Connect with us

ಸ್ಥಳೀಯ

Nota-ರಾಜ್ಯದ ಈ ಕ್ಷೇತ್ರದಲ್ಲಿ ನೋಟಾಗೆ ಸಿಕ್ಕಿತ್ತು ಮೂರನೇ ಸ್ಥಾನ

Published

on

Ad Widget

Ad Widget

Ad Widget

Ad Widget

ಕೊಪ್ಪಳ: ಕಳೆದ 2014 ಹಾಗೂ 2019ರ ಅವಧಿಯಲ್ಲಿ ಗೆದ್ದ ಹಾಗೂ ಸಮೀಪದ ಪ್ರತಿಸ್ಪರ್ಧಿ ಹೊರತುಪಡಿಸಿದರೆ ಕೊಪ್ಪಳ ಲೋಕಸಭಾ ಚುನಾವಣಾ ಇತಿಹಾಸದಲ್ಲಿ ಮೂರನೇ ಸ್ಥಾನವನ್ನು “ನೋಟಾ’ ಕಾಯ್ದುಕೊಂಡಿದೆ. ಶೇ.1ರಷ್ಟು ಮತದಾರರು ಈ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಗಳನ್ನು ಇಷ್ಟಪಡದೇ ತಮ್ಮ ಮತವನ್ನು ನೋಟಾಗೆ ಓಟು ಕೊಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ.

Ad Widget

Ad Widget

Ad Widget

Ad Widget

ಅಚ್ಚರಿಯಾದರೂ ಇದು ಸತ್ಯ ಸಂಗತಿಯಾಗಿದ್ದು ಕಳೆದ 14-15 ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದೇಶದಲ್ಲಿ ಹಲವು ಜನರು ಚುನಾವಣೆಯ ವೇಳೆ ತಮ್ಮ ಹಕ್ಕು ಮತವನ್ನೇ ಚಲಾವಣೆ ಮಾಡದೇ ದೂರ ಉಳಿಯುತ್ತಿದ್ದರು. ಇದು ದೇಶದ ತುಂಬೆಲ್ಲಾ ಚರ್ಚೆಯಾಗಿತ್ತು. ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಧೀಶರು ಸಮಗ್ರ ಚರ್ಚೆ ನಡೆಸಿದ್ದರು. ಭಾರತದ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಯಾವು ಮತದಾರನು ಮತದಾನದಿಂದ ದೂರ ಉಳಿಯಬಾರದು. ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಯು ತಮಗೆ ಇಷ್ಟವಿದಲ್ಲದೇ ಇದ್ದರೂ ತಮ್ಮ ಮತವನ್ನು ನೋಟಾಗೆ ಮತ ಚಲಾವಣೆ ಮಾಡುವ ಅಧಿಕಾರವನ್ನು 2013ರ ಸೆ.27ರಂದು ಚುನಾವಣಾ ಆಯೋಗಕ್ಕೆ ಆದೇಶ ಮಾಡಿತು. ಈ ಆದೇಶದಂತೆ ಚುನಾವಣಾ ಆಯೋಗವು ದೇಶದ ತುಂಬೆಲ್ಲಾ 2014ರಲ್ಲಿ ಇದನ್ನು ಜಾರಿಗೊಳಿಸಿತು.

Ad Widget

Ad Widget alt="Ad Widget"/>

Ad Widget

ಮತದಾರರನಿಗೆ ಆಯಾ ಕ್ಷೇತ್ರದಲ್ಲಿ ಚುನಾವಣಾ ಕಣದಲ್ಲಿ ಸ್ಪರ್ಧೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ತಮಗೆ ಯಾರೂ ಇಷ್ಟ ಆಗದಿದ್ದರೆ ಅಂಥ ಅಭ್ಯರ್ಥಿ ವಿರುದ್ಧವಾಗಿ ನೋಟಾಗೆ ಮತದಾನ ಮಾಡುವ ಅವಕಾಶ ದೊರೆತು. ನೋಟಾ ಬಟನ್‌ ಮತದಾನದ ಪಟ್ಟಿಯಲ್ಲಿ ಸೇರ್ಪಡೆಗೊಂಡಿತು. ಚುನಾವಣಾ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು ಕ್ರಮ ಸಂಖ್ಯೆಯ ಅನುಸಾರ ಕೊನೆಯ ಸ್ಥಾನದಲ್ಲಿ ಈ ನೋಟಾ ಬಟನ್‌ ಗೆ ಸ್ಥಾನ ಕಲ್ಪಿಸಿತು.

Ad Widget

Ad Widget <> Ad Widget

ಅದರಂತೆ, 2014ರಲ್ಲಿ ನಡೆದ ಹಾಗೂ 2019ರಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಹತ್ತಾರು ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಸ್ಪರ್ಧೆ ಮಾಡಿದ್ದರೂ ಗೆದ್ದ ಅಭ್ಯರ್ಥಿ, ಪರಾಜಿತ ಅಭ್ಯರ್ಥಿ ಬಿಟ್ಟರೆ ಮೂರನೇ ಸ್ಥಾನದಲ್ಲಿ ನೋಟಾಗೆ ಹೆಚ್ಚು ಮತಗಳು ಲಭಿಸಿರುವುದು ಕ್ಷೇತ್ರದಲ್ಲಿ ಅಚ್ಚರಿ ಮೂಡಿಸಿವೆ.

2014ರ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ 16 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಈ ಪೈಕಿ ಸಂಗಣ್ಣ ಕರಡಿ-486383 ಮತ ಪಡೆದು ಗೆದ್ದರೆ, ಬಸವರಾಜ ಹಿಟ್ನಾಳ-453969, ಸೈಯದ್‌ ಆರಿಫ್‌ -9529, ತಿಮ್ಮಪ್ಪ ಉಪ್ಪಾರ-2459, ನಜೀರ ಹುಸೇನ್‌-2129, ಡಿ.ಎಚ್‌.ಪೂಜಾರ-2636, ಭಾರದ್ವಾಜ- 2089, ರಮೇಶ ಕೋಟೆ-1867, ಕೆ.ಎಂ.ರಂಗನಾಥರಡ್ಡಿ-2305, ಶಿವಕುಮಾರ ತೋಂಟಾಪುರ- 3425, ಅಣ್ಣೋಜಿರಾವ್‌-2012, ವಿ ಗೋವಿಂದ-6300, ಗೋವಿಂದರಡ್ಡಿ ಪಚ್ಚರಳ್ಳಿ-2839, ನಾಗಪ್ಪ ಕಾರಟಗಿ-2894, ಬಿ ಮನೋಹರ- 4433, ಸುರೇಶ-8292, ನೋಟಾಗೆ-12,947 ಮತಗಳು ಚಲಾವಣೆಯಾಗಿದ್ದವು.

Ad Widget

Ad Widget

ಈ ವೇಳೆ ಸಂಗಣ್ಣ ಕರಡಿ-5,86783 ಮತಗಳನ್ನುಪಡೆದು ಗೆಲುವು ಸಾಧಿಸಿದರೆ, ಕೆ ರಾಜಶೇಖರ ಹಿಟ್ನಾಳ-548386, ಶಿವಪುತ್ರಪ್ಪ ಗುಮಗೇರಾ-9481, ಅನ್ನೋಜಿರಾವ್‌ ಜಿ-5681, ಬಿ. ಬಸಲಿಂಗಪ್ಪ -1609, ಬಂಡಿಮಠ ಶರಣಯ್ಯ-2252, ಹೇಮರಾಜ ವೀರಾಪುರ-1059, ಪ.ಯು.ಗಣೇಶ- 1699, ನಾಗರಾಜ ಕಲಾಲ್‌-4855, ಬಾಲರಾಜ ಯಾದವ್‌-2937, ಮಲ್ಲಿಕಾರ್ಜುನ ಹಡಪದ-2408, ಸತೀಶರಡ್ಡಿ-3498, ಸುರೇಶಗೌಡ ಮುಂದಿನ ಮನೆ-5158, ಸುರೇಶ ಹೆಚ್‌-3728 ಹಾಗೂ ನೋಟಾಗೆ-10800 ಮತಗಳು ಚಲಾವಣೆಯಾಗಿದ್ದವು.

10 ಸಾವಿರ ಜನರಿಗೆ ಅಭ್ಯರ್ಥಿಗಳೇ ಇಷ್ಟ ವಿಲ್ಲ..
ಕೊಪ್ಪಳ ಲೋಕ ಸಮರದ ಎರಡು ಅವಧಿಯಲ್ಲಿ ನಡೆದ ಚುನಾವಣೆಯಲ್ಲಿ ಅಭ್ಯರ್ಥಿಗಳೇ ತಮಗೆ ಇಷ್ಟವಿಲ್ಲ ಎನ್ನುವ ಸಂದೇಶ ನೀಡುವ ಮೂಲಕ 2014ರಲ್ಲಿ ನೋಟಾಗೆ 12,947 ಮತ ಚಲಾಯಿಸಿದ್ದರೆ, 2019ರಲ್ಲಿ ನೋಟಾಗೆ 10,800 ಜನರು ತಮ್ಮ ಮತ ಚಲಾಯಿಸಿದ್ದರು. ಈ ಎರಡೂ ಅವಧಿಯಲ್ಲಿ ಗೆದ್ದ ಅಭ್ಯರ್ಥಿ, ಅವರ ಸಮೀಪದ ಅಭ್ಯರ್ಥಿ ಹೊರತು ಪಡಿಸಿದರೆ ಮೂರನೇ ಸ್ಥಾನದಲ್ಲಿ ನೋಟಾ ಸ್ಥಾನ ಇರುವುದು ಎಲ್ಲರ ಗಮನ ಸೆಳೆಯಿತು. ವಿಶೇಷವೆಂದರೆ, ಹತ್ತಾರು ಜನರು ಪಕ್ಷೇತರ ಅಭ್ಯರ್ಥಿಯಾಗಿದ್ದರೂ ಸರಾಸರಿ 10 ಸಾವಿರ ಜನರು ತಮಗೆ ಯಾರೂ ಇಷ್ಟವಿಲ್ಲ, ಅವರು ಬೇಡ ಎನ್ನುವಂಥಹ ಸಂದೇಶ ನೀಡಿ ನೋಟಾಗೆ ತಮ್ಮ ಓಟು ಕೊಟ್ಟಿದ್ದಾರೆ. ಎರಡೂ ಚುನಾವಣೆಯಲ್ಲಿ ನೋಟಾ ಸರಾಸರಿ ಶೇ.01 ರಷ್ಟು ಮತ ಪಡೆದಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Vitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ

Published

on

Ad Widget

Ad Widget

Ad Widget

Ad Widget

ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget

Ad Widget

Ad Widget

Ad Widget

ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget

Ad Widget alt="Ad Widget"/>

Ad Widget

ಚೆನ್ನಯ್ಯ ಪೂಜಾರಿ ಮದ್ಯಪಾನ ಮಾಡಿ ತನ್ನ ಅಣ್ಣನ ಮಗಳಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಯುವತಿ ಕತ್ತಿಯಿಂದ ಬೀಸಿದಾಗ ಅದು ಚೆನ್ನಯ್ಯ ಪೂಜಾರಿ ಅವರ ಎದೆಗೆ ತಾಗಿ ಗಂಭೀರ ಗಾಯಗೊಂಡಿದ್ದರು.

Ad Widget

Ad Widget <> Ad Widget

ಗಾಯಗೊಂಡ ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಶಿಕಾಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

ಬಿಗ್ ನ್ಯೂಸ್

Virupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆಯದೆ ಕೈಗೊಳ್ಳಲಾಗುತ್ತಿದೆ ಎನ್ನಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಟೆಂಡರ್ ಪ್ರಕ್ರಿಯೆಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ.23ರಂದು ನೀಡಿರುವ ಈ ಆದೇಶವು ಮುಂದಿನ ವಿಚಾರಣೆಯವರೆಗೆ ಜಾರಿಯಲ್ಲಿರಲಿದ್ದು, ಇಲಾಖಾ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಕಾಮಗಾರಿ ನಡೆಸದಂತೆ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಸರಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆಯದೆ ಕೈಗೊಳ್ಳಲಾಗುತ್ತಿದೆ ಎನ್ನಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಟೆಂಡರ್ ಪ್ರಕ್ರಿಯೆಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ.23ರಂದು ನೀಡಿರುವ ಈ ಆದೇಶವು ಮುಂದಿನ ವಿಚಾರಣೆಯವರೆಗೆ ಜಾರಿಯಲ್ಲಿರಲಿದ್ದು, ಇಲಾಖಾ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಕಾಮಗಾರಿ ನಡೆಸದಂತೆ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಸರಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಪುತ್ತೂರು ವಾರ್ತಾಭವನದಲ್ಲಿ ನ.25ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಧಾರ್ಮಿಕ ದತ್ತಿ ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ. ಸಮರ್ಪಕ ಅನುಮೋದನೆ ಪಡೆಯದೆ ಕಾಮಗಾರಿಗಳನ್ನು ನಡೆಸಿರುವುದು, ಹಣಕಾಸಿನ ನಿರ್ವಹಣೆಯಲ್ಲಿ ಲೋಪದೋಷಗಳು ಹಾಗೂ ದೇವಸ್ಥಾನದ ದೈನಂದಿನ ಆಡಳಿತದಲ್ಲಿ ಪಾರದರ್ಶಕತೆಯ ಕೊರತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಕಾನೂನು ಹೋರಾಟಕ್ಕೆ ಮುಂದಾಗಿದ್ದೇವೆ ಎಂದರು.

Ad Widget

Ad Widget <> Ad Widget

ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದ್ದು, ಇಲಾಖಾ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ. ಇದೇ ವಿಚಾರವಾಗಿ ಮಚ್ಚಿಮಲೆ ವಿರೂಪಾಕ್ಷ ಭಟ್ ಮತ್ತು ದಿನೇಶ್ ಜೈನ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ W.P. No. 32628/2026ರಡಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರು ಸಲ್ಲಿಸಿದ ದಾಖಲೆಗಳು ಮತ್ತು ಮನವಿಯನ್ನು ಪರಿಗಣಿಸಿರುವ ನ್ಯಾಯಾಲಯವು ನ.23ರಂದು ಮುಂದಿನ ವಿಚಾರಣೆಯವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು ಅವರು ವಿವರಿಸಿದರು.

ಅಭಿವೃದ್ಧಿ ಸಮಿತಿ ರಚನೆ ಬಗ್ಗೆಯೂ ಆಕ್ಷೇಪ

Ad Widget

Ad Widget

ದೇವಸ್ಥಾನದಲ್ಲಿ ರಚಿಸಲಾಗಿರುವ ಅಭಿವೃದ್ಧಿ ಸಮಿತಿಯ ರಚನೆಯೇ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳಿಗೆ ಅನುಗುಣವಾಗಿಲ್ಲ ಎಂಬುದು ಅರ್ಜಿದಾರರ ಪ್ರಮುಖ ಆಕ್ಷೇಪವಾಗಿದೆ. ಇಲಾಖೆಯಿಂದ ಅನುಮೋದನೆ ಪಡೆಯದ ಜೀರ್ಣೋದ್ಧಾರ ಅಥವಾ ಅಭಿವೃದ್ಧಿ ಸಮಿತಿಯ ಹೆಸರಿನಲ್ಲಿ ಭಕ್ತರಿಂದ ಹಣ ಸಂಗ್ರಹಿಸುವುದು, ಕಾಮಗಾರಿಗಳನ್ನು ಕೈಗೊಳ್ಳುವುದು ಹಾಗೂ ಅನಧಿಕೃತ ಸಭೆಗಳನ್ನು ನಡೆಸುವುದು ನಿಯಮಬಾಹಿರವಾಗಿದೆ ಎಂದು ವಿರೂಪಾಕ್ಷ ಭಟ್ ಆರೋಪಿಸಿದರು.

ಅನುಮೋದನೆ ಪಡೆಯದ ಸಮಿತಿಯ ಹೆಸರಿನಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಿರುವುದು ಮತ್ತು ಪತ್ರಿಕೆಗಳಲ್ಲಿ ಟೆಂಡರ್ ಪ್ರಕಟಣೆಗಳನ್ನು ನೀಡಿರುವುದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದರು. ಇಲಾಖೆಯ ಅಧಿಕೃತ ಅನುಮೋದನೆ ಹಾಗೂ ನಿಗದಿತ ಪ್ರಕ್ರಿಯೆಗಳನ್ನು ಪಾಲಿಸದೆ ಇಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದೂರಿದರು.

ಉತ್ತರ ಭಾಗದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಆಕ್ಷೇಪ

ದೇವಸ್ಥಾನದ ಉತ್ತರ ಭಾಗದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದರ ಬಗ್ಗೆಯೂ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ಈ ಕಾಮಗಾರಿಗೆ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆದಿಲ್ಲ. ಅಲ್ಲದೆ, ಇದೇ ಜಮೀನಿಗೆ ಸಂಬಂಧಿಸಿದಂತೆ ಬೇರೆ ಬೇರೆ ನ್ಯಾಯಾಲಯಗಳಲ್ಲಿ ಪ್ರಕರಣಗಳು ಬಾಕಿಯಿದ್ದು, ತಡೆಯಾಜ್ಞೆಗಳಿದ್ದರೂ ಕಾಮಗಾರಿ ಮುಂದುವರಿಸಲಾಗಿದೆ ಎಂಬುದು ಅರ್ಜಿದಾರರ ಆರೋಪವಾಗಿದೆ.

ಐದು ಕಟ್ಟೆಗಳ ತೆರವು, ನೂತನ ಶಿಲಾಮಯ ಕಟ್ಟಡ ನಿರ್ಮಾಣ

ದೇವಸ್ಥಾನದ ಹೊರಾಂಗಣದಲ್ಲಿದ್ದ ಐದು ಹಳೆಯ ಕಟ್ಟೆಗಳನ್ನು ತೆರವುಗೊಳಿಸಿ, ಧಾರ್ಮಿಕ ದತ್ತಿ ಇಲಾಖೆಯ ಅನುಮತಿ ಪಡೆಯದೆ ನೂತನ ಶಿಲಾಮಯ ಕಟ್ಟಡ ನಿರ್ಮಿಸಲಾಗಿದೆ ಎಂದು ವಿರೂಪಾಕ್ಷ ಭಟ್ ಆರೋಪಿಸಿದರು. ಈ ಕಾಮಗಾರಿಗೆ ಸಂಬಂಧಿಸಿದಂತೆ ಅನಧಿಕೃತವಾಗಿ ಹಣ ಸಂಗ್ರಹಿಸಲಾಗಿದ್ದು, ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸದೆ ಸರಕಾರದ ನಿಯಮಾವಳಿಗಳನ್ನು ಪಾಲಿಸದೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದು ದೂರಿದರು.

ಇದಲ್ಲದೆ, ದೇವಸ್ಥಾನಕ್ಕೆ ಸಂಬಂಧಿಸಿದ ನವಗ್ರಹ ಗುಡಿ, ಅಯ್ಯಪ್ಪ ಸನ್ನಿಧಿ ಹಾಗೂ ನಟರಾಜ ವೇದಿಕೆ ಸಭಾಂಗಣವನ್ನು ತೆರವುಗೊಳಿಸುವ ಸಂದರ್ಭದಲ್ಲಿಯೂ ಸರಕಾರದ ನಿಯಮದಂತೆ ಟೆಂಡರ್ ಪ್ರಕ್ರಿಯೆ ಮತ್ತು ಮೌಲ್ಯಮಾಪನ ನಡೆಸಿಲ್ಲ. ಅಗತ್ಯ ಇಲಾಖಾ ಅನುಮೋದನೆಯನ್ನೂ ಪಡೆದಿಲ್ಲ ಎಂದು ಅವರು ಆರೋಪಿಸಿದರು.

ಚಿನ್ನದ ಮುಖವಾಡಕ್ಕೆ ಚಿನ್ನ ಸಂಗ್ರಹ: ಸಮರ್ಪಕ ಮಾಹಿತಿ ಇಲ್ಲವೆಂಬ ಆರೋಪ

ಶ್ರೀ ದೇವರಿಗೆ ಚಿನ್ನದ ಮುಖವಾಡ ನಿರ್ಮಿಸುವ ಉದ್ದೇಶದಿಂದ ಭಕ್ತರಿಂದ ಕಾಣಿಕೆ ರೂಪದಲ್ಲಿ ಚಿನ್ನ ಸಂಗ್ರಹಿಸಲಾಗುತ್ತಿದೆ. ಆದರೆ ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಸಮರ್ಪಕ ಅನುಮತಿ ಪಡೆಯಲಾಗಿದೆಯೇ, ಆಗಮ ಪಂಡಿತರ ಅಭಿಪ್ರಾಯ ಹಾಗೂ ವರದಿ ಪಡೆಯಲಾಗಿದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಸಂಗ್ರಹಿಸಲಾದ ಚಿನ್ನದ ನಿರ್ವಹಣೆ ಮತ್ತು ಅದರ ಲೆಕ್ಕಪತ್ರಗಳ ಕುರಿತು ದೇವಸ್ಥಾನದಲ್ಲಿ ಸಮರ್ಪಕ ಮಾಹಿತಿ ಲಭ್ಯವಿಲ್ಲ ಎಂಬ ವಿಚಾರವನ್ನೂ ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.

ದೇವಸ್ಥಾನದ ಆಡಳಿತ ಸಮಿತಿ ನೇಮಕಗೊಂಡ ಬಳಿಕ ನಿರ್ವಹಿಸಲಾದ ವಾರ್ಷಿಕ ಲೆಕ್ಕಪತ್ರಗಳಲ್ಲಿನ ಲೋಪದೋಷಗಳ ಬಗ್ಗೆಯೂ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ದೇವಸ್ಥಾನದ ಆಡಳಿತದಲ್ಲಿ ಇಲಾಖಾ ನಿಯಮಗಳ ಉಲ್ಲಂಘನೆ ಹಾಗೂ ಕಾರ್ಯನಿರ್ವಹಣಾಧಿಕಾರಿಗಳ ಅಧಿಕಾರ ಬಳಕೆಯಲ್ಲಿನ ಲೋಪಗಳ ಬಗ್ಗೆಯೂ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.

ನ್ಯಾಯಾಲಯದ ಆದೇಶ ಪಾಲನೆಗೆ ಆಗ್ರಹ

ನ್ಯಾಯಾಲಯ ನೀಡಿರುವ ಮಧ್ಯಂತರ ತಡೆಯಾಜ್ಞೆಯ ಪ್ರಕಾರ, ಮುಂದಿನ ವಿಚಾರಣೆಯವರೆಗೆ ಇಲಾಖೆಯ ಅನುಮತಿ ಇಲ್ಲದ ಕಾಮಗಾರಿಗಳನ್ನು ನಡೆಸುವಂತಿಲ್ಲ. ಈಗಾಗಲೇ ಕರೆಯಲಾಗಿರುವ ನಿಯಮಬಾಹಿರ ಟೆಂಡರ್ ಪ್ರಕ್ರಿಯೆಗಳನ್ನು ಮುಂದುವರಿಸುವಂತಿಲ್ಲ. ಅನುಮೋದನೆ ಪಡೆಯದ ಜೀರ್ಣೋದ್ಧಾರ ಸಮಿತಿಯ ಹೆಸರಿನಲ್ಲಿ ಕಾಮಗಾರಿಗಳನ್ನು ನಡೆಸಲು ಅಥವಾ ಸಭೆಗಳನ್ನು ಆಯೋಜಿಸಿ ಕಾಮಗಾರಿಗಳನ್ನು ಮುಂದುವರಿಸಲು ಅವಕಾಶವಿಲ್ಲ. ಕಾಮಗಾರಿಗಳ ಹೆಸರನ್ನು ಬದಲಾಯಿಸಿ ಆದೇಶದ ವ್ಯಾಪ್ತಿಯಿಂದ ಹೊರಬಂದು ಮುಂದುವರಿಸುವ ಪ್ರಯತ್ನವೂ ಮಾಡಬಾರದು ಎಂಬುದು ನ್ಯಾಯಾಲಯದ ಆದೇಶದ ಆಶಯವಾಗಿದೆ ಎಂದು ವಿರೂಪಾಕ್ಷ ಭಟ್ ತಿಳಿಸಿದರು.

ನ್ಯಾಯಾಲಯದ ಆದೇಶವನ್ನು ಪ್ರತಿವಾದಿಗಳು ಗೌರವಿಸಬೇಕು. ಆದೇಶದ ವ್ಯಾಪ್ತಿಗೆ ಒಳಪಡುವ ಕಾಮಗಾರಿಗಳನ್ನು ತಕ್ಷಣ ಸ್ಥಗಿತಗೊಳಿಸಿ, ಮುಂದಿನ ದಿನಗಳಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಧಾರ್ಮಿಕ ದತ್ತಿ ಇಲಾಖೆಯ ಕಾನೂನುಬದ್ಧ ಅನುಮೋದನೆ ಮತ್ತು ಪಾರದರ್ಶಕ ಟೆಂಡರ್ ಪ್ರಕ್ರಿಯೆಯ ಮೂಲಕವೇ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ದೇವಸ್ಥಾನದ ಅಭಿವೃದ್ಧಿಗೆ ವಿರೋಧವಿಲ್ಲ

ದೇವಸ್ಥಾನದ ಅಭಿವೃದ್ಧಿಗೆ ನಮ್ಮ ಯಾವುದೇ ವಿರೋಧವಿಲ್ಲ. ದೇವಸ್ಥಾನ ಇನ್ನಷ್ಟು ಅಭಿವೃದ್ಧಿಯಾಗಬೇಕು, ಭಕ್ತರಿಗೆ ಉತ್ತಮ ಸೌಲಭ್ಯಗಳು ದೊರೆಯಬೇಕು ಎಂಬುದೇ ನಮ್ಮ ಆಶಯ. ಆದರೆ ಅಭಿವೃದ್ಧಿಯ ಹೆಸರಿನಲ್ಲಿ ಇಲಾಖಾ ನಿಯಮಗಳನ್ನು ಮೀರಿ, ಕಾನೂನುಬಾಹಿರವಾಗಿ ಕಾಮಗಾರಿಗಳನ್ನು ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ದೇವಸ್ಥಾನದ ಆಡಳಿತದಲ್ಲಿ ಗೊಂದಲ ಸೃಷ್ಟಿಯಾಗದೆ ಪಾರದರ್ಶಕ ವ್ಯವಸ್ಥೆ ಇರಬೇಕು. ಭಕ್ತರ ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಗೆ ಧಕ್ಕೆಯಾಗದಂತೆ ದೇವಸ್ಥಾನದ ಆಡಳಿತ ನಡೆಯಬೇಕು. ಕಾನೂನುಬದ್ಧ ಅನುಮೋದನೆ, ನಿಯಮಾನುಸಾರ ಹಣಕಾಸಿನ ನಿರ್ವಹಣೆ ಹಾಗೂ ಪಾರದರ್ಶಕತೆಯೊಂದಿಗೆ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ಒತ್ತಾಯಿಸಿದರು.

Ad Widget
Continue Reading

ಅಪರಾಧ

Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget alt="Ad Widget"/>

Ad Widget

ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget <> Ad Widget

ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!