Connect with us

ಸ್ಥಳೀಯ

Ujire SDM-ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಎಸ್ಪರೇಂಜಾ ಫೆಸ್ಟ್ ʼಎಚ್ಚರದೊಂದಿಗಿನ ಆಶಾವಾದ ಮುನ್ನಡೆಗೆ ಪ್ರೇರಕʼ

Published

on



Ad Widget

Ad Widget

Ad Widget

Ad Widget

ಉಜಿರೆ, ಏ.23: ಭವಿಷ್ಯದ ಕುರಿತ ಎಚ್ಚರ ಮತ್ತು ಆಶಾವಾದದ ಚಿಂತನೆಯಿಂದ ಬದುಕಿನ ಮುನ್ನಡೆಗೆ ಪ್ರೇರಣೆ ದೊರಕುತ್ತದೆ ಎಂದು ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ವಿಷ್ಣುಮೂರ್ತಿ ಪ್ರಭು ಹೇಳಿದರು.

Ad Widget

Ad Widget

Ad Widget

Ad Widget

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಇಂಗ್ಲಿಷ್‌ ಅಧ್ಯಯನ ಮತ್ತು ಸಂಶೋಧನ ವಿಭಾಗವು ಮಂಗಳವಾರ ಆಯೋಜಿಸಿದ ಒಂದು ದಿನದ ಅಂತರ್ ಕಾಲೇಜು ಫೆಸ್ಟ್ ‌ʼಎಸ್ಪರೇಂಜಾʼದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

Ad Widget

Ad Widget

Ad Widget alt="Ad Widget"/>

Ad Widget

ಬದುಕಿನಲ್ಲಿ ಸೋಲು,ಗೆಲುವು ಸಹಜವಾದದ್ದು.ಗೆದ್ದಾಗ ಹಿಗ್ಗದೇ ಸೋತಾಗ ಕುಗ್ಗದೇ ಸ್ಪರ್ಧಾತ್ಮಕ ಗುಣದಿಂದ ಮುಂದುವರೆಯಬೇಕು. ಭವಿಷ್ಯದ ಸವಾಲುಗಳ ಯೋಚನೆಯಲ್ಲಿ ನಾವು ವರ್ತಮಾನವನ್ನು ಮರೆಯುತ್ತಿದ್ದೇವೆ. ಹಾಗೆ ಮಾಡದೆ ಬದುಕಿನ ಪ್ರಕ್ರಿಯೆಗಳನ್ನು ಮುಕ್ತವಾಗಿ ಅನುಭವಿಸಬೇಕು ಎಂದರು.

Ad Widget

Ad Widget <> Ad Widget

ಈ ಕಾಲಘಟ್ಟದಲ್ಲಿ ಪದವಿಯ ಜೊತೆಗೆ ವೃತ್ತಿ ಕೌಶಲ್ಯಗಳನ್ನು ಗಳಿಸಿಕೊಂಡು ಯಶಸ್ಸು ಸಾಧಿಸಲು ಸಾಧ್ಯ. ಆದ್ದರಿಂದ ಭರವಸೆ ಕಳೆದುಕೊಳ್ಳದೇ ನಿರಂತರ ಪ್ರಯತ್ನಗಳೊಂದಿಗಿರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.



Ad Widget

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಉದ್ಘಾಟಿಸಿದರು. ಜೀವನದ ಕುರಿತಾಗಿ ನಾವು ಹೊಂದಿರುವ ಭರವಸೆಗಳು ಉತ್ಸಾಹ, ಸಂತೋಷ ಹಾಗೂ ಧನಾತ್ಮಕತೆಯಿಂದ ಮುನ್ನಡೆಯಲು ನೆರವಾಗುತ್ತವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಒತ್ತಡಗಳನ್ನು ನಿಯಂತ್ರಿಸಲು ಭವಿಷ್ಯದ ಕುರಿತಾಗಿ ಆಶಾವಾದಿಗಳಾಗಬೇಕು ಎಂದರು.

Ad Widget

Ad Widget

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ನಾತಕೋತ್ತರ ಕೇಂದ್ರದ ಡೀನ್ ಡಾ.ವಿಶ್ವನಾಥ .ಪಿ ಮಾತನಾಡಿದರು. ಅಂತರ ಕಾಲೇಜು ಫೆಸ್ಟ್ ಗಳು ವಿದ್ಯಾರ್ಥಿಗಳಿಗೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರೊಡನೆ ಬೆರೆಯುವ ಅವಕಾಶ ಮಾಡಿಕೊಡುತ್ತವೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಜ್ಞಾನ ವೃದ್ಧಿಸಿಕೊಳ್ಳಬೇಕು ಎಂದು ನುಡಿದರು.

ಕಾರ್ಯಕ್ರಮದಲ್ಲಿ ವಿಭಾಗದ ಸಾಧಕ ವಿದ್ಯಾರ್ಥಿಗಳಾದ ಸಮ್ಯಕ್ತ್ ಜೈನ್ ಹಾಗೂ ಹಾಶಿನಿ ಸಿಂಗ್ ಅವರನ್ನು ಗೌರವಿಸಲಾಯಿತು. ವಿದ್ಯಾರ್ಥಿ ಸಂಯೋಜಕಿ ಆಯಿಷತ್ ಅರ್ಷಾನ ವೇದಿಕೆಯಲ್ಲಿದ್ದರು. ಹಾಶಿನಿ ಸಿಂಗ್ ನಿರೂಪಿಸಿದರು. ವಿಭಾಗ ಮುಖ್ಯಸ್ಥೆ ಡಾ.ಮಂಜುಶ್ರೀ .ಆರ್ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಅತೀರಾ ,ಅನಿಲ್ ಮತ್ತು ಶ್ವೇತಾ ಪ್ರಾರ್ಥಿಸಿದರು. ಪ್ರಾಧ್ಯಾಪಕ ವಿಘ್ನೇಶ್ ಐತಾಳ್ ವಂದಿಸಿದರು.

Ad Widget
Click to comment

Leave a Reply

ರಾಜಕೀಯ

Siddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ

Published

on



Ad Widget

Ad Widget

Ad Widget

Ad Widget

ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ಸೇರಿದಂತೆ ಒಟ್ಟು 42 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ನಡೆಯುತ್ತಿರುವುದು ನಿಜ. ಆದರೆ ಇದನ್ನು ಮಾಡಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಹೇಳಿದ್ದರು.



Ad Widget

ಇದೀಗ ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Ad Widget

Ad Widget

‘ಸುಳ್ಳು ಪ್ರಚಾರ ತಡೆಯಲು ತಡೆಯಾಜ್ಞೆ ಕೋರುತ್ತಿದ್ದೇವೆ’: ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ ಆಪರೇಷನ್ ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ತಾವು ಭಾಗವಹಿಸಬೇಕಿತ್ತು, ಆದರೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಹಾಗೂ ಮುಂದಿನ ಆದೇಶದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.

Ad Widget
Continue Reading

ನಿಧನ ವಾರ್ತೆ

Subramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆಗಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ಮೃತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿ ದೇವೇಗೌಡ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆಗಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿ ದೇವೇಗೌಡ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅನಾರೋಗ್ಯದಿಂದ ವಸತಿಗೃಹದಲ್ಲೇ ವಿಶ್ರಾಂತಿ
ದೇವೇಗೌಡ ಅವರು ತುರುವೇಕೆರೆಯಿಂದ ಇತರ ಯಾತ್ರಾರ್ಥಿಗಳೊಂದಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಬಂದಿದ್ದರು ಎನ್ನಲಾಗಿದೆ. ದೂರದ ಪ್ರಯಾಣದ ಬಳಿಕ ಅನಾರೋಗ್ಯಕ್ಕೆ ಒಳಗಾದ ಅವರು, ಪೂಜಾ ಸ್ಥಳಕ್ಕೆ ತೆರಳದೆ ತಾವು ತಂಗಿದ್ದ ವಸತಿಗೃಹದಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.



Ad Widget

ನದಿಯಲ್ಲಿ ತೇಲುತ್ತಿದ್ದ ಮೃತದೇಹ ಪತ್ತೆ
ಮಂಗಳವಾರ ಮುಂಜಾನೆ ಸುಬ್ರಹ್ಮಣ್ಯದ ಕುಲ್ಕುಂದ ಕಾಲನಿ ರಸ್ತೆಯಿಂದ ಕುಮಾರಧಾರ ನದಿಗೆ ಸಂಪರ್ಕ ಕಲ್ಪಿಸುವ ಸ್ಥಳದ ಸಮೀಪ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ತೇಲುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ.

Ad Widget

Ad Widget

ಇದೇ ವೇಳೆ, ವಸತಿಗೃಹದಲ್ಲಿದ್ದ ದೇವೇಗೌಡ ಅವರು ಕಾಣೆಯಾಗಿರುವುದನ್ನು ಗಮನಿಸಿದ ಕುಟುಂಬಸ್ಥರು ಹಾಗೂ ಅವರೊಂದಿಗೆ ಬಂದಿದ್ದವರು ಹುಡುಕಾಟ ನಡೆಸಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಲು ತೆರಳಿದಾಗ ನದಿಯಲ್ಲಿ ಮೃತದೇಹ ಪತ್ತೆಯಾಗಿರುವ ಮಾಹಿತಿ ಲಭಿಸಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮೃತದೇಹ ದೇವೇಗೌಡ ಅವರದ್ದೇ ಎಂಬುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಸಾವಿನ ಸುತ್ತ ಹಲವು ಅನುಮಾನ
ಅನಾರೋಗ್ಯದಿಂದ ವಸತಿಗೃಹದಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ದೇವೇಗೌಡ ಅವರು ನದಿಯ ಬಳಿಗೆ ತೆರಳಿದ್ದು ಹೇಗೆ? ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿದ್ದಾರೆಯೇ ಅಥವಾ ಬೇರೆ ಯಾವುದಾದರೂ ಕಾರಣದಿಂದ ಮೃತಪಟ್ಟಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಮಂಗಳೂರು

Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.

Ad Widget

Ad Widget <> Ad Widget

ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



Ad Widget

ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು

Ad Widget

Ad Widget
  1. ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
  2. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
  3. ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading