ಅಪರಾಧ
Low marks-ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ-ಪರಸ್ಪರ ಚಾಕುವಿನಿಂದ ಇರಿದುಕೊಂಡ ತಾಯಿ, ಮಗಳು; ಮಗಳು ಕೊಲೆಯಾದರೆ, ತಾಯಿ ಗಂಭೀರ
ಮಂಗಳೂರು(ಬೆಂಗಳೂರು) : ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವುದು ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಪರಸ್ಪರ ಚಾಕು ಇರಿದುಕೊಂಡಿದ್ದರಿಂದ ಮಗಳು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಹಿತಿ(18) ಕೊಲೆಯಾದ ಯುವತಿ. ಪದ್ಮಜಾ (60) ಮಗಳನ್ನು ಕೊಲೆಗೈದ ತಾಯಿ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಮಗಳನ್ನು ತಾಯಿ ಪ್ರಶ್ನೆ ಮಾಡಿದ್ದಾಳೆ. ಈ ವಿಚಾರಕ್ಕೆ ತಾಯಿ ಮತ್ತು ಮಗಳ ನಡುವೆ ನಿತ್ಯ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಸೋಮವಾರ ಇದೇ ವಿಚಾರಕ್ಕೆ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ಚಾಕುವಿನಿಂದ ಪರಸ್ಪರ ಇರಿದು ಕೊಂಡಿದ್ದರಿಂದ ಮಗಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾಳೆ. ತಾಯಿಗೆ ಗಂಭೀರ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂತರ ರಾಜ್ಯ
Restaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
ಮುದ್ರಿತ ಗರಿಷ್ಠ ಚಿಲ್ಲರೆ ಬೆಲೆಗಿಂತ (MRP) ಹೆಚ್ಚುವರಿಯಾಗಿ ನೀರಿನ ಬಾಟ್ಲಿಗೆ ₹2 ವಸೂಲಿ ಮಾಡಿದ ಪ್ರಕರಣದಲ್ಲಿ ಹಥರಸ್ನ ರೆಸ್ಟೋರೆಂಟ್ವೊಂದಕ್ಕೆ ಅಲಿಗಡ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು ₹1 ಲಕ್ಷ ದಂಡ ವಿಧಿಸಿದೆ.
ಅಲಿಗಡ (ಉತ್ತರ ಪ್ರದೇಶ): ಮುದ್ರಿತ ಗರಿಷ್ಠ ಚಿಲ್ಲರೆ ಬೆಲೆಗಿಂತ (MRP) ಹೆಚ್ಚುವರಿಯಾಗಿ ನೀರಿನ ಬಾಟ್ಲಿಗೆ ₹2 ವಸೂಲಿ ಮಾಡಿದ ಪ್ರಕರಣದಲ್ಲಿ ಹಥರಸ್ನ ರೆಸ್ಟೋರೆಂಟ್ವೊಂದಕ್ಕೆ ಅಲಿಗಡ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು ₹1 ಲಕ್ಷ ದಂಡ ವಿಧಿಸಿದೆ.
ಇದಲ್ಲದೆ, ದೂರುದಾರರಿಗೆ ಮಾನಸಿಕ ಕಿರುಕುಳಕ್ಕೆ ಪರಿಹಾರವಾಗಿ ₹1,000 ಹಾಗೂ ಮೊಕದ್ದಮೆ ವೆಚ್ಚವಾಗಿ ₹5,000 ಪಾವತಿಸುವಂತೆಯೂ ಆಯೋಗ ಆದೇಶಿಸಿದೆ. ಆದೇಶವನ್ನು 45 ದಿನಗಳೊಳಗೆ ಪಾಲಿಸಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ರೆಸ್ಟೋರೆಂಟ್ ಮಾಲೀಕರಿಗೆ ಎಚ್ಚರಿಕೆ ನೀಡಿದೆ.
₹18ರ ಬಾಟ್ಲಿಗೆ ₹20 ವಸೂಲಿ
ಅಲಿಗಡ ನಿವಾಸಿಯೊಬ್ಬರು 2026ರ ಮಾರ್ಚ್ 11ರಂದು ಹಥರಸ್ನ ಈ ರೆಸ್ಟೋರೆಂಟ್ಗೆ ಭೇಟಿ ನೀಡಿದ್ದರು. ಊಟದ ವೇಳೆ ಕುಡಿಯಲು ನೀರು ಕೇಳಿದಾಗ, ₹18 ಎಂಆರ್ಪಿ ನಮೂದಿಸಿದ್ದ ನೀರಿನ ಬಾಟ್ಲಿಯನ್ನು ನೀಡಲಾಗಿತ್ತು. ಆದರೆ, ಬಿಲ್ನಲ್ಲಿ ₹20 ವಿಧಿಸಲಾಗಿತ್ತು. ಮುದ್ರಿತ ಬೆಲೆಗಿಂತ ₹2 ಹೆಚ್ಚುವರಿಯಾಗಿ ವಸೂಲಿ ಮಾಡಿರುವುದನ್ನು ಪ್ರಶ್ನಿಸಿ ಗ್ರಾಹಕರು ದೂರು ದಾಖಲಿಸಿದ್ದರು.
ಈ ಘಟನೆಯಿಂದ ತಮಗೆ ಮಾನಸಿಕ ವೇದನೆ ಹಾಗೂ ಆರ್ಥಿಕ ನಷ್ಟ ಉಂಟಾಗಿದೆ ಎಂದು ಆರೋಪಿಸಿದ್ದ ಗ್ರಾಹಕರು, ₹10 ಲಕ್ಷ ಪರಿಹಾರ ಮತ್ತು ₹15,000 ಕಾನೂನು ವೆಚ್ಚ ನೀಡುವಂತೆ ಕೋರಿ ಆಯೋಗದ ಮೊರೆ ಹೋಗಿದ್ದರು. ರೆಸ್ಟೋರೆಂಟ್ನ ಸೇವಾ ನ್ಯೂನತೆ ಹಾಗೂ ಅನ್ಯಾಯದ ವ್ಯಾಪಾರ ಪದ್ಧತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಿದ್ದರು.
ನೋಟಿಸ್ಗೆ ಉತ್ತರಿಸದ ರೆಸ್ಟೋರೆಂಟ್
ಆಯೋಗದ ಅಧ್ಯಕ್ಷ ಹಸ್ಟೈನ್ ಖುರೇಷಿ ಮತ್ತು ಸದಸ್ಯೆ ಪೂರ್ಣಿಮಾ ಸಿಂಗ್ ರಜಪೂತ್ ಅವರ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ರೆಸ್ಟೋರೆಂಟ್ಗೆ ನೋಟಿಸ್ ಜಾರಿಗೊಳಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ, ಮೇ 21ರಂದು ಆಯೋಗವು ಏಕಪಕ್ಷೀಯ ವಿಚಾರಣೆ ಮುಂದುವರಿಸಿತು.
ದೂರುದಾರರು ಸಲ್ಲಿಸಿದ್ದ ಮಾರ್ಚ್ 11ರ ಬಿಲ್ ಹಾಗೂ ₹18 ಎಂಆರ್ಪಿ ನಮೂದಿಸಿದ್ದ ನೀರಿನ ಬಾಟ್ಲಿಯ ಛಾಯಾಚಿತ್ರವನ್ನು ಪರಿಶೀಲಿಸಿದ ಆಯೋಗ, ₹20 ವಸೂಲಿ ಮಾಡಿರುವುದನ್ನು ದೃಢಪಡಿಸಿತು. ಇದು ಅನ್ಯಾಯದ ವ್ಯಾಪಾರ ಪದ್ಧತಿಯಾಗಿದೆ ಎಂದು ತೀರ್ಮಾನಿಸಿ ರೆಸ್ಟೋರೆಂಟ್ಗೆ ₹1 ಲಕ್ಷ ದಂಡ ಹಾಗೂ ದೂರುದಾರರಿಗೆ ಪರಿಹಾರ ಪಾವತಿಸುವಂತೆ ಆದೇಶಿಸಿತು.
ಸ್ಥಳೀಯ
Satish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಳೆದ ಒಂದೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ದೇವಸ್ಥಾನದ ಅರ್ಚಕ ಸತೀಶ್ ಪಾತ್ರಿ ಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಳೆದ ಒಂದೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ದೇವಸ್ಥಾನದ ಅರ್ಚಕನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದೇವಸ್ಥಾನದ ಅರ್ಚಕ ಸತೀಶ್ ಪಾತ್ರಿ ಎಂದು ಗುರುತಿಸಲಾಗಿದೆ.
ಭೂತ-ದೆವ್ವ ಬಿಡಿಸುವುದಾಗಿ ನಂಬಿಸಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಸತೀಶ್ ಪಾತ್ರಿಯ ಮೇಲಿದೆ. ಈ ಸಂಬಂಧ ಸಂತ್ರಸ್ತೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದ ಎನ್ನಲಾಗಿದೆ. ಬಳಿಕ ಕಾರ್ಯಾಚರಣೆ ನಡೆಸಿದ ಕೊಪ್ಪ ಠಾಣೆ ಪೊಲೀಸರು, ಬೆಂಗಳೂರಿನ ಜೆ.ಪಿ. ನಗರದಲ್ಲಿ ಆತನನ್ನು ಬಂಧಿಸಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದಲ್ಲಿ ಕೊಪ್ಪ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಮಾಟಮಂತ್ರ ನಿಷೇಧ ಕಾಯ್ದೆಯಡಿ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿಯೂ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಬಾಲಕಿಗೆ ಕೋಳಿ ರಕ್ತ ಕುಡಿಯಲು ಒತ್ತಾಯಿಸಿದ ಆರೋಪ
ಇದೇ ಆರೋಪಿಯ ವಿರುದ್ಧ ಈ ಹಿಂದೆ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಭೂತ ಬಿಡಿಸುವ ನೆಪದಲ್ಲಿ ಕೋಳಿ ರಕ್ತ ಕುಡಿಯುವಂತೆ ಒತ್ತಾಯಿಸಿದ ಆರೋಪವೂ ಕೇಳಿಬಂದಿತ್ತು. ಈ ವಿಚಾರ ಬೆಳಕಿಗೆ ಬಂದ ಬಳಿಕ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿತ್ತು.
ಪೊಲೀಸ್ ಕಾನ್ಸ್ಟೇಬಲ್ ಅಮಾನತು
ಆರೋಪಿಯ ಬಂಧನ ಕಾರ್ಯಾಚರಣೆಗೆ ಸಂಬಂಧಿಸಿದ ಮಾಹಿತಿಯನ್ನು ಪೊಲೀಸ್ ಇಲಾಖೆಯೊಳಗಿಂದಲೇ ಸೋರಿಕೆ ಮಾಡಲಾಗುತ್ತಿತ್ತು ಎಂಬ ಆರೋಪವೂ ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಎನ್.ಆರ್.ಪುರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಕಾಂತೇಶ್, ತನಿಖೆಯ ವಿವಿಧ ಹಂತಗಳ ಮಾಹಿತಿಯನ್ನು ಸತೀಶ್ ಪಾತ್ರಿಗೆ ಮುಂಚಿತವಾಗಿ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ದಾಳಿ ನಡೆಸುವ ಮುನ್ನವೇ ಆರೋಪಿ ಸ್ಥಳ ಬದಲಿಸಿ ಪರಾರಿಯಾಗುತ್ತಿದ್ದ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಮಾಹಿತಿ ಸೋರಿಕೆ ಆರೋಪದ ಮೇಲೆ ಕಾನ್ಸ್ಟೇಬಲ್ ಕಾಂತೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕ್ರಮ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
ಸುಳ್ಯ
Sullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸುಳ್ಯ, ಅ.11: ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೇರಳದ ಕೋಝಿಕ್ಕೋಡ್ ನಿವಾಸಿ ಮಹಮ್ಮದ್ ಅಲಿ (67) ಬಂಧಿತ ಆರೋಪಿ.
ಬಾಲಕೃಷ್ಣ ಎಂಬವರ ಮನೆಗೆ ಬೆಳಗ್ಗೆ ಬಂದ ಆರೋಪಿ, ಮನೆಯ ಬೀಗ ಮುರಿದು ಒಳನುಗ್ಗಿದ್ದಾನೆ. ಮನೆಯವರು ಕೆಲಸಕ್ಕೆ ತೆರಳುವಾಗ ಶಾಲೆಗೆ ರಜೆ ಇದ್ದ ಕಾರಣ ತಮ್ಮ ಮೂವರು ಮಕ್ಕಳನ್ನು ಮನೆಯೊಳಗೆ ಇರಿಸಿ ಹೊರಗಿನಿಂದ ಬೀಗ ಹಾಕಿ ಹೋಗಿದ್ದರು ಎನ್ನಲಾಗಿದೆ.
ಕಳ್ಳತನದ ಉದ್ದೇಶದಿಂದ ಮನೆಗೆ ನುಗ್ಗಿದ ವ್ಯಕ್ತಿಗೆ ಒಳಗಿದ್ದ ಮಕ್ಕಳು ಕಾಣಿಸಿಕೊಂಡಿದ್ದಾರೆ. ಇದರಿಂದ ಗಾಬರಿಗೊಂಡ ಆತ, ಮನೆಯ ಬಾಗಿಲಿನ ಚಿಲಕವನ್ನು ಹೊರಗಿನಿಂದ ಹಾಕಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಮಕ್ಕಳು ತಕ್ಷಣ ತಂದೆ ಬಾಲಕೃಷ್ಣ ಅವರಿಗೆ ಫೋನ್ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ಬಂದ ಬಾಲಕೃಷ್ಣ ಅವರು ಮಕ್ಕಳಿಂದ ಸಂಪೂರ್ಣ ಮಾಹಿತಿ ಪಡೆದು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಸುಳ್ಯ ಪೊಲೀಸರು ತನಿಖೆ ನಡೆಸಿ, ಆಲೆಟ್ಟಿ ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
-
ದಕ್ಷಿಣ ಕನ್ನಡ13 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ11 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಸುಳ್ಯ13 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
ಕಾರ್ಯಕ್ರಮಗಳು5 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
Uncategorized12 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ನಿಧನ ವಾರ್ತೆ11 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಬಿಗ್ ನ್ಯೂಸ್12 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
-
ಮಂಗಳೂರು12 hours agoD.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ


















