ಮಂಗಳೂರು
Pm Modi’s roadshow- ಮಂಗಳೂರಿನಲ್ಲಿ ಇಂದು ರಾತ್ರಿ 7.45ಕ್ಕೆ ನಮೋ ರೋಡ್ ಶೋ : ವಾಹನ ಸಂಚಾರದ ಸಂಪೂರ್ಣ ಮಾಹಿತಿ ಇಲ್ಲಿದೆ
ಮಂಗಳೂರು : ಎ 14 ರಂದು (ಇಂದು) ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು ಸಮಯ ಬದಲಾವಣೆ ಮಾಡಲಾಗಿದೆ. ಈ ಹಿಂದೆ ನಿಗದಿಯಾಗಿದ್ದ ಸಂಜೆ 5 ರ ಬದಲು ರಾತ್ರಿ 7.45ಕ್ಕೆ ರೋಡ್ ಶೋ ನಡೆಯಲಿದೆ.
ಮೋದಿ ಕಾರ್ಯಕ್ರಮದ ಸಂಕ್ಷಿಪ್ತ ನೋಟ
ಸಂಜೆ 7.30 ನಿಮಿಷಕ್ಕೆ ಮಂಗಳೂರು ಏರ್ ಪೋರ್ಟ್ ಗೆ ಬರಲಿರುವ ಮೋದಿ
* 7.45 ರ ವೇಳೆಗೆ ನಾರಾಯಣಗುರು ವೃತ್ತದ ಬಳಿ ಬರಲಿರುವ ಮೋದಿ
* ನಾರಾಯಣ ಗುರು ವೃತ್ತ,, ಲಾಲ್ ಬಾಗ್, ಬಳ್ಳಾಲ್ ಬಾಗ್, ಪಿವಿಎಸ್ ವೃತ್ತದ ಮಾರ್ಗವಾಗಿ ನವ ಭಾರತ್ ವೃತ್ತದಲ್ಲಿ ರೋಡ್ ಷೋ ಕೊನೆ
* ಸಾರ್ವಜನಿಕರು, ಕಾರ್ಯಕರ್ತರು, ಸಂಜೆ 6.30 ರ ಒಳಗಾಗಿ ರಸ್ತೆಯ ಇಕ್ಕೆಲಗಳಲ್ಲಿ ಹಾಜರಾಗಲು ಮನವಿ.
ರೋಡ್ ಶೋ ಸುಮಾರು ಒಂದು ಗಂಟೆ ಕಾಲ ಅಂದರೆ, 8.45ರ ವರೆಗೆ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಮಂಗಳೂರಲ್ಲಿ ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
ಲೇಡಿ ಹಿಲ್ ನಾರಾಯಣಗುರು ವೃತ್ತದಲ್ಲಿ ನಾರಾಯಣಗುರು ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮೋದಿಯವರ ರೋಡ್ ಶೋಗೆ ಚಾಲನೆ ಸಿಗಲಿದೆ. ಅಲ್ಲಿಂದ ತೆರೆದ ವಿಶೇಷ ವಾಹನದಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಈ ಸಂದರ್ಭ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತಿತರರು ಸಾಥ್ ನೀಡಲಿದ್ದಾರೆ ಎಂದರು
ಈ ಹಿನ್ನಲೆ ಮಂಗಳೂರು ನಗರಕ್ಕೆ ಆಗಮಿಸುವ ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಅದರಂತೆ ಎ. 14 ರಂದು ಈ ಕೆಳಗಿನ ವ್ಯವಸ್ಥೆಗಳನ್ನು ಪೊಲೀಸ್ ಇಲಾಖೆ ಮಾಡಿದೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಏ.14ರಂದು ಮಧ್ಯಾಹ್ನ 2 ಗಂಟೆಯಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ಮಂಗಳೂರು ನಗರದಲ್ಲಿ ವಾಹನಗಳ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದ್ದು, ವಾಹನಗಳ ಸಂಚಾರದ/ನಿಲುಗಡೆಯ ನಿಷೇಧಿತ ಸ್ಥಳ ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳಗಳ ವಿವರಗಳು ಈ ಕೆಳಗಿನಂತಿದೆ.
ವಾಹನ ಸಂಚಾರ ನಿಷೇಧಿತ ಮಾರ್ಗಗಳು
- ಪ್ರಧಾನಮಂತ್ರಿಗಳ ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್‌ಬಾಗ್ – ಬಲ್ಲಾಳ್‌ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ – ಹಂಪನಕಟ್ಟೆ ವರೆಗೆ ಮಧ್ಯಾಹ್ನದಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವ ವರೆಗೆ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
- ಕೆ.ಎಸ್.ಆರ್.ಟಿ.ಸಿ, ಶ್ರೀದೇವಿ ಕಾಲೇಜು ರಸ್ತೆ, ಕೊಡಿಯಾಲ್ ಗುತ್ತು ರಸ್ತೆ, ಜೈಲು ರಸ್ತೆ ಹಾಗೂ ಬಿಜೈ ಚರ್ಚ್ ರಸ್ತೆ ಮೂಲಕ ಎಂ.ಜಿ ರಸ್ತೆಗೆ ಬರುವ ಅಡ್ಡ ರಸ್ತೆ ಹಾಗೂ ಬಂಟ್ಸ್ ಹಾಸ್ಟೆಲ್ ಮೂಲಕ ಪಿ.ವಿ.ಎಸ್ ಕಡೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.
- ಕೊಟ್ಟಾರ ಚೌಕಿ, ಉರ್ವಾ ಸ್ಟೋರ್, ಕೋಟೆಕಣಿ ಕ್ರಾಸ್‌ನಿಂದ (ಲೇಡಿಹಿಲ್) ನಾರಾಯಣಗುರು ವೃತ್ತದ ಕಡೆಗೆ ಬರುವ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇಧಿಸಿದೆ.
- ಮಣ್ಣಗುಡ್ಡ ಜಂಕ್ಷನ್ ನಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
- ಕಾರ್ ಸ್ಟ್ರೀಟ್ – ಕುದ್ರೋಳಿ – ಕೂಳೂರು ಫೆರ್ರಿ ರಸ್ತೆ ಕಡೆಯಿಂದ ಅಡ್ಡ ರಸ್ತೆ ಮೂಲಕ ಎಂ.ಜಿ ರಸ್ತೆ ಪ್ರವೇಶಿಸುವ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.
- ಉರ್ವಾ ಮಾರ್ಕೆಟ್ ಕಡೆಯಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
- ಬಂಟ್ಸ್ ಹಾಸ್ಟೆಲ್, ಕರಂಗಲ್ಪಾಡಿ, ಕೋರ್ಟ್ ಕ್ರಾಸ್ ರಸ್ತೆಯಿಂದ ಪಿವಿಎಸ್, ಎಂ.ಜಿ. ರೋಡ್ ಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.
- ಕೆ.ಎಸ್.ಆರ್.ಟಿ.ಸಿ ಯಿಂದ ಲಾಲ್‌ಬಾಗ್ ಮುಖಾಂತರ ನಾರಾಯಣ ಗುರು ವೃತ್ತ (ಲೇಡಿಹಿಲ್)/ ಪಿವಿಎಸ್ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
- ಕೆ.ಎಸ್.ರಾವ್ ರೋಡ್, ಡೊಂಗರಕೇರಿ ರಸ್ತೆ, ಗದ್ದೆಕೇರಿ ರೋಡ್, ವಿ.ಟಿ. ರೋಡ್, ಶಾರದಾ ವಿದ್ಯಾಲಯ ರಸ್ತೆ ಯಿಂದ ನವಭಾರತ್ ಸರ್ಕಲ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.
- ಎಂ.ಜಿ ರಸ್ತೆಯಿಂದ ಜೈಲ್ ರೋಡ್ ಮುಖಾಂತರ ಬಿಜೈ ಚರ್ಚ್ ರೋಡ್ ಕಡೆಗೆ ಬರುವ ಎಲ್ಲಾ ವಾಹನದ
ಸಂಚಾರ ನಿಷೇಧಿಸಿದೆ. - ವಾಹನ ಪಾರ್ಕಿಂಗ್ ನಿಷೇಧಿತ ಸ್ಥಳಗಳು:
- ಪ್ರಧಾನಮಂತ್ರಿಗಳು ಸಂಚರಿಸುವ ಬಜಪೆ ವಿಮಾನ ನಿಲ್ದಾಣದಿಂದ ಕೆಂಜಾರು – ಮರವೂರು- ಕಾವೂರು- ಬೊಂದೇಲ್- ಮೇರಿಹಿಲ್ – ಕೆ.ಪಿ.ಟಿ – ಕೊಟ್ಟಾರ ಚೌಕಿ – ಉರ್ವ ಸ್ಟೋರ್ – ಶ್ರೀ ನಾರಾಯಣ ಗುರು ವೃತ್ತ (ಲೇಡಿಹಿಲ್) ವರೆಗೆ ರಸ್ತೆಯ ಎರಡು ಬದಿಯಲ್ಲಿ ರೋಡ್ ಶೋ ಮುಗಿಯುವವರೆಗೆ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.
- ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್‌ಬಾಗ್ – ಬಲ್ಲಾಳ್‌ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ – ಸಿಟಿ ಸೆಂಟರ್ – ಹಂಪನಕಟ್ಟೆಯಲ್ಲಿ ರೋಡ್ರ ಶೋ ಸಮಾಪ್ತಿಯವರೆಗೆ ರಸ್ತೆಯ ಎರಡೂ ಬದಿಯಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.
- ಮೋದಿಯವರು ವಾಪಸ್ಸು ಬಜಪೆ ವಿಮಾನ ನಿಲ್ದಾಣ ಕಡೆಗೆ ಸಂಚರಿಸುವ ರಸ್ತೆಯಾದ ಹಂಪನಕಟ್ಟ – ಎಲ್.ಹೆಚ್.ಹೆಚ್ – ಬಾವುಟಗುಡ್ಡ – ಡಾ.ಅಂಬೇಡ್ಕರ್ ವೃತ್ತ – ಬಂಟ್ಸ್ ಹಾಸ್ಟೆಲ್ – ಭಾರತ್ ಬೀಡಿ – ಕದ್ರಿ ಕಂಬಳ – ಭಟ್ಟಗುಡ್ಡೆ ರಸ್ತೆಯ ಎರಡು ಬದಿಯಲ್ಲಿ ಪ್ರ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
- ಹಂಪನಕಟ್ಟ – ಎಲ್.ಹೆಚ್.ಹೆಚ್ – ಬಲ್ಮಠ ರೋಡ್ – ರೂಪಾ ಹೋಟೆಲ್ ರಸ್ತೆ – ಡಾ.ಅಂಬೇಡ್ಕರ್ ವೃತ್ತ – ಕಲೆಕ್ಟರ್ಸ್ ಗೇಟ್ ವೃತ್ತ – ಹಾರ್ಟಿಕಲ್ಚರ್ ಜಂಕ್ಷನ್ – ಸೈಂಟ್ ಆಗ್ನೇಸ್ – ಶಿವಭಾಗ್ – ನಂತೂರು ವೃತ್ತ – ಪದುವಾ – ಕೆ.ಪಿ.ಟಿ ವರೆಗೆ ಎರಡು ಬದಿಯ ರಸ್ತೆಗಳಲ್ಲಿ ಕಾರ್ಯಕ್ರಮ ಮುಗಿಯುವವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
- ಕಾವೂರು – ಪಂಜಿಮೊಗೆರು – ಕೂಳೂರು – 4 ನೇ ಮೈಲು – ಕೊಟ್ಟಾರಚೌಕಿ ರವರೆಗೆ ರಸ್ತೆಯ ಎರಡು ಬದಿಯ ಕಾರ್ಯಕ್ರಮ ಮುಗಿಯುವವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
- ಬಿ.ಜಿ. ಜಂಕ್ಷನ್ – ಜೈಲ್ ರೋಡ್ – ಬಿಜೈ ಚರ್ಚ್ ರೋಡ್ ರವರೆಗೆ ಎರಡು ಬದಿಯ ರಸ್ತೆಗಳಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
- ವಾಹನ ಸಂಚಾರದ ಪರ್ಯಾಯ ವ್ಯವಸ್ಥೆಯ ವಿವರ
- ಉಡುಪಿ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ಎಲ್ಲಾ ಬಸ್ಸು ಹಾಗೂ ಎಲ್ಲಾ ರೀತಿಯ ವಾಹನಗಳು ಕೊಟ್ಟಾರ ಚೌಕಿ ಜಂಕ್ಷನ್ – ಕೆಪಿಟಿ ಜಂಕ್ಷನ್ – ನಂತೂರು ಜಂಕ್ಷನ್ – ಶಿವಭಾಗ್ ಜಂಕ್ಷನ್ – ಸೆಂಟ್ ಆಗ್ನೇಸ್ – ಹಾರ್ಟಿಕಲ್ಚರ್ ಜಂಕ್ಷನ್ – ಲೋವರ್ ಬೆಂದೂರು – ಕರಾವಳಿ ಜಂಕ್ಷನ್ – ಕಂಕನಾಡಿ ಜಂಕ್ಷನ್ – ಅವೇರಿ ಜಂಕ್ಷನ್ – ಮಿಲಾಗ್ರಿಸ್ ಜಂಕ್ಷನ್ – ಹಂಪನಕಟ್ಟ ಜಂಕ್ಷನ್ – ಕ್ಲಾಕ್ ಟವರ್ ಮೂಲಕ ಚಲಿಸುವುದು ಹಾಗೂ ಮಂಗಳೂರು ನಗರ ಸ್ಟೇಟ್‌ಬ್ಯಾಂಕ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ – ಕ್ಲಾಕ್ ಟವರ್ – ರೈಲ್ವೇ ಸ್ಟೇಷನ್ ಜಂಕ್ಷನ್ – ನಂದಿಗುಡ್ಡ ರೋಡ್ – ಕೋಟಿಚೆನ್ನಯ್ಯ ಸರ್ಕಲ್ – ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು.
- ಪಂಪುವೆಲ್ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ಬಸ್ಸು ಹಾಗೂ ಎಲ್ಲಾ ರೀತಿಯ ವಾಹನಗಳು ಕರಾವಳಿ ಜಂಕ್ಷನ್ – ಕಂಕನಾಡಿ ಜಂಕ್ಷನ್ – ಅವೇರಿ ಜಂಕ್ಷನ್ – ಮಿಲಾಗ್ರಿಸ್ ಜಂಕ್ಷನ್ – ಹಂಪನಕಟ್ಟ ಜಂಕ್ಷನ್ – ಕ್ಲಾಕ್ ಟವರ್ ಮೂಲಕ ಚಲಿಸುವುದು ಹಾಗೂ ಮಂಗಳೂರು ನಗರ ಸ್ಟೇಟ್‌ಬ್ಯಾಂಕ್ ಕಡೆಯಿಂದ ಪಂಪ್‌ವಲ್ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ – ಕ್ಲಾಕ್ ಟವರ್ – ರೈಲ್ವೇ ಸ್ಟೇಷನ್ ಜಂಕ್ಷನ್ – ನಂದಿಗುಡ್ಡ ರೋಡ್ – ಕೋಟಿಚೆನ್ನಯ್ಯ ಸರ್ಕಲ್ – ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು.
- ಬಿಜೈ ಚರ್ಚ್ ಕಡೆಯಿಂದ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಮುಖಾಂತರ ಕೊಟ್ಟಾರ ಕ್ರಾಸ್/ ಕುಂಟಿಕಾನದ ಕಡೆಗೆ ಸಂಚರಿಸುವುದು.
- ಕಾರ್‌ಸ್ಟ್ರೀಟ್ – ಕುದ್ರೋಳಿ ಕಡೆಯಿಂದ ಬರುವ ಎಲ್ಲಾ ವಾಹನಗಳನ್ನು ಮಣ್ಣಗುಡ್ಡೆ, ಉರ್ವಾ ಮಾರ್ಕೆಟ್ ಮುಖಾಂತರ ಅಶೋಕನಗರ ಕೋಡಿಕಲ್ ಕ್ರಾಸ್ ಮೂಲಕ ಸಂಚರಿಸುವುದು.
- ಕುಂಟಿಕಾನ ಕೊಟ್ಟಾರ ಕ್ರಾಸ್ ಕಡೆಯಿಂದ ಬರುವ ವಾಹನಗಳನ್ನು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ನ ಮುಖಾಂತರ ಬಿಜೈ ಚರ್ಚ್ ಕಡೆಗೆ ಸಂಚರಿಸುವುದು.
ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಸಂಜೆ 6.30ರ ಮುಂಚಿತವಾಗಿ ಈ ಕೆಳಕಂಡಂತೆ ಗುರುತಿಸಲಾದ ಪಾರ್ಕಿಂಗ್ ಸ್ಥಳಗಳಲ್ಲಿ ಅವರ ವಾಹನಗಳನ್ನು ನಿಲುಗಡೆಗೊಳಿಸಿ ಪ್ರಧಾನ ಮಂತ್ರಿಯವರ ರೋಡ್ ಶೋವನ್ನು ವೀಕ್ಷಣೆ ಮಾಡಲು ನಿಗದಿಪಡಿಸಿದ ಸ್ಥಳಗಳಲ್ಲಿ ಹಾಜರಿರುವುದು.
- ಕರಾವಳಿ ಮೈದಾನ
- ಲೇಡಿಹಿಲ್ ಶಾಲಾ ಮೈದಾನ
- ಲೇಡಿಹಿಲ್ ಚರ್ಚ್ ಮೈದಾನ
- ಉರ್ವ ಮಾರ್ಕೆಟ್ ಮೈದಾನ
- ಉರ್ವ ಸ್ಟೋರ್ ಮೈದಾನ
- ಉರ್ವ ಕೆನರಾ ಶಾಲಾ ಮೈದಾನ
- ನೆಹರೂ ಮೈದಾನ
- ಪುರಭವನ ಪಾರ್ಕಿಂಗ್ ಸ್ಥಳ
- ಕದ್ರಿ ಮೈದಾನ
- ಕೆಪಿಟಿ ಕಾಲೇಜು ಮೈದಾನ
- ಕೆಟಿಪಿ ಬಳಿಯ ಆರ್.ಟಿ.ಓ ಮೈದಾನ
- ಪದುವಾ ಕಾಲೇಜು ಮೈದಾನ
- ಗೋಲ್ಡ್ ಫಿಂಚ್ ಸಿಟಿ ಮೈದಾನ, ಕೂಳೂರು
- ಸುಲ್ತಾನ್ ಬತ್ತೇರಿ ಗ್ರೌಂಡ್ಸ್
- ಗೋಕರ್ಣಥೇಶ್ವರ ಕಾಲೇಜು ಗ್ರೌಂಡ್
- ಎಮ್ಮೆಕರೆ ಮೈದಾನ
- ಕೆನರಾ ಕಾಲೇಜು ಮೈದಾನ
- ಡೊಂಗರಕೇರಿ ಕೆನರಾ ಶಾಲಾ ಮೈದಾನ
- ಗಣಪತಿ ಶಾಲಾ ಮೈದಾನ
- ರಾಮಕೃಷ್ಣ ಶಾಲಾ ಮೈದಾನ, ಬಂಟ್ಸ್ ಹಾಸ್ಟೇಲ್
- ಸಿ.ವಿ ನಾಯಕ್ ಹಾಲ್ ಮೈದಾನ
- ಟಿ.ಎಂ.ಎ ಪೈ ಹಾಲ್ ಮೈದಾನ
- ಬಿ.ಇ.ಎಂ ಶಾಲಾ ಮೈದಾನ
- ಮಂಗಳೂರು ವಿಶ್ವವಿದ್ಯಾನಿಲಯ ಮೈದಾನ, ಹಂಪನಕಟ್ಟೆ
- ಮಿಲಾಗ್ರಿಸ್ ಚರ್ಚ್ ಪಾರ್ಕಿಂಗ್ ಗ್ರೌಂಡ್
- ಮಿಲಾಗ್ರಿಸ್ ಕಾಲೇಜು ಮೈದಾನ
- ಬಲ್ಮಠ ಶಾಂತಿ ನಿಲಯ ಮೈದಾನ
- ಸೆಂಟ್ ಸೆಬಾಸ್ಟಿನ್ ಹಾಲ್ ಪಾಕಿಂಗ್ (ಸೆಂಟ್ ಅಗ್ನೇಸ್ ಶಾಲೆ)
ಬ್ಯಾರಿಕೇಡ್ ಪಾಯಿಂಟ್‌ಗಳ ವಿವರ
ಗೌರವಾನ್ವಿತ ಭಾರತದ ಪ್ರಧಾನಮಂತ್ರಿರವರು ಮಂಗಳೂರಿಗೆ ಆಗಮಿಸುವ ಸಂಬಂಧ ಸಂಜೆ 5 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇದಿಸಲಾಗಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗವನ್ನು ಉಪಯೋಗಿಸುವಂತೆ ಕೋರಿದೆ.
- ಚಿಲಿಂಬಿ ಹಿಲ್ ರೋಡ್, ಕೂಳೂರು ಫೆರ್ರಿ ರೋಡ್ (ಲೇಡಿಹಿಲ್ ಕಡೆಗೆ ನಿಷೇಧಿಸಿದೆ)
- ಸುಲ್ತಾನ್ ಬತ್ತೇರಿ ರೋಡ್ (ಗಾಂಧಿನಗರ ರೋಡ್) (ಲೇಡಿಹಿಲ್ ಕಡೆಗೆ ನಿಷೇಧಿಸಿದೆ)
- ಮಣ್ಣಗುಡ್ಡೆ ಜಂಕ್ಷನ್ (ಲೇಡಿಹಿಲ್ ಕಡೆಗೆ ನಿಷೇಧಿಸಿದೆ)
- ಕೆ.ಎಸ್.ಆರ್.ಟಿ.ಸಿ ವೃತ್ತ (ಎಂ.ಜಿ ರೋಡ್ ಕಡೆಗೆ ನಿಷೇಧಿಸಿದೆ)
- ಬಿಜೈ ಚರ್ಚ್ ಬಳಿ (ಜೈಲ್ ರೋಡ್ ಕಡೆಗೆ ವಾಹನ ಸಂಚಾರ ನಿಷೇಧಿಸಿದೆ)
- ಭಟ್ಟಗುಡ್ಡ ಜಂಕ್ಷನ್ (ಕದ್ರಿ ಕಂಬಳ ಕಡೆ ನಿಷೇಧಿಸಿದೆ)
- ಮಲ್ಲಿಕಟ್ಟೆ ಜಂಕ್ಷನ್ (ಕದ್ರಿ ದೇವಸ್ಥಾನದ ದ್ವಾರದ ಬಳಿ) (ಬಂಟ್ಸ್‌ಹಾಸ್ಟೆಲ್ ಕಡೆಗೆ ಬರುವ ವಾಹನ ಸಂಚಾರ ನಿಷೇಧಿಸಿದೆ)
- ಮಿಲಾಗ್ರಿಸ್ ಕ್ರಾಸ್ ರೋಡ್ (ಬಲ್ಮಠ ರಸ್ತೆ ಕಡೆಗೆ ನಿಷೇಧಿಸಿದೆ)
- ಬಂಟ್ಸ್ ಹಾಸ್ಟೆಲ್ (ಪಿ.ವಿ.ಎಸ್ ಜಂಕ್ಷನ್ ಕಡೆಗೆ ನಿಷೇಧಿಸಿದೆ)
- ಕಾರ್‌ಸ್ಟ್ರೀಟ್ (ಕೆ.ಎಸ್.ರಾವ್ ರಸ್ತೆ ಕಡೆಗೆ ನಿಷೇಧಿಸಿದೆ)
- ಕಲೆಕ್ಟರ್ಸ್ವ ಗೇಟ್ (ಡಾ.ಅಂಬೇಡ್ಕರ್ ವೃತ್ತದ ಕಡೆಗೆ ನಿಷೇಧಿಸಿದೆ)
- ಆವೇರಿ ಜಂಕ್ಷನ್- 1 (ಜ್ಯೋತಿ ಕೆ.ಎಂ.ಸಿ ಆಸ್ಪತ್ರೆ ಕಡೆಗೆ ನಿಷೇಧಿಸಿದೆ)
- ಆವೇರಿ ಜಂಕ್ಷನ್- 2 (ಬಲ್ಮಠ ರಸ್ತೆ ಕಡೆಗೆ ನಿಷೇಧಿಸಿದೆ)
- ಡೊಂಗರಿಕೇರಿ ಜಂಕ್ಷನ್ (ದೇವಸ್ಥಾನದ ಬಳಿ) (ನವಭಾರತದ ಕಡೆಗೆ ನಿಷೇಧಿಸಿದೆ)
- ದುರ್ಗಾ ಮಹಲ್ ಜಂಕ್ಷನ್ (ಬಲ್ಲಾಳ್‌ಬಾಗ್ ಕಡೆಗೆ)
- ವೇರ್‌ಹೌಸ್ ಜಂಕ್ಷನ್ (ಬಲ್ಲಾಳ್‌ಬಾಗ್ ಕಡೆಗೆ)
- ಕೆ.ಬಿ ಕಟ್ಟೆ (ಹಂಪನಕಟ್ಟ, ಕೆ.ಎಸ್.ರಾವ್ ರಸ್ತೆ ಮತ್ತು ಎಲ್.ಹೆಚ್.ಹೆಚ್ ಕಡೆಗೆ ನಿಷೇಧಿಸಿದೆ)
- ಶ್ರೀನಿವಾಸ ಹೋಟೆಲ್ ಬಳಿ (ಜಿ.ಹೆಚ್.ಎಸ್ ರೋಡ್) (ಕೆ.ಎಸ್.ರಾವ್ ರಸ್ತೆ ಕಡೆಗೆ ನಿಷೇಧಿಸಿದೆ).
ನಿಧನ ವಾರ್ತೆ
Mangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ. ಕಂಕನಾಡಿಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಮೃತಪಟ್ಟ ದುರ್ದೈವಿ.
ಮಂಗಳೂರು: ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ.
ಕಂಕನಾಡಿಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಮೃತಪಟ್ಟ ದುರ್ದೈವಿ.
ನ.25ರಂದು ಸಂಜೆ ಸುಮಾರು 4.15ರ ವೇಳೆಗೆ ಶಾಲೆ ಮುಗಿದ ಬಳಿಕ ಬಾಲಕ ಮನೆಗೆ ತೆರಳಲು ಶಾಲೆಯ ಮುಂಭಾಗದಲ್ಲಿರುವ ಕಂಕನಾಡಿ–ಫಳ್ನೀರ್ ರಸ್ತೆಯನ್ನು ದಾಟುತ್ತಿದ್ದ. ಈ ವೇಳೆ ಫಳ್ನೀರ್ ಕಡೆಗೆ ತೆರಳಲು ನಿಂತಿದ್ದ ಖಾಸಗಿ ಬಸ್ ಚಾಲಕ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ಏಕಾಏಕಿ ಬಸ್ಸನ್ನು ಬಲಕ್ಕೆ ತಿರುಗಿಸಿ ಚಲಾಯಿಸಿದ್ದಾನೆ ಎನ್ನಲಾಗಿದೆ.
ಬಸ್ಸಿನ ಬಲಭಾಗ ಬಾಲಕನಿಗೆ ಡಿಕ್ಕಿಯಾದ ಪರಿಣಾಮ ಆತ ರಸ್ತೆಗೆ ಎಸೆಯಲ್ಪಟ್ಟಿದ್ದು, ಬಸ್ಸಿನ ಬಲ ಹಿಂಬದಿಯ ಚಕ್ರ ಬಾಲಕನ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಬಸ್ ಚಾಲಕ ಹಾಗೂ ಸ್ಥಳೀಯರು ತಕ್ಷಣವೇ ಸಮೀಪದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಂಜೆ 5.50ರ ಸುಮಾರಿಗೆ ಬಾಲಕ ಮೃತಪಟ್ಟಿದ್ದಾನೆ.
ಮಂಗಳೂರು
Priyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಮಂಗಳೂರು, ನ.26: ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಂಗಳೂರಿನ ತಣ್ಣೀರ್‌ಭವಿಯಲ್ಲಿರುವ ಪ್ರಸ್ತಾವಿತ ಸ್ಥಳವನ್ನು ಪರಿಶೀಲಿಸಿದರು. ಇಲ್ಲಿ ಸುಮಾರು 49 ಎಕರೆ ಭೂಮಿಯನ್ನು ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗಾಗಿ ಗುರುತಿಸಲಾಗಿದೆ.
ಈ ಉಪಕ್ರಮದ ಕುರಿತು ಮಾತನಾಡಿದ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು, “ನಾವು ಒಪ್ಪಿಕೊಂಡರೂ, ಒಪ್ಪಿಕೊಳ್ಳದಿದ್ದರೂ ಎಐ (AI) ಈಗ ನಮ್ಮ ಬದುಕಿನ ಭಾಗವಾಗಿದೆ. ಎಐ ಯುಗದಲ್ಲಿ ಡೇಟಾ ಸೆಂಟರ್‌ಗಳು ಅತ್ಯಗತ್ಯ ಮೂಲಸೌಕರ್ಯಗಳಾಗಿವೆ. ಆದರೆ, ನೀರು ಮತ್ತು ವಿದ್ಯುತ್‌ನ್ನು ಸಮರ್ಥವಾಗಿ ಬಳಸಿಕೊಂಡು, ಪರಿಸರದ ಮೇಲಿನ ನಮ್ಮ ಜವಾಬ್ದಾರಿಗಳಿಗೆ ಯಾವುದೇ ಧಕ್ಕೆಯಾಗದಂತೆ ಈ ಮಹತ್ವದ ಮೂಲಸೌಕರ್ಯವನ್ನು ಸುಸ್ಥಿರ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ತಂತ್ರಜ್ಞಾನ ಆಧಾರಿತ ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಎರಡೂ ಪರಸ್ಪರ ಪೂರಕವಾಗಿ ಸಾಗಬಲ್ಲವು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ” ಎಂದರು.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ ಈ ಉಪಕ್ರಮವನ್ನು ಪರಿಶೀಲಿಸಲಾಗುತ್ತಿದ್ದು, ನವೀಕರಿಸಬಹುದಾದ ಇಂಧನ ಬಳಕೆ, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಪರಿಸರ ಸ್ನೇಹಿ ಡಿಜಿಟಲ್ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.
ಒಟ್ಟು 49 ಎಕರೆ ಭೂಮಿಯಲ್ಲಿ, ಅನ್ವಯವಾಗುವ ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳ ಪ್ರಕಾರ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ನಿರ್ಮಾಣ ಕೈಗೊಳ್ಳಲು ಅವಕಾಶವಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸ್ಥಳದ ಕಾರ್ಯಸಾಧ್ಯತೆ, ಮೂಲಸೌಕರ್ಯದ ಅಗತ್ಯತೆಗಳು ಹಾಗೂ ಪರಿಸರ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು.
ಸ್ಥಳದ ಸೂಕ್ತತೆ, ಅಗತ್ಯ ಮೂಲಸೌಕರ್ಯಗಳ ಗುರುತಿಸುವಿಕೆ ಮತ್ತು ಸಮಗ್ರ ಶ್ವೇತಪತ್ರ ಸಿದ್ಧಪಡಿಸುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಪಾಲುದಾರರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. ಈ ಶ್ವೇತಪತ್ರದಲ್ಲಿ ಸ್ಥಳದ ಅವಕಾಶಗಳು, ಮಿತಿಗಳು ಮತ್ತು ಅಭಿವೃದ್ಧಿಯ ಸಾಧ್ಯತೆಗಳನ್ನು ವಿವರಿಸಲಾಗುವುದು. ಖಾಸಗಿ ವಲಯದ ಕಂಪನಿಗಳು ಹಾಗೂ ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ ನಡೆಸಲು ಇದು ಆಧಾರವಾಗಲಿದೆ.
ಎಐ ಯುಗಕ್ಕೆ ಸುಸ್ಥಿರ ಡಿಜಿಟಲ್ ಮೂಲಸೌಕರ್ಯ
ಕೃತಕ ಬುದ್ಧಿಮತ್ತೆ ಮತ್ತು ಇತರ ಉದಯೋನ್ಮುಖ ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯೊಂದಿಗೆ ಡೇಟಾ ಸೆಂಟರ್‌ಗಳು ಡಿಜಿಟಲ್ ಆರ್ಥಿಕತೆಯ ಅತ್ಯಗತ್ಯ ಮೂಲಸೌಕರ್ಯಗಳಾಗಿ ಹೊರಹೊಮ್ಮುತ್ತಿವೆ. ಈ ಬೆಳವಣಿಗೆಯ ಜೊತೆಗೆ ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಪರಿಸರ ಸಂರಕ್ಷಣಾ ಕ್ರಮಗಳಿಗೂ ಆದ್ಯತೆ ನೀಡುವುದು ಕರ್ನಾಟಕದ ಉದ್ದೇಶವಾಗಿದೆ.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ, ಪರಿಸರದ ಜವಾಬ್ದಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿಯ ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲಿ 1 GW ಸಾಮರ್ಥ್ಯದ ಡೇಟಾ ಸೆಂಟರ್ ಮೂಲಸೌಕರ್ಯವನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ.
ತಣ್ಣೀರ್‌ಭವಿಯಲ್ಲಿ ಪ್ರಸ್ತಾವಿತವಾಗಿರುವ ಡೇಟಾ ಸೆಂಟರ್‌ನಲ್ಲಿ ನವೀಕರಿಸಬಹುದಾದ ಇಂಧನ, ಇಂಧನ ದಕ್ಷತೆಯ ಕಾರ್ಯಾಚರಣೆಗಳು, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಜವಾಬ್ದಾರಿಯುತ ನೀರಿನ ನಿರ್ವಹಣೆಗೆ ಒತ್ತು ನೀಡುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಮೂಲಕ ಕರಾವಳಿ ಪರಿಸರಕ್ಕೆ ಪೂರಕವಾಗಿ ಬೃಹತ್ ಡಿಜಿಟಲ್ ಮೂಲಸೌಕರ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದನ್ನು ತೋರಿಸುವುದು ಉದ್ದೇಶವಾಗಿದೆ.
ಮಂಗಳೂರು, ಮಣಿಪಾಲ ಮತ್ತು ಉಡುಪಿ: ಉದಯೋನ್ಮುಖ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರಗಳು
ಪ್ರಸ್ತಾವಿತ ಡೇಟಾ ಸೆಂಟರ್ ಕರ್ನಾಟಕದ ಕರಾವಳಿ ಭಾಗವನ್ನು ಸಮೃದ್ಧ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ರೂಪಿಸುವ ರಾಜ್ಯದ ವಿಶಾಲ ದೂರದೃಷ್ಟಿಯ ಭಾಗವಾಗಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs), ಸ್ಟಾರ್ಟ್‌ಅಪ್‌ಗಳು, ಡೀಪ್‌ಟೆಕ್, ಸಾಗರ ಜೈವಿಕ ತಂತ್ರಜ್ಞಾನ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಆದ್ಯತೆ ನೀಡುವ ಮೂಲಕ ಮಂಗಳೂರು, ಮಣಿಪಾಲ ಮತ್ತು ಉಡುಪಿಯನ್ನು ಪರಸ್ಪರ ಪೂರಕವಾದ ತಂತ್ರಜ್ಞಾನ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಪ್ರತಿಭಾ ವಿಕಸನಕ್ಕೂ ಒತ್ತು ನೀಡಲಾಗುತ್ತಿದೆ.
ಈ ಪ್ರದೇಶವು ಈಗಾಗಲೇ ಸುಮಾರು ₹5,000 ಕೋಟಿ ಮೌಲ್ಯದ ಐಟಿ ರಫ್ತುಗಳನ್ನು ದಾಖಲಿಸಿದ್ದು, ಕರ್ನಾಟಕದ ತಂತ್ರಜ್ಞಾನ ಆರ್ಥಿಕತೆಗೆ ತನ್ನ ಕೊಡುಗೆಯನ್ನು ಹೆಚ್ಚಿಸುತ್ತಿದೆ. ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ನ್ಯಾನೋ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಗೆ ಉತ್ತೇಜನ ನೀಡುವುದು ಮತ್ತು ಸ್ಥಳೀಯ ಪ್ರತಿಭೆಗಳಿಗೆ ಉನ್ನತ ಮೌಲ್ಯದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಬೆಳವಣಿಗೆಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಹೆಚ್ಚಿನ ಅವಕಾಶಗಳನ್ನು ಕಾಣುತ್ತಿದೆ.
ಬಿಯಾಂಡ್ ಬೆಂಗಳೂರು ಎಂಬ ದೂರದೃಷ್ಟಿಯ ಮೂಲಕ ರಾಜ್ಯದಾದ್ಯಂತ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ತಂತ್ರಜ್ಞಾನ ಕ್ಲಸ್ಟರ್‌ಗಳನ್ನು ನಿರ್ಮಿಸಲು ಕರ್ನಾಟಕ ಬದ್ಧವಾಗಿದೆ. ಈ ಮೂಲಕ ನಾವೀನ್ಯತೆ, ಹೂಡಿಕೆ ಮತ್ತು ಉದ್ಯೋಗಾವಕಾಶಗಳು ಬೆಂಗಳೂರು ಮಹಾನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.
ಪ್ರಸ್ತಾವಿತ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಮುಂದಿನ ತಲೆಮಾರಿನ ಡಿಜಿಟಲ್ ಮೂಲಸೌಕರ್ಯ, ಖಾಸಗಿ ವಲಯದ ಸಹಭಾಗಿತ್ವ ಮತ್ತು ಪರಿಸರ ಜವಾಬ್ದಾರಿಯನ್ನು ಒಂದೆಡೆ ತರುವ ಮಹತ್ವದ ಅವಕಾಶವಾಗಿದೆ. ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಒಟ್ಟೊಟ್ಟಿಗೆ ಸಾಗಬಲ್ಲವು ಎಂಬುದನ್ನು ತೋರಿಸುವ ಮೂಲಕ ಸದೃಢ ಹಾಗೂ ಭವಿಷ್ಯದ ಅಗತ್ಯಗಳಿಗೆ ಸನ್ನದ್ಧವಾಗಿರುವ ತಂತ್ರಜ್ಞಾನ ಆರ್ಥಿಕತೆಯನ್ನು ನಿರ್ಮಿಸುವುದು ಕರ್ನಾಟಕದ ವಿಶಾಲ ಉದ್ದೇಶವಾಗಿದೆ.
ಅಪರಾಧ
Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್‌ಐ ವಶಕ್ಕೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರು ಮಂಗಳೂರು ಮೂಲದವರಾಗಿದ್ದು, ಮತ್ತೊಬ್ಬರು ಕಾಸರಗೋಡು ಮೂಲದವರು ಎಂದು ತಿಳಿದುಬಂದಿದೆ. ದುಬೈ ಹಾಗೂ ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿ ಅಕ್ರಮ ಚಿನ್ನ ಸಾಗಾಟಕ್ಕೆ ನೆರವಾಗುತ್ತಿದ್ದ ಆರೋಪ ಇವರ ಮೇಲಿದೆ.
ವ್ಯವಸ್ಥಿತವಾಗಿ ನಡೆಯುತ್ತಿದ್ದ ಕಳ್ಳಸಾಗಣೆ
ದುಬೈ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ತೆರಳುತ್ತಿದ್ದರು ಎನ್ನಲಾಗಿದೆ. ಬಳಿಕ ಈ ಮಾಹಿತಿಯನ್ನು ಜಾಲದ ಸಂಪರ್ಕದಲ್ಲಿದ್ದ ವಿಮಾನ ನಿಲ್ದಾಣದ ಸಿಬ್ಬಂದಿಗೆ ತಲುಪಿಸಲಾಗುತ್ತಿತ್ತು. ವಿಮಾನಗಳ ನಿರ್ವಹಣಾ ಕಾರ್ಯ ಮುಗಿದ ಬಳಿಕ ಸಿಬ್ಬಂದಿ ಶೌಚಾಲಯಕ್ಕೆ ತೆರಳಿ, ಅಲ್ಲಿ ಅಡಗಿಸಿಟ್ಟ ಚಿನ್ನವನ್ನು ಹೊರತೆಗೆದು ತಮ್ಮ ಸಂಪರ್ಕದಲ್ಲಿದ್ದ ಕಳ್ಳಸಾಗಣೆದಾರರಿಗೆ ಹಸ್ತಾಂತರಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಖಚಿತ ಮಾಹಿತಿಯ ಮೇರೆಗೆ ಡಿಆರ್‌ಐ ಅಧಿಕಾರಿಗಳು ಆರೋಪಿಗಳ ಮೇಲೆ ನಿಗಾ ಇರಿಸಿದ್ದರು. ಅದರಂತೆ ನ. 23ರಂದು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನದ ಪೇಸ್ಟ್ ರೂಪದ ಎರಡು ಪ್ಯಾಕ್‌ಗಳನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಸಿಬ್ಬಂದಿಯನ್ನು ಅಧಿಕಾರಿಗಳು ಹಿಡಿದಿದ್ದಾರೆ.
ಈ ಚಿನ್ನವನ್ನು ಆತ ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಬೇಕಿತ್ತು. ಬಳಿಕ ಆ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸ್ಥಳಕ್ಕೆ ಚಿನ್ನವನ್ನು ಕೊಂಡೊಯ್ದು ಜಾಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ, 73 ಲಕ್ಷ ರೂ. ನಗದು, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಡಿ. 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.
ಇದಕ್ಕೂ ಮೊದಲು 1.77 ಕೋಟಿ ರೂ. ಮೌಲ್ಯದ ಚಿನ್ನ ವಶ
ಇದಕ್ಕೂ ಮುನ್ನ ನ. 14ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ಮೂಲದ ಇಬ್ಬರು ಪ್ರಯಾಣಿಕರು ದೇಹದೊಳಗೆ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದ ವೇಳೆ ಡಿಆರ್‌ಐ ಅಧಿಕಾರಿಗಳ ವಶಕ್ಕೆ ಸಿಕ್ಕಿದ್ದರು. ಅವರಿಂದ ಸುಮಾರು 1.77 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನಿಖೆಯ ಹಿತದೃಷ್ಟಿಯಿಂದ ಬಂಧಿತ ಆರೋಪಿಗಳ ಹೆಸರುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.
-
ನಿಧನ ವಾರ್ತೆ17 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಬಿಗ್ ನ್ಯೂಸ್12 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಅಪರಾಧ17 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ17 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ17 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ಬಿಗ್ ನ್ಯೂಸ್12 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ರಾಜಕೀಯ17 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ15 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು















