ಸುಳ್ಯ
Kadaba-ಕಡಬ: ಆಸ್ಪತ್ರೆಯಿಂದಲೇ ಆಂಬ್ಯುಲೆನ್ಸ್‌ನಲ್ಲಿ ತೆರಳಿ ಸಿಇಟಿ ಬರೆದ ಆ್ಯಸಿಡ್ ದಾಳಿ ಸಂತ್ರಸ್ತೆ
ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಸ್ಪತ್ರೆಯಿಂದಲೇ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಬರೆದಿದ್ದಾರೆ.
ಮಾ. 4ರಂದು ಕಾಲೇಜಿನಲ್ಲಿ ಗಣಿತ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಜಿನ್ ಎಂಬಾತ ಆ್ಯಸಿಡ್ ಎರಚಿದ ಕಾರಣ ಮೂವರು ವಿದ್ಯಾರ್ಥಿನಿಯರಿಗೆ ಸುಟ್ಟಗಾಯಗಳಾಗಿತ್ತು. ಇಬ್ಬರು ವಿದ್ಯಾರ್ಥಿನಿಯರು 12% ಮತ್ತು 10% ಸುಟ್ಟಗಾಯಗಳನ್ನು – ಅನುಭವಿಸಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಖ್ಯ ಸಂತ್ರಸ್ತೆ 17 ವರ್ಷದ ಯುವತಿಗೆ ಸುಮಾರು 20% ಸುಟ್ಟಗಾಯಗಳಾಗಿತ್ತು. ಈಕೆ ಇನ್ನೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಕೆ ತನ್ನ ತಾಯಿಯೊಂದಿಗೆ ಐಸೋಲೇಶನ್ ವಾಡ್೯ನಲ್ಲಿ ಇದ್ದುಕೊಂಡೇ ಸಿಂಟಿಗೆ ತಯಾರಿ ನಡೆಸುತ್ತಿದ್ದರು.
ಸಿಇಟಿಗಾಗಿ ಈಜೆ ಮತ್ತು ಸಂತ್ರಸ್ತ ಇತರ ಇಬ್ಬರು ಸಹಪಾಠಿಗಳಿಗೆ ಪುತ್ತೂರಿನಲ್ಲಿ ಪರೀಕ್ಷಾ ಕೇಂದ್ರ ನಿಗದಿಯಾಗಿತ್ತು. 6 ಆದರೆ ಚಿಕಿತ್ಸೆ ವೇಳೆ ದೂರದ ಪ್ರಯಾಣ ಮಾಡದಂತೆ ಬಾಲಕಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಸಲಹೆ ನೀಡಿದ್ದ ಕಾರಣ ದ.ಕ ಜಿಲ್ಲಾ ಪದವಿ ಪೂರ್ವ ಇಲಾಖೆಯ ಉಪನಿರ್ದೆಶಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಸ್. ರಮ್ಯಾ ಅವರ ಗಮನಕ್ಕೆ ತಂದಿದ್ದರು. ಹೀಗಾಗಿ ಮಂಗಳೂರಿನ ಆಸ್ಪತ್ರೆಯಿಂದ ಸುಮಾರು ಒಂದು ಕಿ.ಮೀ ದೂರದಲ್ಲಿರುವ ಪದವಿಪೂರ್ವ ಕಾಲೇಜುನಲ್ಲಿ ಈಕೆಗೆ ಸಿಐಟಿ ಬರೆಯಲು ರಮ್ಯಾ ಅವರು ಅನುಮತಿ ನೀಡಿದ್ದರು.
ಅದರಂತೆ ವಿದ್ಯಾರ್ಥಿನಿ ಸಿಐಟಿ ಕೇಂದ್ರಕ್ಕೆ ತನ್ನ ತಾಯಿಯೊಂದಿಗೆ ಅಂಬ್ಯುಲೆನ್ಸ್‌ನಲ್ಲಿ ಬಂದಿದ್ದು ಆಕೆಗೆ ಪ್ರತ್ಯೇಕ ತರಗತಿಯನ್ನು ನೀಡಲಾಗಿತ್ತು. ಅಲ್ಲಿ ಮೊದಲ ದಿನ ಜೀವಶಾಸ್ತ್ರ ಪರೀಕ್ಷೆ ಬರೆದು ಬಳಿಕ ಮಧ್ಯಾಹ್ನ 12.15ಕ್ಕೆ ಆಸ್ಪತ್ರೆಗೆ ಮರಳಿ 2.30ಕ್ಕೆ ವಾಪಸ್ ಬಂದು ಗಣಿತ ಪತ್ರಿಕೆ ಬರೆದಿದ್ದಾರೆ. ಏ. 19ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯದ ಪರೀಕ್ಷೆಗಳನ್ನು ಬರೆದಿದ್ದಾರೆ.
ಆ್ಯಸಿಡ್ ದಾಳಿಯಿಂದ ಸಂತ್ರಸ್ತರಾಗಿರುವ ಮೂವರು ವಿದ್ಯಾರ್ಥಿನಿಯರೂ ಎಪ್ರಿಲ್ 29ರಂದು ಪ್ರಾರಂಭವಾಗುವ ಪಿಯುಸಿ ಮರು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ. ವೈದ್ಯರ ಸಲಹೆಯಂತೆ ಇಲಾಖೆಯು ಮರು ಪರಿಕ್ಷೆಗೆ ಹಾಜರಾಗಲು ಅನುಕೂಲವಾಗುವಂತೆ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ಮಾಹಿತಿ ನೀಡಿದ್ದಾರೆ.
ಸುಳ್ಯ
Sullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸುಳ್ಯ, ಅ.11: ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೇರಳದ ಕೋಝಿಕ್ಕೋಡ್ ನಿವಾಸಿ ಮಹಮ್ಮದ್ ಅಲಿ (67) ಬಂಧಿತ ಆರೋಪಿ.
ಬಾಲಕೃಷ್ಣ ಎಂಬವರ ಮನೆಗೆ ಬೆಳಗ್ಗೆ ಬಂದ ಆರೋಪಿ, ಮನೆಯ ಬೀಗ ಮುರಿದು ಒಳನುಗ್ಗಿದ್ದಾನೆ. ಮನೆಯವರು ಕೆಲಸಕ್ಕೆ ತೆರಳುವಾಗ ಶಾಲೆಗೆ ರಜೆ ಇದ್ದ ಕಾರಣ ತಮ್ಮ ಮೂವರು ಮಕ್ಕಳನ್ನು ಮನೆಯೊಳಗೆ ಇರಿಸಿ ಹೊರಗಿನಿಂದ ಬೀಗ ಹಾಕಿ ಹೋಗಿದ್ದರು ಎನ್ನಲಾಗಿದೆ.
ಕಳ್ಳತನದ ಉದ್ದೇಶದಿಂದ ಮನೆಗೆ ನುಗ್ಗಿದ ವ್ಯಕ್ತಿಗೆ ಒಳಗಿದ್ದ ಮಕ್ಕಳು ಕಾಣಿಸಿಕೊಂಡಿದ್ದಾರೆ. ಇದರಿಂದ ಗಾಬರಿಗೊಂಡ ಆತ, ಮನೆಯ ಬಾಗಿಲಿನ ಚಿಲಕವನ್ನು ಹೊರಗಿನಿಂದ ಹಾಕಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಮಕ್ಕಳು ತಕ್ಷಣ ತಂದೆ ಬಾಲಕೃಷ್ಣ ಅವರಿಗೆ ಫೋನ್ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ಬಂದ ಬಾಲಕೃಷ್ಣ ಅವರು ಮಕ್ಕಳಿಂದ ಸಂಪೂರ್ಣ ಮಾಹಿತಿ ಪಡೆದು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಸುಳ್ಯ ಪೊಲೀಸರು ತನಿಖೆ ನಡೆಸಿ, ಆಲೆಟ್ಟಿ ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
-
ಅಂತರ ರಾಜ್ಯ16 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
ಮಂಗಳೂರು10 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್11 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
ಸುಳ್ಯ14 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಬಿಗ್ ನ್ಯೂಸ್16 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
-
ಅಪರಾಧ14 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
ಸ್ಥಳೀಯ17 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಅಂತರ ರಾಜ್ಯ14 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್


















