೂಬಕ್ಕರ್ ಎಸ್.ಬಿ.. ಮಂಡಲ ಅಲ್ಪಸಂಖ್ಯಾತ ಮೋರ್ಚಾದ ಸಂಚಾಲಕ ರಫೀಕ್ ದರ್ಜಿ, ಪ್ರಮುಖ ಕಾರ್ಯಕರ್ತರಾದ ಉಮ್ಮರಬ್ಬಾ ಕೆದಿಲ, ರಝಾಕ್ ಕೆಜಿಎನ್, ಉಸ್ಮಾನ್, ಸೌಕತ್ ಅಲಿ, ಅನ್ಸಾರ್, ಖಾದರ್ ಕರ್ನೂರ್ ಹಾಗೂ ಅಬ್ದುಲ್ ರಝಾಕ್ ಸೇರಿದಂತೆ ಹಲವು ಮಂದಿ ಸಭೆಯಲ್ಲಿ ಭಾಗವಹಿಸಿದ್ದರು.
ರಾಜಕೀಯ
Kumaraswamy-ಹಾಸನ ಡಿಸಿ ವಿರುದ್ಧ ಭ್ರಷ್ಟಾಚಾರ ಆರೋಪ: ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್
ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಹಾಸನದಿಂದ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾಗಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಏನಿದು ಪ್ರಕರಣ?
ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಿಗೆ ಸಂಬಂಧಿಸಿದ್ದು ಎನ್ನಲಾದ ವಾಟ್ಸಾಪ್ ಚಾಟ್ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು.
ಆರೋಪ ನಿರಾಕರಿಸಿದ್ದ ಜಿಲ್ಲಾಧಿಕಾರಿ
ಕುಮಾರಸ್ವಾಮಿ ಅವರ ಆರೋಪವನ್ನು ಜಿಲ್ಲಾಧಿಕಾರಿ ಲತಾ ಕುಮಾರಿ ಸಂಪೂರ್ಣವಾಗಿ ತಳ್ಳಿಹಾಕಿದ್ದರು. ತಮ್ಮ ವಿರುದ್ಧ ಮಾಡಿರುವ ಲಂಚದ ಆರೋಪಗಳು ಸುಳ್ಳು. ವಾಟ್ಸಾಪ್ ಚಾಟ್ಗಳನ್ನು ಎಡಿಟ್ ಮಾಡಲಾಗಿದೆ ಎಂದು ತಮ್ಮ ಆಪ್ತ ಸಹಾಯಕರು ತಿಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ. ತಾವು ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡುವುದಾಗಿ ಹೇಳಿದ್ದರು.
ಇನ್ನೊಂದೆಡೆ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಯನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಾಪ್ ಚಾಟ್ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿದ್ದರು.
ಎಫ್ಐಆರ್ ದಾಖಲು, ಕುಮಾರಸ್ವಾಮಿಗೆ ನೋಟಿಸ್
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 335 ಮತ್ತು 336(4) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದರು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನಕಲಿ ವಾಟ್ಸಾಪ್ ಚಾಟ್ಗಳ ಮೂಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ಸಂಬಂಧ ಮಾಹಿತಿ ಪಡೆಯುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಅಂತರ ರಾಜ್ಯ
Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!
ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಟೋಬರ್ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.
ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.
ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.
ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.
ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.
ಅಂತರ ರಾಜ್ಯ
Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.
ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.
-
Uncategorized18 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ನಿಧನ ವಾರ್ತೆ23 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಕ್ರೈಂ4 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ಅಂತರ ರಾಜ್ಯ23 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ರಾಜಕೀಯ23 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ23 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
-
ನಿಧನ ವಾರ್ತೆ4 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಬಿಗ್ ನ್ಯೂಸ್4 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ















