ಮಂಗಳೂರು
Harikrishna Bantwal-ತುಳುನಾಡಿನಲ್ಲಿ ಬಿಲ್ಲವರನ್ನು ಒಡೆಯಲು ಕಾಂಗ್ರೆಸ್ ಯತ್ನಿಸಿದೆ : ಹರಿಕೃಷ್ಣ ಬಂಟ್ವಾಳ
ಮಂಗಳೂರು: ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಹಿಂದುತ್ವದ ಭದ್ರನೆಲೆ ತುಳುನಾಡು ಎಂದು ಕಾಂಗ್ರೆಸ್‌ನವರೇ ಒಪ್ಪಿಕೊಂಡಿದ್ದಾರೆ. ಹಿಂದುತ್ವದ ಕೋಟೆಯಲ್ಲಿ ಬಿರುಕು ಹುಟ್ಟಿಸಲು ಕಾಂಗ್ರೆಸ್ ತಂತ್ರಗಾರಿಕೆ ಮಾಡಿದೆ. ಹಾಗಾಗಿ ಈ ಚುನಾವಣೆ ತುಳುನಾಡಿಗೆ ಸವಾಲಿನದಾಗಿದೆ’ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘33 ವರ್ಷಗಳಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ತಲೆ ಎತ್ತಲು ಇಲ್ಲಿನ ಹಿಂದೂಗಳು ಬಿಟ್ಟಿಲ್ಲ. ಹಾಗಾಗಿ ಕಾಂಗ್ರೆಸ್ ಕೆಲವರ ಜೊತೆ ರಹಸ್ಯ ಒಪ್ಪಂದ ಮಾಡಿಕೊಂಡಿದೆ. ಕೇರಳದ ಮಲಪ್ಪುರಂನಲ್ಲಿ ಮುಸ್ಲಿಂ ಲೀಗ್‌ನ ಜಿಲ್ಲೆಯನ್ನು ಕಟ್ಟಿದೆ. ಅಂತಹ ಜಿಲ್ಲೆಯನ್ನು ಕರ್ನಾಟಕದಲ್ಲಿ ಕಟ್ಟಲು ದಕ್ಷಿಣ ಕನ್ನಡವನ್ನು ಆರಿಸಿಕೊಂಡಿದ್ದಾರೆ’ ಎಂದು ಆರೋಪಿಸಿದರು
ಇಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿರುವ ಬಿಲ್ಲವರನ್ನು ಒಡೆಯಲು ಕಾಂಗ್ರೆಸ್ ಯತ್ನಿಸಿದೆ. ಜಿಲ್ಲೆಯಲ್ಲಿ ದಿವಾಳಿಯಾಗಿರುವ ಕಾಂಗ್ರೆಸ್‌ಗೆ ಲೋಕಸಭೆ ಚುನಾವಣೆಯಲ್ಲಿ ಸರಿಯಾದ ಅಭ್ಯರ್ಥಿಗಳೇ ಇಲ್ಲ. 6 ತಿಂಗಳ ಹಿಂದೆ ಆರ್.ಪದ್ಮರಾಜ್ ಅವರನ್ನು ಪಕ್ಷದ ಸದಸ್ಯರನ್ನಾಗಿ ಸೇರಿಸಿಕೊಂಡು ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸುವ ಯಾವ ಉದ್ದೇಶವೂ ಕಾಂಗ್ರೆಸ್‌ಗೆ ಇಲ್ಲ. ಬಿಲ್ಲವ ಪ್ರಾಬಲ್ಯ ಇರುವ ಈ ಜಿಲ್ಲೆಯಲ್ಲಿ ಟೂಲ್ ಕಿಟ್ ಆಗಿ ಅವರನ್ನು ಬಳಸಿಕೊಳ್ಳಲಾಗಿದೆ. ಕುಲಾಲರು, ಬಂಟರು, ಮೊಗವೀರರ ನಡುವೆ ಬಿರುಕು ಹುಟ್ಟಿಸಿ, ಮುಸ್ಲಿಂ ಪ್ರಾಬಲ್ಯ ಮೆರೆಯ ಬೇಕು ಎನ್ನುವ ತಂತ್ರವಿದು. ಚುನಾವಣೆ ಮುಗಿದ ಬಳಿಕ ಸತ್ಯ ಎಲ್ಲರಿಗೂ ಅರ್ಥವಾಗುತ್ತದೆ’ ಎಂದರು.
‘ಬಿಲ್ಲವರು ದಾರಿ ತಪ್ಪಿ ಖಳನಾಯಕರಾಗಬಾರದು. ಕಾಂಗ್ರೆಸ್‌ನ ಟೂಲ್‌ಕಿಟ್‌ನ ಭಾಗವಾಗಿ ಭವಿಷ್ಯ ಹಾಳು ಮಾಡಿಕೊಳ್ಳಬಾರದು. ನಿಜವಾದ ಬಿಲ್ಲವರೇ ಆಗಿದ್ದರೆ, ಭಾರತದ ಸಂಸ್ಕೃತಿ ಪರಂಪರೆಯ, ಸನಾತನ ಧರ್ಮದ ನಾಯಕರಾಗಬೇಕು’ ಎಂದರು.
ಯಾವುದೇ ಜಾತಿ ಸಂಘಗಳು ರಾಜಕೀಯ ಮಾಡಬಾರದು. ಅವುಗಳ ಬೈಲಾದಲ್ಲಿ ಅಂತಹ ಅವಕಾಶವೂ ಇಲ್ಲ. ಪದ್ಮರಾಜರ ಪರ ಮತ ಯಾಚಿಸುವ ಬಿಲ್ಲವ ಮಹಾ ಮಂಡಲದ ಅಧ್ಯಕ್ಷ ರಾಜೇಶ್ ಕೋಟ್ಯಾನ್ ಮೊದಲು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಅಧ್ಯಕ್ಷರಾಗಿ ಮುಂದುವರಿಯುವುದೇ ಆದರೆ, ಬಿಲ್ಲವ ಮಹಾಮಂಡಲದ ಹೆಸರನ್ನು ಕಾಂಗ್ರೆಸ್ ಮಹಾಮಂಡಲ ಎಂದು ಬದಲಾಯಿಸಿ’ ಎಂದರು.
‘ಕಾಂಗ್ರೆಸ್‌ನ ರಾಹುಲ್ ಗಾಂಧಿ ವಯನಾಡಿನಲ್ಲಿ ನಾಮಪತ್ರ ಸಲ್ಲಿಸುವಾಗ ಆ ಪಕ್ಷದ ಒಂದೇ ಒಂದು ಧ್ವಜವೂ ಹಾರಲಿಲ್ಲ ಏಕೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಶ್ನಿಸಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ಕಾಂಗ್ರೆಸ್ ಧ್ವಜವನ್ನು ನಾಮಪತ್ರ ಸಲ್ಲಿಕೆ ಸಂದರ್ಭ ಹಾರಿಸಬಾರದು ಎಂಬ ಮುಸ್ಲಿಂ ಲೀಗ್‌ನ ಧಮಕಿಗೆ ರಾಹುಲ್ ಗಾಂಧಿ ಬಾಲಮುದುರಿ ಕುಳಿತಿದ್ದಾರೆ. ಉತ್ತರ ಭಾರತದಲ್ಲಿ ಎಲ್ಲೂ ಅವರಿಗೆ ಗೆಲ್ಲುವ ಅವಕಾಶವಿಲ್ಲ. ಕರ್ನಾಟಕದಲ್ಲೂ ಚುನಾವಣೆಗೆ ನಿಲ್ಲುವ ಧೈರ್ಯ ಅವರಿಗಿಲ್ಲ’ ಎಂದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ರಾಜಗೋಪಾಲ ರೈ ಹಾಗೂ ನಿತಿನ್ ಕುಮಾರ್ ಭಾಗವಹಿಸಿದ್ದರು.
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಮಂಗಳೂರು
CM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.

ಮಂಗಳೂರು, ಅ.03: ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.
ತನ್ನದೇ ತಂಡದ ಬೇರೆ ಕ್ರೀಡಾಪಟುಗಳಿಗೆ ಅಲ್ಲಿನ ಸಿಎಂ ಹಾಗೂ ಇತರ ಮಂತ್ರಿಗಳು ಫೋನ್ ಮೂಲಕ ಅಭಿನಂದಿಸಿದ್ದಾರೆ ಹಾಗೂ ಕರ್ನಾಟಕದಲ್ಲಿ ಕೇವಲ 30 ಲಕ್ಷ ಬಹುಮಾನ ನೀಡಲಾಗುತ್ತಿದೆ ಬೇರೆ ರಾಜ್ಯದಲ್ಲಿ 1 ಕೋಟಿ ಬಹುಮಾನ ನೀಡುತ್ತಾರೆ ಎಂದು ಸಾಧಕಿ ಪೂವಮ್ಮ ನಿನ್ನೆ ಬೇಸರ ವ್ಯಕ್ತಪಡಿಸಿದ್ದರು.
ಅದ್ಧೂರಿ ಸ್ವಾಗತ:
ಜಪಾನ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ಮಹಿಳೆಯರ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪೂವಮ್ಮ, ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೂಮಳೆಗರೆದು ಅದ್ಧೂರಿ ಸ್ವಾಗತ ಕೋರಿದರು. ಇದು ಪೂವಮ್ಮ ಭಾಗವಹಿಸಿದ 3ನೇ ಏಷ್ಯನ್ ಗೇಮ್ಸ್ ಆಗಿದ್ದು, ಒಟ್ಟಾರೆಯಾಗಿ ಅವರ 6ನೇ ಪದಕವಾಗಿದೆ. ಕ್ರೀಡಾಂಗಣದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿದ್ದು ಅತ್ಯಂತ ಹೆಮ್ಮೆಯ ಕ್ಷಣ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಹಲವು ಗಣ್ಯರಿಂದ ಅಭಿನಂದನೆ
ಆರಂಭದಲ್ಲಿ ತಮಗೆ ಸೂಕ್ತ ಗೌರವ ಹಾಗೂ ಶುಭಾಶಯಗಳು ದೊರೆಯದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದ ಪೂವಮ್ಮ, ಬಳಿಕ ಡಿಸಿಎಂ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರಿಂದ ಅಭಿನಂದನೆಗಳನ್ನು ಸ್ವೀಕರಿಸಿದರು.
ಇದೇ ವೇಳೆ ಕ್ರೀಡಾಪಟುಗಳ ಪ್ರೋತ್ಸಾಹಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ ಪೂವಮ್ಮ, “ಹರಿಯಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ಚಿನ್ನ ಗೆದ್ದವರಿಗೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುತ್ತಿದೆ. ಆದರೆ ನಮ್ಮ ಕರ್ನಾಟಕದಲ್ಲಿ ಕೇವಲ 35 ಲಕ್ಷ ರೂ. ಮಾತ್ರ ನೀಡಲಾಗುತ್ತಿದೆ. ಯುವ ಅಥ್ಲೀಟ್‌ಗಳನ್ನು ಪ್ರೋತ್ಸಾಹಿಸಲು ಈ ಬಹುಮಾನದ ಮೊತ್ತವನ್ನು ಹೆಚ್ಚಿಸಬೇಕು,” ಎಂದು ಒತ್ತಾಯಿಸಿದ್ದಾರೆ.
ಮಂಗಳೂರು
Puvamma-ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮಂಗಳೂರಿನ ಪೂವಮ್ಮ; ಕನಿಷ್ಠ ಅಭಿನಂದನೆ ಕೂಡ ಸಲ್ಲಿಸದ ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಕುಟುಂಬ ಬೇಸರ
2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ ತಾಯಿ ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಮಂಗಳೂರು, ಅ.1: 2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ ತಾಯಿ ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಕಿರಣ್ ಪಹಲ್, ಪ್ರಾಚಿ ಚೌಧರಿ, ಎಂ.ಆರ್. ಪೂವಮ್ಮ ಹಾಗೂ ವಿಥ್ಯಾ ರಾಮರಾಜ್ ಒಳಗೊಂಡ ಭಾರತ ತಂಡ 3:29.69 ನಿಮಿಷಗಳಲ್ಲಿ ಗುರಿ ತಲುಪಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನ ಗೆದ್ದಿದೆ. ಇದು ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತಕ್ಕೆ ದೊರೆತ ಚಿನ್ನದ ಪದಕವಾಗಿದೆ.
ಆದರೆ, ಈ ಸಾಧನೆ ಮಾಡಿದ ಪೂವಮ್ಮ ಅವರನ್ನು ರಾಜ್ಯ ಸರ್ಕಾರ ಈವರೆಗೆ ಗುರುತಿಸಿಲ್ಲ ಎಂಬುದು ಕುಟುಂಬದ ಬೇಸರಕ್ಕೆ ಕಾರಣವಾಗಿದೆ. ಪೂವಮ್ಮ ಅವರ ತಾಯಿ ಜಾಜಿ ಮಾಧ್ಯಮಗಳೊಂದಿಗೆ ಮಾತನಾಡಿ, 20 ವರ್ಷಗಳಿಂದ ಅಥ್ಲೆಟಿಕ್ಸ್‌ನಲ್ಲಿ ಶ್ರಮಿಸುತ್ತಿರುವ ಮಗಳಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಪ್ರೋತ್ಸಾಹ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ನನ್ನ ಮಗಳು 36 ವರ್ಷದವಳಾಗಿದ್ದು, ಕಳೆದ 20 ವರ್ಷಗಳಿಂದ ಅಥ್ಲೆಟಿಕ್ಸ್‌ಗಾಗಿ ಶ್ರಮಿಸುತ್ತಿದ್ದಾಳೆ. ಬೇರೆ ರಾಜ್ಯಗಳಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಆದರೆ ಪೂವಮ್ಮ ಸಾಧನೆ ಮಾಡಿದ ಬಳಿಕವೂ ರಾಜ್ಯ ಸರ್ಕಾರದಿಂದ ಕನಿಷ್ಠ ಒಂದು ಕರೆ ಕೂಡ ಬಂದಿಲ್ಲ” ಎಂದು ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
“ಕ್ಯಾಶ್ ಪ್ರೈಸ್ ನೀಡುವುದು ಒಂದು ವಿಚಾರ. ಈ ಬಾರಿ ದೇಶಕ್ಕೆ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ತಂದುಕೊಟ್ಟ ತಂಡದಲ್ಲಿ ಪೂವಮ್ಮ ಇದ್ದಾರೆ. ಆದರೆ ರಾಜ್ಯ ಸರ್ಕಾರದಿಂದ ಕನಿಷ್ಠ ಶುಭಾಶಯದ ಸಂದೇಶವೂ ಬಂದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮಂಗಳೂರಿನವರೇ ಆಗಿದ್ದರೂ ಕರೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶ ಮತ್ತು ಕೇರಳದಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ದೊಡ್ಡ ಮೊತ್ತದ ಬಹುಮಾನಗಳನ್ನು ಘೋಷಿಸಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಕನಿಷ್ಠ ಗುರುತಿಸುವಿಕೆಯೂ ಸಿಗದಿರುವುದು ಬೇಸರ ತಂದಿದೆ ಎಂದು ಜಾಜಿ ತಿಳಿಸಿದ್ದಾರೆ.
ಪೂವಮ್ಮ ಕಠಿಣ ತರಬೇತಿ ಮತ್ತು ಹಲವು ವರ್ಷಗಳ ಪರಿಶ್ರಮದಿಂದ ಈ ಸಾಧನೆ ಮಾಡಿದ್ದಾರೆ. ಕಳೆದ ಮೂರು-ನಾಲ್ಕು ವರ್ಷಗಳ ಶ್ರಮಕ್ಕೆ ಇದೀಗ ಫಲ ಸಿಕ್ಕಿದೆ. ಅಥ್ಲೆಟಿಕ್ಸ್ ಆಕೆಯ ಜೀವನದ ಅವಿಭಾಜ್ಯ ಭಾಗವಾಗಿದೆ. ನಾವು ಮಧ್ಯಮ ವರ್ಗದ ಕುಟುಂಬವಾಗಿದ್ದು, ತರಬೇತಿಗಾಗಿ ಸಾಕಷ್ಟು ವೆಚ್ಚ ಮಾಡಬೇಕಾಗುತ್ತದೆ. ಸರ್ಕಾರದಿಂದ ಬೆಂಬಲ ದೊರೆತರೆ ಅದು ಕ್ರೀಡಾಪಟುಗಳಿಗೆ ಇನ್ನಷ್ಟು ಸ್ಫೂರ್ತಿ ನೀಡುತ್ತದೆ ಎಂದು ಜಾಜಿ ಹೇಳಿದ್ದಾರೆ.
ಪೂವಮ್ಮ ಅವರ ಈ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಅಭಿನಂದಿಸಿದ್ದು, 4×400 ಮೀಟರ್ ರಿಲೇ ತಂಡದ ವೇಗ ಮತ್ತು ದೃಢಸಂಕಲ್ಪ ಭಾರತವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ದಿದೆ ಎಂದು ಶ್ಲಾಘಿಸಿದ್ದಾರೆ.


















