Connect with us

ಆರೋಗ್ಯ

Home remedies-ಬೇಸಿಗೆಯಲ್ಲಿ ಕಾಡುವ ಚರ್ಮದ ಸಮಸ್ಯೆಗಳಿಗೆ ಕೆಲವು ಮನೆಮದ್ದುಗಳು

Published

on



Ad Widget

Ad Widget

Ad Widget

Ad Widget

ಬೇಸಗೆಯಲ್ಲಿ ಚರ್ಮವು ಅತೀ ಹೆಚ್ಚು ಶೋಷಣೆಗೆ ಒಳಗಾಗುವುದು ಎಂದರೆ ತಪ್ಪಾಗದು. ಮಿತಿಮೀರಿದ ಉಷ್ಣತೆಯಿಂದಾಗಿ ಬೇಸಿಗೆಯಲ್ಲಿ ದೇಹವು ಬೇಗನೆ ಬಸವಳಿದು ಹೋಗುವುದು ಮಾತ್ರವಲ್ಲದೆ, ಅತಿಯಾದ ಬೆವರು, ಕಜ್ಜಿ, ಬೆವರುಸಾಲೆ ಮೂಡುವುದು ಸಹಜ.

Ad Widget

Ad Widget

Ad Widget

Ad Widget

ದೇಹದ ಕೆಲವೊಂದು ಸೂಕ್ಷ್ಮ ಭಾಗದಲ್ಲಿ ಬೆವರು ನಿಲ್ಲುವ ಕಾರಣದಿಂದಾಗಿ ಅಲ್ಲಿ ತುರಿಕೆ ಬರುವುದು ಹೆಚ್ಚು. ಆ ಜಾಗದಲ್ಲಿ ಪದೇ ಪದೇ ತುರಿಕೆ ಬಂದು ಮತ್ತಷ್ಟು ಸಮಸ್ಯೆಗಳು ಉಂಟಾಗಬಹುದು. ಹೀಗಾಗಿ ಇಂತಹ ತುರಿಕೆ ಸಮಸ್ಯೆ ಕಡಿಮೆ ಮಾಡಲು ಕೆಲವು ಮನೆಮದ್ದುಗಳನ್ನು ಬಳಸಿಕೊಂಡರೆ ಆಗ ಅದು ಬೇಸಗೆಯಲ್ಲಿ ಚರ್ಮದ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಲಾಗುತ್ತದೆ.

Ad Widget

Ad Widget

Ad Widget alt="Ad Widget"/>

Ad Widget

ತುರಿಕೆ ಬರಲು ಕಾರಣವೇನು?
ಬಿಸಿಲಿನಲ್ಲಿ ಚರ್ಮವು ಸುಡುವುದರಿಂದ ದೇಹದಲ್ಲಿ ತುರಿಕೆ ಕಂಡುಬರುವುದು. ದೀರ್ಘಕಾಲಕ್ಕೆ ಯುವಿ ಕಿರಣಗಳಿಗೆ ಚರ್ಮವು ಒಗ್ಗಿಕೊಂಡ ಸಂದರ್ಭದಲ್ಲಿ ಚರ್ಮಕ್ಕೆ ಹಾನಿ ಆಗಿ, ಅದರಿಂದ ತುರಿಕೆ ಮತ್ತು ಉರಿಯೂತ ಕಾಣಿಸುವುದು.

Ad Widget

Ad Widget <> Ad Widget

ಬೆವರಿನ ನಾಳಗಳು ಬ್ಲಾಕ್ ಆದ ಸಂದರ್ಭದಲ್ಲಿ ಅಲ್ಲಿ ಬೆವರು ಹೊರಬರಲಾಗದೆ, ಚರ್ಮವು ಕೆಂಪಾಗುವುದು, ಬೊಕ್ಕೆ ಮತ್ತು ತುರಿಕೆ ಕಂಡುಬರುವುದು. ಬೇಸಗೆಯಲ್ಲಿ ಹೊರಗಡೆ ತಿರುಗಾಡಲು ಹೋದರೆ ಆಗ ಸೊಳ್ಳೆ, ಕೀಟಗಳ ಕಡಿತದಿಂದಲೂ ಚರ್ಮದಲ್ಲಿ ತುರಿಕೆ ಕಂಡುಬರಬಹುದು. ಕೆಲವು ಮನೆಮದ್ದುಗಳನ್ನು ಬಳಸಿಕೊಂಡರೆ ಆಗ ಇದು ತುರಿಕೆ ಕಡಿಮೆ ಮಾಡಲು ಸಹಕಾರಿ ಆಗಿರುವುದು.



Ad Widget

ತಂಪು ಶಾಖ
ಒದ್ದೆ ಬಟ್ಟೆ ಅಥವಾ ಐಸ್ ಪ್ಯಾಕ್ ನ್ನು ತುರಿಕೆ ಉಂಟು ಮಾಡುವ ಜಾಗಕ್ಕೆ ಇಟ್ಟುಕೊಂಡರೆ ಆಗ ಅದರಿಂದ ಉರಿಯೂತ, ಕಿರಿಕಿರಿ ಕಡಿಮೆ ಆಗುವುದು. ತಂಪು ಶಾಖವು ಚರ್ಮವನ್ನು ಮರಗಟ್ಟುವಂತೆ ಮಾಡಿ ತುರಿಕೆ ನಿವಾರಿಸುವುದು ಮತ್ತು ತುರಿಕೆಯಿಂದ ತಕ್ಷಣವೇ ಪರಿಹಾರ ನೀಡುವುದು.

Ad Widget

Ad Widget

ಅಲೋವೆರಾ ಲೋಳೆ
ತಾಜಾ ಅಲೋವೆರಾ ಲೋಳೆಯನ್ನು ನೇರವಾಗಿ ತುರಿಕೆ ಇರುವ ಜಾಗಕ್ಕೆ ಹಚ್ಚಿಕೊಂಡರೆ ಆಗ ಇದರಿಂದ ಚರ್ಮಕ್ಕೆ ಶಮನ ಸಿಗುವುದು.

ಅಲೋವೆರಾವು ತಂಪುಕಾರಿ ಮತ್ತು ಉರಿಯೂತ ಶಮನಕಾರಿ ಗುಣವು ಇದೆ. ಇದು ಬಿಸಿಲಿನ ಸುಟ್ಟ ಗಾಯ, ಕೀಟದ ಕಡಿತ ಮತ್ತು ಇತರ ತುರಿಕೆಯನ್ನು ಕಡಿಮೆ ಮಾಡಿ, ಹಠಾತ್ ಶಮನ ನೀಡುವುದು ಮತ್ತು ಚರ್ಮವನ್ನು ಸರಿಪಡಿಸುವುದು.

ಓಟ್ ಮೀಲ್ ಸ್ನಾನ!
ಕೊಲೊಯ್ಡಲ್ ಓಟ್ ಮೀಲ್ ನ್ನು ಉಗುರುಬೆಚ್ಚಗಿನ ನೀರಿಗೆ ಹಾಕಿಕೊಂಡು ಅದರಲ್ಲಿ 15-20 ನಿಮಿಷ ಕಾಲ ಹಾಗೆ ಕುಳಿತುಕೊಂಡರೆ ಆಗ ತುರಿಕೆ ಮತ್ತು ಕಿರಿಕಿರಿ ಕಡಿಮೆ ಆಗುವುದು.

ಓಟ್ ಮೀಲ್ ನಲ್ಲಿ ಉರಿಯೂತ ಶಮನಕಾರಿ ಗುಣವಿದ್ದು, ಇದು ಚರ್ಮಕ್ಕೆ ಶಮನ ನೀಡುವುದು ಹಾಗೂ ನೈಸರ್ಗಿಕ ಪದರವನ್ನು ನಿರ್ಮಿಸಿ, ಬಿಸಿಲು ಮತ್ತು ಕೀಟಗಳಿಂದ ಆಗಿರುವ ಹಾನಿಯನ್ನು ತಡೆಯುವುದು.

ಆ್ಯಪಲ್ ಸೀಡರ್ ವಿನೇಗರ್
ನೀರಿಗೆ ಸಮಪ್ರಮಾಣದಲ್ಲಿ ಆ್ಯಪಲ್ ಸೀಡರ್ ವಿನೇಗರ್ ಹಾಕಬೇಕು ಮತ್ತು ಇದನ್ನು ಚರ್ಮದಲ್ಲಿ ತುರಿಕೆ ಇರುವ ಜಾಗಕ್ಕೆ ಹಚ್ಚಬೇಕು.

ಆ್ಯಪಲ್ ಸೀಡರ್ ವಿನೇಗರ್ ಉರಿಯೂತ ಶಮನಕಾರಿ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣ ಹೊಂದಿದೆ. ಇದು ತುರಿಕೆ ತಗ್ಗಿಸುವುದು ಮತ್ತು ಉರಿಯೂತ ಕಡಿಮೆ ಮಾಡುವುದು. ಬಿಸಿಲಿನಿಂದ ಸುಟ್ಟ ಗಾಯ, ಕೀಟದ ಕಡಿತ ಮತ್ತು ಶಾಖದ ದದ್ದುವನ್ನು ಇದು ನಿವಾರಣೆ ಮಾಡುವುದು.

ಬೇಕಿಂಗ್ ಸೋಡಾ
ನೀರಿನಲ್ಲಿ ಬೇಕಿಂಗ್ ಸೋಡಾವನ್ನು ಹಾಕಿಕೊಂಡು ಪೇಸ್ಟ್ ಮಾಡಬೇಕು ಮತ್ತು ಇದನ್ನು ತುರಿಕೆ ಇರುವ ಜಾಗಕ್ಕೆ ಹಚ್ಚಿಕೊಂಡರೆ, ಆಗ ಅದರಿಂದ ಶಮನ ಸಿಗುವುದು. ಬೇಕಿಂಗ್ ಸೋಡಾದಲ್ಲಿ ಉರಿಯೂತ ಶಮನಕಾರಿ ಗುಣಗಳು ಇದ್ದು, ತುರಿಕೆ ಮತ್ತು ಉರಿಯೂತ ಕಡಿಮೆ ಮಾಡಲು ಇದು ಸಹಕಾರಿ. ಬೇಸಗೆಯಲ್ಲಿ ಕಂಡುಬರುವ ಬಿಸಿಲಿನ ಸುಟ್ಟ ಗಾಯ, ಶಾಖದ ದದ್ದು ಮತ್ತು ಅಲರ್ಜಿಯನ್ನು ಕಡಿಮೆ ಮಾಡುವುದು.

ತೆಂಗಿನ ಎಣ್ಣೆ ಮಸಾಜ್
ತೆಂಗಿನ ಎಣ್ಣೆಯಿಂದ ಮಸಾಜ್ ಮಾಡಿದರೆ ಆಗ ಇದು ಚರ್ಮವನ್ನು ಮೊಶ್ಚಿರೈಸ್ ಮಾಡುವುದು ಮತ್ತು ಕಿರಿಕಿರಿಯಿಂದ ಶಮನ ನೀಡುವುದು. ತೆಂಗಿನ ಎಣ್ಣೆಯಲ್ಲಿ ಕೊಬ್ಬಿನಾಮ್ಲವಿದ್ದು, ಇದು ಚರ್ಮವನ್ನು ಹೈಡ್ರೇಟ್ ಮಾಡುವುದು ಮತ್ತು ಉರಿಯೂತ ತಗ್ಗಿಸುವುದು.

ಇದರಿಂದ ಬೇಸಗೆಯಲ್ಲಿ ಕಂಡುಬರುವ ತುರಿಕೆ, ಚರ್ಮ ಒಣಗುವುದು, ಬಿಸಿಲಿನ ಸುಟ್ಟ ಗಾಯ ಮತ್ತು ಕೀಟದ ಕಡಿತವನ್ನು ಇದು ದೂರ ಮಾಡುವುದು. ಇದರಲ್ಲಿ ಸೂಕ್ಷಕ್ರಿಮಿ ವಿರೋಧಿ ಗುಣಗಳು ಇವೆ ಮತ್ತು ಇದು ಸೋಂಕು ತಡೆಯುವುದು ಮತ್ತು ಚರ್ಮಕ್ಕೆ ಶಮನ ನೀಡುವುದು.

ಪುದೀನಾ ಎಣ್ಣೆ
ಪುದೀನಾ ಎಣ್ಣೆಯನ್ನು ತೆಂಗಿನ ಎಣ್ಣೆಯ ಜತೆಗೆ ಸೇರಿಸಿಕೊಂಡು ತುರಿಕೆ ಇರುವ ಜಾಗಕ್ಕೆ ಹಚ್ಚಿಕೊಂಡರೆ ಆಗ ಇದು ಶಮನ ನೀಡುವುದು. ಪುದೀನಾ ಎಣ್ಣೆಯಲ್ಲಿ ಇರುವ ಗುಣವು ಚರ್ಮವನ್ನು ಮರಗಟ್ಟುವಂತೆ ಮಾಡುವುದು ಮತ್ತು ತುರಿಕೆ ನಿವಾರಿಸುವುದು.

ಬಿಸಿಲಿನ ಸುಟ್ಟ ಗಾಯ, ಶಾಖದ ದದ್ದು, ಕೀಟದ ಕಡಿತವನ್ನು ಇದು ನಿವಾರಣೆ ಮಾಡುವುದು. ಇದರಲ್ಲಿ ಇರುವ ಸೂಕ್ಷ್ಮ ಕ್ರಿಮಿ ವಿರೋಧಿ ಗುಣಗಳು ಸೋಂಕನ್ನು ಕಡಿಮೆ ಮಾಡುವುದು ಮತ್ತು ಚರ್ಮಕ್ಕೆ ಶಮನ ನೀಡುವುದು.

Ad Widget

ಆರೋಗ್ಯ

Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ

Published

on



Ad Widget

Ad Widget

Ad Widget

Ad Widget

ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.

Ad Widget

Ad Widget <> Ad Widget

ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.



Ad Widget

ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.

Continue Reading

ಆರೋಗ್ಯ

HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ

Published

on



Ad Widget

Ad Widget

Ad Widget

Ad Widget

ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.

Ad Widget

Ad Widget <> Ad Widget

ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.



Ad Widget

ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.

Ad Widget

Ad Widget

ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್‌ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.

Ad Widget
Continue Reading

ಆರೋಗ್ಯ

Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ

Published

on



Ad Widget

Ad Widget

Ad Widget

Ad Widget

ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.

Ad Widget

Ad Widget <> Ad Widget

ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.



Ad Widget

ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).

Ad Widget

Ad Widget

ರಿಯಾಯಿತಿ ದರದ ಪರೀಕ್ಷೆ: ಕೊಲೆಸ್ಟರಾಲ್ ಪರೀಕ್ಷೆಯನ್ನು ವಿಶೇಷ ರಿಯಾಯಿತಿ ದರದಲ್ಲಿ ಮಾಡಿಸಿಕೊಳ್ಳಲು ಅವಕಾಶವಿದೆ.

ಈ ರೋಗನಿರ್ಣಯ ಶಿಬಿರದ ಪ್ರಯೋಜನವನ್ನು ಪುತ್ತೂರು ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಸಂಘಟಕರು ವಿನಂತಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 94814 51929

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading