ನಿಧನ ವಾರ್ತೆ
S.K. Jain-ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಟಿವಿ ಮಾಧ್ಯಮದ ಮೊಟ್ಟ ಮೊದಲ ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್ ವಿಧಿವಶ
ಕನ್ನಡ ಟಿವಿ ಮಾಧ್ಯಮದ ಮೊಟ್ಟ ಮೊದಲ ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್(67) ರವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಏ.12ರಂದು ವಿಧಿವಶರಾಗಿದ್ದಾರೆ.
ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಾ.18ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರದಂದು ಇಹಲೋಕ ತ್ಯಜಿಸಿದ್ದಾರೆ.
2 ದಶಕಗಳ ಹಿಂದೆ ಟಿವಿ ಮಾಧ್ಯಮದ ಮೂಲಕ ಜ್ಯೋತಿಷ್ಯ ಕಾರ್ಯಕ್ರಮ ನಡೆಸಿದ್ದ ಜೈನ್ ಅವರು ಭಾರೀ ಸಂಚಲನ ಮೂಡಿಸಿದ್ದರು. ಕರ್ನಾಟಕ ಮಾಧ್ಯಮದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ಜೈನ್ ಅವರು, ರಾಶಿ ಭವಿಷ್ಯ, ಶುಭ-ಅಶುಭ, ಫಲಾಫಲ ಸೇರಿದಂತೆ ಜ್ಯೋತಿಷ್ಯದ ಪರಿಕರಗಳಲ್ಲಿ ನಿಖರತೆಯನ್ನು ತಂದುಕೊಟ್ಟಿದ್ದರು.
ವಿದ್ಯುನ್ಮಾನ ಮಾಧ್ಯಮದಲ್ಲಿ ಜ್ಯೋತಿಷಿ ಕಾರ್ಯಕ್ರಮ ನಡೆಸಿಕೊಡುವ ಮೂಲಕ ಕರ್ನಾಟಕದಲ್ಲಿ ಹೊಸ ಪರಂಪರೆ ಹಾಗೂ ಜ್ಯೋತಿಷ್ಯವನ್ನು ಮನೆ ಮನೆಗೆ ತಲುಪಿಸಿದ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ.
ಅಂದಿನ ಕಾಲಮಾನದಲ್ಲೇ ಎಸ್.ಕೆ. ಜೈನ್ ಅವರ ಕಾರ್ಯಕ್ರಮಕ್ಕೆ ಲಕ್ಷಾಂತರ ವೀಕ್ಷಕರಿದ್ದರು. ಬಹಳಷ್ಟು ವೀಕ್ಷಕರು ಕಾದಿದ್ದು ಜೈನ್ ಅವರ ಕಾರ್ಯಕ್ರಮ ವೀಕ್ಷಿಸುತ್ತಿದ್ದರು. ಎಸ್.ಕೆ. ಜೈನ್ ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ನಿಧನ ವಾರ್ತೆ
Mumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.
ಮುಂಬೈ: ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.
ಧುಲೆ ಜಿಲ್ಲೆಯ ಸಾವಲ್ಲೆ ಪ್ರದೇಶದಲ್ಲಿ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಜಲಗಾಂವ್ ಜಿಲ್ಲೆಯ ಅಮಲ್ನೇರ್ ತಾಲ್ಲೂಕಿನ ಮೂಲದ ಶ್ಯಾಮ್ ಹರಿ ಪಾಟೀಲ್ ಮತ್ತು ಸಪ್ನಾ ಪಾಟೀಲ್ ಎಂದು ಗುರುತಿಸಲಾಗಿದೆ. ಇಬ್ಬರೂ ಕೆಲವು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಲುಗಳಿಗೆ ಸರಪಳಿ, ಬೀಗ!
ದಂಪತಿಯ ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಅದಕ್ಕೆ ಬೀಗ ಹಾಕಲಾಗಿತ್ತು. ನದಿಯ ತಳಭಾಗದಲ್ಲಿ ಈ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆತ್ಮಹತ್ಯೆಯೋ, ಕೊಲೆಯೋ?
ನವದಂಪತಿಯ ಸಾವು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಸಾವಿನ ಹಿಂದಿನ ನೈಜ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.
ನಿಧನ ವಾರ್ತೆ
Accident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ ಎಂದು ಗುರುತಿಸಲಾಗಿದೆ.
ಮೂಡುಬಿದಿರೆ, ಅ.8: ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ.
ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ (17) ಎಂದು ಗುರುತಿಸಲಾಗಿದೆ.
ಪ್ರಶ್ವಿತ್ ಹೆಗ್ಡೆ ಹಾಗೂ ದೀಕ್ಷಿತ್ ಹೆಗ್ಡೆ ಒಂದೇ ಸ್ಕೂಟರ್‌ನಲ್ಲಿ ಶಿರ್ತಾಡಿ ಕಡೆಯಿಂದ ಕೋಟೆಬಾಗಿಲು ಕಡೆಗೆ ತೆರಳುತ್ತಿದ್ದರು. ಕೋಟೆಬಾಗಿಲಿನ ವೀರ ಮಾರುತಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.
ಅಪಘಾತದ ಪರಿಣಾಮ ಪ್ರಶ್ವಿತ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜೊತೆಯಲ್ಲಿದ್ದ ದೀಕ್ಷಿತ್ ಅವರ ತಲೆಗೂ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಇಬ್ಬರನ್ನೂ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಪ್ರಶ್ವಿತ್ ಅವರ ತಲೆಗೆ ಗಂಭೀರ ಆಂತರಿಕ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ತಂದೆಯ ಹೋಟೆಲ್‌ನಲ್ಲಿ ತಿಂಡಿ ಸೇವಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Beltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ: ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.
ಅ.4ರಂದು ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದೆ ಎನ್ನಲಾಗಿದೆ. ಪರಿಣಾಮ ನಝರ್ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
-
Uncategorized12 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized15 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized14 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized16 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized15 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized14 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |


















