ದಕ್ಷಿಣ ಕನ್ನಡ
Temperature-ದ.ಕ.ಜಿಲ್ಲೆಯಲ್ಲಿ 40 ಡಿಗ್ರಿ ಸನಿಹಕ್ಕೆ ಬಿಸಿಲಿನ ತಾಪಮಾನ; ಹವಮಾನ ಇಲಾಖೆ ನೀಡಿತ್ತು ಕರಾವಳಿಯಲ್ಲಿ ಮಳೆಯ ಮುನ್ಸೂಚನೆ- ಯಾವಾಗ ಗೊತ್ತೆ ?
ಬಿಸಿಲಿನ ತಾಪಮಾನ ಬುಧವಾರವೂ ದ.ಕ.ಜಿಲ್ಲೆಯಲ್ಲಿ ಮುಂದುವರಿದಿದ್ದು, ಮೇ 6 ಮತ್ತು 7 ರಂದು ಕರಾವಳಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯ ಮುನ್ಸೂಚನೆ ಇದೆ ಎಂದು ಹೇಳಲಾಗಿದೆ.
ಬುಧವಾರ ಜಿಲ್ಲೆಯಲ್ಲಿ ಮೋಡ ಸಹಿತ ಬಿಸಿಲಿನ ಝಳ ಕಂಡುಬಂದಿದೆ. ದಿನದ ಸರಾಸರಿ ಗರಿಷ್ಠ ತಾಪಮಾನ 36.4 ಡಿಗ್ರಿ ಸೆಲ್ಸಿಯಸ್ ಕಂಡುಬಂದಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ತಾಪಮಾನ ಏರಿಕೆಯಾಗಿದೆ.ಬೆಳ್ತಂಗಡಿ 36.7 ಡಿಗ್ರಿ ಸೆಲ್ಸಿಯಸ್, ಕೊಕ್ಕಡದಲ್ಲಿ ಗರಿಷ್ಠ 37.4 ಡಿಗ್ರಿ ಸೆಲ್ಸಿಯಸ್, ಕಡಬದಲ್ಲಿ 39.3 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಗರಿಷ್ಠ 27.5 ಡಿಗ್ರಿ ಸೆಲ್ಸಿಯಸ್, ಪಣಂಬೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡುಬಂದಿದೆ.
ಬಿಸಿಲಿನ ತಾಪಮಾನ ತೀವ್ರತೆ ಹಿನ್ನೆಲೆಯಲ್ಲಿ ಬೆಳಗ್ಗೆ 12ರಿಂದ ಸಂಜೆ 3 ಗಂಟೆವರೆಗೆ ಬಿಸಿಲಿಗೆ ಸಂಚರಿಸದಂತೆ ಹಾಗೂ ಹೀಟ್ ಸ್ಟೋಕ್ಗೆ ಒಳಗಾಗದಂತೆ ಎಚ್ಚರ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿ ಡಾ.ರಾಜವೇಲ್ ತಿಳಿಸಿದ್ದಾರೆ.
ಶಾಖದಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು
ಆಗಾಗ ನೀರು ಕುಡಿಯುತ್ತಲೇ ಇರಬೇಕು, ನೀರಿನಂತಿರುವ ಕಲ್ಲಂಗಡಿ, ಕಿತ್ತಳೆ, ಮೂಸಂಬಿ, ದ್ರಾಕ್ಷಿ, ಅನಾನಸ್ ಹಣ್ಣುಗಳನ್ನು ಸೇವಿಸಿ.
ನೀರಿನ ಅಂಶವುಳ್ಳ ಆಹಾರಗಳನ್ನು ಸೇವನೆ ಮಾಡಿ, ಮನೆಯಿಂದ ಹೊರಗಡೆ ಕಾಲಿಡುವಾಗ ತಲೆಗೆ ಕ್ಯಾಪ್ ಧರಿಸುವುದು ಒಳ್ಳೆಯದು, ಬೇಸಗೆ ಸಮಯದಲ್ಲಿ ಸಡಿಲ ಉಡುಪುಗಳನ್ನು ಧರಿಸುವುದು ಸೂಕ್ತ
ಬಿಸಿಲಿಗೆ ಬರಿಗಾಲಿನಲ್ಲಿ ನಡೆಯುವುದನ್ನು ನಿಲ್ಲಿಸಿ, ಚಪ್ಪಲಿ ಅಥವಾ ಶೂ ಧರಿಸಿ.
ರಾಜಕೀಯ
Puttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.
ಪುತ್ತೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.
ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋರ್ಚಾ ಮುಖಂಡರು, ಪುತ್ತೂರಿನ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಯೋಜನೆಗಳಿಗೆ ಅನುದಾನ ನೀಡಲಾಗಿದೆ ಎಂದು ಹೇಳಿದರು.
2020ರಲ್ಲಿ ಅಂದಿನ ಶಾಸಕ ಸಂಜೀವ ಮಟಂದೂರು ಅವರ ಅವಧಿಯಲ್ಲಿ ವಾಜಪೇಯಿ ಅವರ ಅಲ್ಪಸಂಖ್ಯಾತರ ಅಭಿವೃದ್ಧಿಯ ಕನಸಿನ ಭಾಗವಾಗಿ ಸುಮಾರು ₹2.50 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣವಾಗಿದೆ. ಇದರ ಬಳಿಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವ ಉದ್ದೇಶದಿಂದ ದರ್ಬೆ ಸಿಟಿ ಗುಡ್ಡೆಯಲ್ಲಿ ಸುಮಾರು ₹1.40 ಕೋಟಿ ವೆಚ್ಚದಲ್ಲಿ 4,000 ಚದರ ಅಡಿ ವಿಸ್ತೀರ್ಣದ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರ ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದರು.
ಕಟ್ಟಡ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದ್ದ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಉದ್ಘಾಟನೆ ಸಾಧ್ಯವಾಗಿರಲಿಲ್ಲ. ಬಳಿಕವೂ ಕಟ್ಟಡವನ್ನು ಉದ್ಘಾಟಿಸಿ ಬಳಕೆಗೆ ನೀಡಲಾಗದೆ ಕಳೆದ ನಾಲ್ಕು ವರ್ಷಗಳಿಂದ ಪಾಳು ಬಿದ್ದಿದೆ ಎಂದು ಮೋರ್ಚಾ ಮುಖಂಡರು ಆರೋಪಿಸಿದರು.
ಬೇರೆ ಉದ್ದೇಶಕ್ಕೆ ಬಳಸಬೇಡಿ
ಪ್ರಸ್ತುತ ಶಾಸಕರು ಈ ಕಟ್ಟಡವನ್ನು ಬೇರೆ ಕಾರ್ಯಕ್ಕೆ ಬಳಸಲು ಮುಂದಾಗಿರುವುದು ಸರಿಯಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತ ಸಮುದಾಯಕ್ಕೆ ಅಗತ್ಯವಿರುವ ಸೇವೆಗಳನ್ನು ಒದಗಿಸುವ ಕೇಂದ್ರವಾಗಿಯೇ ಕಟ್ಟಡವನ್ನು ಬಳಕೆ ಮಾಡಬೇಕು. ಪುತ್ತೂರಿನಲ್ಲಿ ಅಲ್ಪಸಂಖ್ಯಾತರಿಗಾಗಿ ಬಾಲಕರ ಹಾಗೂ ಬಾಲಕಿಯರ ಪ್ರತ್ಯೇಕ ಹಾಸ್ಟೆಲ್‌ಗಳು ಮತ್ತು ಸಮುದಾಯ ಭವನ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸಿಟಿ ಗುಡ್ಡೆ ಪ್ರದೇಶದಲ್ಲಿ ಈಗಾಗಲೇ ವಾಣಿಜ್ಯ ತೆರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆಗಳ ಕಚೇರಿಗಳಿವೆ. ಪುತ್ತೂರು ನಗರದ ಎರಡನೇ ಪ್ರಮುಖ ಪ್ರದೇಶವಾಗಿ ದರ್ಬೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸೇವಾ ಕೇಂದ್ರವೂ ತನ್ನ ಉದ್ದೇಶಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಕಾಂಗ್ರೆಸ್ ವಿರುದ್ಧ ಆರೋಪ
ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದ ಯೋಜನೆಗಳು ಹಾಗೂ ಮೂಲಸೌಕರ್ಯ ಕಲ್ಪಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆರೋಪಿಸಿದರು.
ಅಲ್ಪಸಂಖ್ಯಾತರ ಬೆಂಬಲವನ್ನು ಪಡೆದಿರುವ ಹಾಲಿ ಶಾಸಕರು ತಮ್ಮ ಅವಧಿಯಲ್ಲಿ ಸಮುದಾಯಕ್ಕೆ ನೀಡಿರುವ ಕೊಡುಗೆ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಪ್ರಶ್ನಿಸಿದರು.
ಬಿಜೆಪಿ ಸರ್ಕಾರ ನಿರ್ಮಿಸಿರುವ ಸೇವಾ ಕೇಂದ್ರವನ್ನು ವಿರೋಧಿಸುವ ಬದಲು ಅದನ್ನು ಉದ್ಘಾಟಿಸಿ ಅಲ್ಪಸಂಖ್ಯಾತ ಸಮುದಾಯದ ಬಹುಉಪಯೋಗಕ್ಕೆ ಬಳಸಲು ಸಹಕರಿಸಬೇಕು ಎಂದು ಅವರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಟಿ.ಎ. ಶನವಾಜ್, ಪ್ರಧಾನ ಕಾರ್ಯದರ್ಶಿ ಫೆಡ್ರಿಕ್ ಪೌಲ್, ಉಪಾಧ್ಯಕ್ಷ ಅಜ್ಗರ್ ಮುಡಿಪು, ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ, ಹಿರೆಬಂಡಾಡಿ ಪಂಚಾಯತ್ ಮಾಜಿ ಅಧ್ಯಕ್ಷ ಸೌಕತ್ ಅಲಿ, ರಾಜೇಶ ಬನ್ನೂರು ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Master Anand-ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಮಾಸ್ಟರ್ ಆನಂದ್
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ಕರ್ಮಭೂಮಿಯಾದ ಪುತ್ತೂರಿನ ಬಾಲವನದಲ್ಲಿ ಪ್ರದಾನ ಮಾಡಲಾಗುವ ಪ್ರತಿಷ್ಠಿತ ‘ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ-2026’ಕ್ಕೆ ಪುತ್ತೂರಿನ ಶ್ರೇಷ್ಠ ಸಿವಿಲ್ ಇಂಜಿನಿಯರಿಂಗ್ ಸಾಧಕ ಹಾಗೂ ‘ಮಾಸ್ಟರ್ ಪ್ಲಾನರಿ’ ಸಂಸ್ಥೆಯ ಮುಖ್ಯಸ್ಥ ಎಸ್.ಕೆ. ಆನಂದ್ ಆಯ್ಕೆಯಾಗಿದ್ದಾರೆ.
ಪುತ್ತೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ಕರ್ಮಭೂಮಿಯಾದ ಪುತ್ತೂರಿನ ಬಾಲವನದಲ್ಲಿ ಪ್ರದಾನ ಮಾಡಲಾಗುವ ಪ್ರತಿಷ್ಠಿತ ‘ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ-2026’ಕ್ಕೆ ಪುತ್ತೂರಿನ ಶ್ರೇಷ್ಠ ಸಿವಿಲ್ ಇಂಜಿನಿಯರಿಂಗ್ ಸಾಧಕ ಹಾಗೂ ‘ಮಾಸ್ಟರ್ ಪ್ಲಾನರಿ’ ಸಂಸ್ಥೆಯ ಮುಖ್ಯಸ್ಥ ಎಸ್.ಕೆ. ಆನಂದ್ ಆಯ್ಕೆಯಾಗಿದ್ದಾರೆ.
ವೈಜ್ಞಾನಿಕ ಮನೋಭಾವ, ಪರಿಸರ ಕಾಳಜಿ ಹಾಗೂ ಸುಸ್ಥಿರ ಜೀವನಶೈಲಿಯನ್ನು ತಮ್ಮ ವೃತ್ತಿ ಬದುಕಿನಲ್ಲಿ ಅಳವಡಿಸಿಕೊಂಡಿರುವ ಎಸ್.ಕೆ. ಆನಂದ್ ಅವರು, ಸಿಮೆಂಟ್ ಪ್ರೀಕಾಸ್ಟ್ ತಂತ್ರಜ್ಞಾನದ ಮೂಲಕ ಮರಕ್ಕೆ ಪರ್ಯಾಯವಾದ ‘ಕಾಂಕೂಡ್’ (Concood™) ಎಂಬ ಉತ್ಪನ್ನವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಆವಿಷ್ಕಾರದ ಮೂಲಕ ಕಳೆದ ಹಲವು ದಶಕಗಳಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಮರಮುಟ್ಟುಗಳ ಬಳಕೆಯನ್ನು ತಪ್ಪಿಸಿ, ಲಕ್ಷಾಂತರ ಮರಗಳನ್ನು ಕೊಡಲಿಗೆ ಬಲಿಯಾಗದಂತೆ ಸಂರಕ್ಷಿಸಿದ ಸಾಧನೆ ಅವರದ್ದಾಗಿದೆ.
1951ರಲ್ಲಿ ಪುತ್ತೂರಿನಲ್ಲಿ ಜನಿಸಿದ ಎಸ್.ಕೆ. ಆನಂದ್ ಅವರು ದಿವಂಗತ ಎಸ್.ಕೆ. ಈಶ್ವರ ಭಟ್ ಹಾಗೂ ಶಾರದಾ ಭಟ್ ದಂಪತಿಯ ಪುತ್ರ. ಮಂಗಳೂರಿನ ಕೆ.ಆರ್.ಇ.ಸಿ. (ಪ್ರಸ್ತುತ NITK, ಸುರತ್ಕಲ್)ಯಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಹಾಗೂ ಎಂ.ಟೆಕ್ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಡೆದ ಅವರು, 1975ರಲ್ಲಿ ತಂದೆಯವರು ಸ್ಥಾಪಿಸಿದ್ದ ‘ಮಾಸ್ಟರ್ ಪ್ಲಾನರಿ’ ಸಂಸ್ಥೆಯ ಜವಾಬ್ದಾರಿ ವಹಿಸಿಕೊಂಡರು. ಉನ್ನತ ಅವಕಾಶಗಳಿದ್ದರೂ ದೊಡ್ಡ ನಗರಗಳತ್ತ ತೆರಳದೆ ಪುತ್ತೂರಿನಲ್ಲೇ ನೆಲೆಸಿ, ಸುಸ್ಥಿರ ನಿರ್ಮಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.
‘ಕಾಂಕೂಡ್’ ಮೂಲಕ ಮರಕ್ಕೆ ಪರ್ಯಾಯ
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮನೆ, ಕಚೇರಿ, ಶಾಲಾ-ಕಾಲೇಜುಗಳ ನಿರ್ಮಾಣಕ್ಕೆ ದಾರಂದ, ಕಿಟಕಿ, ಮೇಲ್ಛಾವಣಿಯ ತೊಲೆ, ಬೆಂಚ್-ಡೆಸ್ಕ್ ಸೇರಿದಂತೆ ವಿವಿಧ ಕಾರ್ಯಗಳಿಗೆ ಅಪಾರ ಪ್ರಮಾಣದ ಮರಮುಟ್ಟುಗಳನ್ನು ಬಳಸಲಾಗುತ್ತಿತ್ತು. ಈ ಸಮಸ್ಯೆಗೆ ಪರಿಸರಸ್ನೇಹಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಆನಂದ್ ಅವರು ಸಿಮೆಂಟ್ ಪ್ರೀಕಾಸ್ಟ್ ತಂತ್ರಜ್ಞಾನದ ಕುರಿತು ಸುದೀರ್ಘ ಸಂಶೋಧನೆ ನಡೆಸಿ, ಮರದ ಬಲಕ್ಕೆ ಪರ್ಯಾಯವಾಗಬಲ್ಲ ಕಾಂಕ್ರೀಟ್ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿದರು.
‘ಕಾಂಕೂಡ್’ ಹೆಸರಿನ ಈ ಉತ್ಪನ್ನಗಳಿಗೆ 2007ರಲ್ಲಿ ಭಾರತ ಸರ್ಕಾರದಿಂದ ಅಧಿಕೃತ ಟ್ರೇಡ್‌ಮಾರ್ಕ್ ನೋಂದಣಿಯೂ ದೊರೆತಿದೆ. ಇಂದು ವಿವಿಧ ಅಗತ್ಯಗಳಿಗೆ ಬಳಸಬಹುದಾದ 250ಕ್ಕೂ ಅಧಿಕ ಕಾಂಕ್ರೀಟ್ ಪರಿಕರಗಳು ‘ಮಾಸ್ಟರ್ ಪ್ಲಾನರಿ’ಯಲ್ಲಿ ಲಭ್ಯವಿವೆ.
36.5 ಲಕ್ಷಕ್ಕೂ ಅಧಿಕ ಮರಗಳ ಸಂರಕ್ಷಣೆ
‘ಮಾಸ್ಟರ್ ಪ್ಲಾನರಿ’ ಸಂಸ್ಥೆಯಲ್ಲಿ ಪ್ರತಿದಿನ ಸರಾಸರಿ 200 CFTಗೂ ಅಧಿಕ ಕಾಂಕ್ರೀಟ್ ಪರಿಕರಗಳನ್ನು ಉತ್ಪಾದಿಸಲಾಗುತ್ತಿದ್ದು, ಈ ಪರಿಕರಗಳ ಬಳಕೆಯಿಂದ ಪ್ರತಿದಿನ ಸರಾಸರಿ 20 ಬೃಹತ್ ಮರಗಳು ಕಡಿಯುವುದನ್ನು ತಪ್ಪಿಸಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.
ಕಳೆದ 50 ವರ್ಷಗಳ ಈ ಸೇವೆಯ ಲೆಕ್ಕಾಚಾರದಂತೆ, ಇದುವರೆಗೆ ಸುಮಾರು 36.5 ಲಕ್ಷಕ್ಕೂ ಅಧಿಕ ಬೃಹತ್ ಮರಗಳು ಕೊಡಲಿಗೆ ಬಲಿಯಾಗುವುದನ್ನು ತಪ್ಪಿಸಿ ಸಂರಕ್ಷಿಸಲಾಗಿದೆ. ಶಾಲಾ-ಕಾಲೇಜುಗಳು, ಸರ್ಕಾರಿ ಸಂಸ್ಥೆಗಳು ಸೇರಿದಂತೆ ಹಲವು ಕಡೆಗಳಲ್ಲಿ ಮರದ ಪರ್ಯಾಯವಾಗಿ ‘ಕಾಂಕೂಡ್’ ಉತ್ಪನ್ನಗಳನ್ನು ಬಳಸಲಾಗುತ್ತಿದೆ.
ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಅವರು ದೇಶಾದ್ಯಂತ ನಿರ್ಮಿಸಿರುವ 30ಕ್ಕೂ ಅಧಿಕ ತೂಗು ಸೇತುವೆಗಳಲ್ಲೂ ಮರದ ಹಲಗೆಗಳ ಬದಲಿಗೆ ‘ಕಾಂಕೂಡ್’ ಪರಿಕರಗಳನ್ನು ಬಳಸಲಾಗಿದೆ. ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ಅರಣ್ಯ ಇಲಾಖೆ ಸೇರಿದಂತೆ ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶಗಳಲ್ಲೂ ಈ ತಂತ್ರಜ್ಞಾನ ಬಳಕೆಯಾಗಿದೆ.
50 ಎಕರೆಗೂ ಅಧಿಕ ಹಸಿರು ಕಾಡು
ಮರಗಳ ಸಂರಕ್ಷಣೆಯ ಜತೆಗೆ ವೈಯಕ್ತಿಕವಾಗಿಯೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಿರುವ ಎಸ್.ಕೆ. ಆನಂದ್ ಅವರು ಸೊರಕೆ ಹಾಗೂ ಕುಡಿಪಾಡಿಯಲ್ಲಿ ‘ಕುಡಿಕಾಡು’ ಹೆಸರಿನಲ್ಲಿ 50 ಎಕರೆಗೂ ಅಧಿಕ ಪ್ರದೇಶದಲ್ಲಿ ಸಾವಿರಾರು ಗಿಡ-ಮರಗಳನ್ನು ಬೆಳೆಸಿ ಹಸಿರು ಕಾಡು ನಿರ್ಮಿಸಿದ್ದಾರೆ.
‘ಮಾಸ್ಟರ್ ಪ್ಲಾನರಿ’ ಸಂಸ್ಥೆಯಡಿ 9 ಕೇಂದ್ರಗಳಲ್ಲಿ 24 ಸಂಸ್ಥೆಗಳ ಮೂಲಕ 800ಕ್ಕೂ ಅಧಿಕ ಮಂದಿಗೆ ನೇರ ಉದ್ಯೋಗ ಕಲ್ಪಿಸಲಾಗಿದೆ. ಇವರಲ್ಲಿ 200ಕ್ಕೂ ಅಧಿಕ ಮಹಿಳೆಯರು ಹಾಗೂ 20ಕ್ಕೂ ಅಧಿಕ ಭಿನ್ನಸಾಮರ್ಥ್ಯ ಹೊಂದಿರುವವರು ಸೇರಿದ್ದಾರೆ. ಪರೋಕ್ಷವಾಗಿ 3,000ಕ್ಕೂ ಅಧಿಕ ಉದ್ಯೋಗ ಸೃಷ್ಟಿಯಾಗಿರುವುದಾಗಿ ತಿಳಿಸಲಾಗಿದೆ.
ಸಂಸ್ಥೆಯ ಸಿಬ್ಬಂದಿಯ ಮಕ್ಕಳ ಆರೈಕೆ ಹಾಗೂ ಶಿಕ್ಷಣಕ್ಕಾಗಿ ಆವರಣದಲ್ಲೇ ಅಂಗನವಾಡಿ ಮಾದರಿಯ ಪ್ಲೇ ಸ್ಕೂಲ್ ಆರಂಭಿಸಿರುವುದು ಅವರ ಸಾಮಾಜಿಕ ಕಾಳಜಿಗೆ ಮತ್ತೊಂದು ಉದಾಹರಣೆಯಾಗಿದೆ.
ಚಾಮರಾಜನಗರ ಹಾಗೂ ನಾಗರಹೊಳೆ ಭಾಗದ ಅರಣ್ಯವಾಸಿ ಗಿರಿಜನರಿಗೆ 8,000ಕ್ಕೂ ಅಧಿಕ ಮನೆಗಳನ್ನು ನಿರ್ಮಿಸಿಕೊಟ್ಟಿರುವ ಅವರು, ಸುಳ್ಯದಲ್ಲಿ ಕಳೆದ 20 ವರ್ಷಗಳಿಂದ ‘ಸ್ನೇಹ ಶಿಕ್ಷಣ ಸಂಸ್ಥೆ’ ಮೂಲಕ ಗ್ರಾಮೀಣ ಮಕ್ಕಳಿಗೆ ಕನ್ನಡ ಮಾಧ್ಯಮ ಶಿಕ್ಷಣ ನೀಡುತ್ತಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲೂ ಆಸಕ್ತಿ ಹೊಂದಿರುವ ಆನಂದ್ ಅವರು ‘ಭಾವಲೋಕ’ ಎಂಬ ಕವನ ಸಂಕಲನ ಸೇರಿದಂತೆ ಹಲವು ಭಾವಗೀತೆಗಳನ್ನು ರಚಿಸಿ ಪ್ರಕಟಿಸಿದ್ದಾರೆ.
ಎಸ್.ಕೆ. ಆನಂದ್ ಹಾಗೂ ರೇಖಾ ಆನಂದ್ ದಂಪತಿಯ ನಾಲ್ವರು ಮಕ್ಕಳಾದ ಅಕ್ಷಯ್, ಅರ್ಜುನ್, ಆಕಾಶ್ ಹಾಗೂ ಆರತಿ ಅವರು ಸಿವಿಲ್ ಇಂಜಿನಿಯರಿಂಗ್ ಪದವೀಧರರಾಗಿದ್ದು, ಕುಟುಂಬದ ಸುಸ್ಥಿರ ಹಾಗೂ ಪರಿಸರಸ್ನೇಹಿ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಹಲವು ಪ್ರಶಸ್ತಿಗಳ ಗರಿ
ಪರಿಸರ ಸೇವೆಗಾಗಿ 2003ರಲ್ಲಿ ‘ಪರಿಸರಪ್ರೇಮಿ’ ಪ್ರಶಸ್ತಿ, 2008ರಲ್ಲಿ ICI ವತಿಯಿಂದ ‘ಕರ್ನಾಟಕದ ಅತ್ಯುತ್ತಮ ಕಾಂಕ್ರೀಟ್ ಇಂಜಿನಿಯರ್’ ಪ್ರಶಸ್ತಿ ಸೇರಿದಂತೆ ರಾಷ್ಟ್ರೀಯ ಜೆಸಿಐ ‘TOBIP’ ಹಾಗೂ ACCE-UltraTech ಪ್ರಶಸ್ತಿಗಳು ಎಸ್.ಕೆ. ಆನಂದ್ ಅವರಿಗೆ ಸಂದಿವೆ.
ಬಾಲವನ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ, ಉಪವಿಭಾಗಾಧಿಕಾರಿ ಹಾಗೂ ಬಾಲವನ ಪ್ರಶಸ್ತಿ ಸಮಿತಿ ಕಾರ್ಯದರ್ಶಿ ಸ್ಟೆಲ್ಲಾ ವರ್ಗೀಸ್, ತಾಲೂಕು ಕಸಾಪ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಹಿರಿಯ ಸಾಹಿತಿಗಳಾದ ವಿ.ಬಿ. ಆರ್ತಿಕಜೆ ಹಾಗೂ ರೆ. ವಿಜಯ್ ಹಾರ್ವಿನ್ ಅವರನ್ನು ಒಳಗೊಂಡ ಆಯ್ಕೆ ಸಮಿತಿ ಎಸ್.ಕೆ. ಆನಂದ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಅಕ್ಟೋಬರ್ 10, 2026ರಂದು ಪುತ್ತೂರಿನ ಐತಿಹಾಸಿಕ ಬಾಲವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ‘ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ-2026’ ಪ್ರದಾನ ಮಾಡಿ ಎಸ್.ಕೆ. ಆನಂದ್ ಅವರನ್ನು ಗೌರವಿಸಲಾಗುವುದು.
ಬಿಗ್ ನ್ಯೂಸ್
Dr. Rajesh Rai Savanuru-ಸಹಕಾರ ರತ್ನ ರೊಟೇರಿಯನ್ ಕೆ. ಸೀತಾರಾಮ ರೈ ಸವಣೂರು ಅವರ ಪುತ್ರ, ಇಂಗ್ಲೆಂಡ್ ನಾಟಿಂಗ್‌ಹ್ಯಾಮ್‌ಶೆರ್‌ನ ಕಿಂಗ್ಸ್ ಮಿಲ್ ಆಸ್ಪತ್ರೆಯ ಕನ್ಸಲ್ಟಾಂಟ್ ಫಿಶಿಷಿಯನ್ ಡಾ. ರಾಜೇಶ್ ರೈ ಸವಣೂರು ಅವರಿಗೆ ಪ್ರತಿಷ್ಠಿತ ಲಂಡನ್ ರಾಯಲ್ ಕಾಲೇಜ್ ಆಫ್ ಫಿಶಿಷಿಯನ್ಸ್‌ನ ಫೆಲೋ ( FRCP London) ಗೌರವ
ಸಹಕಾರ ರತ್ನ ರೊಟೇರಿಯನ್ ಕೆ. ಸೀತಾರಾಮ ರೈ ಸವಣೂರು ಅವರ ಪುತ್ರ, ಇಂಗ್ಲೆಂಡ್ ನಾಟಿಂಗ್‌ಹ್ಯಾಮ್‌ಶೆರ್‌ನ ಕಿಂಗ್ಸ್ ಮಿಲ್ ಆಸ್ಪತ್ರೆಯಲ್ಲಿ ಕನ್ಸಲ್ಟಾಂಟ್ ಫಿಶಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ಡಾ. ರಾಜೇಶ್ ರೈ ಸವಣೂರು ಅವರು ಪ್ರತಿಷ್ಠಿತ ಲಂಡನ್ ರಾಯಲ್ ಕಾಲೇಜ್ ಆಫ್ ಫಿಶಿಷಿಯನ್ಸ್‌ನ ಫೆಲೋ ( FRCP London) ಗೌರವಕ್ಕೆ ಪಾತ್ರರಾಗಿದ್ದಾರೆ.
ಪುತ್ತೂರು: ಸಹಕಾರ ರತ್ನ ರೊಟೇರಿಯನ್ ಕೆ. ಸೀತಾರಾಮ ರೈ ಸವಣೂರು ಅವರ ಪುತ್ರ, ಇಂಗ್ಲೆಂಡ್ ನಾಟಿಂಗ್‌ಹ್ಯಾಮ್‌ಶೆರ್‌ನ ಕಿಂಗ್ಸ್ ಮಿಲ್ ಆಸ್ಪತ್ರೆಯಲ್ಲಿ ಕನ್ಸಲ್ಟಾಂಟ್ ಫಿಶಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ಡಾ. ರಾಜೇಶ್ ರೈ ಸವಣೂರು ಅವರು ಪ್ರತಿಷ್ಠಿತ ಲಂಡನ್ ರಾಯಲ್ ಕಾಲೇಜ್ ಆಫ್ ಫಿಶಿಷಿಯನ್ಸ್‌ನ ಫೆಲೋ ( FRCP London) ಗೌರವಕ್ಕೆ ಪಾತ್ರರಾಗಿದ್ದಾರೆ.
ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ, ವೃತ್ತಿಪರ ಸಾಧನೆ, ದೀರ್ಘಕಾಲದ ಅನುಭವ ಹಾಗೂ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳನ್ನು ಪರಿಗಣಿಸಿ ನೀಡಲಾಗುವ ಈ ಪ್ರತಿಷ್ಠಿತ ಫೆಲೋ ಗೌರವವು ಡಾ. ರಾಜೇಶ್ ರೈ ಅವರ ವೃತ್ತಿಜೀವನದ ಮಹತ್ವದ ಮೈಲಿಗಲ್ಲಾಗಿದೆ.
ಡಾ. ರಾಜೇಶ್ ರೈ ಅವರು ಪ್ರಾಥಮಿಕ ಶಿಕ್ಷಣವನ್ನು ಸುಳ್ಯದ ರೋಟರಿ ಆಂಗ್ಲಮಾಧ್ಯಮ ಶಾಲೆಯಲ್ಲಿ, ಪ್ರೌಢ ಶಿಕ್ಷಣವನ್ನು ಉಡುಪಿ-ಮಣಿಪಾಲದ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್‌ನಲ್ಲಿ ಹಾಗೂ ಪಿಯುಸಿ ಶಿಕ್ಷಣವನ್ನು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪೂರ್ಣಗೊಳಿಸಿದರು. ಬಳಿಕ ತುಮಕೂರಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆದ ಅವರು, ಮೈಸೂರಿನ ಜೆ.ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಇಂಟರ್ನಲ್ ಮೆಡಿಸಿನ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ (MD) ಪಡೆದರು. ನಂತರ ನವದೆಹಲಿಯಲ್ಲಿ DNB ಪದವಿಯನ್ನೂ ಪೂರ್ಣಗೊಳಿಸಿದರು. ಇಂಗ್ಲೆಂಡ್‌ನ ರಾಯಲ್ ಕಾಲೇಜ್ ಆಫ್ ಫಿಶಿಷಿಯನ್ಸ್‌ನ MRCP ಪದವಿಯನ್ನೂ ಪಡೆದಿರುವ ಅವರು, ಇದೀಗ ಅದೇ ಪ್ರತಿಷ್ಠಿತ ಸಂಸ್ಥೆಯ FRCP ಗೌರವಕ್ಕೆ ಆಯ್ಕೆಯಾಗಿದ್ದಾರೆ.
ತಾಯ್ನಾಡಿನಲ್ಲಿ 16 ವರ್ಷಗಳ ವೈದ್ಯಕೀಯ ಸೇವೆ
ಮಂಗಳೂರಿನಲ್ಲಿ ವೈದ್ಯಕೀಯ ವೃತ್ತಿಜೀವನ ಆರಂಭಿಸಿದ ಡಾ. ರಾಜೇಶ್ ರೈ ಅವರು ಸುಮಾರು 16 ವರ್ಷಗಳ ಕಾಲ ಎ.ಜೆ. ಆಸ್ಪತ್ರೆಯಲ್ಲಿ ಕನ್ಸಲ್ಯಾಂಟ್ ಫಿಶಿಷಿಯನ್ ಆಗಿ ಸೇವೆ ಸಲ್ಲಿಸಿದರು. ಇದೇ ಅವಧಿಯಲ್ಲಿ ಎ.ಜೆ. ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿಯೂ ಕಾರ್ಯನಿರ್ವಹಿಸಿದರು. ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವೈದ್ಯರಿಗೆ ಬೋಧನೆ ಮತ್ತು ತರಬೇತಿ ನೀಡುವ ಮೂಲಕ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿಯೂ ಗಮನಾರ್ಹ ಕೊಡುಗೆ ನೀಡಿದರು.
NHSನಲ್ಲಿ ಕನ್ಸಲ್ಟಾಂಟ್ ವೈದ್ಯ
ಬಳಿಕ ಇಂಗ್ಲೆಂಡ್‌ಗೆ ತೆರಳಿದ ಅವರು ಅಲ್ಲಿನ National Health Service (NHS) ನಲ್ಲಿ ತಮ್ಮ ವೈದ್ಯಕೀಯ ವೃತ್ತಿಜೀವನವನ್ನು ಮುಂದುವರಿಸಿದರು. ಪ್ರಸ್ತುತ ನಾಟಿಂಗ್‌ಹ್ಯಾಮ್‌ಶೆರ್‌ನ ಕಿಂಗ್ಸ್ ಮಿಲ್ ಆಸ್ಪತ್ರೆಯ ಇಂಟರ್ನಲ್ ಮೆಡಿಸಿನ್ ವಿಭಾಗದಲ್ಲಿ ಕನ್ಸಲ್ಟಾಂಟ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ರೋಗಿಗಳ ಚಿಕಿತ್ಸೆಯ ಜತೆಗೆ ವೈದ್ಯಕೀಯ ಶಿಕ್ಷಣ, ವೈದ್ಯರ ತರಬೇತಿ ಹಾಗೂ ಆರೋಗ್ಯ ಸೇವೆಯ ವಿವಿಧ ಜವಾಬ್ದಾರಿಗಳಲ್ಲಿಯೂ ಅವರು ತೊಡಗಿಸಿಕೊಂಡಿದ್ದಾರೆ.
ಡಾ. ರಾಜೇಶ್ ರೈ ಅವರು ‘ಸಹಕಾರ ರತ್ನ’ ರೊಟೇರಿಯನ್ ಕೆ. ಸೀತಾರಾಮ ರೈ ಸವಣೂರು ಮತ್ತು ಶ್ರೀಮತಿ ಕಸ್ತೂರಿ ಕಲಾ ಎಸ್. ರೈ ಸವಣೂರು ಅವರ ಪುತ್ರ. ಅವರ ಪತ್ನಿ ಶ್ರೀಮತಿ ಅಶ್ವಿತ ರಾಜೇಶ್ ರೈ ಅವರು Human Nutrition and Dieteticsನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಲಂಡನ್ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ವೃತ್ತಿಜೀವನ ನಡೆಸಿದ್ದಾರೆ.
ಕರ್ನಾಟಕದಲ್ಲಿ ವೈದ್ಯಕೀಯ ಶಿಕ್ಷಣ ಪಡೆದು, ಮಂಗಳೂರಿನಲ್ಲಿ ಸುದೀರ್ಘ ಕಾಲ ವೈದ್ಯಕೀಯ ಸೇವೆ ಮತ್ತು ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿ, ಬಳಿಕ ಇಂಗ್ಲೆಂಡ್‌ನ NHSನಲ್ಲಿ ಕನ್ಸಲ್ಟಾಂಟ್ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ರಾಜೇಶ್ ರೈ ಅವರ ವೃತ್ತಿಪರ ಪಯಣ ಗಮನಾರ್ಹವಾಗಿದೆ.
-
Uncategorized18 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
ದಕ್ಷಿಣ ಕನ್ನಡ20 hours ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು
-
ಬಿಗ್ ನ್ಯೂಸ್6 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ7 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ5 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ6 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ6 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ನಿಧನ ವಾರ್ತೆ4 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು


















