ವಿಟ್ಲ
Farmer-ಕೋವಿ ಡೆಪಾಸಿಟ್ ಇಟ್ಟ ರೈತ ಮಂಗ ಓಡಿಸಲು 112 ಪೊಲೀಸ್ ಹೆಲ್ಪ್ ಲೈನಿಗೆ ಕರೆ ಮಾಡಿ ಬಿಸಿ ಮುಟ್ಟಿಸಿದ – ಆಡಿಯೋ ವೈರಲ್
ವಿಟ್ಲ : ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಬಿಲ್ಲಂಪದವಿನ ಕೃಷಿಕರೊಬ್ಬರು ವಿಟ್ಲ ಪೋಲಿಸರಿಗೆ ಬಿಸಿಮುಟ್ಟಸಿದ ಘಟನೆ ನಡೆದಿದೆ. ನ್ಯಾಯಾಲಯ ಸೂಚನೆ ನೀಡಿದ್ದರೂ ಠಾಣೆಯಲ್ಲಿ ಠೇವಣಿ ಇರಿಸಿದ್ದ ಕೋವಿಯನ್ನು ಪೊಲೀಸರು ವಾಪಸ್ ನೀಡದ ಕಾರಣ ಈ ಘಟನೆ ನಡೆದಿದೆ.
ಕೃಷಿಕ ನಿಶಾಂತ ನಾರಾಯಣರವರು ಅಳಿಕೆ ಗ್ರಾಮ ನಿವಾಸಿಯಾಗಿದ್ದು, ತಮ್ಮ ಕಾರ್ಯದ ಮೂಲಕ ಪೊಲೀಸರ ಕಣ್ತೆರೆಸಿದ್ದು, ಪೊಲೀಸರೇ ಮನೆಗೆ ಬಂದು ಕೋವಿಯನ್ನು ಮರಳಿಸಿದ್ದಾರೆ.
ಘಟನೆಯ ವಿವರ :
ಗ್ರಾಮೀಣ ಪ್ರದೇಶಗಳ ಕೃಷಿಕರು ಕಾಡು ಹಂದಿ ಹಾಗೂ ಕೋತಿಗಳ ಉಪಟಳವನ್ನು ಹತೋಟಿಗೆ ತರಲು ಪರವಾನಗಿ ಕೋವಿ ಇರಿಸಿಕೊಂಡಿರುತ್ತಾರೆ. ಆದರೆ ಚುನಾವಣಾ ನೀತಿ ಸಂಹಿತೆಯ ನೆಪವೊಡ್ಡಿ ಚುನಾವಣೆಯ ಸಮಯದಲ್ಲಿ ಕೃಷಿಕರು ಕೋವಿಯನ್ನು ಠಾಣೆಯಲ್ಲಿ ಠೇವಣಿ ಇಡುವ ನಿಯಮವನ್ನು ಜಿಲ್ಲಾಡಳಿತದ ಸೂಚನೆಯಂತೆ ಪೊಲೀಸ್ ಇಲಾಖೆ ಪ್ರತೀ ವರ್ಷ ನಡೆಸುತ್ತಿತ್ತು.
ಆದರೆ ಈ ಬಾರಿ ಕೋವಿಯನ್ನು ಠಾಣೆಗಳಲ್ಲಿ ಠೇವಣಿ ಇರಿಸಿದರೆ, ಕೃಷಿಕರಿಗೆ ಕಾಡುಹಂದಿ ಹಾಗೂ ಮಂಗಗಳ ಉಪಟಳ ಎದುರಾದರೆ ಏನು ಗತಿ ಎಂದು ಮರುಪ್ರಶ್ನಿಸಿದ್ದು ಈ ಹಿನ್ನೆಲೆಯಲ್ಲಿ ಕೆಲ ಕೃಷಿಕರಿಗೆ ವಿನಾಯಿತಿಯೂ ದೊರೆತ್ತಿತ್ತು. ಜಿಲ್ಲಾಧಿಕಾರಿಗೆ ರಿಯಾಯಿತಿ ನೀಡುವಂತೆ ಪತ್ರ ಬರೆದು ಕೋವಿಯ ಅಗತ್ಯತೆ ಬಗ್ಗೆ ತಿಳಿಸಿದ್ದರು. ತಮ್ಮ ಕೋವಿಯನ್ನು ವಿಟ್ಲ ಪೊಲೀಸ್ ಠಾಣೆಯಲ್ಲಿ ಠೇವಣಿ ಇರಿಸಿದ್ದರು. ಜಿಲ್ಲಾಧಿಕಾರಿಗಳು ಮನವಿಯನ್ನು ಪುರಸ್ಕರಿಸದ ಹಿನ್ನೆಲೆಯಲ್ಲಿ ಈ ಕುರಿತಾಗಿ ಎ.1 ರಂದು ಉಚ್ಚ ನ್ಯಾಯಾಲಯಕ್ಕೆ ಮಾಣಿಮೂಲೆ ಗೋವಿಂದ ಭಟ್ ಜತೆಗೆ ವಕೀಲ ಸುಬ್ರಹ್ಮಣ್ಯ ಭಟ್ ಮೂಲಕ ಮನವಿ ಸಲ್ಲಿಸಿದ್ದರು.
ಇದಾಗುತ್ತಿದ್ದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅರ್ಜಿಯ ಮರುಪರಿಶೀಲನೆಯನ್ನು ನಡೆಸಿ ಕೋವಿ ಠೇವಣಿಗೆ ವಿನಾಯಿತಿ ನೀಡುವ ಬಗ್ಗೆ ತಿಳಿಸಿದ್ದರು. ಹೀಗಿದ್ದರೂ ಕೋವಿಯನ್ನು ಹಿಂತಿರುಗಿಸದೆ, ನ್ಯಾಯಾಲಯದ ಆದೇಶವನ್ನು ಇಲಾಖೆ ಪಾಲಿಸಿರಲಿಲ್ಲ.
ಪೊಲೀಸರೇ ಕೋವಿ ಮನೆಗೆ ತಲುಪಿಸಿದರು :
ಎ.2ರಂದು, ತಮ್ಮ ತೋಟಕ್ಕೆ ಕೋತಿಗಳ ಹಿಂಡು ಬಂದು ಕೃಷಿಯನ್ನು ಹಾನಿ ಮಾಡುತ್ತಿವೆ ನನ್ನ ಬಳಿ ಈಗ ಕೋವಿ ಇಲ್ಲ. ತೋಟಕ್ಕೆ ಬಂದ ಕೋತಿಗಳನ್ನು ಓಡಿಸಿ ಎಂದು ನಿಶಾಂತ್ ಬಿಲ್ಲಂಪದವು 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ್ದರು. ಅದರಂತೆ ವಿಟ್ಲ ಪರಿಸರದ 112 ವಾಹನ ಬಿಲ್ಲಂಪದವುಗೆ ಬಂದು ಸಮಸ್ಯೆಗೆ ಸ್ಪಂದಿಸಿದ್ದರು. ಕೋವಿ ನೀಡದೇ ಹೋದರೆ ಪದೇ ಪದೇ ಇದೇ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ಅರಿತ ಪೊಲೀಸರು ಮರುದಿನವೇ ಕೋವಿಯನ್ನು ನಿಶಾಂತ್ ಬಿಲ್ಲಂಪದವು ಅವರ ಮನೆಗೆ ಹಿಂತಿರುಗಿಸಿದ್ದಾರೆ.
ವೈರಲ್ ಆದ ಆಡಿಯೋ :
ಚುನಾವಣಾ ನೀತಿ ಸಂಹಿತೆ ಪ್ರಕಾರ ಕೋವಿ ಡೆಪಾಸಿಟ್ ಮಾಡಿದ್ದ ಕಾರಣದಿಂದ ತೋಟಕ್ಕೆ ನುಗಿದ್ದ ಕೋತಿಯನ್ನು ಓಡಿಸಲು ಕೃಷಿಕರೋಬ್ಬರು 112 ಕ್ಕೆ ಕರೆ ಮಾಡಿ ʻತೋಟಕ್ಕೆ ಮಂಗ ಬಂದಿದೆ. ಕೂಡಲೇ ಬರಬೇಕುʼ ಎಂದು ಮನವಿ ಮಾಡಿದ್ದರು. ಸಂಜೆ 5 ಗಂಟೆಯ ವೇಳೆಗೆ ಅವರು ಫೋನ್ ಮಾಡಿದ್ದು, ರಾತ್ರಿ 8 ಗಂಟೆಯ ವೇಳೆಗೆ ವಿಟ್ಲ ಪೋಲಿಸರು ಅವರ ಮನೆಗೆ ಭೇಟಿ ನೀಡಿದ್ದಾರೆ. ತುರ್ತು ಪೊಲೀಸರನ್ನೇ ತೋಟಕ್ಕೆ ಕರೆಸಿದ ಘಟನೆ, ಪೊಲೀಸರ ಜೊತೆ ನಿಶಾಂತ್ ಬಿಲ್ಲಂಪದವು ನಡೆಸಿದ ಮಾತುಕತೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಅಪರಾಧ
Vitla-ವಿಟ್ಲ: ಅಕ್ರಮ ಜಾನುವಾರು ಸಾಗಾಟ: ಪಿಕಪ್ ವಾಹನ ವಶಕ್ಕೆ, ನಾಲ್ವರ ವಿರುದ್ಧ ಕೇಸ್
ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನ.10ರಂದು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ .ಪಿ. ಅಬ್ದುಲ್ಲಾ, ಸುಬ್ರಹ್ಮಣ್ಯ, ಉಷಾ ಎಸ್. ಶೆಟ್ಟಿ ಹಾಗೂ ಗುರುತೇಜ ವಿರುದ್ಧ ಪ್ರಕರಣ ದಾಖಲಾಗಿದೆ.
ವಿಟ್ಲ: ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನ.10ರಂದು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಎಂಬಲ್ಲಿ ನಡೆದಿದೆ.
ವಿಟ್ಲ ಪೊಲೀಸರು ಪಾದೆಕಲ್ಲು ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಆ ಮಾರ್ಗವಾಗಿ ಬಂದ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.
ವಾಹನದ ಚಾಲಕ ಬಂಟ್ವಾಳ ತಾಲೂಕಿನ ಕರೋಪಾಡಿ ನಿವಾಸಿ ಒ.ಪಿ. ಅಬ್ದುಲ್ಲಾ ಹಾಗೂ ವಾಹನದಲ್ಲಿದ್ದ ಸುಬ್ರಹ್ಮಣ್ಯ ಅವರನ್ನು ವಿಚಾರಿಸಿದಾಗ, ಜಾನುವಾರು ಸಾಗಾಟಕ್ಕೆ ಯಾವುದೇ ಪರವಾನಗಿ ಪಡೆದಿರಲಿಲ್ಲ ಎಂಬುದು ತಿಳಿದುಬಂದಿದೆ.
ಇದೇ ವೇಳೆ ಕಾರಿನಲ್ಲಿ ಸ್ಥಳಕ್ಕೆ ಆಗಮಿಸಿದ್ದ ಉಷಾ ಎಸ್. ಶೆಟ್ಟಿ ಹಾಗೂ ಗುರುತೇಜ ಅವರ ಸೂಚನೆಯ ಮೇರೆಗೆ ಜಾನುವಾರುಗಳನ್ನು ಸಾಗಿಸುತ್ತಿರುವುದಾಗಿ ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ
ವಿಟ್ಲ: ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಚಾಲೂಗೊಂಡ ಮರದ ಸಿಪ್ಪೆ ತೆಗೆಯುವ ಯಂತ್ರ; ನಾಲ್ವರು ಕಾರ್ಮಿಕರಿಗೆ ಗಂಭೀರ ಗಾಯ

ವಿಟ್ಲ: ಟ್ರ್ಯಾಕ್ಟರ್‌ಗೆ ಜೋಡಿಸಲಾಗಿದ್ದ ಮರದ ಸಿಪ್ಪೆ ತೆಗೆಯುವ ಯಂತ್ರವು ಪ್ರಯಾಣದ ವೇಳೆ ಏಕಾಏಕಿ ಚಾಲೂಗೊಂಡ ಪರಿಣಾಮ, ಟ್ರ್ಯಾಕ್ಟರ್‌ನಲ್ಲಿದ್ದ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಅಡ್ಯನಡ್ಕ ಸಮೀಪ ನಡೆದಿದೆ.
ಮರದ ಸಿಪ್ಪೆ ತೆಗೆಯುವ ಯಂತ್ರವನ್ನು ಟ್ರ್ಯಾಕ್ಟರ್‌ಗೆ ಜೋಡಿಸಲಾಗಿತ್ತು. ಅದೇ ಟ್ರ್ಯಾಕ್ಟರ್‌ನಲ್ಲಿ ನಾಲ್ವರು ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಟ್ರ್ಯಾಕ್ಟರ್ ಸ್ವಲ್ಪ ದೂರ ಸಾಗುತ್ತಿದ್ದಂತೆ ಅದರೊಂದಿಗೆ ಜೋಡಿಸಲಾಗಿದ್ದ ಯಂತ್ರವು ಏಕಾಏಕಿ ಚಾಲನೆಗೊಂಡಿದೆ. ಈ ವೇಳೆ ಕಾರ್ಮಿಕರು ಯಂತ್ರದತ್ತ ತಳ್ಳಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳುಗಳು ಉತ್ತರ ಭಾರತದ ಮೂಲದ ಕಾರ್ಮಿಕರೆಂದು ಹೇಳಲಾಗಿದೆ. ಘಟನೆ ನಡೆದ ತಕ್ಷಣ ಸ್ಥಳೀಯ ರಿಕ್ಷಾ ಚಾಲಕರು ಹಾಗೂ ಅಡ್ಯನಡ್ಕ ಆಂಬ್ಯುಲೆನ್ಸ್ ಸಿಬ್ಬಂದಿ ಗಾಯಾಳುಗಳನ್ನು ತುರ್ತಾಗಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.
ವಿಟ್ಲ ಪೊಲೀಸ್ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

-
ಬಿಗ್ ನ್ಯೂಸ್14 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಮಂಗಳೂರು14 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಅಂತರ ರಾಜ್ಯ11 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಬಿಗ್ ನ್ಯೂಸ್6 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
Uncategorized13 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್14 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ12 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್13 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















