Connect with us

ದಕ್ಷಿಣ ಕನ್ನಡ

Heart attack ಉಪ್ಪಿನಂಗಡಿ :  ಹೃದಯಾಘಾತದಿಂದ ಯುವಕ ಸಾವು

Published

on



Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ಕೊರೊನಾದ ಬಳಿಕ ಯುವಕರು ಹೃದಯಾಘಾತಕ್ಕೆ ತುತ್ತಾಗಿ ಬಲಿಯಾಗುವ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡು ಬಂದಿದೆ.  ಅದೇ ರೀತಿ ಗಾರೆ ಕೆಲಸಕ್ಕೆ ಹೋಗುವ ಯುವಕನೊಬ್ಬ ಮಲಗಿದ್ದಲೇ ಹೃದಯಾಘಾತಕ್ಕೆ ಸಿಲುಕಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪ ನಡೆದಿದೆ.

Ad Widget

Ad Widget

Ad Widget

Ad Widget

ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ. ಗೋಪಾಲ ಗೌಡರ ಪುತ್ರ 27ರ ಹರೆಯದ ಜನಾರ್ದನ ನಿನ್ನಿಕಲ್ಲು ಹೃದಯಾಘಾತದಿಂದ ಶುಕ್ರವಾರ ಮೃತಪಟ್ಟಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದ ಇವರು ಕೆಲಸಕ್ಕೆ ರಜೆ ಹಾಕಿ ಮನೆಯಲ್ಲೇ ಇದ್ದರು. ಇವರ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದು ನೋಡಿದಾಗ ಜನಾರ್ದನ ಮಲಗಿದ್ದಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಶ್ರೀ ದುರ್ಗಾ ಭಜನಾ ಮಂಡಳಿ ದುರ್ಗಾಗಿರಿ ಮತ್ತು ಶ್ರೀ ದುರ್ಗಾ ಯುವಕ ಮಂಡಲ ದುರ್ಗಾಗಿರಿಯ ಸಕ್ರಿಯ ಸದಸ್ಯನಾಗಿದ್ದರು. ಮೃತರು ತಾಯಿ ಲಲಿತಾ, ಇಬ್ಬರು ಸಹೋದರರನ್ನು ಅಗಲಿದ್ದಾರೆ.



Ad Widget
Ad Widget
Click to comment

Leave a Reply

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಅಪರಾಧ

Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?

Published

on



Ad Widget

Ad Widget

Ad Widget

Ad Widget

ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್‌ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.

Ad Widget

Ad Widget

Ad Widget alt="Ad Widget"/>

Ad Widget

ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.

Ad Widget

Ad Widget <> Ad Widget

ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.



Ad Widget

ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.

ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್‌ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading