ಅಪರಾಧ
Suspension order-ಪುತ್ತೂರು ಎಪಿಎಂಸಿಯ ಸಹಾಯಕ ಕಾರ್ಯದರ್ಶಿ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ದೊರೆತು ಕರ್ತವ್ಯಕ್ಕೆ ತೊಡಗಿದ ಬೆನ್ನಲ್ಲೇ ಅಮಾನತು ಆದೇಶ
ಪುತ್ತೂರು ಎಪಿಎಂಸಿಯ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರ ಅವರನ್ನು, ಕರ್ನಾಟಕ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಎಂ.ಗಂಗಾಧರ ಸ್ವಾಮಿ ಅವರು ಸೇವೆಯಿಂದ ಅಮಾನತುಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ. ಗುರುವಾರ ಬೆಳಿಗ್ಗೆ ವರ್ಗಾವಣೆ ವಿರುದ್ಧ ಕೆಎಟಿಯಿಂದ ತಡೆಯಾಜ್ಞೆ ತಂದು ಕರ್ತವ್ಯಕ್ಕೆ ಹಾಜರಾಗಿದ್ದ ರಾಮಚಂದ್ರ ಅವರಿಗೆ ಮಧ್ಯಾಹ್ನ ವೇಳೆ ಅಮಾನತು ಆದೇಶ ನೀಡಲಾಗಿದೆ.
‘ರಾಮಚಂದ್ರ ಅವರು ತರಕಾರಿ ವಾಹನಗಳ ಒಳಪ್ರವೇಶವನ್ನು ನಿರಾಕರಿಸುತ್ತಿದ್ದು, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ತರಕಾರಿ ವ್ಯಾಪಾರಸ್ಥರಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ಪರವಾನಗಿ ನೀಡದೆ ಇರುವುದರಿಂದ ವ್ಯಾಪಾರದಲ್ಲಿ ನಷ್ಟ ಆಗಿದೆ’ ಎಂದು ಎಪಿಎಂಸಿ ಪ್ರಾಂಗಣದ ತರಕಾರಿ ವ್ಯಾಪಾರಸ್ಥರು ಜ. 4ರಂದು ಕೃಷಿ ಮಾರಾಟ ಇಲಾಖೆ ನಿರ್ದೇಶಕರಿಗೆ ದೂರು ಸಲ್ಲಿಸಿದ್ದರು.
ಈ ದೂರಿನ ತನಿಖೆಗಾಗಿ ಅಧಿಕಾರಿಗಳ ತಂಡ ರಚಿಸಲಾಗಿತ್ತು. ಈ ಮಧ್ಯೆ ರಾಮಚಂದ್ರ ಅವರನ್ನು ಜ.16ರಿಂದ 2 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ಕೃಷಿ ಮಾರಾಟ ಇಲಾಖೆ ನಿರ್ದೇಶಕರು ಆದೇಶ ಮಾಡಿದ್ದರು. ಈ ನಡುವೆ ರಾಮಚಂದ್ರ ಅವರ ವಿರುದ್ಧದ ದೂರಿನ ಕುರಿತು ಇಲಾಖಾ ವಿಚಾರಣೆ ನಡೆಸಲು ಆಡಳಿತಾತ್ಮಕ ದೃಷ್ಟಿಯಿಂದ ಅವರನ್ನು ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಖಾಲಿ ಇದ್ದ ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗೆ ವರ್ಗಾಯಿಸಿ ಕೃಷಿ ಮಾರಾಟ ಇಲಾಖೆ ಆದೇಶ ಮಾಡಿತ್ತು. ರಾಮಚಂದ್ರ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಕೇಂದ್ರ ಕಚೇರಿಗೆ ವರದಿ ಸಲ್ಲಿಸಲು ಪುತ್ತೂರು ಎಪಿಎಂಸಿ ಸಮಿತಿ ಕಾರ್ಯದರ್ಶಿಗೆ ಸೂಚಿಸಲಾಗಿತ್ತು.
ರಾಮಚಂದ್ರ ಅವರು ರಾಯಚೂರಿನಲ್ಲಿ ಕರ್ತವ್ಯಗೆ ಹಾಜರಾಗದೆ ವರ್ಗಾವಣೆ ಆದೇಶದ ವಿರುದ್ಧ ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯಕ್ಕೆ (ಕೆಎಟಿಗೆ) ದೂರು ಸಲ್ಲಿಸಿದ್ದರು. ಕೆಎಟಿ ಅವರ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದರಿಂದ ಗುರುವಾರ ಬೆಳಿಗ್ಗೆ ಅವರು ಎಪಿಎಂಸಿ ಸಹಾಯಕ ಕಾರ್ಯದರ್ಶಿ ಕರ್ತವ್ಯಕ್ಕೆ ಹಾಜರಾಗಿದ್ದು, ಮಧ್ಯಾಹ್ನ 12 ಗಂಟೆ ವೇಳೆಗೆ ಅಮಾನತು ಆದೇಶ ಬಂದಿದೆ.
ಅಂತರ ರಾಜ್ಯ
Kasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
ಮದುವೆಯಿಂದ ಹಿಂದೆ ಸರಿದ ಯುವತಿ ಹಾಗೂ ಆಕೆಯ ಕುಟುಂಬದವರ ವಿರುದ್ಧ ವರನ ಮನೆಯವರು ನೀಡಿದ ದೂರಿನ ಮೇರೆಗೆ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿಶ್ಚಿತಾರ್ಥದ ಸಂದರ್ಭದಲ್ಲಿ ನೀಡಿದ್ದ ಚಿನ್ನಾಭರಣ, ಐಫೋನ್, ನಗದು ಸೇರಿದಂತೆ ಸುಮಾರು ₹7.57 ಲಕ್ಷ ಮೌಲ್ಯದ ಉಡುಗೊರೆಗಳನ್ನು ಹಿಂದಿರುಗಿಸದೆ ವಂಚಿಸಿದ್ದಾರೆ ಎಂಬುದು ಆರೋಪವಾಗಿದೆ.
ಕಾಸರಗೋಡು: ಮದುವೆಯಿಂದ ಹಿಂದೆ ಸರಿದ ಯುವತಿ ಹಾಗೂ ಆಕೆಯ ಕುಟುಂಬದವರ ವಿರುದ್ಧ ವರನ ಮನೆಯವರು ನೀಡಿದ ದೂರಿನ ಮೇರೆಗೆ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿಶ್ಚಿತಾರ್ಥದ ಸಂದರ್ಭದಲ್ಲಿ ನೀಡಿದ್ದ ಚಿನ್ನಾಭರಣ, ಐಫೋನ್, ನಗದು ಸೇರಿದಂತೆ ಸುಮಾರು ₹7.57 ಲಕ್ಷ ಮೌಲ್ಯದ ಉಡುಗೊರೆಗಳನ್ನು ಹಿಂದಿರುಗಿಸದೆ ವಂಚಿಸಿದ್ದಾರೆ ಎಂಬುದು ಆರೋಪವಾಗಿದೆ.
ನ್ಯಾಯಾಲಯದ ಆದೇಶದ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮದುವೆ ರದ್ದಾದ ಬಳಿಕ ಉಡುಗೊರೆಗಳನ್ನು ಹಿಂದಿರುಗಿಸದ ಕಾರಣ ತಮ್ಮ ಕುಟುಂಬಕ್ಕೆ ₹7,57,037 ನಷ್ಟವಾಗಿದೆ ಎಂದು ವರನ ಕಡೆಯವರು ದೂರಿನಲ್ಲಿ ತಿಳಿಸಿದ್ದಾರೆ.
ಪಡನ್ನಕ್ಕಾಡ್ ಸಮೀಪದ ಯುವಕನಿಗೆ ಉದುಮ ಸಮೀಪದ ಯುವತಿಯೊಂದಿಗೆ ವಿವಾಹ ನಡೆಸಲು 2026ರ ಏಪ್ರಿಲ್‌ನಲ್ಲಿ ನಿಶ್ಚಯಿಸಲಾಗಿತ್ತು. ಈ ಸಂದರ್ಭದಲ್ಲಿ ನಿಶ್ಚಿತಾರ್ಥದ ಭಾಗವಾಗಿ ವಧುವಿಗೆ ಐಫೋನ್, ಚಿನ್ನಾಭರಣ, ವಿವಿಧ ಉಡುಗೊರೆಗಳು ಹಾಗೂ ನಗದು ಸೇರಿದಂತೆ ಸುಮಾರು ₹7.5 ಲಕ್ಷ ಮೌಲ್ಯದ ವಸ್ತುಗಳನ್ನು ವರನ ಕುಟುಂಬದವರು ನೀಡಿದ್ದರು ಎನ್ನಲಾಗಿದೆ.
ಆದರೆ, ಬಳಿಕ ಯುವತಿ ಮದುವೆಯಿಂದ ಹಿಂದೆ ಸರಿದಿದ್ದು, ಆಕೆಯ ತಾಯಿ ಹಾಗೂ ಮಾವನೊಂದಿಗೆ ಸೇರಿ ಮದುವೆ ರದ್ದುಗೊಳಿಸಲು ಸಂಚು ರೂಪಿಸಿದ್ದಾರೆ ಎಂದು ವರನ ಕಡೆಯವರು ಆರೋಪಿಸಿದ್ದಾರೆ. ಅಲ್ಲದೆ, ನಿಶ್ಚಿತಾರ್ಥದ ವೇಳೆ ನೀಡಿದ್ದ ಐಫೋನ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಹಿಂದಿರುಗಿಸಲು ನಿರಾಕರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಅಂತರ ರಾಜ್ಯ
Arrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಕಾಸರಗೋಡು: ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಚೇರ್ತಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸುಲ್ತಾನ್ ಬತ್ತೇರಿ ಮೂಲದ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ ವೇಳೆ ಆತ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ವೈದ್ಯನೆಂದು ನಂಬಿಸಿ ಅತ್ಯಾಚಾರ ಆರೋಪ
ವೈದ್ಯನೆಂದು ಪರಿಚಯಿಸಿಕೊಂಡು ತಳಿಪರಂಬ ಮೂಲದ ಯುವತಿಯೊಬ್ಬಳನ್ನು ಮಂಜೇಶ್ವರದ ಹೊಸಂಗಡಿಯ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಬಿಜು ಆಂಟನಿ ವಿರುದ್ಧವಿದೆ. ಈ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವತಿಯಿಂದ ಮೂರೂವರೆ ಪವನ್ ಚಿನ್ನಾಭರಣವನ್ನೂ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಮದುವೆಯಾದ ಮೂರೇ ದಿನಕ್ಕೆ ಪರಾರಿ
ಆರೋಪಿ 2020ರಲ್ಲಿ ತನ್ನ ವಂಚನೆಯ ಜಾಲ ಆರಂಭಿಸಿದ್ದ ಎನ್ನಲಾಗಿದೆ. ಚೇರ್ತಲ ಸಮೀಪದ ನಿವಾಸಿ ರಮ್ಯಾ ಎಂಬ ಯುವತಿಯನ್ನು ರಾಜೇಶ್ ಎಂಬ ಹೆಸರಿನಲ್ಲಿ ಮದುವೆಯಾಗಿದ್ದ ಆತ, ಮದುವೆಯಾದ ಮೂರನೇ ದಿನವೇ ₹30 ಸಾವಿರ ನಗದು ಮತ್ತು ಏಳು ಪವನ್ ಚಿನ್ನಾಭರಣ ಪಡೆದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ರಮ್ಯಾ ನೀಡಿದ ದೂರಿನ ಮೇರೆಗೆ ಚೇರ್ತಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಆರೋಪಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಇದೀಗ ಸುಮಾರು ಆರು ವರ್ಷಗಳ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜು ಆಂಟನಿಯನ್ನು ಬಂಧಿಸಲಾಗಿದೆ.
ಬೇರೆ ಬೇರೆ ಹೆಸರುಗಳಲ್ಲಿ ವಂಚನೆ
ವೈದ್ಯನೆಂದು ಹೇಳಿಕೊಂಡು ಮದುವೆ ಜಾಹೀರಾತುಗಳನ್ನು ನೀಡುವ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ಬಳಿಕ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಚಿನ್ನಾಭರಣ ಹಾಗೂ ಹಣ ಪಡೆದು ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿವಿಧ ಸ್ಥಳಗಳಲ್ಲಿ ಬೇರೆ ಬೇರೆ ಹೆಸರುಗಳನ್ನು ಬಳಸಿಕೊಂಡು ಮಹಿಳೆಯರಿಗೆ ವಂಚಿಸುತ್ತಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯ ವಿರುದ್ಧದ ಪ್ರಕರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
-
Uncategorized15 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized18 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized16 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized19 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized17 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized16 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಸ್ಥಳೀಯ1 hour agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಶಿಕ್ಷಣ2 hours agoVidyamata-ಕರಾವಳಿಯ ಯುವಜನತೆಯ ಉದ್ಯೋಗ ಸ್ವಪ್ನಕ್ಕೆ ‘ವಿದ್ಯಾಮಾತಾ’ ಆಸರೆ: ಬರಿ ಅಂಕಗಳಷ್ಟೇ ಅಲ್ಲ, ಬದುಕನ್ನು ಗೆಲ್ಲುವ ಕೌಶಲ್ಯವೇ ನಿಜವಾದ ಶಕ್ತಿ


















