Connect with us

ಸ್ಥಳೀಯ

H D Kumaraswamy-ನಮ್ಮ ಕುಟುಂಬವೇ ಬೇರೆ. ಎಚ್‌.ಡಿ.ರೇವಣ್ಣ ಅವರ ಕುಟುಂಬವೇ ಬೇರೆ : ಎಚ್‌. ಡಿ. ಕುಮಾರ ಸ್ವಾಮಿ

Published

on

Ad Widget

Ad Widget

Ad Widget

Ad Widget

ಶಿವಮೊಗ್ಗ: ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದೆ ಎನ್ನಲಾದ ಪೆನ್‌ಡ್ರೈವ್ ವಿಚಾರದಲ್ಲಿ ನನ್ನೊಬ್ಬನಿಗೇ ಅಲ್ಲ ಇಡೀ ಸಮಾಜಕ್ಕೆ ಮುಜುಗರ ಆಗಿದೆ ಎಂದು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಈ ವಿಚಾರದಲ್ಲಿ ದೇವೇಗೌಡರ ಕುಟುಂಬದ ಹೆಸರು ಎಳೆದು ತರಬೇಡಿ ಎಂದು ಕಾಂಗ್ರೆಸ್‌ ಮುಖಂಡರಿಗೆ ತಾಕೀತು ಮಾಡಿದರು.

Ad Widget

Ad Widget

Ad Widget

Ad Widget

’ಕಾಂಗ್ರೆಸ್‌ ಮಹಾನುಭಾವರು ನೀವು ಕಳಂಕವಿಲ್ಲದೇ ಬಂದವರಾ? ಇಲ್ಲಿ ದೇವೇಗೌಡರು, ಕುಮಾರಸ್ವಾಮಿ ಹೆಸರು ಯಾಕೆ ತರುತ್ತೀರಿ. ಯಾರು ಮಾಡಿದ್ದಾರೋ ಅವರು ಶಿಕ್ಷೆ ಅನುಭವಿಸಬೇಕು ಎಂದು ನಾನೇ ಸ್ಪಷ್ಟಪಡಿಸಿದ್ದೇನಲ್ಲ‘ ಎಂದು ಹರಿಹಾಯ್ದರು.

Ad Widget

Ad Widget alt="Ad Widget"/>

Ad Widget

’ನಮ್ಮ ಕುಟುಂಬವೇ ಬೇರೆ. ಎಚ್‌.ಡಿ.ರೇವಣ್ಣ ಅವರ ಕುಟುಂಬವೇ ಬೇರೆ. ಹಾಸನದಲ್ಲಿ ಅವರು ನಾಲ್ಕು ಜನ ಪ್ರತ್ಯೇಕವಾಗಿ ವಾಸವಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರಿಗೆ ಹೇಳುತ್ತಿದ್ದೇನೆ. ಇಲ್ಲಿ ಕುಟುಂಬದ ಹೆಸರು ತರಬೇಡಿ. ಇದು ವ್ಯಕ್ತಿಯ ಪ್ರಶ್ನೆಯೇ ಹೊರತು ಕುಟುಂಬದ ಪ್ರಶ್ನೆ ಅಲ್ಲ. ವ್ಯಕ್ತಿಯ ಬಗ್ಗೆ ಚರ್ಚೆ ಮಾಡಿಕೊಳ್ಳಿ. ವ್ಯಕ್ತಿಗತವಾಗಿ ಒಬ್ಬೊಬ್ಬರದ್ದು ಒಂದೊಂದು ವರ್ತನೆ ಇರುತ್ತದೆ ಎಂದು ಹೇಳಿದರು.

Ad Widget

Ad Widget <> Ad Widget

ಪ್ರಜ್ವಲ್‌ ವಿಚಾರದಲ್ಲಿ ಮಹಿಳೆಯರೊಂದಿಗೆ ತಪ್ಪು ಆಗಿದ್ದರೆ ಅದು ಆಗಬಾರದಿತ್ತು. ಸಮಾಜದಲ್ಲಿ ಇಂತಹದ್ದು ಮತ್ತೆ ನಡೆಯಬಾರದು ಎಂಬುದು ನನ್ನ ಅಭಿಪ್ರಾಯ. ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆಗಿದ್ದಾಗ, ನಾನು ಮುಖ್ಯಮಂತ್ರಿ ಆಗಿದ್ದಾಗಲೂ ಲಕ್ಷಾಂತರ ಮಹಿಳೆಯರು ಕಷ್ಟ–ಸುಖ ಹೇಳಿಕೊಂಡು ನಮ್ಮ ಬಳಿಗೆ ಬಂದಿದ್ದಾರೆ. ಅವರ ಜೊತೆ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಅವರಿಗೆ ನೆರವು ಕೊಟ್ಟು ಸಂಕಷ್ಟದಿಂದ ಪಾರು ಮಾಡಿದ್ದೇವೆ ಎಂದು ಸ್ಮರಿಸಿದರು.

ಯಾರು ತಪ್ಪು ಮಾಡಿದ್ದರೂ ಈ ನೆಲದ ಕಾನೂನಿಗೆ ತಲೆಬಾಗಲೇಬೇಕು. ಶಿಕ್ಷೆ ಅನುಭವಿಸಬೇಕು. ಹೀಗಾಗಿ ಮುಂದಿನ ವಿಷಯಗಳು ನನಗೆ ಸಂಬಂಧವಿಲ್ಲ. ಎಸ್‌ಐಟಿ ತನಿಖೆ ವಿಚಾರದಲ್ಲಿ ಯಾರ ಮೇಲೂ ಪ್ರಭಾವ ಬೀರುವ ಪ್ರಶ್ನೆಯೇ ಇಲ್ಲ. ಇಲ್ಲಿ ಯಾರನ್ನೂ ವಹಿಸಿಕೊಳ್ಳುವುದಿಲ್ಲ. ಆದರೆ ಪಾರದರ್ಶಕ ತನಿಖೆ ನಡೆಯಲಿ ಎಂದು ಒತ್ತಾಯಿಸಿದರು.

Ad Widget

Ad Widget

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಫಲಿತಾಂಶದ ಮೇಲೆ ಪೆನ್‌ಡ್ರೈವ್‌ ವಿಚಾರ ಪರಿಣಾಮ ಬೀರೊಲ್ಲ ಎಂದು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಪಕ್ಷದಿಂದಲೂ ಪ್ರಜ್ವಲ್‌ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

’ಪೆನ್‌ಡ್ರೈವ್ ವಿಚಾರದಲ್ಲಿ ಎಲ್ಲವೂ ವೈಯಕ್ತಿಕವಾಗಿ ನಡೆದ ಸಂಗತಿಗಳು. ಮೊದಲೇ ನಮ್ಮ ಗಮನಕ್ಕೆ ಬಂದಿದ್ದರೆ ತಪ್ಪಿಸಬಹುದಿತ್ತು. ಮಕ್ಕಳು ಎಲ್ಲಿಗೆ ಹೋಗುತ್ತಾರೆ ಏನು ಮಾಡುತ್ತಾರೆ ಎಂದು ಕಾಯಲು ಆಗುತ್ತದೆಯೇ. ಅದೇ ರೀತಿ ಪ್ರಜ್ವಲ್ ವಿದೇಶಕ್ಕೆ ಹೋಗುವಾಗಲೂ ನನ್ನ ಕೇಳಿ ಹೋಗುತ್ತಾನಾ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಪ್ರಜ್ವಲ್ ಅವರನ್ನು ವಿದೇಶದಿಂದ ವಾಪಸ್ ಕರೆಸಿಕೊಳ್ಳುವ ವಿಚಾರದಲ್ಲಿ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.

Ad Widget
Click to comment

Leave a Reply

ಕಾರ್ಯಕ್ರಮಗಳು

Vitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್

Published

on

Ad Widget

Ad Widget

Ad Widget

Ad Widget

ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ.

Ad Widget

Ad Widget

Ad Widget

Ad Widget

ವಿಟ್ಲ: ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ. ಈ ಬಗ್ಗೆ ಮೈತ್ರೇಯಿ ಗುರುಕುಲದ ಸಭಾಂಗಣದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಯಿತು.

Ad Widget

Ad Widget alt="Ad Widget"/>

Ad Widget

ಮೈತ್ರೇಯಿ ಆಯುರ್ವೇದ ಗುರುಕುಲಂನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಸುಧಾರಾವ್ ಮಾತನಾಡಿ “1994ರಲ್ಲಿ ಸ್ಥಾಪನೆಯಾದ ಮೈತ್ರೇಯಿ ಗುರುಕುಲಂನ ಸುದೀರ್ಘ ಸೇವಾ ಪರಂಪರೆಯಿಂದ ಪ್ರೇರಣೆ ಪಡೆದು, ಅಜೇಯ ಟ್ರಸ್ಟ್‌ನ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಮೈತ್ರೇಯಿ ಆಯುರ್ವೇದ ಗುರುಕುಲಂರೂಪುಗೊಳ್ಳುತ್ತಿದೆ. ಹೆಣ್ಣುಮಕ್ಕಳಿಗೆ ಮೌಲ್ಯಾಧಾರಿತ ವಸತಿ ಸಹಿತ ಶಿಕ್ಷಣವನ್ನು ನೀಡುತ್ತಾ ಬಂದಿರುವ ಸಂಸ್ಥೆಯು ಇದೀಗ ಆಯುರ್ವೇದ ಶಿಕ್ಷಣ ಕ್ಷೇತ್ರಕ್ಕೂತನ್ನ ಸೇವೆಯನ್ನು ವಿಸ್ತರಿಸುತ್ತಿದೆ.

Ad Widget

Ad Widget <> Ad Widget

ಮೈತ್ರೇಯಿ ಆಯುರ್ವೇದ ಗುರುಕುಲಂ ಮಹಿಳೆಯರಿಗಾಗಿ ಮೀಸಲಾದ ವಸತಿ ಸಹಿತ ಶಿಕ್ಷಣ ಸಂಸ್ಥೆಯಾಗಿದ್ದು, ಒಟ್ಟು 7½ ವರ್ಷಗಳ ಸಮಗ್ರ ಶಿಕ್ಷಣ ಕಾರ್ಯಕ್ರಮವನ್ನು ರೂಪಿಸಿದೆ. ಇದರಲ್ಲಿ 2 ವರ್ಷಗಳ ಪೂರ್ವ ಆಯುರ್ವೇದ ಶಿಕ್ಷಣ, 4½ ವರ್ಷಗಳ BAMS ಪದವಿ ಶಿಕ್ಷಣ ಹಾಗೂ 1 ವರ್ಷದ ಕಡ್ಡಾಯ ಇಂಟರ್ನ್‌ಶಿಪ್ ಒಳಗೊಂಡಿರುತ್ತದೆ. ಮೈತ್ರೇಯಿ ಆಯುರ್ವೇದ ಗುರುಕುಲಂ ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ, ನವದೆಹಲಿ ಇದರ ಸಂಯೋಜನೆ ಹೊಂದಿದ್ದು, ಭಾರತ ಸರ್ಕಾರದ ಆಯುಷ್ ಸಚಿವಾಲಯ ಹಾಗೂ ನವದೆಹಲಿಯ ಭಾರತೀಯ ವೈದ್ಯಕೀಯ ಪದ್ಧತಿಗಳ ರಾಷ್ಟ್ರೀಯ ಆಯೋಗದ (NCISM) ಮಾನ್ಯತೆ ಮತ್ತು ಅನ್ವಯಿಸುವ ನಿಯಂತ್ರಣಾತ್ಮಕ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ. ಈ ಶಿಕ್ಷಣ ಕಾರ್ಯಕ್ರಮವು ಸಂಸ್ಕೃತ, ಯೋಗ, ಭಾರತೀಯ ಜ್ಞಾನಪರಂಪರೆ, ಶಿಸ್ತು ಮತ್ತು ನೈತಿಕ ಮೌಲ್ಯಗಳೊಂದಿಗೆ ಆಯುರ್ವೇದ ಶಿಕ್ಷಣವನ್ನು ಸಂಯೋಜಿಸುವ ಉದ್ದೇಶವನ್ನು ಹೊಂದಿದೆ. ಆಯುರ್ವೇದದ ಶಾಸ್ತ್ರೀಯ ಗ್ರಂಥಗಳನ್ನು ಸಂಸ್ಕೃತ ಭಾಷೆಯಲ್ಲಿ ಅಧ್ಯಯನ ಮಾಡುವುದಕ್ಕೆ ವಿಶೇಷ ಒತ್ತು ನೀಡುವುದರ ಜೊತೆಗೆ, ಜ್ಞಾನವಂತ, ಕೌಶಲ್ಯ ಪೂರ್ಣ ಹಾಗೂ ಕರುಣಾಮಯಿ ಆಯುರ್ವೇದ ವೈದ್ಯರನ್ನು ರೂಪಿಸುವುದು ಸಂಸ್ಥೆಯ ಪ್ರಮುಖ ಆಶಯವಾಗಿದೆ. ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ. ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಆಧಾರವಾಗಿಟ್ಟುಕೊಂಡು ಮಹಿಳೆಯರಿಗೆ ಗುಣಮಟ್ಟದ ವಸತಿ ಸಹಿತ ಶಿಕ್ಷಣವನ್ನು ಒದಗಿಸುವುದರ ಜೊತೆಗೆ, ಜನಸಾಮಾನ್ಯರಿಗೆ ಗುಣಮಟ್ಟದ ಆಯುರ್ವೇದ ಆರೋಗ್ಯ ಸೇವೆಗಳನ್ನು ನೀಡುವ ಆಶಯವನ್ನು ಸಂಸ್ಥೆ ಹೊಂದಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ರಾಜೇಶ್ ನಾಯಕ್ ವಹಿಸಲಿದ್ದಾರೆ.ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಬೆಂಗಳೂರಿನ ಸೆಂಚುರಿ ಗ್ರೂಪ್ ಆಫ್ ಕಂಪನೀಸ್‌ನ ಅಧ್ಯಕ್ಷರು ಡಾ. ಪಿ. ದಯಾನಂದ ಪೈ, ಮೈಸೂರು ಮಂಗಳೂರು ಗಣೇಶ್ ಬೀಡಿ ವರ್ಕ್ಸ್‌ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಜಗನ್ನಾಥ ಶೆಣೈ, ಬರೋಡಾದ ಶಶಿ ಕ್ಯಾಟರಿಂಗ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶಶಿಧರ ಶೆಟ್ಟಿ ಮತ್ತು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಸ್. ಅಹಲ್ಯಾ ಅವರು ಉಪಸ್ಥಿತರಿರಲಿದ್ದಾರೆ.

Ad Widget

Ad Widget

ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯರು ಹಾಗೂ ಸಂಸ್ಕೃತ ಭಾರತಿ ಸಂಘಟನೆಯ ದಿನೇಶ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಜೇಯ ಟ್ರಸ್ಟ್‌ನ ಅಧ್ಯಕ್ಷರಾದ ಸುಬ್ರಾಯ ಪೈ, ಮೈತ್ರೇಯಿ ಆಯುರ್ವೇದ ಗುರುಕುಲಂನ ಪ್ರಾಂಶುಪಾಲರಾದ ಡಾ. ರವಿಗಣೇಶ್ ಮೊಗ್ರ ಉಪಸ್ಥಿತರಿದ್ದರು.

Ad Widget
Continue Reading

ಬಿಗ್ ನ್ಯೂಸ್

Rakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್‌ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ

Published

on

Ad Widget

Ad Widget

Ad Widget

Ad Widget

ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳ ತೇಜೋವಧೆ ಮಾಡಿ, ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಆರೋಪ ಎದುರಿಸುತ್ತಿರುವ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಸಂಸ್ಥೆಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ಅವರಿಗೆ ಸೂಚಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು, ನ.23: ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳ ತೇಜೋವಧೆ ಮಾಡಿ, ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಆರೋಪ ಎದುರಿಸುತ್ತಿರುವ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಸಂಸ್ಥೆಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ಅವರಿಗೆ ಸೂಚಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕೇಶ್ ಶೆಟ್ಟಿ ಹಾಗೂ ಸುದ್ದಿವಾಹಿನಿಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್‌ಬಾಬು ಸರ್ಕಾರಕ್ಕೆ ಪತ್ರ ಬರೆದು ಮನವಿ ಸಲ್ಲಿಸಿದ್ದರು. ಈ ಮನವಿಯ ಬೆನ್ನಲ್ಲೇ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಡಿಜಿಪಿಗೆ ಪತ್ರ ಬರೆದಿದ್ದಾರೆ.

Ad Widget

Ad Widget <> Ad Widget

ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಸಚಿವರು, ಆಡಳಿತ ಪಕ್ಷದ ಶಾಸಕರು ಹಾಗೂ ಪ್ರತಿಪಕ್ಷದ ಶಾಸಕರಿಗೆ ಹಣದ ಆಮಿಷವೊಡ್ಡಿ ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುವ ಮೂಲಕ ಜನಪ್ರತಿನಿಧಿಗಳ ಗೌರವಕ್ಕೆ ಧಕ್ಕೆ ತಂದು ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಸುರೇಶ್‌ಬಾಬು ತಮ್ಮ ಪತ್ರದಲ್ಲಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ರಾಕೇಶ್ ಶೆಟ್ಟಿ ಹಾಗೂ ಸುದ್ದಿವಾಹಿನಿಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದರು.

ಸುರೇಶ್‌ಬಾಬು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕೈಗೊಂಡ ಕ್ರಮಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಡಿಜಿಪಿಗೆ ನಿರ್ದೇಶನ ನೀಡಿದ್ದಾರೆ.

Continue Reading

ಬಿಗ್ ನ್ಯೂಸ್

Railway-ರೈಲ್ವೆ ಗುಂಪು ಬುಕಿಂಗ್‌ನಲ್ಲಿ ಮಹತ್ವದ ಬದಲಾವಣೆ: ಬರ್ತ್‌ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!

Published

on

Ad Widget

Ad Widget

Ad Widget

Ad Widget

ಮದುವೆ, ಪ್ರವಾಸ, ತೀರ್ಥಯಾತ್ರೆ, ಶೈಕ್ಷಣಿಕ ಪ್ರವಾಸ, ಕ್ರೀಡಾಕೂಟ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಸಡಿಲಿಕೆ ನೀಡಿದೆ. ಗುಂಪು ಹಾಗೂ ಬೃಹತ್ ಟಿಕೆಟ್ ಕಾಯ್ದಿರಿಸುವಿಕೆಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದ್ದು, ಗುಂಪು ಬುಕಿಂಗ್‌ನಲ್ಲಿ ಬರ್ತ್‌ಗಳ ಸಂಖ್ಯೆಗೆ ಈ ಹಿಂದೆ ಇದ್ದ ನಿರ್ದಿಷ್ಟ ಮಿತಿಯನ್ನು ತೆಗೆದುಹಾಕಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮದುವೆ, ಪ್ರವಾಸ, ತೀರ್ಥಯಾತ್ರೆ, ಶೈಕ್ಷಣಿಕ ಪ್ರವಾಸ, ಕ್ರೀಡಾಕೂಟ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಸಡಿಲಿಕೆ ನೀಡಿದೆ. ಗುಂಪು ಹಾಗೂ ಬೃಹತ್ ಟಿಕೆಟ್ ಕಾಯ್ದಿರಿಸುವಿಕೆಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದ್ದು, ಗುಂಪು ಬುಕಿಂಗ್‌ನಲ್ಲಿ ಬರ್ತ್‌ಗಳ ಸಂಖ್ಯೆಗೆ ಈ ಹಿಂದೆ ಇದ್ದ ನಿರ್ದಿಷ್ಟ ಮಿತಿಯನ್ನು ತೆಗೆದುಹಾಕಲಾಗಿದೆ.

Ad Widget

Ad Widget alt="Ad Widget"/>

Ad Widget

2026ರ ನವೆಂಬರ್ 18ರಂದು ನೈಋತ್ಯ ರೈಲ್ವೆ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇದರ ಅನ್ವಯ ಪ್ರಮುಖ ಕಾಯ್ದಿರಿಸುವಿಕೆ ಕೇಂದ್ರಗಳಲ್ಲಿ ಗುಂಪು ಬುಕಿಂಗ್‌ಗೆ ಬೆಳಗ್ಗೆ 9 ಗಂಟೆಯಿಂದ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಪ್ರಯಾಣಿಕರ ಮುಂಗಡ ಕಾಯ್ದಿರಿಸುವಿಕೆ ಆರಂಭವಾದ ಒಂದು ಗಂಟೆಯ ಬಳಿಕ ಈ ಸೌಲಭ್ಯ ಲಭ್ಯವಾಗಲಿದೆ.

Ad Widget

Ad Widget <> Ad Widget

ನವೆಂಬರ್ 19ರಂದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾದ ಸುತ್ತೋಲೆಯ ಪ್ರಕಾರ, ಮದುವೆ ಸಮಾರಂಭಗಳು, ಹಬ್ಬಗಳು, ಯಾತ್ರೆಗಳು, ಕ್ರೀಡಾ ತಂಡಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಇತರ ಸಮಾನ ಉದ್ದೇಶಗಳಿಗಾಗಿ ಗುಂಪಾಗಿ ಪ್ರಯಾಣಿಸುವವರು ನಿಲ್ದಾಣದ ಕಾಯ್ದಿರಿಸುವಿಕೆ ಕಚೇರಿಯಲ್ಲಿ ಬೃಹತ್ ಪ್ರಮಾಣದ ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ಈ ಸೌಲಭ್ಯ ಖಚಿತಗೊಂಡ (Confirmed), ಆರ್‌ಎಸಿ (RAC) ಹಾಗೂ ಕಾಯುವ ಪಟ್ಟಿಯ (Waitlisted) ಟಿಕೆಟ್‌ಗಳಿಗೂ ಅನ್ವಯಿಸುತ್ತದೆ.

ಗುಂಪು ಬುಕಿಂಗ್‌ಗೆ ಬರ್ತ್‌ಗಳ ಸಂಖ್ಯೆಯ ಮಿತಿ ಇಲ್ಲ
ಪರಿಷ್ಕೃತ ಮಾರ್ಗಸೂಚಿಯ ಪ್ರಮುಖ ಬದಲಾವಣೆಯೆಂದರೆ, ಗುಂಪು ಕಾಯ್ದಿರಿಸುವಿಕೆಯಲ್ಲಿ ಅನುಮತಿಸಲಾದ ಬರ್ತ್‌ಗಳು ಅಥವಾ ಆಸನಗಳ ಸಂಖ್ಯೆಗೆ ಯಾವುದೇ ಗರಿಷ್ಠ ಮಿತಿ ಇರುವುದಿಲ್ಲ. ಈ ಹಿಂದೆ ಇದ್ದ ನಿರ್ದಿಷ್ಟ ಸಂಖ್ಯೆಯ ಮಿತಿಯನ್ನು ತೆಗೆದುಹಾಕಲಾಗಿದೆ. ಮಂಗಳೂರು ಸೇರಿದಂತೆ ಪ್ರಮುಖ ನಿಲ್ದಾಣಗಳ ಕಾಯ್ದಿರಿಸುವಿಕೆ ಅಧಿಕಾರಿಗಳಿಗೆ ಇಂತಹ ಗುಂಪು ಬುಕಿಂಗ್‌ಗಳನ್ನು ಅನುಮೋದಿಸುವ ಅಧಿಕಾರವನ್ನೂ ನೀಡಲಾಗಿದೆ.

Ad Widget

Ad Widget

ಗುಂಪು ಟಿಕೆಟ್‌ಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

  • ಅಧಿಕಾರಿಗಳಿಗೆ ನೇರ ಅರ್ಜಿ: ಗುಂಪು ಬುಕಿಂಗ್‌ಗಾಗಿ ಅರ್ಜಿದಾರರು ಸಂಬಂಧಪಟ್ಟ ನಿಲ್ದಾಣದ ಮುಖ್ಯ ಕಾಯ್ದಿರಿಸುವಿಕೆ ಮೇಲ್ವಿಚಾರಕರು (CRS) ಅಥವಾ ನಿಲ್ದಾಣ ವ್ಯವಸ್ಥಾಪಕರಿಗೆ (SM) ನೇರವಾಗಿ ಅರ್ಜಿ ಸಲ್ಲಿಸಬೇಕು. ಇವರಿಗೆ ಗುಂಪು ಕಾಯ್ದಿರಿಸುವಿಕೆಯನ್ನು ಅನುಮೋದಿಸುವ ಅಧಿಕಾರ ನೀಡಲಾಗಿದೆ.
  • ಪ್ರಯಾಣಿಕರ ಸಂಖ್ಯೆಗೆ ಮಿತಿ ಇಲ್ಲ: ಗುಂಪು ಬುಕಿಂಗ್‌ನಲ್ಲಿ ಬರ್ತ್ ಅಥವಾ ಆಸನಗಳ ಸಂಖ್ಯೆಗೆ ಯಾವುದೇ ಗರಿಷ್ಠ ಮಿತಿ ಇರುವುದಿಲ್ಲ. ಎಲ್ಲಾ ಪ್ರಯಾಣ ದರ್ಜೆಗಳಲ್ಲೂ ಗುಂಪು ಕಾಯ್ದಿರಿಸುವಿಕೆ ಮಾಡಿಕೊಳ್ಳಬಹುದು.
  • ಟ್ರಾವೆಲ್ ಏಜೆನ್ಸಿಗಳ ಮೂಲಕ ಅರ್ಜಿ ಸಲ್ಲಿಸುವಂತಿಲ್ಲ: ವಿದೇಶಿ ಪ್ರವಾಸಿಗರು ಹಾಗೂ ಅನಿವಾಸಿ ಭಾರತೀಯರ (NRI) ಪರವಾಗಿ ಸಲ್ಲಿಸುವ ಅರ್ಜಿಗಳನ್ನು ಹೊರತುಪಡಿಸಿ, ಇತರ ಗುಂಪು ಬುಕಿಂಗ್ ಅರ್ಜಿಗಳನ್ನು ಸ್ಥಳೀಯ ಪ್ರವಾಸ ಸಂಸ್ಥೆಗಳ ಮೂಲಕ ಸಲ್ಲಿಸಲು ಅವಕಾಶವಿಲ್ಲ. ಅರ್ಜಿದಾರರು ನೇರವಾಗಿ ರೈಲ್ವೆ ಅಧಿಕಾರಿಗಳನ್ನು ಸಂಪರ್ಕಿಸಬೇಕು.
  • ಪ್ರಯಾಣದ ಉದ್ದೇಶ ಕಡ್ಡಾಯ: ಗುಂಪು ಪ್ರಯಾಣದ ಉದ್ದೇಶವನ್ನು ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಪ್ರಯಾಣದ ಉದ್ದೇಶವನ್ನು ತಿಳಿಸದಿದ್ದರೆ ಅನುಮತಿ ನೀಡಲಾಗುವುದಿಲ್ಲ.
  • ಪ್ರಯಾಣಿಕರ ವಿವರ ಸಲ್ಲಿಕೆ: ಅರ್ಜಿ ಸಲ್ಲಿಸುವಾಗ ಗುಂಪಿನಲ್ಲಿರುವ ಎಲ್ಲಾ ಪ್ರಯಾಣಿಕರ ಹೆಸರು, ವಯಸ್ಸು, ಲಿಂಗ, ವಿಳಾಸ ಹಾಗೂ ಪ್ರಯಾಣದ ಉದ್ದೇಶದ ವಿವರಗಳನ್ನು ಒದಗಿಸಬೇಕು.
  • ಹಿಂತಿರುಗುವ ಪ್ರಯಾಣಕ್ಕೂ ಅವಕಾಶ: ಹಿಂದಿರುಗುವ ಪ್ರಯಾಣಕ್ಕೂ ಅದೇ ಕಾಯ್ದಿರಿಸುವಿಕೆ ಕಚೇರಿಯಲ್ಲಿ ಗುಂಪು ಬುಕಿಂಗ್‌ಗೆ ಅನುಮತಿ ಪಡೆಯಬಹುದು. ಆದರೆ, ಹಿಂದಿರುಗುವ ಪ್ರಯಾಣವನ್ನು ಪ್ರತ್ಯೇಕ ಕಾಯ್ದಿರಿಸುವಿಕೆಯಾಗಿ ಪರಿಗಣಿಸಲಾಗುತ್ತದೆ.
  • ದಾಖಲೆಗಳ ನಿರ್ವಹಣೆ: ಅನುಮೋದಿಸಲಾದ ಎಲ್ಲಾ ಗುಂಪು ಬುಕಿಂಗ್‌ಗಳ ಪ್ರತ್ಯೇಕ ದಾಖಲೆ ಪುಸ್ತಕವನ್ನು ಮುಖ್ಯ ಕಾಯ್ದಿರಿಸುವಿಕೆ ಮೇಲ್ವಿಚಾರಕರು ಅಥವಾ ನಿಲ್ದಾಣ ವ್ಯವಸ್ಥಾಪಕರು ನಿರ್ವಹಿಸಬೇಕು. ಅರ್ಜಿ ನಮೂನೆ ಹಾಗೂ ಪ್ರಯಾಣಿಕರ ಪಟ್ಟಿಯ ಪ್ರತಿ ಪುಟಕ್ಕೂ ಮೊಹರು ಮತ್ತು ಸಹಿ ಹಾಕಬೇಕು.
  • ದುರುಪಯೋಗ ತಡೆಯಲು ಎಚ್ಚರಿಕೆ
  • ಗುಂಪು ಬುಕಿಂಗ್ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು ಬರ್ತ್‌ಗಳನ್ನು ಅಕ್ರಮವಾಗಿ ಕಾಯ್ದಿರಿಸುವುದಕ್ಕೆ ಅವಕಾಶ ನೀಡದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ನೈಜ ಗುಂಪು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವುದು ಹಾಗೂ ಕಾಯ್ದಿರಿಸುವಿಕೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವುದು ಈ ಪರಿಷ್ಕೃತ ನಿಯಮಗಳ ಉದ್ದೇಶವಾಗಿದೆ.
  • ಉಪ ಮುಖ್ಯ ವಾಣಿಜ್ಯ ವ್ಯವಸ್ಥಾಪಕ (ಪ್ರಯಾಣಿಕರ ಸೇವೆಗಳು) ಪಿ. ಕಿರಣ್ ಕುಮಾರ್ ಅವರು ನವೆಂಬರ್ 18ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಈ ಹೊಸ ಮಾರ್ಗಸೂಚಿಗಳನ್ನು ವಿವರಿಸಿದ್ದಾರೆ. ಸಾಮಾನ್ಯ ಮುಂಗಡ ಕಾಯ್ದಿರಿಸುವಿಕೆ ಕೌಂಟರ್‌ಗಳು ಆರಂಭವಾದ ಒಂದು ಗಂಟೆಯ ಬಳಿಕ, ಅಂದರೆ ಬೆಳಗ್ಗೆ 9 ಗಂಟೆಯಿಂದ ಗುಂಪು ಕಾಯ್ದಿರಿಸುವಿಕೆಗಳನ್ನು ಸ್ವೀಕರಿಸಬಹುದು. ಪ್ರತ್ಯೇಕ ಗುಂಪು ಬುಕಿಂಗ್ ಕೌಂಟರ್ ಇದ್ದಲ್ಲಿ ಅಲ್ಲಿಯೇ ಅಥವಾ ಸಾಮಾನ್ಯ ಕೌಂಟರ್‌ಗಳ ಮೂಲಕವೂ ಅರ್ಜಿ ಸಲ್ಲಿಸಲು ವ್ಯವಸ್ಥೆ ಕಲ್ಪಿಸಬಹುದು ಎಂದು ಸೂಚಿಸಲಾಗಿದೆ.
Ad Widget
Continue Reading
ಕಾರ್ಯಕ್ರಮಗಳು1 hour ago

Vitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್

ಬಿಗ್ ನ್ಯೂಸ್2 hours ago

Rakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್‌ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ

ಬಿಗ್ ನ್ಯೂಸ್6 hours ago

Railway-ರೈಲ್ವೆ ಗುಂಪು ಬುಕಿಂಗ್‌ನಲ್ಲಿ ಮಹತ್ವದ ಬದಲಾವಣೆ: ಬರ್ತ್‌ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!