Connect with us

ದಕ್ಷಿಣ ಕನ್ನಡ

ವಿಟ್ಲ :  ದುರಸ್ತಿಗೆ ಬಾವಿಗಿಳಿದ ಇಬ್ಬರು ಅಮ್ಲಜನಕ ಕೊರತೆಯಿಂದ ಮೃತ್ಯು

Published

on



Ad Widget

Ad Widget

Ad Widget

Ad Widget

ವಿಟ್ಲ: ಪಡಿಬಾಗಿಲಿನಲ್ಲಿ ಬಾವಿ ಕೆಲಸಕ್ಕೆ ಒಳಗೆ ತೆರಳಿದ ಇಬ್ಬರು ಕಾರ್ಮಿಕರಿಗೆ ಆಮ್ಲಜನಕದ ಕೊರತೆಯಾಗಿ ಮೃತ ಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಕುಕ್ಕಿಲ ಮೂಲದ ಪರ್ತಿಪ್ಪಾಡಿ ನಿವಾಸಿ ಇಬ್ಬು ಯಾನೆ ಇಬ್ರಾಹಿಂ (40), ಮಲಾರ್ ನಿವಾಸಿ ಆಲಿ (24) ಮೃತ ವ್ಯಕ್ತಿಗಳಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸುಮಾರು 3೦ಅಡಿ ಆಳದ ಬಾವಿಗೆ ರಿಂಗ್ ಅಳವಡಿಸಿ ಕೊನೆಯ ಹಂತದಲ್ಲಿ ಸ್ವಚ್ಛತೆಯಾಗಿ ತಳಭಾಗಕ್ಕೆ ಇಳಿದ ಕಾರ್ಮಿಕ ಮೇಲೆ ಬರಲಾಗದಿರುವುದನ್ನು ಗಮನಿಸಿ ಇನ್ನೋರ್ವ ಇಳಿದಿದ್ದು, ಇಬ್ಬರೂ ಆಮ್ಲಜನಕದ ಕೊರತೆಯಿಂದ ಬಾವಿ ತಳ ಭಾಗದಲ್ಲಿ ಮೃತ ಪಟ್ಟಿದ್ದಾರೆ. ಇಬ್ರಾಹಿಂ ಸುಮಾರು 2೦ ವರ್ಷದ ಪರಿಣತಿಯನ್ನು ಹೊಂದಿದ ಕಾರ್ಮಿಕ ಎನ್ನಲಾಗಿದೆ. ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರಕ್ಕೆ ಶವಗಳನ್ನು ವರ್ಗಾವಣೆ ಮಾಡಿದ್ದಾರೆ.

Ad Widget

Ad Widget <> Ad Widget

Ad Widget
Click to comment

Leave a Reply

ಅಪರಾಧ

ಬಂಟ್ವಾಳದಲ್ಲಿ ಕೋಳಿ ಅಂಕದ ಜೂಜಾಟಕ್ಕೆ ಪೊಲೀಸ್ ದಾಳಿ: ಓರ್ವ ವಶಕ್ಕೆ | 12 ಅಂಕದ ಕೋಳಿಗಳು, ಕತ್ತಿ ಹಾಗೂ ₹1,100 ನಗದು ವಶ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಬಂಟ್ವಾಳ, ಅ. 19: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಎರ್ಮುಡೆ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿದ್ದು, ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅ. 18ರಂದು ಸಂಜೆ ಎರ್ಮುಡೆ ಪ್ರದೇಶದಲ್ಲಿ ಕೋಳಿ ಅಂಕದ ಜೂಜಾಟ ನಡೆಯುತ್ತಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಸುತ್ತಿರುವುದು ದೃಢಪಟ್ಟಿದೆ.

Ad Widget

Ad Widget <> Ad Widget

ಪೊಲೀಸರು ದಾಳಿ ನಡೆಸಿದ ವೇಳೆ ಜೂಜಾಟದಲ್ಲಿ ಭಾಗಿಯಾಗಿದ್ದ ಹಲವರು ಪರಾರಿಯಾಗಿದ್ದಾರೆ. ಈ ಪೈಕಿ ಬಂಟ್ವಾಳದ ಬಿ. ಮೂಡ ಗ್ರಾಮದ ಗಣೇಶ್ (33) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.



Ad Widget

ಸ್ಥಳದಲ್ಲಿದ್ದ 12 ಅಂಕದ ಕೋಳಿಗಳು, ಕೋಳಿ ಅಂಕಕ್ಕೆ ಬಳಸುತ್ತಿದ್ದ ಕತ್ತಿ ಹಾಗೂ ₹1,100 ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 147/2026ರ ಅಡಿಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87 ಮತ್ತು 93 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(1)(M)(ii) ಮತ್ತು 11(1)(N)ರಂತೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ದಕ್ಷಿಣ ಕನ್ನಡ

ಸೌತಡ್ಕ ದೇವಸ್ಥಾನದ ಬಳಿ ಹೂವಿನ ಅಂಗಡಿ ವಿಚಾರವಾಗಿ ಗಲಾಟೆ: ಎರಡೂ ಕಡೆಯಿಂದ ದೂರು, ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಬೆಳ್ತಂಗಡಿ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿಯ ಅಂಗಡಿಯಲ್ಲಿ ವ್ಯಾಪಾರ ನಡೆಸುವ ವಿಚಾರವಾಗಿ ನಡೆದ ಗಲಾಟೆ, ಹಲ್ಲೆ ಹಾಗೂ ಸೊತ್ತುಗಳಿಗೆ ಹಾನಿ ಮಾಡಿದ ಆರೋಪಕ್ಕೆ ಸಂಬಂಧಿಸಿ ಎರಡೂ ಕಡೆಯಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Ad Widget

Ad Widget

Ad Widget

Ad Widget

ಕೊಕ್ಕಡ ನಿವಾಸಿ ಕೃಷ್ಣಭಟ್ ನೀಡಿದ ದೂರಿನ ಪ್ರಕಾರ, ಆ. 18ರಂದು ಬೆಳಗ್ಗೆ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಸೇವಾ ಟ್ರಸ್ಟ್‌ಗೆ ಸೇರಿದ ಕಟ್ಟಡದ ಅಂಗಡಿಯಲ್ಲಿ ರಾಘವ ಭಂಡಾರಿ ಮತ್ತು ಅವರ ಕೆಲಸಗಾರರು ವ್ಯಾಪಾರ ನಡೆಸುತ್ತಿದ್ದ ವೇಳೆ, ಈ ಹಿಂದೆ ಅಲ್ಲಿ ವ್ಯಾಪಾರ ಮಾಡುತ್ತಿದ್ದ ಹರಿಶ್ಚಂದ್ರ, ಅವರ ಪತ್ನಿ, ಮಕ್ಕಳು ಹಾಗೂ ಇತರರು ಅಂಗಡಿಗೆ ಪ್ರವೇಶಿಸಿ ದಾಂಧಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ಘಟನೆಯಲ್ಲಿ ಕಟ್ಟಡ ಹಾಗೂ ಅಂಗಡಿಯಲ್ಲಿದ್ದ ಸೊತ್ತುಗಳಿಗೆ ಸುಮಾರು 25 ಸಾವಿರ ರೂ. ನಷ್ಟ ಉಂಟಾಗಿದೆ. ಅಲ್ಲದೆ, ರಾಘವ ಭಂಡಾರಿ ಮತ್ತು ಅವರ ಕೆಲಸಗಾರರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget <> Ad Widget

ಇದೇ ಘಟನೆಯನ್ನು ಮುಂದಿಟ್ಟುಕೊಂಡು ಹರಿಶ್ಚಂದ್ರ ಅವರ ಪತ್ನಿಯೂ ಪ್ರತ್ಯೇಕ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಹರಿಶ್ಚಂದ್ರ ಅವರು ಅಂಗಡಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ವೇಳೆ ರಾಘವ ಭಂಡಾರಿ, ಲಿಂಗಪ್ಪ, ಕಿಶೋರ್ ಮತ್ತು ಚೇತನ್ ಎಂಬವರು ಅಂಗಡಿಗೆ ಅಕ್ರಮವಾಗಿ ಪ್ರವೇಶಿಸಿ ಸೊತ್ತುಗಳನ್ನು ಹೊರಗೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.



Ad Widget

ಅಲ್ಲದೆ, ಹರಿಶ್ಚಂದ್ರ, ಅವರ ಪತ್ನಿ ಹಾಗೂ ಕೆಲಸಗಾರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಅನುಚಿತವಾಗಿ ವರ್ತಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ದೂರಿನ ಆಧಾರದಲ್ಲಿಯೂ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

ಅಂಗಡಿ ವ್ಯಾಪಾರದ ವಿಚಾರವಾಗಿ ಎರಡೂ ಕಡೆಯವರ ನಡುವೆ ಈ ಗಲಾಟೆ ನಡೆದಿದ್ದು, ಪರಸ್ಪರ ಆರೋಪಗಳ ಹಿನ್ನೆಲೆಯಲ್ಲಿ ದಾಖಲಾಗಿರುವ ಎರಡೂ ಪ್ರಕರಣಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ದಕ್ಷಿಣ ಕನ್ನಡ

ಮಂಗಳೂರು : ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ – ಧರ್ಮಗುರು ಬಂಧನ,

Published

on



Ad Widget

Ad Widget

Ad Widget

Ad Widget
ಚಿತ್ರ : AI

ಮಂಗಳೂರು, ಅ. 18: ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಚರ್ಚ್‌ವೊಂದರ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (63) ಅವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Ad Widget

Ad Widget

Ad Widget

Ad Widget

ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಸಕಲೇಶಪುರದಲ್ಲಿರುವ ಸಂಬಂಧಿಕರೊಬ್ಬರ ಮನೆಯಿಂದ ಬಂಧಿಸಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಂತ್ರಸ್ತ ಬಾಲಕ ನೀಡಿದ ದೂರಿನ ಆಧಾರದಲ್ಲಿ ಪಾಂಡೇಶ್ವರ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಫಾ. ಸಿಪ್ರಿಯನ್ ಪಿಂಟೋ ಅವರು ಚಾಕೊಲೇಟ್ ನೀಡಿ ಬಾಲಕನನ್ನು ಪುಸಲಾಯಿಸಿ, ಚರ್ಚ್‌ನ ಕೊಠಡಿಯೊಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Ad Widget

Ad Widget <> Ad Widget

ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ಬೆಂಗಳೂರು, ಕೇರಳ ಸೇರಿದಂತೆ ವಿವಿಧೆಡೆ ಶೋಧ ಕಾರ್ಯ ನಡೆಸಿದ್ದರು. ಬಳಿಕ ಸಕಲೇಶಪುರದಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.



Ad Widget

ಈ ಕುರಿತು ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತ ಸುಧೀರ್‌ಕುಮಾರ್ ರೆಡ್ಡಿ, ಅಗತ್ಯ ವಿಚಾರಣೆ ಹಾಗೂ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ್ದರು.

Ad Widget

Ad Widget

ನ್ಯಾಯಾಂಗ ಬಂಧನ

ಬಂಧಿತ ಫಾ. ಸಿಪ್ರಿಯನ್ ಪಿಂಟೋ ಅವರನ್ನು ರವಿವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading