ಮಂಗಳೂರು
Lok Sabha elections-ಲೋಕಸಭಾ ಚುನಾವಣೆ ಹಿನ್ನೆಲೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏ.24ರ ಸಂಜೆ 6ರಿಂದ 48 ಗಂಟೆ ಕಾಲ ಪ್ರತಿಬಂಧಕಾಜ್ಞೆ ಜಾರಿ
ಮಂಗಳೂರು, ಏ.26ರಂದು ನಡೆಯಲಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಚಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.24ರ ಸಂಜೆ 6 ಗಂಟೆಯಿಂದ ಏ.26ರ ರಾತ್ರಿ 10 ಗಂಟೆಯವರೆಗೆ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಸ್ಪೋಟಕ ವಸ್ತು ಕೊಂಡೊಯ್ಯುವಂತಿಲ್ಲ: ಕಲ್ಲುಗಳನ್ನು, ಕ್ಷಾರ ಪದಾರ್ಥ ಇಲ್ಲವೇ ಸ್ಫೋಟಕ ವಸ್ತುಗಳು, ಯಾವುದೇ ವಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
5ಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ: ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಚುನಾವಣಾ ಅಭ್ಯರ್ಥಿಯ ಬೆಂಬಲಿಗರು ಸೇರಿ 5 ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ, ಶಸ್ತ್ರ, ಬಡಿಗೆ, ಬರ್ಚಿ, ಖಡ್ಯ, ಗದೆ, ಬಂದೂಕು, ಚೂರಿ, ಲಾಠಿ, ದೊಡ್ಡ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್ಸ್ ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಿದೆ. ಮತದಾನದ ದಿನದಂದು ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ.
ಧ್ವನಿವರ್ಧಕ ಬಳಸುವಂತಿಲ್ಲ ಪ್ರತಿಕೃತಿ ದಹಿಸುವಂತಿಲ್ಲ: ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ಅಥವಾ ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿನ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಅಥವಾ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಥ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೆ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು. ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್-19 ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ,
ಮದುವೆ, ಧಾರ್ಮಿಕ ಮೆರವಣಿಗೆಯಲ್ಲೂ ನೀತಿ ಸಂಹಿತೆ ಉಲ್ಲಂಘನೆಯಾಗಬಾರದು: ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಯಮಗಳನ್ನು ಪಾಲಿಸುವುದು.ಮೇಲ್ಕಂಡ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳನ್ನು ಕೈಗೊಳ್ಳುವಂತಿಲ್ಲ.ಮೇಲ್ಕಂಡ ಅವಧಿಯಲ್ಲಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರುಗಳು ಕಡ್ಡಾಯವಾಗಿ ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು.
ಇದೂ ಗಮನದಲ್ಲಿರಲಿ: ಮತದಾನದ ದಿನದಿಂದ ಮತಗಟ್ಟೆಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್ ಕೋಡ್ರೆಸ್ ಫೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ(ಚುನಾವಣಾ ಕಾರ್ಯದಲ್ಲಿ ನಿರತರಾಗಿರುವ ಅಧಿಕಾರಿಗಳು ಸಿಬ್ಬಂದಿಗಳು ಹೊರತುಪಡಿಸಿ) ಮತದಾನ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್ ಬ್ಯಾನರ್ ಅಥವಾ ಇನ್ನೂ ಬಳಸುವಂತಿಲ್ಲ.
ಕಲ್ಯಾಣ ಮಂಟಪಗಳು/ಸಮುದಾಯ ಭವನಗಳು/ಹೋಟೆಲ್‌ಗಳು ಮತ್ತು ಅತಿಥಿ ಗೃಹಗಳಲ್ಲಿ ವಾಸ್ತವ್ಯ ಮಾಡಿರುವವರ ಪಟ್ಟಿಗಳ ಪರಿಶೀಲನೆ ಮಾಡಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ವ್ಯಕ್ತಿಗಳನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮ ವಹಿಸಲಾಗುತ್ತದೆ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ
Sahyadri College-ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ಹದಿನಾರನೇ ಎಂಜಿನಿಯರಿಂಗ್ ಪದವಿ ಪ್ರದಾನ ಸಮಾರಂಭ
ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್‌ಮೆಂಟ್, 2026ರ ಅಕ್ಟೋಬರ್ 10 ರಂದು ತನ್ನ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ (ಸ್ವಾಯತ್ತತೆಯ ಎರಡನೇ ಬ್ಯಾಚ್) 16ನೇ ಘಟಿಕೋತ್ಸವ ಸಮಾರಂಭವನ್ನು ಆಚರಿಸಿತು.

ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್‌ಮೆಂಟ್, 2026ರ ಅಕ್ಟೋಬರ್ 10 ರಂದು ತನ್ನ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ (ಸ್ವಾಯತ್ತತೆಯ ಎರಡನೇ ಬ್ಯಾಚ್) 16ನೇ ಘಟಿಕೋತ್ಸವ ಸಮಾರಂಭವನ್ನು ಆಚರಿಸಿತು. ವಿದ್ಯಾರ್ಥಿಗಳ ಶೈಕ್ಷಣಿಕ ಪಯಣದ ಪ್ರಮುಖ ಮೈಲಿಗಲ್ಲನ್ನು ಗುರುತಿಸುವ ಈ ಸಮಾರಂಭದಲ್ಲಿ ಆಡಳಿತ ಮಂಡಳಿ, ಬೋಧಕವರ್ಗ, ಪದವೀಧರರು ಮತ್ತು ಅವರ ಹಿತೈಷಿಗಳು ಪಾಲ್ಗೊಂಡಿದ್ದರು.

ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು, ನಂತರ ಪ್ರಾಂಶುಪಾಲರಾದ ಡಾ. ಎಸ್. ಎಸ್. ಇಂಜಗನೇರಿ ಅವರು ಸ್ವಾಗತ ಭಾಷಣದ ಮೂಲಕ ಸಭಿಕರನ್ನು ಸ್ವಾಗತಿಸಿದರು. ಎಲ್‌ಟಿಎಂ (LTM)ನ ಚೀಫ್ ಡೆಲಿವರಿ ಆಫೀಸರ್ ಆಗಿರುವ ಶ್ರೀ ಗುರುರಾಜ್ ದೇಶಪಾಂಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಘಟಿಕೋತ್ಸವ ಸಮಾರಂಭವನ್ನು ಅಧಿಕೃತವಾಗಿ ಉದ್ಘಾಟಿಸಿದರು.

ಉಪ ಪ್ರಾಂಶುಪಾಲರಾದ ಡಾ. ಸುಧೀರ್ ಶೆಟ್ಟಿ, ಮುಖ್ಯ ಅತಿಥಿ ಮತ್ತು ಪ್ರಾಂಶುಪಾಲರಿಂದ ಸನ್ಮಾನಿಸಲ್ಪಟ್ಟ ಚಿನ್ನದ ಪದಕ ವಿಜೇತರು ಮತ್ತು ಶ್ರೇಯಾಂಕ ಪಡೆದವರನ್ನು ಘೋಷಿಸಿದರು. ವಿದ್ಯಾರ್ಥಿಗಳ ಸಮರ್ಪಣೆ, ಪರಿಶ್ರಮ ಮತ್ತು ಶೈಕ್ಷಣಿಕ ಶ್ರೇಷ್ಠತೆಗೆ ಬದ್ಧತೆಯನ್ನು ಸನ್ಮಾನವು ಗುರುತಿಸಿತು.
ಮುಖ್ಯ ಅತಿಥಿಗಳಾದ ಶ್ರೀ ಗುರುರಾಜ್ ದೇಶಪಾಂಡೆ ಅವರು ಕೃತಕ ಬುದ್ಧಿಮತ್ತೆಯ (AI) ಪ್ರಭಾವವನ್ನು ಎತ್ತಿ ತೋರಿಸುವ ಸ್ಪೂರ್ತಿದಾಯಕ ಭಾಷಣ ಮಾಡಿದರು ಮತ್ತು ವಿಕಸನಗೊಳ್ಳುತ್ತಿರುವ ಜಗತ್ತಿನಲ್ಲಿ ಪ್ರಸ್ತುತವಾಗಿರಲು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮಹತ್ವವನ್ನು ಹೇಳಿದರು. ಅವರು ಪದವೀಧರರು ಪ್ರತಿದಿನ ಹೊಸದನ್ನು ಕಲಿಯಲು ಪ್ರೋತ್ಸಾಹಿಸಿದರು ಮತ್ತು ಬದಲಾಗುತ್ತಿರುವ ಸಂದರ್ಭಗಳಿಗೆ ಹೊಂದಿಕೊಳ್ಳಲು ಕಲಿಯುವುದನ್ನು ಬಿಟ್ಟು ಮತ್ತೆ ಕಲಿಯುವ ಅಗತ್ಯವನ್ನು ಹೇಳಿದರು.
ಪ್ರಸ್ತುತ ತಂತ್ರಜ್ಞಾನ-ಚಾಲಿತ ಜಗತ್ತಿನಲ್ಲಿ ಸಂವಹನ ಕೌಶಲ್ಯಗಳ ಮಹತ್ವವನ್ನು ಅವರು ಎತ್ತಿ ತೋರಿಸಿದರು ಮತ್ತು ಬ್ಯಾಂಕಿಂಗ್ ವಲಯದ ಬೆಳವಣಿಗೆಗೆ ಮಂಗಳೂರು ನೀಡಿದ ಕೊಡುಗೆಯನ್ನು ಗುರುತಿಸಿದರು.

ಅಲ್ಲದೆ, ಸಣ್ಣ ಹಾಗೂ ನಿರಂತರ ಅಭ್ಯಾಸಗಳು ಸಮಾಜದ ಮೇಲೆ ದೊಡ್ಡ ಪ್ರಭಾವವನ್ನು ಬೀರಬಲ್ಲವು ಎಂದು ಅವರು ಪ್ರತಿಪಾದಿಸಿದರು. ಸಾಧನೆಗೆ ಯಾವುದೇ ಅಡ್ಡದಾರಿಗಳಿಲ್ಲದಿರುವುದರಿಂದ, ಯಶಸ್ಸನ್ನು ಪಡೆಯಲು ಪರಿಶ್ರಮ, ಬದ್ಧತೆ ಮತ್ತು ತಾಳ್ಮೆ ಅತ್ಯಗತ್ಯ ಎಂಬುದನ್ನು ಅವರು ನೆನಪಿಸಿದರು. ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳುವುದು ಮತ್ತು ದೃಢವಾದ ಮೌಲ್ಯಗಳನ್ನು ಎತ್ತಿಹಿಡಿಯುವುದು ಎಷ್ಟು ಮುಖ್ಯ ಎಂಬುದನ್ನೂ ಅವರು ಒತ್ತಿ ಹೇಳಿದರು. ಅಂತಿಮವಾಗಿ, ಪ್ರತಿಯೊಬ್ಬರೂ ಜೀವನಪರ್ಯಂತ ಕಲಿಯುವ ಮನೋಭಾವವನ್ನು ಅಳವಡಿಸಿಕೊಳ್ಳುವಂತೆ ಮತ್ತು ತಮ್ಮ ಗುರಿಗಳನ್ನು ಸಾಧಿಸಲು ಪರಿಣಾಮಕಾರಿಯಾಗಿ ಶ್ರಮಿಸುವಂತೆ ಅವರು ಪ್ರೋತ್ಸಾಹಿಸಿದರು.
ಟ್ರಸ್ಟಿ ಮತ್ತು ಆಡಳಿತಾಧಿಕಾರಿ ಶ್ರೀ ಕೃಷ್ಣ ಹೆಗ್ಡೆ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಪದವೀಧರರು ತಮ್ಮ ಶಿಕ್ಷಣದ ಈ ಮಹತ್ವದ ಹಂತವನ್ನು ತಲುಪಿದ್ದಕ್ಕಾಗಿ ಅಭಿನಂದಿಸಿದರು. ಅವರು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನದ ಮಹತ್ವವನ್ನು ಹೇಳಿದರು ಮತ್ತು ವ್ಯಕ್ತಿಗಳನ್ನು ಜವಾಬ್ದಾರಿಯುತ ಮತ್ತು ನೈತಿಕ ನಾಗರಿಕರನ್ನಾಗಿ ರೂಪಿಸುವಲ್ಲಿ ಅದರ ಪಾತ್ರವನ್ನು ಎತ್ತಿ ತೋರಿಸಿದರು. ತಾಂತ್ರಿಕ ಪ್ರಗತಿಯ ಪ್ರಭಾವವನ್ನು ಅವರು ಚರ್ಚಿಸಿದರು ಮತ್ತು ನಿರಂತರ ಕಲಿಕೆ, ನಾವೀನ್ಯತೆ ಮತ್ತು ಸೃಜನಶೀಲತೆಯ ಮೂಲಕ ಬದಲಾಗುತ್ತಿರುವ ಕಾಲಕ್ಕೆ ಹೊಂದಿಕೊಳ್ಳುವ ಅಗತ್ಯವನ್ನು ಹೇಳಿದರು. ಉದಯೋನ್ಮುಖ ತಂತ್ರಜ್ಞಾನಗಳನ್ನು ಬಳಸುವಾಗ ಜವಾಬ್ದಾರಿಯನ್ನು ನಿರ್ವಹಿಸುವ ಮಹತ್ವವನ್ನು ಸಹ ಅವರು ಎತ್ತಿ ತೋರಿಸಿದರು.
ತಮ್ಮ ಮುಕ್ತಾಯದ ಮಾತುಗಳಲ್ಲಿ, ವಿದ್ಯಾರ್ಥಿಗಳಿಗೆ ಪೋಷಕರು ಮತ್ತು ಶಿಕ್ಷಕರ ನಿರಂತರ ಬೆಂಬಲ, ಮಾರ್ಗದರ್ಶನ ಮತ್ತು ಸಮರ್ಪಣೆಗಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಬೇಕು ಎಂದು ಶ್ರೀ ಕೃಷ್ಣ ಹೆಗ್ಡೆ ಹೇಳಿದರು.
ಗಣ್ಯರು ಮತ್ತು ಆಯಾ ವಿಭಾಗಗಳ ಮುಖ್ಯಸ್ಥರು ಈ ಕೆಳಗಿನ ವಿಭಾಗಗಳ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರಗಳನ್ನು ಪ್ರದಾನ ಮಾಡಿ, ಅವರ ಪದವಿಪೂರ್ವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ಔಪಚಾರಿಕವಾಗಿ ಗುರುತಿಸಿದರು: ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ (ಸಿಎಸ್), ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ – ಸೈಬರ್ ಸೆಕ್ಯುರಿಟಿ/ಕಂಪ್ಯೂಟರ್ ಇಂಟಿಗ್ರೇಟೆಡ್ (ಸಿಐ), ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ – ಕಂಪ್ಯೂಟರ್ ಸೈನ್ಸ್ ಮತ್ತು ಡಿಸೈನ್ (ಸಿಡಿ), ಇನ್ಫರ್ಮೇಷನ್ ಸೈನ್ಸ್ ಮತ್ತು ಎಂಜಿನಿಯರಿಂಗ್ (ಐಎಸ್), ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ (ಇಸಿ), ಮೆಕ್ಯಾನಿಕಲ್ ಎಂಜಿನಿಯರಿಂಗ್ (ಎಂಇ), ಮತ್ತು ರೊಬೊಟಿಕ್ಸ್ ಮತ್ತು ಆಟೊಮೇಷನ್ ಎಂಜಿನಿಯರಿಂಗ್ (ಆಎಂ).
ಸಮಾರಂಭದ ನಂತರ ಉಪ ಪ್ರಾಂಶುಪಾಲರಾದ ಡಾ. ಸುಧೀರ್ ಶೆಟ್ಟಿ ನೇತೃತ್ವದಲ್ಲಿ ಪ್ರಮಾಣ ವಚನ ಸ್ವೀಕರಿಸಲಾಯಿತು, ಈ ಸಂದರ್ಭದಲ್ಲಿ ಪದವೀಧರರು ಪದವಿ ಪ್ರಕ್ರಿಯೆಯ ಭಾಗವಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಶ್ರೀ ಸ್ಕಂದ ಗಣೇಶ್ ಪಿ. ವಿ. ಮತ್ತು ಕುಮಾರಿ ಆಶಿಕಾ ನಾಯರ್ ಅವರು ಪದವೀಧರರಾಗಿ ತಮ್ಮ ಅನುಭವಗಳನ್ನು ಹಂಚಿಕೊಂಡರು ಹಾಗೂ ಸಹ್ಯಾದ್ರಿಯಲ್ಲಿನ ತಮ್ಮ ಶೈಕ್ಷಣಿಕ ಪಯಣವನ್ನು ಮೆಲುಕು ಹಾಕಿದರು. ಅವರ ಈ ಅನಿಸಿಕೆಗಳು ಸಮಾರಂಭಕ್ಕೆ ವೈಯಕ್ತಿಕ ಆಯಾಮವನ್ನು ನೀಡಿದವು ಮತ್ತು ಸಂಸ್ಥೆಯಲ್ಲಿನ ಅವಧಿಯಲ್ಲಿ ಪಡೆದ ಕಲಿಕೆಯ ಅನುಭವಗಳ ಮಹತ್ವವನ್ನು ಎತ್ತಿ ತೋರಿಸಿದವು.
ಸಂಶೋಧನೆ ಮತ್ತು ಅಭಿವೃದ್ಧಿ (R&D) ಹಾಗೂ ಸಲಹಾ ವಿಭಾಗದ ನಿರ್ದೇಶಕರಾದ ಡಾ. ಮಂಜಪ್ಪ ಸಾರಥಿ ಅವರು ವಂದನಾರ್ಪಣೆ ನೆರವೇರಿಸಿದರು; ಅವರು ಗಣ್ಯರು, ಆಡಳಿತ ಮಂಡಳಿ, ಬೋಧಕವರ್ಗ, ಸಂಘಟಕರು ಹಾಗೂ ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಸಮಾಪ್ತಿಯಾಯಿತು. ಸಹ್ಯಾದ್ರಿ 16ನೇ ಘಟಿಕೋತ್ಸವ ಸಮಾರಂಭವು ಪದವೀಧರರಿಗೆ ಒಂದು ಸ್ಮರಣೀಯ ಸಂದರ್ಭವಾಗಿತ್ತು; ಅವರು ತಮ್ಮ ಸಾಧನೆಗಳನ್ನು ಸಂಭ್ರಮಿಸುತ್ತಾ, ತಮ್ಮ ಜೀವನದ ಮುಂದಿನ ಹಂತದತ್ತ ದೃಷ್ಟಿಹರಿಸಿದರು.
ಮಂಗಳೂರು
Mangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉರುಂದಾಡಿಗುಡ್ಡೆಯಲ್ಲಿ ಮಹಿಳೆಯೊಬ್ಬರನ್ನು ಆಕೆಯ ಪತಿಯೇ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಪತ್ನಿಗೆ ಪರಪುರುಷನೊಂದಿಗೆ ಸಂಬಂಧವಿದೆ ಎಂಬ ಸಂಶಯವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉರುಂದಾಡಿಗುಡ್ಡೆಯಲ್ಲಿ ಮಹಿಳೆಯೊಬ್ಬರನ್ನು ಆಕೆಯ ಪತಿಯೇ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಪತ್ನಿಗೆ ಪರಪುರುಷನೊಂದಿಗೆ ಸಂಬಂಧವಿದೆ ಎಂಬ ಸಂಶಯವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯಾದ ಮಹಿಳೆಯನ್ನು ವಿಜಯಪುರ ಜಿಲ್ಲೆಯ ಸೊನಾಲಿ (30) ಎಂದು ಗುರುತಿಸಲಾಗಿದೆ. ಆಕೆಯ ಪತಿ ಶಿವಲಿಂಗಪ್ಪ ಮಾದರ (40) ಕೊಲೆ ಆರೋಪಿಯಾಗಿದ್ದಾನೆ.
ದಂಪತಿ ಕಾವೂರು ಉರುಂದಾಡಿಗುಡ್ಡೆಯ ಹರೀಶ್ ಕುಮಾರ್ ಎಂಬವರ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸೊನಾಲಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಸಂಬಂಧವಿದೆ ಎಂಬ ಅನುಮಾನ ಶಿವಲಿಂಗಪ್ಪನಿಗೆ ಇತ್ತು ಎನ್ನಲಾಗಿದೆ. ಈ ವಿಚಾರವಾಗಿ ದಂಪತಿ ನಡುವೆ ಹಲವು ಬಾರಿ ಜಗಳ ನಡೆದಿತ್ತು. ಭಾನುವಾರ ರಾತ್ರಿ ಕೂಡ ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಆಕ್ರೋಶಗೊಂಡ ಶಿವಲಿಂಗಪ್ಪ ಮನೆಯಲ್ಲಿದ್ದ ಚಾಕುವಿನಿಂದ ಪತ್ನಿಗೆ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು
Mangalore Dasara-ಮಂಗಳೂರು ದಸರಾಕ್ಕೆ ಚಾಲನೆ: ಸಿಎಂ ಆಗಮನ ಮುಂದೂಡಿಕೆ
ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಬೆಳಗ್ಗೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ ಹಾಗೂ ನವಕಲಶಾಭಿಷೇಕ ನೆರವೇರಿತು. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಶ್ರೀ ಮಹಾಗಣಪತಿ, ಶ್ರೀ ಶಾರದಾ ಮಾತೆ, ಆದಿಶಕ್ತಿ ಹಾಗೂ ಸ್ಕಂದಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ ಮತ್ತು ಕೂಷ್ಮಾಂಡಿನಿ ದೇವಿಯರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು.
ರವಿವಾರದ ರಜೆಯ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯರ ವಿಗ್ರಹಗಳ ಪ್ರತಿಷ್ಠಾಪನೆಯ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.
ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹಾಗೂ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಕ್ಷೇತ್ರಾಡಳಿತ ಮಂಡಳಿಯ ಟ್ರಸ್ಟಿಗಳು, ಕ್ಷೇತ್ರ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ಬಾರಿ ಮಹಿಳಾ ದಸರಾ ವಿಶೇಷ ಆಕರ್ಷಣೆ
ಕ್ಷೇತ್ರದ ಖಜಾಂಚಿ ಪದ್ಮರಾಜ್ ಆರ್. ಪೂಜಾರಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಸಮಿತಿಯ ಸಹಯೋಗದೊಂದಿಗೆ ಈ ಬಾರಿಯ ಮಂಗಳೂರು ದಸರಾ ನಡೆಯುತ್ತಿದೆ ಎಂದು ತಿಳಿಸಿದರು.
ಕಳೆದ ವರ್ಷ ಆರಂಭಿಸಿದ್ದ ಮಕ್ಕಳ ದಸರಾ ಮತ್ತು ಕಿನ್ನಿಪಿಲಿ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದುವರಿಸಲಾಗುವುದು. ಇದೇ ಮೊದಲ ಬಾರಿಗೆ ಮಹಿಳಾ ದಸರಾ ಆಯೋಜಿಸಲಾಗುತ್ತಿದ್ದು, ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಭಕ್ತರ ಬೇಡಿಕೆಯಂತೆ ಅಕ್ಟೋಬರ್ 20ರಂದು ಅಕ್ಷರಾಭ್ಯಾಸ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ಈ ಬಾರಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಶೇ. 25ರಿಂದ 30ರಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು, ವ್ಯವಸ್ಥಿತ ನಿರ್ವಹಣೆಗಾಗಿ ಒಂದು ಸಾವಿರಕ್ಕೂ ಹೆಚ್ಚು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಆಗಮನ ಮುಂದೂಡಿಕೆ
ಸೋಮವಾರ ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರು ದಸರಾ ಮಹೋತ್ಸವವನ್ನು ಉದ್ಘಾಟಿಸಬೇಕಿತ್ತು. ಆದರೆ ತುರ್ತು ಕಾರಣದಿಂದ ದೆಹಲಿಗೆ ತೆರಳಬೇಕಾದ ಹಿನ್ನೆಲೆಯಲ್ಲಿ ಅವರ ಪ್ರವಾಸ ರದ್ದಾಗಿದೆ. ಅಕ್ಟೋಬರ್ 15 ಅಥವಾ 16ರಂದು ಮುಖ್ಯಮಂತ್ರಿ ಕ್ಷೇತ್ರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಪದ್ಮರಾಜ್ ಆರ್. ಪೂಜಾರಿ ತಿಳಿಸಿದರು.
-
ಅಂತರ ರಾಜ್ಯ13 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
ಮಂಗಳೂರು7 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್13 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
-
ಬಿಗ್ ನ್ಯೂಸ್8 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
ಸುಳ್ಯ10 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಅಪರಾಧ10 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
ಸ್ಥಳೀಯ13 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಅಂತರ ರಾಜ್ಯ10 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್


















