ಸುಳ್ಯ
Padmaraj R. Poojary-ಯುವಕ – ಯುವತಿಯರಿಗೆ ಉದ್ಯೋಗ ಸೃಷ್ಟಿಯಾದರೆ ದೇಶ ಸದೃಢ; ಬಿಳಿನೆಲೆಯಲ್ಲಿ ನಡೆದ ಬಹಿರಂಗ ಚುನಾವಣಾ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ
ಕಡಬ: ಪ್ರತಿ ಯುವಕ – ಯುವತಿಯರಿಗೆ ಉದ್ಯೋಗ ಸಿಗಬೇಕು. ಪ್ರತಿ ಮನೆಯೂ ಸದೃಢಗೊಂಡಾಗ ಈ ಸಮಾಜ ಬಲಿಷ್ಠವಾಗುವುದರಲ್ಲಿ ಎರಡು ಮಾತಿಲ್ಲ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಡೆದ ಬಹಿರಂಗ ಚುನಾವಣಾ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಗೆ ಉದ್ದಿಮೆಗಳು ಬರಬೇಕು. ವಿದೇಶಿ ಬಂಡವಾಳ ಹೂಡಲು ಇಲ್ಲಿ ಸಾಕಷ್ಟು ಅವಕಾಶ ಇದೆ. ಮೆಡಿಕಲ್ ಟೂರಿಸಂ, ಶೈಕ್ಷಣಿಕ ಟೂರಿಸಂ, ಪ್ರವಾಸೋದ್ಯಮಕ್ಕೆ ವಿಫುಲ ಸಾಧ್ಯತೆಗಳಿವೆ. ಹೀಗಿರುವಾಗ ನಮ್ಮೂರಿನ ಯುವಕ – ಯುವತಿಯರು ಉದ್ಯೋಗಕ್ಕಾಗಿ ಹೊರ ಊರುಗಳಿಗೆ ಹೋಗುವ ಅವಶ್ಯಕತೆ ಇಲ್ಲ. ಜಿಲ್ಲೆಯಲ್ಲೇ ಉದ್ಯೋಗ ಸೃಷ್ಟಿಯಾದರೆ ಅದೇಷ್ಟೋ ಹೆತ್ತವರು ತಮ್ಮ ಮಕ್ಕಳ ಜೊತೆಯಲ್ಲೇ ಜೀವನ ಸಾಗಿಸಬಹುದು. ಇದನ್ನು ನನಸು ಮಾಡುವುದೇ ತನ್ನ ಹಾಗೂ ಕಾಂಗ್ರೆಸಿನ ಆದ್ಯತೆ ಎಂದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲ್ಲುವುದರಲ್ಲಿ ಯಾವುದೇ ಸಂದೇಹ ಬೇಡ ಎಂದರು.
ಕಾಂಗ್ರೆಸ್ ಜಿಲ್ಲಾ ಸಮಿತಿ ಉಸ್ತುವಾರಿ ರಮಾನಾಥ ರೈ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸಿದೆ. ದೇಶದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ, ಈಗ ನೀಡಿರುವ ಭರವಸೆಗಳನ್ನು ಈಡೇರಿಸಲಾಗುವುದು ಎಂದ ಅವರು, ಪದ್ಮರಾಜ್ ಆರ್. ಪೂಜಾರಿ ಅವರನ್ನು ಸಂಸತ್ ಸದಸ್ಯರಾಗಿ ಮಾಡಬೇಕಿದೆ ಎಂದರು.
ಸುಳ್ಯ ಕೆಪಿಸಿಸಿ ಉಸ್ತುವಾರಿ ಮಮತಾ ಗಟ್ಟಿ, ಸಂಯೋಜಕರಾದ ಶಕುಂತಳಾ ಶೆಟ್ಟಿ, ಜಿ. ಕೃಷ್ಣಪ್ಪ, ಚುನಾವಣಾ ವೀಕ್ಷಕ ಜಯಪ್ರಕಾಶ್ ರೈ, ಕಡಬ ಬ್ಲಾಕ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಪ್ರಚಾರ ಸಮಿತಿಯ ಪಿ.ಪಿ. ವರ್ಗೀಸ್, ವೆಂಕಪ್ಪ ಗೌಡ, ತಾಪಂ ಮಾಜಿ ಸದಸ್ಯರಾದ ಅಶೋಕ್ ನೆಕ್ರಾಜೆ, ಫಝಲ್, ಪ್ರಮುಖರಾದ ಸರ್ವೋತ್ತಮ ಗೌಡ, ಕಿರಣ್ ಬುಡ್ಲೆಗುತ್ತು, ಬಾಲಕೃಷ್ಣ ಬಲ್ಲೇರಿ, ಜಯರಾಜ್, ಗಣೇಶ್ ಕೈಕುರೆ ಮೊದಲಾದವರು ಉಪಸ್ಥಿತರಿದ್ದರು.
ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. ಅರ್ಚಕ ವೆಂಕಟೇಶ್, ಗಿರೀಶ್ ಕಳಿಗೆ, ವಿನೋದ್ ನೆಟ್ಟಣ, ಕಿಶೋರ್ ವಾಲ್ತಾಜೆ, ನಾಗೇಶ್ ಬಿಳಿನೆಲೆ ಬೈಲು, ರಾಮಕೃಷ್ಣ ಓಳ್ಳಾರು, ಮಹೇಶ್ ಕೈಕಂಬ ಉಪಸ್ಥಿತರಿದ್ದರು.
ಇಚ್ಲಂಪಾಡಿ ಸೈಂಟ್ ಜಾರ್ಜ್ ಚರ್ಚ್ ಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು. ಚರ್ಚ್ ಧರ್ಮಗುರು ಫಾ. ವರ್ಗೀಸ್ ಥೋಮಸ್ ಶುಭ ಹಾರೈಸಿದರು.
ಚರ್ಚ್ ಕಾರ್ಯದರ್ಶಿ ಜಾಕೋವಿಯಂ, ಖಜಾಂಚಿ ರಿನು ಮಡಿಪ್ಪು, ತಾಪಂ ಮಾಜಿ ಸದಸ್ಯೆ ವಲ್ಸಮ್ಮ, ಗ್ರಾಪಂ ಮಾಜಿ ಉಪಾಧ್ಯಕ್ಷ ಪ್ರವೀಣ್ ಪೂಜಾರಿ, ಸದಸ್ಯ ದಿನೇಶ್, ಡೈಸಿ ವರ್ಗೀಸ್, ಬೂತ್ ಅಧ್ಯಕ್ಷರಾದ ಹರೀಶ್ ಗೌಡ ಅಲೆಕ್ಕಿ, ಥೋಮಸ್ ಜಿ., ರಾಯ್ ಟಿ.ಕೆ., ಗ್ರಾಪಂ ಸದಸ್ಯೆ ರತ್ನಾವತಿ ಮೊದಲಾದವರು ಉಪಸ್ಥಿತರಿದ್ದರು.
ಐತ್ತೂರು ಸುಂಕದಗಟ್ಟೆ, ಮರ್ದಾಳ ನೆಕ್ಕಿತ್ತಡ್ಕ ದರ್ಗಾಕ್ಕೆ ಭೇಟಿ
ಸುಂಕದಕಟ್ಟೆ ಗಹೀಬಾನ್ ಶಾಹ್ ವಲಿಲ್ಲಾಹಿ ದರ್ಗಾ ಹಾಗೂ ಮರ್ದಾಳ ನೆಕ್ಕಿತ್ತಡ್ಕ ದರ್ಗಾಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.
ಸುಂಕದಕಟ್ಟೆ ದರ್ಗಾದ ಅಶ್ರಫ್ ಶೇಡಿಗುಂಡಿ, ತಾಪಂ ಮಾಜಿ ಸದಸ್ಯ ಫಝಲ್, ಡಿಸಿಸಿ ಸದಸ್ಯ ಸೈಮನ್, ಗ್ರಾಪಂ ಸದಸ್ಯ ಈಸುಬು ಹಾಗೂ ನೆಕ್ಕಿತ್ತಡ್ಕ ದರ್ಗಾದ ಕೆ.ಎಸ್. ಅಬ್ದುಲ್ ಹಮೀದ ತಂಞಳ್, ಮರ್ದಾಳ ಗ್ರಾಪಂ ಸದಸ್ಯ ಶಾಕೀರ್ ಪಿಳ್ಯ, ಐತ್ತೂರು ಗ್ರಾಪಂ ಮಾಜಿ ಅಧ್ಯಕ್ಷ ಎಂ.ಪಿ.ಯೂಸುಫ್, ಅಬ್ದುಲ್ ಹಮೀದ್ ಎ.ಎಸ್., ಅಬೂಬಕ್ಕರ್ ಪಿ., ಉಮ್ಮರ್ ಹಾಜಿ ಮೊದಲಾದವರು ಉಪಸ್ಥಿತರಿದ್ದರು.
ಸುಳ್ಯ
Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.
ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
-
ನಿಧನ ವಾರ್ತೆ9 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ8 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ8 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ8 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ9 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಅಂತರ ರಾಜ್ಯ8 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಅಂತರ ರಾಜ್ಯ8 hours agoWomen’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
-
ಸ್ಥಳೀಯ8 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ















