ಸುಳ್ಯ
Padmaraj R. Poojary-ಅಪಪ್ರಚಾರಕ್ಕೆ ಕಿವಿಗೊಡಬೇಡಿ; ಪ್ರೀತಿಯಿಂದಲೇ ಚುನಾವಣೆ ಎದುರಿಸೋಣ; ಸಂಪಾಜೆಯ ಕಲ್ಲುಗುಂಡಿಯಲ್ಲಿ ನಡೆದ ಕಾರ್ನರ್ ಮೀಟಿಂಗಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ
ಸುಳ್ಯ: ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ಸ್ಪಷ್ಟವಾಗಿದೆ. ಹಾಗಾಗಿ ವಿರೋಧಿಗಳ ಅಪಪ್ರಚಾರವೂ ಹೆಚ್ಚಾಗುತ್ತಿದೆ. ಮನೆಮನೆಗಳಿಗೆ ತೆರಳಿ ಆಣೆ – ಪ್ರಮಾಣ ಮಾಡಿಸುವ ಕೆಲಸಕ್ಕೂ ಮುಂದಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೇ, ಪ್ರೀತಿಯಿಂದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.

ಸಂಪಾಜೆಯಿಂದ ಕಲ್ಲುಗುಂಡಿವರೆಗೆ ರೋಡ್ ಶೋ ಬಳಿಕ ನಡೆದ ಕಾರ್ನರ್ ಮೀಟಿಂಗ್ ನಲ್ಲಿ ಮಾತನಾಡಿದರು.
ಪ್ರಜಾಪ್ರಭುತ್ವದ ದೊಡ್ಡ ಹಬ್ಬವಾದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ. ಅಭಿವೃದ್ಧಿಯ ವಿಚಾರವಾಗಿ ನಾವು ಚುನಾವಣೆಯನ್ನು ಎದುರಿಸಬೇಕಾಗಿದೆ ಎಂದರು.
ಬಿಜೆಪಿ ಸಂಸದರಿದ್ದ ಕಳೆದ ಮೂವತ್ಮೂರು ವರ್ಷಗಳಲ್ಲಿ ಜಿಲ್ಲೆ ಅಭಿವೃದ್ಧಿ ಶೂನ್ಯವಾಗಿದೆ. ಕಾಂಗ್ರೆಸ್ ಸಂಸದರಿದ್ದಾಗ ಆಗಿದ್ದ ಅಭಿವೃದ್ಧಿ, ಜಿಲ್ಲೆಗೆ ಬಂದಿದ್ದ ಯೋಜನೆಗಳು ಜಿಲ್ಲೆಯನ್ನು ಮಾದರಿಯಾಗಿ ರೂಪಿಸಿತ್ತು. ಮುಂದೆಯೂ ಜಿಲ್ಲೆ ದೇಶದಲ್ಲೇ ಮಾದರಿಯಾಗಿ ರೂಪುಗೊಳ್ಳಲು ಕಾಂಗ್ರೆಸನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಇಂದು ಅಭಿವೃದ್ಧಿಯ ವಿಚಾರವಾಗಿ ಚರ್ಚೆ ಆಗಬೇಕಾಗಿದೆ. ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ ಹಾಗೂ ನುಡಿದಂತೆ ನಡೆಯಲಿದ್ದೇವೆ. ಈಗಾಗಲೇ ಗ್ಯಾರೆಂಟಿ ಯೋಜನೆ ನೀಡಿ, ಅನುಷ್ಠಾನ ಮಾಡಲಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಇನ್ನು ಹಲವು ಗ್ಯಾರೆಂಟಿ ಯೋಜನೆಗಳು ಸಿಗಲಿವೆ ಎಂದರು.
ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ ಮಾತನಾಡಿ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅತ್ಯುತ್ತಮ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಪೂಜಾರಿ ಇದ್ದಾರೆ. ನಮ್ಮ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಗೇರುನಿಗಮದ ಅಧ್ಯಕ್ಷೆ ಮಮತ ಗಟ್ಟಿ, ಗ್ರಾ.ಪಂ. ಅಧ್ಯಕ್ಷೆ ಸುಮತಿ ಶಕ್ತಿವೇಲು, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಕಾಂಗ್ರೆಸ್ ಮುಖಂಡರಾದ ಜಿ. ಕೃಷ್ಣಪ್ಪ, ಟಿ.ಎಂ. ಶಹೀದ್, ವೆಂಕಪ್ಪ ಗೌಡ, ನಿತ್ಯಾನಂದ ಮುಂಡೋಡಿ, ಎಂ.ಎಸ್. ಮಹಮ್ಮದ್, ಜಿ.ಕೆ. ಹಮೀದ್, ಎಸ್.ಕೆ. ಹನೀಫ್, ಅಬೂಸಾಲಿ ಗೂನಡ್ಕ, ಕಿರಣ್ ಬುಡ್ಲೆಗುತ್ತು, ಮಹಮದ್ ಕುಂಞಿ ಗೂನಡ್ಕ, ಗೀತಾ ಕೋಲ್ಚಾರ್ , ಕೆ.ಪಿ. ಜಾನಿ ಕಲ್ಲುಗುಂಡಿ, ವಸಂತ ಪೆಲ್ತಡ್ಕ, ಎ.ಕೆ. ಇಬ್ರಾಹಿಂ, ಶೌವಾದ್ ಗೂನಡ್ಕ, ಯಮುನ ಬಿ.ಎಸ್., ಸುಂದರಿ ಮುಂಡಡ್ಕ, ಕಾಂತಿ ಬಿ.ಎಸ್., ಲೂಕಾಸ್ ಟಿ., ಲಿಸ್ಸಿ ಮೊನಾಲಿಸಾ, ರಾಜು ನೆಲ್ಲಿಕುಮೇರಿ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ವಹೀದಾ ಇಸ್ಮಾಯಿಲ್, ಡಿಸಿಸಿ ಉಪಾಧ್ಯಕ್ಷೆ ರಾಜೀವಿ ಆರ್. ರೈ, ಡಿಸಿಸಿ ಸದಸ್ಯೆ ಜೂಲಿಯಾನಾ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಭೇಟಿ:
ರೋಡ್ ಶೋ, ಕಾರ್ನರ್ ಸಭೆಯ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.
ಸುಳ್ಯ
Sullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸುಳ್ಯ, ಅ.11: ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೇರಳದ ಕೋಝಿಕ್ಕೋಡ್ ನಿವಾಸಿ ಮಹಮ್ಮದ್ ಅಲಿ (67) ಬಂಧಿತ ಆರೋಪಿ.
ಬಾಲಕೃಷ್ಣ ಎಂಬವರ ಮನೆಗೆ ಬೆಳಗ್ಗೆ ಬಂದ ಆರೋಪಿ, ಮನೆಯ ಬೀಗ ಮುರಿದು ಒಳನುಗ್ಗಿದ್ದಾನೆ. ಮನೆಯವರು ಕೆಲಸಕ್ಕೆ ತೆರಳುವಾಗ ಶಾಲೆಗೆ ರಜೆ ಇದ್ದ ಕಾರಣ ತಮ್ಮ ಮೂವರು ಮಕ್ಕಳನ್ನು ಮನೆಯೊಳಗೆ ಇರಿಸಿ ಹೊರಗಿನಿಂದ ಬೀಗ ಹಾಕಿ ಹೋಗಿದ್ದರು ಎನ್ನಲಾಗಿದೆ.
ಕಳ್ಳತನದ ಉದ್ದೇಶದಿಂದ ಮನೆಗೆ ನುಗ್ಗಿದ ವ್ಯಕ್ತಿಗೆ ಒಳಗಿದ್ದ ಮಕ್ಕಳು ಕಾಣಿಸಿಕೊಂಡಿದ್ದಾರೆ. ಇದರಿಂದ ಗಾಬರಿಗೊಂಡ ಆತ, ಮನೆಯ ಬಾಗಿಲಿನ ಚಿಲಕವನ್ನು ಹೊರಗಿನಿಂದ ಹಾಕಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಮಕ್ಕಳು ತಕ್ಷಣ ತಂದೆ ಬಾಲಕೃಷ್ಣ ಅವರಿಗೆ ಫೋನ್ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ಬಂದ ಬಾಲಕೃಷ್ಣ ಅವರು ಮಕ್ಕಳಿಂದ ಸಂಪೂರ್ಣ ಮಾಹಿತಿ ಪಡೆದು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಸುಳ್ಯ ಪೊಲೀಸರು ತನಿಖೆ ನಡೆಸಿ, ಆಲೆಟ್ಟಿ ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
-
ಅಂತರ ರಾಜ್ಯ14 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
ಮಂಗಳೂರು8 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಸುಳ್ಯ11 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಬಿಗ್ ನ್ಯೂಸ್9 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
ಬಿಗ್ ನ್ಯೂಸ್14 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
-
ಅಪರಾಧ11 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
ಸ್ಥಳೀಯ14 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಅಂತರ ರಾಜ್ಯ11 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್


















