ಮಂಗಳೂರು
PM Modi-ಚೌಟ ಕೋಟಾ ಪರ ಪ್ರಚಾರ ನಡೆಸಲು ಏ.14ರಂದು ಮೋದಿ ಮಂಗಳೂರಿಗೆ; ಪತ್ರಿಕಾಗೋಷ್ಟಿಯಲ್ಲಿ ವಿ.ಸುನಿಲ್ ಕುಮಾರ್ ಮಾಹಿತಿ
ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಏ.14ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಆದಿನ ಅಪರಾಹ್ನ 1 ಗಂಟೆಗೆ ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯಲಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಮೋದಿಯವರು ಮಾತನಾಡಲಿದ್ದಾರೆ. ಈ ಸಭೆಯಲ್ಲಿ ಲಕ್ಷಾಂತರ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಚುನಾವಣಾ ಸಮಿತಿಯ ಪ್ರಧಾನ ಸಂಚಾಲಕರೂ ಆಗಿರುವ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮೋದಿಯವರು ಮಂಗಳೂರಿನ ಕಾರ್ಯಕ್ರಮದ ನಂತರ ಬೆಂಗಳೂರಿಗೆ ತೆರಳಲಿದ್ದು ಅಲ್ಲಿ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ವಿ.ಸುನಿಲ್ ಕುಮಾರ್ ತಿಳಿಸಿದರು.
ಈಗಾಗಲೇ ಮೊದಲ ಹಂತದ ಚುನಾವಣಾ ಪ್ರಚಾರ ಪ್ರಕ್ರಿಯೆಗಳು ಭರದಿಂದ ಸಾಗುತ್ತಿದ್ದು ಈ ಬಾರಿ ದೊಡ್ಡ ಪ್ರಮಾಣದ ಸಭೆಗಳನ್ನು ಹೊರತುಪಡಿಸಿ ಮನೆ ಮನೆಗೆ ತೆರಳಿ ಮತದಾರರನ್ನು ಸಂಪರ್ಕಿಸುವ ಪ್ರಕ್ರಿಯೆಗೆ ಹೆಚ್ಚು ಒತ್ತು ನೀಡಲಾಗಿದೆ. ಏ.10 ಮತ್ತು 11ರಂದು ಏಕಕಾಲದಲ್ಲಿ ರಾಜ್ಯದ 58 ಸಾವಿರ ಬೂತ್ಗಳಲ್ಲಿ ಬೂತ್ ಸಮಿತಿ ಸಭೆಗಳು ನಡೆಯಲಿದ್ದು ಇದು ರಾಜ್ಯದಲ್ಲೇ ಮೊತ್ತ ಮೊದಲ ಬಾರಿ ಬೂತ್ ಸಮಿತಿ ಸಭೆಯ ದಾಖಲೆಯಾಗಿದೆ ಎಂದು ಸುನಿಲ್ ಕುಮಾರ್ ಹೇಳಿದರು.
ಮೊದಲ ಹಂತದ ಮನೆ ಮನೆ ಭೇಟಿ ನೀಡಿ, ಪ್ರಚಾರ ಮಾಡುವ ಕಾರ್ಯವು ಏ.15, 16, 17ರಂದು ನಡೆಯಲಿದ್ದು ಮೋದಿ ಅವರ ಆಗಮನವು ಕಾರ್ಯಕರ್ತರಿಗೆ ಹೊಸ ಉತ್ಸಾಹವನ್ನು ನೀಡಲಿರುವುದು. ಪಕ್ಷದ ರಾಜ್ಯಾಧ್ಯಕ್ಷರಿಂದ ತೊಡಗಿ ಎಲ್ಲ ಪ್ರಮುಖರು, ಅಭ್ಯರ್ಥಿಗಳು, ಕಾರ್ಯಕರ್ತರು ಮನೆ ಮನೆ ಸಂಪರ್ಕ ಹಾಗೂ ಪ್ರಚಾರ ನಡೆಸಲಿದ್ದಾರೆ ಎಂದು ಸುನಿಲ್ ಕುಮಾರ್ ಹೇಳಿದರು.
ಕೇಂದ್ರ ಸರ್ಕಾರದ 10 ವರ್ಷಗಳ ಸಾಧನೆ ಹಾಗೂ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಯಾಕೆ ಆರಿಸಬೇಕು ಎಂಬ ಬಗ್ಗೆ ಈ ಪ್ರಚಾರ ಕಾರ್ಯದಲ್ಲಿ ಮತದಾರರಿಗೆ ಅರಿವು ಮೂಡಿಸಲಾಗುವುದು ಎಂದರು. ಸಾಂಸ್ಕೃತಿಕ ಭಾರತ, ವಿಕಸಿತ ಭಾರತ, ಸುರಕ್ಷಿತ ಭಾರತ ಈ ಮೂರು ವಿಷಯಗಳಿಗೆ ನ್ಯಾಯ ಮತ್ತು ಹೊಸ ಸ್ವರೂಪ ಕೊಟ್ಟದ್ದು ನರೇಂದ್ರ ಮೋದಿ ಅವರ ಆಡಳಿತ. ಮೂರು ಪ್ರಮುಖ ವಿಚಾರಗಳನ್ನು ಇಟ್ಟುಕೊಂಡು ಜನರ ಬಳಿಗೆ ಹೋಗುತ್ತೇವೆ ಎಂದು ಸುನಿಲ್ ಕುಮಾರ್ ವಿವರಿಸಿದರು.
ನಕ್ಸಲ್ ಚಟುವಟಿಕೆಯು ರಾಜ್ಯದಲ್ಲಿ ನಿಯಂತ್ರಣದಲ್ಲಿದ್ದು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮತ್ತೆ ದ.ಕ. ಜಿಲ್ಲೆ, ಮಡಿಕೇರಿಗಳಲ್ಲಿ ಕಂಡು ಬಂದಿದೆ. ಸರ್ಕಾರದ ಮೃದು ಧೋರಣೆ ಇದಕ್ಕೆ ಕಾರಣವಾಗಿದ್ದು, ಸಮಾಜ ವಿರೋಧಿ ಶಕ್ತಿಗಳನ್ನು ಗಟ್ಟಿಯಾಗಿ ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ, ಗೃಹ ಸಚಿವರಾಗಲೀ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಈ ತನಕ ಗಮನ ಹರಿಸಲಿಲ್ಲ ಎಂದು ಆರೋಪಿಸಿದ ಸುನಿಲ್ ಕುಮಾರ್, ಕೂಡಲೇ ಸರ್ಕಾರವು ದುಷ್ಟ ಶಕ್ತಿಗಳನ್ನು ಹತ್ತಿಕ್ಕುವ ಕೆಲಸವನ್ನು ಮಾಡಬೇಕಾಗಿದೆ ಎಂದು ತಿಳಿಸಿದರು.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಮಂಗಳೂರು18 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ23 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಅಂತರ ರಾಜ್ಯ17 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಸಿನೆಮಾ23 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ23 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
-
ಕಾರ್ಯಕ್ರಮಗಳು18 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ12 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಸ್ಥಳೀಯ24 hours agoBail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು















