ರಾಜಕೀಯ
ಐದು ವರ್ಷದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ನೋಡಿ ವೋಟ್ ಹಾಕುತ್ತೇನೆ – ಉಡುಪಿಯಲ್ಲಿ ಖ್ಯಾತ ನಟ ರಕ್ಷಿತ್ ಶೆಟ್ಟಿ
ಉಡುಪಿ : ಉಡುಪಿಯಲ್ಲಿ ನಟ ರಕ್ಷಿತ್ ಶೆಟ್ಟಿ ಮತದಾನ ಮಾಡಿ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಾರೆ.
ಐದು ವರ್ಷದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ನೋಡಿ ವೋಟ್ ಹಾಕುತ್ತೇನೆ ಎಂದು ಖ್ಯಾತ ನಟ ಹೇಳಿದ್ದಾರೆ.
ಮುಂದಿನ ಐದು ವರ್ಷ ಯಾವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ಓಟ್ ಮಾಡ್ತೇನೆ. ಯೋಚನೆ ಮಾಡಿ ರಾಜಕೀಯ ತಿಳಿದವರ ಜೊತೆ ತರ್ಕ ಮಾಡಿ ಮತ ಹಾಕುತ್ತೇನೆ ಎಂದದು
ಯಾವಾಗಲೂ ನಾನು ಒಂದು ನಿರ್ಧಾರಕ್ಕೆ ಬಂದು ಮತ ಹಾಕುತ್ತೇನೆ. ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು. ನೆನ್ನೆ ರಾತ್ರಿ ಬೆಂಗಳೂರಿಂದ ಹೊರಟು ಉಡುಪಿಗೆ ಬಂದಿದ್ದೇನೆ. ನಾನು ಬೆಂಗಳೂರು ಸೇರಿ 18 ವರ್ಷ ಆಯ್ತು . ಪ್ರತಿ ಬಾರಿ ವೋಟಿಗೆ ನಾನು ಉಡುಪಿಗೆ ಬರುತ್ತೇನೆ
ವೋಟು ನಮ್ಮ ಹಕ್ಕು ನಮ್ಮ ಜವಾಬ್ದಾರಿ. ವೋಟ್ ಗೋಸ್ಕರ ಬೆಂಗಳೂರಿಂದ ಊರಿಗೆ ಬರುವುದು ಖುಷಿ ..ನನ್ನ ಊರು ನನ್ನ ದೇಶ ನಮ್ಮ ಜವಾಬ್ದಾರಿ ಏನೋ ಖುಷಿ ಇದೆ ಎಂದರು.
ಅಂತರ ರಾಜ್ಯ
Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.
ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.
ರಾಜಕೀಯ
Rural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
ರಾಜ್ಯದ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕ್ಷೇತ್ರವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.
ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕ್ಷೇತ್ರವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.
ಹಲವು ವರ್ಷಗಳಿಂದ ಬಾಕಿ ಉಳಿದಿರುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಪ್ರಕ್ರಿಯೆಗೆ ಇದರಿಂದ ಮತ್ತಷ್ಟು ವೇಗ ಸಿಕ್ಕಿದೆ. ಈ ಹಿಂದೆ ಅಕ್ಟೋಬರ್ನಲ್ಲಿ ಸರ್ಕಾರ ಕರಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಲ್ಲಿಕೆಯಾಗಿದ್ದ 2,900ಕ್ಕೂ ಅಧಿಕ ಆಕ್ಷೇಪಣೆಗಳನ್ನು ಪರಿಶೀಲಿಸಿ, ನಿಯಮಾನುಸಾರ ಇತ್ಯರ್ಥಪಡಿಸಿದ ಬಳಿಕ ಇದೀಗ ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಮುಂದಿನ ಹಂತದಲ್ಲಿ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ. ಬಳಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸೇರಿದಂತೆ ಚುನಾವಣೆಗೆ ಅಗತ್ಯವಾದ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತದೆ.
ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು, ಡಿಸೆಂಬರ್ ಮಧ್ಯಭಾಗದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ. 2027ರ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಮತದಾನ ನಡೆಯುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Trisha-ವಿಜಯ್ ಸಿಎಂ ಬೆನ್ನಲ್ಲೇ ತ್ರಿಷಾ ರಾಜಕೀಯ ಎಂಟ್ರಿಗೆ ಸಿದ್ಧತೆ? ‘ಜಯಲಲಿತಾ ಉತ್ತರಾಧಿಕಾರಿ’ ಎಂದ ಅಭಿಮಾನಿಗಳು..!
ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.
ಚೆನ್ನೈ: ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.
ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಅವರ ಆಪ್ತ ಸ್ನೇಹಿತೆ ಎಂದೇ ಗುರುತಿಸಿಕೊಂಡಿರುವ ತ್ರಿಷಾ ಕೂಡ ರಾಜಕೀಯಕ್ಕೆ ಬರಲಿದ್ದಾರೆ ಎಂಬ ಚರ್ಚೆಗಳು ಜೋರಾಗಿವೆ. ಈ ನಿರೀಕ್ಷೆಯೊಂದಿಗೆ ಅಭಿಮಾನಿಗಳ ಗುಂಪೊಂದು ‘ಇಳಯ ಪುರಟ್ಟಿ ತಲೈವಿ ತ್ರಿಷಾ’ ಹೆಸರಿನಲ್ಲಿ ಹೊಸ ವೇದಿಕೆಯನ್ನು ಆರಂಭಿಸಿದೆ.
ಸಾರ್ವಜನಿಕ ಹಿತಾಸಕ್ತಿ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ತ್ರಿಷಾ ಅವರನ್ನು ರಾಜಕೀಯ ಕ್ಷೇತ್ರಕ್ಕೆ ಕರೆತರುವ ಪ್ರಯತ್ನ ನಡೆಸುವುದಾಗಿ ಸಂಘಟನೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ವಿಜಯ್ ಅವರೊಂದಿಗೆ ತ್ರಿಷಾ ಕೂಡ ರಾಜಕೀಯ ಪಯಣ ಆರಂಭಿಸಿದರೆ ತಮಿಳುನಾಡಿನ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.
ಜಯಲಲಿತಾ ಹಾದಿಯಲ್ಲಿ ತ್ರಿಷಾ?
ಅಭಿಮಾನಿಗಳು ತ್ರಿಷಾ ಅವರಿಗೆ ‘ಇಳಯ ಪುರಟ್ಟಿ ತಲೈವಿ’ (ಯುವ ಕ್ರಾಂತಿಕಾರಿ ನಾಯಕಿ) ಎಂಬ ಬಿರುದನ್ನೂ ನೀಡಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ನಾಯಕಿ ದಿವಂಗತ ಜೆ. ಜಯಲಲಿತಾ ಅವರನ್ನು ‘ಪುರಟ್ಟಿ ತಲೈವಿ’ (ಕ್ರಾಂತಿಕಾರಿ ನಾಯಕಿ) ಎಂದು ಕರೆಯಲಾಗುತ್ತಿತ್ತು. ಇದೇ ಹಿನ್ನೆಲೆಯಲ್ಲಿ ತ್ರಿಷಾ ಅವರಿಗೂ ಅಂತಹದ್ದೇ ಬಿರುದು ನೀಡಿ, ಜಯಲಲಿತಾ ಅವರ ಉತ್ತರಾಧಿಕಾರಿ ಎಂಬಂತೆ ಬಿಂಬಿಸಲಾಗುತ್ತಿದೆ.
ಜಯಲಲಿತಾ ಅವರ ವ್ಯಕ್ತಿತ್ವ ಮತ್ತು ಆಡಳಿತ ಶೈಲಿಯನ್ನು ಮೆಚ್ಚಿಕೊಂಡಿರುವ ಅಭಿಮಾನಿಗಳು, ತಮಿಳುನಾಡಿಗೆ ಅವರಂತಹ ನಾಯಕಿಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಪ್ರತಿಯೊಂದು ಬೆಳವಣಿಗೆಯ ಬಗ್ಗೆಯೂ ಜಯಲಲಿತಾ ಮಾಹಿತಿ ಹೊಂದಿದ್ದರು. ಸರಕಾರಿ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ನಿರಂತರ ನಿಗಾ ಇರಿಸುತ್ತಿದ್ದರು ಎಂದು ಸಂಘಟನೆಯ ಪ್ರಕಟಣೆಯಲ್ಲಿ ಹೇಳಲಾಗಿದೆ.
ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ಜಯಲಲಿತಾ ಅವರ ಆಡಳಿತ ಶೈಲಿಯನ್ನು ಉಲ್ಲೇಖಿಸಿರುವ ಅಭಿಮಾನಿಗಳು, ತ್ರಿಷಾ ಅವರಲ್ಲೂ ಅಂತಹ ನಾಯಕತ್ವದ ಗುಣಗಳಿವೆ ಎಂದು ಪ್ರತಿಪಾದಿಸಿದ್ದಾರೆ.
ವಿಜಯ್-ತ್ರಿಷಾ ಜೋಡಿಯಿಂದ ಹೊಸ ರಾಜಕೀಯ ಅಧ್ಯಾಯ?
ವಿಜಯ್ ನೇತೃತ್ವದ ಟಿವಿಕೆ ಸರಕಾರದ ಕಾರ್ಯವೈಖರಿಯನ್ನು ಶ್ಲಾಘಿಸಿರುವ ಅಭಿಮಾನಿಗಳು, ತ್ರಿಷಾ ಕೂಡ ರಾಜಕೀಯ ಪ್ರವೇಶಿಸಿದರೆ ಜಯಲಲಿತಾ ಅವರ ಆಡಳಿತವನ್ನು ಹೋಲುವ ಉತ್ತಮ ಆಡಳಿತವನ್ನು ತಮಿಳುನಾಡಿನಲ್ಲಿ ಕಾಣಬಹುದು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.
ತ್ರಿಷಾ ಅವರ ವ್ಯಕ್ತಿತ್ವ ಜಯಲಲಿತಾ ಅವರನ್ನು ಹೋಲುತ್ತದೆ. ವಿವಿಧ ಸಂದರ್ಭಗಳಲ್ಲಿ ಅವರ ಗುಣಗಳನ್ನು ಗಮನಿಸಿದ್ದೇವೆ. ಅವರ ಆಪ್ತರಿಗೂ ಈ ವಿಚಾರ ತಿಳಿದಿದೆ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ.
ಈ ಅಭಿಯಾನದ ಮೊದಲ ಹೆಜ್ಜೆಯಾಗಿ ‘ಇಳಯ ಪುರಟ್ಟಿ ತಲೈವಿ ತ್ರಿಷಾ ಪೇರವೈ’ ಎಂಬ ಸಂಘಟನೆಯನ್ನು ಆರಂಭಿಸಲಾಗಿದೆ. ಈ ವೇದಿಕೆಯ ಮೂಲಕ ಸಾರ್ವಜನಿಕ ಹಿತಾಸಕ್ತಿ ಮತ್ತು ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿ, ಆ ಮೂಲಕ ತ್ರಿಷಾ ಅವರ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧಪಡಿಸುವುದು ಅಭಿಮಾನಿಗಳ ಉದ್ದೇಶವಾಗಿದೆ.
ಆದರೆ, ತ್ರಿಷಾ ಅವರು ರಾಜಕೀಯ ಪ್ರವೇಶಿಸುವ ಕುರಿತು ಈವರೆಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ಸದ್ಯಕ್ಕೆ ಇದು ಅಭಿಮಾನಿಗಳ ಮಟ್ಟದಲ್ಲಿ ನಡೆಯುತ್ತಿರುವ ಅಭಿಯಾನ ಮತ್ತು ನಿರೀಕ್ಷೆಯಷ್ಟೇ ಆಗಿದೆ.
ಈ ಹಿಂದೆ ಟಿವಿ ಸಂದರ್ಶನವೊಂದರಲ್ಲಿ ತಮಾಷೆಯಾಗಿ ಮುಂದೆ ತಾನು ತಮಿಳುನಾಡಿನ ಮುಖ್ಯಮಂತ್ರಿಯಾಗುವುದಾಗಿ ತ್ರಿಷಾ ಹೇಳಿದ್ದ ವಿಡಿಯೊ ಕೂಡ ವಿಜಯ್ ಮುಖ್ಯಮಂತ್ರಿಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿತ್ತು.
ಗಮನಾರ್ಹವೆಂದರೆ, ಜಯಲಲಿತಾ ಕೂಡ ಆರಂಭದಲ್ಲಿ ನಟಿಯಾಗಿಯೇ ಜನಪ್ರಿಯತೆ ಗಳಿಸಿದ್ದರು. ಬಳಿಕ 1982ರಲ್ಲಿ ಎಂ.ಜಿ. ರಾಮಚಂದ್ರನ್ ಅವರ ಎಐಎಡಿಎಂಕೆ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶಿಸಿ, 1991ರಲ್ಲಿ ಮೊದಲ ಬಾರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ತ್ರಿಷಾ ಅವರ ರಾಜಕೀಯ ಪ್ರವೇಶದ ಕುರಿತು ಅಭಿಮಾನಿಗಳಲ್ಲಿ ಮೂಡಿರುವ ಕುತೂಹಲ ತಮಿಳುನಾಡಿನ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.
-
ಶಿಕ್ಷಣ24 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಅಪರಾಧ8 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್5 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಮಂಗಳೂರು6 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ಸ್ಥಳೀಯ5 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಅಂತರ ರಾಜ್ಯ6 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಸ್ಥಳೀಯ6 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಮಂಗಳೂರು7 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ















