Connect with us

ರಾಜಕೀಯ

Siddaramaiah-ಮೋದಿಯವರ ಮಂಗಳಸೂತ್ರ ಹೇಳಿಕೆ ಪ್ರಧಾನಿ ಸ್ಥಾನಕ್ಕೆ ತೋರಿದ ಅಗೌರವ : ಸಿದ್ದರಾಮಯ್ಯ

Published

on



Ad Widget

Ad Widget

Ad Widget

Ad Widget

ಬೆಂಗಳೂರು (ಏ.23): ಕಾಂಗ್ರೆಸ್‌ ಗೆದ್ದರೆ ಮಹಿಳೆಯರ ಮಂಗಳಸೂತ್ರವನ್ನು ಮುಸ್ಲಿಮರಿಗೆ ಹಂಚಲಾಗುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ರಾಜ್ಯ ಕಾಂಗ್ರೆಸ್‌ ಮುಖಂಡರಿಂದ ಸೋಮವಾರ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿ ಹಲವು ಕಾಂಗ್ರೆಸ್‌ ಮುಖಂಡರು ಇದೊಂದು ಕೀಳು ಹೇಳಿಕೆ, ಪ್ರಧಾನಿ ಮೋದಿ ಅವರು ಸೋಲಿನ ಭೀತಿಯಿಂದ ಈ ರೀತಿ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಶ್ರಮದಿಂದ ಗಳಿಸಿದ ಸಂಪತ್ತನ್ನು ಕಿತ್ತುಕೊಳ್ಳುವ ಅಧಿಕಾರ ಯಾರಿಗಾದರೂ ಇದೆಯೇ? ಆದರೂ ಇದನ್ನು ಕಾಂಗ್ರೆಸ್ ಮಾಡಲಿದೆ.

Ad Widget

Ad Widget

Ad Widget

Ad Widget

ಪ್ರಧಾನಿ ಮೋದಿಯವರು ಜೈಪುರದಲ್ಲಿ ನಡೆಸಿದ ಸಮಾವೇಶದಲ್ಲಿ ತಾಯಂದಿರು ಶ್ರಮದಿಂದ ಮಾಡಿಸಿಕೊಂಡಿರುವ ಚಿನ್ನದ ತಾಳಿಯನ್ನು ಕಿತ್ತುಕೊಳ್ಳಲಾಗುತ್ತದೆ. ಅದನ್ನು ದೇಶದ ಸಂಪತ್ತಿನ ಮೊದಲ ಹಕ್ಕುದಾರರು ಮುಸ್ಲಿಮರು ಎಂದಿದ್ದ ಹಿಂದಿನ ಪ್ರಧಾನಿ ಮನಮೋಹನ ಸಿಂಗ್‌ ಅವರ ನೀತಿಯಂತೆ ಮುಸಲ್ಮಾನರು, ಒಳನುಸುಳುಕೋರರು ಮತ್ತು ಹೆಣ್ಣುಮಕ್ಕಳಿದ್ದವರಿಗೆ ಹಂಚಲಾಗುತ್ತದೆ ಎಂದು ಆರೋಪಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಪ್ರಧಾನಿಯಾಗಿ ಅವರು ಇಷ್ಟೊಂದು ಕೀಳುಹೇಳಿಕೆ ನೀಡಬಾರದಿತ್ತು. ಅವರ ಸ್ಥಾನಕ್ಕೆ ಅಗೌರವ ತೋರುವ ರೀತಿ ಮೋದಿ ಮಾತನಾಡಿದ್ದಾರೆ ಎಂದು ಕಿಡಿಕಾರಿದರು.

Ad Widget

Ad Widget

Ad Widget alt="Ad Widget"/>

Ad Widget

ಸೋಲಿನ ಭೀತಿ: ಕಾಂಗ್ರೆಸ್ ಗೆದ್ದರೆ ಮಹಿಳೆಯರ ಮಂಗಳಸೂತ್ರವನ್ನು ಕಿತ್ತು ಮುಸ್ಲಿಮರಿಗೆ ನೀಡುತ್ತದೆ ಎಂದು ದೇಶದ ಪ್ರಧಾನಿ ಹೇಳುತ್ತಿದ್ದಾರೆ. ಮೋದಿಯವರಿಗೆ ಸೋಲುವ ಭೀತಿ ಉಂಟಾಗಿದೆ. ಹೀಗಾಗಿ ಅವರು ಹೀಗೆ ಮಾತನಾಡುತ್ತಿದ್ದಾರೆ. ಭಾರತೀಯರೆಲ್ಲರೂ ಸಮಾನರು ಎಂದು ಸಂವಿಧಾನದಲ್ಲಿ ಹೇಳಿದ್ದಾರೆ. ಮಂಗಳಸೂತ್ರ ಕಿತ್ತುಕೊಳ್ಳುತ್ತಾರೆಂದರೆ ಏನರ್ಥ? ಈ ಮಾತುಗಳನ್ನು ನೋಡಿದರೆ ಬಿಜೆಪಿಯ ಹತಾಶೆ ಕಾಣಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ.

Ad Widget

Ad Widget <> Ad Widget

ರಾಜ್ಯದ 25 ದಂಡಪಿಂಡಗಳನ್ನು ಜನರು ಮನೆಗೆ ಕಳಿಸಬೇಕು: ಬಿ.ವಿ.ಶ್ರೀನಿವಾಸ್ ವಿಶೇಷ ಸಂದರ್ಶನ!
ಪ್ರಧಾನಿ ಹೇಳಿಕೆ ಅವರ ಮನಸ್ಥಿತಿ ತೋರಿಸುತ್ತದೆ. ದೇಶದ ಇತಿಹಾಸದಲ್ಲಿ ಯಾವ ಪ್ರಧಾನಿಯೂ ಇಷ್ಟೊಂದು ಕೆಳಮಟ್ಟಕ್ಕೆ ಇಳಿದು ಮಾತನಾಡಿರುವುದು ನಾನು ನೋಡಿರಲಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದರೆ, ಮೋದಿ ಅವರು ಮತೀಯ ಭಾವನೆ ಕೆರಳಿಸುವ ರೀತಿ ಮಾತನಾಡಿದ್ದಾರೆ. ಚುನಾವಣಾ ಆಯೋಗ ಯಾಕೆ ಈ ವಿಚಾರದಲ್ಲಿ ಕಣ್ಣುಮುಚ್ಚಿ ಕೂತಿದೆಯೋ ಗೊತ್ತಿಲ್ಲ. 70 ವರ್ಷಗಳಿಂದ ವಿವಿಧ ಪಕ್ಷಗಳು ಆಡಳಿತ ನಡೆಸಿವೆ. ಯಾವ ಹಿಂದೂಗೂ ಅನ್ಯಾಯವಾಗಿಲ್ಲ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.



Ad Widget
Ad Widget
Click to comment

Leave a Reply

ಅಂತರ ರಾಜ್ಯ

Rahul Gandhi-‘45 FIR ನನಗೆ ಪದಕವಿದ್ದಂತೆ, 100 FIR ನನ್ನ ಗುರಿ’-ರಾಹುಲ್ ಗಾಂಧಿ

Published

on



Ad Widget

Ad Widget

Ad Widget

Ad Widget

ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್‌ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ, ಅ.7: ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್‌ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧವೂ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು. ಅವರ ಕಾರ್ಯವೈಖರಿ ಹಾಗೂ ಅಧೀನ ಅಧಿಕಾರಿಗಳೊಂದಿಗಿನ ಭಿನ್ನಮತದ ಕುರಿತು ಪ್ರತಿಪಕ್ಷಗಳು ಪ್ರಶ್ನೆಗಳನ್ನು ಎತ್ತುತ್ತಿರುವ ಹಿನ್ನೆಲೆಯಲ್ಲಿ ರಾಹುಲ್, ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

Ad Widget

Ad Widget <> Ad Widget

ದೆಹಲಿಯ ಜಂತರ್ ಮಂತರ್‌ನಲ್ಲಿ ದಿಢೀರ್ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ ಅವರು, ಜ್ಞಾನೇಶ್ ಕುಮಾರ್ ಅವರನ್ನು ‘ಅಕ್ರಮ ಚುನಾವಣಾ ಆಯೋಗದ ಮುಖ್ಯಸ್ಥ’ ಎಂದು ಆರೋಪಿಸಿದರು.



Ad Widget

“ನಾವು ಜಂತರ್ ಮಂತರ್‌ಗೆ ತೆರಳಿ ಒಟ್ಟಾಗಿ ಕುಳಿತು, ಕುಮಾರ್ ಈ ದೇಶದ ಕಾನೂನುಬದ್ಧ ಚುನಾವಣಾ ಆಯುಕ್ತರಲ್ಲ ಎಂಬುದನ್ನು ದೇಶಕ್ಕೆ ತಿಳಿಸುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Ad Widget

Ad Widget

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧವೂ ಅವರು ಆರೋಪಗಳನ್ನು ಮಾಡಿದರು. ಈ ಮೂವರು ಜ್ಞಾನೇಶ್ ಕುಮಾರ್ ಅವರೊಂದಿಗೆ ಸೇರಿ ದೇಶದ ಪ್ರಜಾಪ್ರಭುತ್ವವನ್ನು ನಾಶಗೊಳಿಸಿದ್ದಾರೆ ಎಂದು ರಾಹುಲ್ ಗಾಂಧಿ ದೂರಿದರು.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳ ಕುರಿತು ಮಾತನಾಡಿದ ಅವರು, “ನನ್ನ ವಿರುದ್ಧ 45 ಎಫ್‌ಐಆರ್‌ಗಳಿವೆ. 100 ಎಫ್‌ಐಆರ್‌ಗಳನ್ನು ಹೊಂದುವುದು ನನ್ನ ಗುರಿ. ಪ್ರತಿಯೊಂದು ಎಫ್‌ಐಆರ್ ನನಗೆ ಪದಕವಿದ್ದಂತೆ” ಎಂದು ಹೇಳಿದರು.

ಇದೇ ವೇಳೆ, ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಪಕ್ಷಗಳ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಮಂಗಳವಾರ ಪ್ರತಿಪಕ್ಷಗಳ ನಾಯಕರು ದಿನವಿಡೀ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದರು. ಚುನಾವಣಾ ಆಯುಕ್ತರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ತಿಳಿಸಿದೆ.

ಮತ್ತೊಂದೆಡೆ, ‘ಮತ ಕಳವು’ ಆರೋಪಕ್ಕೆ ಸಂಬಂಧಿಸಿ ದೆಹಲಿ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಲು ಮುಂದಾದ ಆಮ್ ಆದ್ಮಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್‌ಗಳ ಮೂಲಕ ತಡೆದರು.

Ad Widget
Continue Reading

ಅಂತರ ರಾಜ್ಯ

Jnanesh kumar-ವಿಪಕ್ಷಗಳ ರಾಜೀನಾಮೆ ಒತ್ತಾಯದ ನಡುವೆ ಜ್ಞಾನೇಶ್ ಕುಮಾರ್ ಛತ್ತೀಸ್‌ಗಢ ಭೇಟಿ ಮುಂದೂಡಿಕೆ

Published

on



Ad Widget

Ad Widget

Ad Widget

Ad Widget

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಕ್ಟೋಬರ್ 7 ಮತ್ತು 8ರಂದು ಜ್ಞಾನೇಶ್ ಕುಮಾರ್ ಅವರು ಛತ್ತೀಸ್‌ಗಢಕ್ಕೆ ಭೇಟಿ ನೀಡಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಈ ಭೇಟಿಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget <> Ad Widget

ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಂಡನೆ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎಂಬ ವದಂತಿಗಳು ಹರಿದಾಡುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ.



Ad Widget

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳ ಆಕ್ರೋಶ
ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹಾಗೂ ಅರ್ಜಿ ನಮೂನೆ-6ರಲ್ಲಿನ ಮಾರ್ಪಾಡು ಸೇರಿದಂತೆ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗ ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿವೆ.

Ad Widget

Ad Widget

ದೇವಾಲಯ, ಜಲಪಾತಗಳಿಗೆ ಭೇಟಿ ನೀಡಬೇಕಿತ್ತು
ಎರಡು ದಿನಗಳ ಛತ್ತೀಸ್‌ಗಢ ಪ್ರವಾಸದ ವೇಳೆ ಜ್ಞಾನೇಶ್ ಕುಮಾರ್ ಅವರು ದಾಂತೇವಾಡದಲ್ಲಿರುವ ದಾಂತೇಶ್ವರಿ ದೇವಾಲಯ, ಬಸ್ತಾರ್‌ನ ಚಿತ್ರಕೋಟೆ ಜಲಪಾತ ಹಾಗೂ ಕಬೀರ್ ಧಾಮ್ ಜಿಲ್ಲೆಯ ಭೋರಂಡಿಯೊ ದೇವಾಲಯಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು.

ಈ ಭೇಟಿಯ ಹಿನ್ನೆಲೆಯಲ್ಲಿ ಛತ್ತೀಸ್‌ಗಢ ಸರ್ಕಾರವು ಜ್ಞಾನೇಶ್ ಕುಮಾರ್ ಅವರಿಗೆ ರಾಜ್ಯ ಅತಿಥಿಯ ಗೌರವ ನೀಡಲು ನಿರ್ಧರಿಸಿತ್ತು. ಅವರನ್ನು ಸ್ವಾಗತಿಸುವುದು ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳಲು ರಾಯ್‌ಪುರ ಜಿಲ್ಲಾಡಳಿತ, ಪೊಲೀಸರು ಮತ್ತು ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣ ಪ್ರಾಧಿಕಾರಗಳು ಸಿದ್ಧತೆ ಆರಂಭಿಸಿದ್ದವು. ಇದೀಗ ಭೇಟಿಯನ್ನು ಮುಂದೂಡಲಾಗಿದೆ.

Ad Widget
Continue Reading

ರಾಜಕೀಯ

Ashok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ

Published

on



Ad Widget

Ad Widget

Ad Widget

Ad Widget

ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರಿಗೆ ಆಗಮಿಸಿದ ಬೊಲೆರೋ ವಾಹನವನ್ನು ‘ಬ್ಲಾಕ್ ಕಾಂಗ್ರೆಸ್ ವಾಹನ’ ಎಂದು ನಾಮಕರಣ ಮಾಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹಾಗೂ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಹಸ್ತಾಂತರಿಸಿದರು.

Ad Widget

Ad Widget <> Ad Widget

ಮೂರು ಬ್ಲಾಕ್‌ಗಳಿಗೆ ಒಂದೇ ವಾಹನ
ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ಗಳ ಸಂಘಟನಾ ಚಟುವಟಿಕೆಗಳಿಗೆ ಈ ವಾಹನವನ್ನು ಬಳಸಲಾಗುತ್ತದೆ. ಶಾಸಕರು ಯಾವ ಕ್ಷೇತ್ರ ವ್ಯಾಪ್ತಿಗೆ ಭೇಟಿ ನೀಡುತ್ತಾರೋ, ಆ ಸಂದರ್ಭ ಆಯಾ ಬ್ಲಾಕ್‌ನ ಅಧ್ಯಕ್ಷರು ವಾಹನವನ್ನು ಬಳಸಿಕೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.



Ad Widget

ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯದಲ್ಲೇ ಮಾದರಿಯಾಗುವ ರೀತಿಯಲ್ಲಿ ಈ ಬ್ಲಾಕ್ ಕಾಂಗ್ರೆಸ್ ವಾಹನವನ್ನು ತರಿಸಲಾಗಿದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.

Ad Widget

Ad Widget

ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿದರು.

ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು, ಪುಡಾ ಸದಸ್ಯ ನಿಹಾಲ್ ಪಿ. ಶೆಟ್ಟಿ, ಪುತ್ತೂರು ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ., ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಉದ್ಯಮಿ ಸಿಯಾನ್ ದರ್ಬೆ, ವಿಕ್ರಂ ರೈ ಸಾಂತ್ಯ ಮೊದಲಾದವರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading