Connect with us

ಅಪರಾಧ

Bharat Kumdelu-ಬಜರಂಗದಳದ ಜಿಲ್ಲಾ ಸಂಯೋಜಕ ಭರತ್‌ ಕುಮ್ಡೇಲು; ಗಡಿಪಾರು ಆದೇಶ ರದ್ದುಪಡಿಸಿ ಹೈಕೋರ್ಟ್‌ ಆದೇಶ

Published

on



Ad Widget

Ad Widget

Ad Widget

Ad Widget

ಪುತ್ತೂರು: ಬಜರಂಗದಳದ ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲುರವರ ಗಡಿಪಾರು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶ ನೀಡಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕು ಪುದು ಗ್ರಾಮದ ಕುಮ್ಡೇಲು ಸೇಸಪ್ಪ ಬೆಳ್ಳಡರ ಮಗ ಬಜರಂಗದಳ ಜಿಲ್ಲಾ ಸಂಯೋಜಕ ಭರತ್‌ ಕುಮ್ಡೇಲು (35 ವ)ರವರು ಪೊಲೀಸ್‌ ಠಾಣೆಯಲ್ಲಿ ರೌಡಿ ಹಾಳೆ ಇರುವ ವ್ಯಕ್ತಿಯಾಗಿದ್ದು ವೆಹಿಕಲ್ ಸೀಝರ್ ಕೆಲಸವನ್ನು ಮಾಡಿಕೊಂಡಿರುತ್ತಾರೆ. ಈತ ಬಜರಂಗದಳದ ಸಕ್ರಿಯ ಕಾರ್ಯಕರ್ತನಾಗಿದ್ದು ತನ್ನ ಸಹಚರರೊಂದಿಗೆ ಸೇರಿಕೊಂಡು ಪರಂಗಿಪೇಟೆ, ಕಡೆಗೋಳಿ, ಬಿಸಿರೋಡ್‌ ಹಾಗೂ ಬಂಟ್ವಾಳ ಪರಿಸರದಲ್ಲಿ ಕೊಲೆ, ಕೊಲೆಯತ್ನ, ದೊಂಬಿ, ಹಲ್ಲೆ, ಗಲಭೆ ಇತ್ಯಾದಿಗಳನ್ನು ನಡೆಸಿ ಸಾರ್ವಜನಿಕ ಶಾಂತಿಭಂಗ ಕೃತ್ಯಗಳಲ್ಲಿ ತೊಡಗಿ ಸಾಮಾಜಿಕ ಸಾಮರಸ್ಯಕ್ಕೆ ತೊಡಕು ಉಂಟುಮಾಡುವಂತಹ ಪ್ರವೃತ್ತಿಯವರಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಈತ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಇತರ ಪೊಲೀಸ್ ಠಾಣೆಗಳಲ್ಲಿ ಕೊಲೆಯತ್ನ ದೊಂಬಿ, ಹಲ್ಲೆ ಇತ್ಯಾದಿ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಕಾನೂನು ಬಾಹಿರ ಕೃತ್ಯಗಳಿಗೆ ಪ್ರಚೋದನೆ ನೀಡುವವನಾಗಿರುವುದರಿಂದ ಪೊಲೀಸ್‌ ಕಾಯ್ದೆ ಕಲಂ 55(ಬಿ)ಯಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪ ಅಧೀಕ್ಷಕರು ಮಂಗಳೂರು ಉಪವಿಭಾಗದ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಅದರಂತೆ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ) ಮತ್ತು 53(ಬಿ) ಅಡಿಯಲ್ಲಿ ಭರತ್ ಕುಮ್ಡೇಲು ಅವರನ್ನು ಮಾ.28ರಿಂದ ಜೂ.30ರವರೆಗೆ ದ.ಕ. ಜಿಲ್ಲೆಯಿಂದ ಮೈಸೂರು ಜಿಲ್ಲೆಯ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ಉಪವಿಭಾಗದ ದಂಡಾಧಿಕಾರಿ ಹರ್ಷವರ್ಧನ ಎಸ್.ಜೆ. ಅವರು ಏ.3ರಂದು ಆದೇಶ ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಭರತ್ ಕುಮ್ಡೇಲು ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಗಡಿಪಾರು ಆದೇಶವನ್ನು ರದ್ದುಪಡಿಸಿದೆ. ಭರತ್ ಕುಮ್ಡೇಲು ಅವರ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಿದ್ದರು. ನ್ಯಾಯವಾದಿ ಸುಯೋಗ್‌ ಹೇರಳೆ ವಕಾಲತ್ತು ವಹಿಸಿದ್ದರು.



Ad Widget
Ad Widget
Click to comment

Leave a Reply

ಅಪರಾಧ

Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?

Published

on



Ad Widget

Ad Widget

Ad Widget

Ad Widget

ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್‌ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.

Ad Widget

Ad Widget

Ad Widget alt="Ad Widget"/>

Ad Widget

ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.

Ad Widget

Ad Widget <> Ad Widget

ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.



Ad Widget

ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.

ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್‌ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Ad Widget
Continue Reading

ಸ್ಥಳೀಯ

Navoor clinic-ನಾವೂರು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ

Published

on



Ad Widget

Ad Widget

Ad Widget

Ad Widget

ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Ad Widget

Ad Widget

Ad Widget

ನಾವೂರು: ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Ad Widget

Ad Widget alt="Ad Widget"/>

Ad Widget

ಈ ವೇಳೆ ಘಟನಾ ಸ್ಥಳವನ್ನು ಪರಿಶೀಲಿಸಿದ ಅವರು, ಕ್ಲಿನಿಕ್‌ನ ವೈದ್ಯ ಡಾ. ಪ್ರದೀಪ್ ಅವರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.

Ad Widget

Ad Widget <> Ad Widget

ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ನ್ಯಾಯ ಒದಗಿಸುವ ಭರವಸೆಯನ್ನು ಅವರು ನೀಡಿದರು.



Ad Widget

ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading

ಅಪರಾಧ

Mangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!

Published

on



Ad Widget

Ad Widget

Ad Widget

Ad Widget

ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅ.8ರಂದು ರಾತ್ರಿ ಸುಮಾರು 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಸಮೀಪ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

ಬಂಧಿತ ಆರೋಪಿಗಳು:
ಅಬ್ದುಲ್ ಹಾಪೀಲ್ (25) ಮಂಗಳಪಾಡಿ, ಕಾಸರಗೋಡು
ಜಿಯಾವುಲ್ ಹಕ್ (30) ಕಸಬಾ ಬೆಂಗ್ರೆ, ಕೂಳೂರು, ಮಂಗಳೂರು
ಅಲ್ತಾಫ್ (28) ಪಾಂಡೇಶ್ವರ, ಮಂಗಳೂರು



Ad Widget

ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಬಚ್ಚಿಟ್ಟು ಸಾಗಾಟಕ್ಕೆ ಸಂಚು
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಂಜಾಬ್‌ನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್‌ನ ನೀರು ಸಂಗ್ರಹಿಸುವ ಭಾಗದಲ್ಲಿ ಭದ್ರವಾಗಿ ಬಚ್ಚಿಡುತ್ತಿದ್ದರು. ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ಇಲ್ಲಿಂದ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.

Ad Widget

Ad Widget

ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳ ವಿರುದ್ಧ ಈ ಹಿಂದೆಯೂ ಪ್ರಕರಣ
ಬಂಧಿತ ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜಿಯಾವುಲ್ ಹಕ್ ದುಬೈನ ರಾಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಅಲ್ತಾಫ್ ವಿರುದ್ಧವೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading