ನಿಧನ ವಾರ್ತೆ
Bhagavata Subramanya Dhareshwara-ಹಾಡು ನಿಲ್ಲಿಸಿದ ಬಡಗುತಿಟ್ಟಿನ ಗಾನ ಕೋಗಿಲೆ – ಯಕ್ಷಗಾನದ ಹಿರಿಯ ಭಾಗವತ ಸುಬ್ರಮಣ್ಯ ಧಾರೇಶ್ವರ ಇನ್ನಿಲ್ಲ
ಕುಂದಾಪುರ: ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಎ.25 ರಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಬಡಗುತಿಟ್ಟಿನ ಯಕ್ಷಗಾನದಲ್ಲಿ ಹೊಸ ಅಲೆ ಎಬ್ಬಿಸಿದ್ದ ಕಾಳಿಂಗ ನಾವಡರ ಅಗಲುವಿಕೆಯ ಬಳಿಕ ಉಂಟಾಗಬಹುದಿದ್ದ ನಿರ್ವಾತವನ್ನು ತುಂಬಲು ಯತ್ನಿಸಿದ್ದರು.
ಸುಬ್ರಹ್ಮಣ್ಯ ಧಾರೇಶ್ವರರವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿದ್ದರು. ಯಕ್ಷರಂಗ ಕಂಡ ಪ್ರಯೋಗಶೀಲ ಭಾಗವತರಾಗಿದ್ದ ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಪೆರ್ಡೂರು ಮೇಳವೊಂದರಲ್ಲೇ 28 ವರ್ಷ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದ ಅವರು ಅದಕ್ಕೂ ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದರು.
ದಿ. ಉಪ್ಪೂರು ನಾರಣಪ್ಪ ಭಾಗವತರ ಶಿಷ್ಯರಾಗಿ ದಿ. ಕಾಳಿಂಗ ನಾವಡ ಅವರ ಅಬ್ಬರದ ಕಾಲದಲ್ಲೂ ಸರಿಸಾಟಿಯಾಗಿ ಬೆಳೆದ ಧಾರೇಶ್ವರರ ತಾಳಕ್ಕೆ ಕುಣಿಯದ ಕಲಾವಿದರಿಲ್ಲ. ದಿ. ಚಿಟ್ಟಾಣಿ ರಾಮಚಂದ್ರ ಹೆಗಡೆ, ಗೋಡೆ ನಾರಾಯಣ ಹೆಗಡೆ, ಕೃಷ್ಣ ಯಾಜಿ ಬಳ್ಕೂರ, ಕೊಂಡದಕುಳಿ ರಾಮಚಂದ್ರ ಹೆಗಡೆ ಹೀಗೆ ಬಹುತೇಕ ಎಲ್ಲ ಕಲಾವಿದರಿಗೂ ಭಾಗವತಿಕೆ ಮಾಡಿದ್ದಾರೆ
1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ ಪೆರ್ಡೂರು ಮೇಳದ ರಂಗಂಮಚವೇರಿದವರು ಯಶಸ್ಸಿನ ಶಿಖರ ತಲುಪಿದ್ದರು.
ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಪ್ರಾಚಾರ್ಯ ನಾರಣಪ್ಪ ಉಪ್ಪೂರರ ಮೂಲಕ ರಂಗಸ್ಥಳದ ಮೇಲೇರಿದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳ ತಿರುಗಾಟ ನಿಲ್ಲಿಸಿದ್ದರು.
ಮೇಳ ಬಿಟ್ಟು 10 ವರ್ಷದ ಬಳಿಕ ಮತ್ತೆ ಅದೇ ಮೇಳಕ್ಕೆ ಅನಿವಾರ್ಯ ಸಂದರ್ಭದಲ್ಲಿ ಸೇರಿ ಒಂದು ವರ್ಷದ ತಿರುಗಾಟ ಮಾಡಿದ್ದರು. ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಬದುಕಿನುದ್ದಕ್ಕೂ ತಮ್ಮ ಸ್ವರದ ಮೂಲಕವೇ ಅಭಿಮಾನಿಗಳನ್ನು ಸೆಳೆದಿಟ್ಟುಕೊಂಡಿದ್ದ ಭಾಗವತರ ಅಗಲುವಿಕೆ ನಿಜಕ್ಕೂ ಮಾತಾಡದ ಸ್ಥಿತಿ ತಂದಿದೆ.
ಯಕ್ಷಗಾನದಲ್ಲಿ ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಸುಬ್ರಮಣ್ಯ ಧಾರೇಶ್ವರ ಎನ್ನುವ ಹೆಸರು ಜನಪ್ರಿಯತೆಯಲ್ಲಿರುವಾಗಲೇ ಏಕಾಏಕಿ ಮೇಳ ತಿರುಗಾಟ ನಿಲ್ಲಿಸಿದ್ದರು. 10 ವರ್ಷದ ಬಳಿಕ ಮತ್ತೆ ಅದೇ ಮೇಳಕ್ಕೆ ಅನಿವಾರ್ಯ ಸಂದರ್ಭದಲ್ಲಿ ಸೇರಿ ಒಂದು ವರ್ಷದ ತಿರುಗಾಟ ಮಾಡಿದ್ದರು. ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಸುಬ್ರಮಣ್ಯ ಧಾರೇಶ್ವರ ಪೆರ್ಡೂರು ಮೇಳವೊಂದರಲ್ಲೇ 28 ವರ್ಷಗಳ ಕಾಲ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಅದಕ್ಕೂ ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಭಾಗವತರಾಗಿ ಯಕ್ಷ ಸೇವೆ ಸಲ್ಲಿಸಿದ್ದರು.
ನಿಧನ ವಾರ್ತೆ
Babu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ ಶಾರದಾ, ಮಕ್ಕಳಾದ ಕುಸುಮಾವತಿ ಗೌಡ, ಯಶೋಧ ಗೌಡ, ಪ್ರೇಮಾ ಗೌಡ, ಪುಷ್ಪ ಗೌಡ, ವಿಠಲ ಗೌಡ ಹಾಗೂ ಪುರಂದರ ಗೌಡ ಸೇರಿದಂತೆ ಬಂಧುಮಿತ್ರರನ್ನು ಅಗಲಿದ್ದಾರೆ.
ನಿಧನ ವಾರ್ತೆ
One-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.
ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್ಐಆರ್ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.
ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.
ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.
ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.
ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಅಪರಾಧ20 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್17 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ17 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು18 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ13 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ18 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು19 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಸ್ಥಳೀಯ18 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















