Connect with us

ಬಿಗ್ ನ್ಯೂಸ್

Maruti Suzuki Swift-ಮೇ 9 ರಂದು ಮಾರುಕಟ್ಟೆಗೆ ಪ್ರವೇಶಸಲಿರುವ ನಾಲ್ಕನೇ ಪೀಳಿಗೆಯ ಮಾರುತಿ ಸುಜುಕಿ ಸ್ವಿಫ್ಟ್‌ : ಬುಕ್ಕಿಂಗ್ ಆರಂಭ

Published

on



Ad Widget

Ad Widget

Ad Widget

Ad Widget

ಮಾರುತಿ ಸುಜುಕಿ ಇಂಡಿಯಾ ಭಾರತದ ವಾಹನ ಮಾರುಕಟ್ಟೆಯಲ್ಲಿ ಅಗ್ರ ಸ್ಥಾನದಲ್ಲಿದ್ದು, ಇದೀಗ ತನ್ನ ಬಹುನಿರೀಕ್ಷಿತ ಮುಂದಿನ ತಲೆಮಾರಿನ ಸ್ವಿಫ್ಟ್‌ ಕಾರನ್ನು ಬಿಡುಗಡೆ ಮಾಡುವ ತಯಾರಿಯಲ್ಲಿದೆ. 2024ರ ಮೇ 9 ರಂದು ಹೊಸ ಸ್ವಿಫ್ಟ್ ಭಾರತದ ವಾಹನ ಮಾರುಕಟ್ಟೆ ಪ್ರವೇಶಿಸಲಿದೆ. ಈ ಹ್ಯಾಚ್‌ಬ್ಯಾಕ್ ನಾಲ್ಕನೇ ಪೀಳಿಗೆಯ ಸ್ವಿಫ್ಟ್ ಕಾರಾಗಿದೆ. ಸಾಕಷ್ಟು ನವೀಕರಣಗಳೊಂದಿಗೆ ಈ ಹ್ಯಾಚ್‌ಬ್ಯಾಕ್ ಎಂಟ್ರಿ ಕೊಡಲಿದೆ.

Ad Widget

Ad Widget

Ad Widget

Ad Widget

ಇನ್ನು ಹೊಸ ಕಾರಿನ ಬಿಡುಗಡೆ ದಿನಾಂಕ ಹತ್ತಿರವಾಗುತ್ತಿದ್ದಂತೆಯೇ ಬುಕ್ಕಿಂಗ್ ಕೂಡಾ ಆರಂಭವಾಗಿದೆ. ಆಸಕ್ತ ಗ್ರಾಹಕರು ಹತ್ತಿರದ ಡೀಲರ್‌ಶಿಪ್ಟ್‌ಗಳಲ್ಲಿ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ 11,000 ರೂಪಾಯಿ ಬುಕ್ಕಿಂಗ್ ಮೊತ್ತವನ್ನು ಪಾವತಿಸಿ ಹೊಸ ಪೀಳಿಗೆಯ ಮಾರುತಿ ಸುಜುಕಿ ಸ್ವಿಫ್ಟ್ ಅನ್ನು ಬುಕ್ ಮಾಡಿಕೊಳ್ಳಬಹುದು. ಬಿಡುಗಡೆಯ ಬಳಿಕ 2024 ರ ಜೂನ್‌ನಿಂದ ವಿತರಣೆಯೂ ಆರಂಭವಾಗುವ ಸಾಧ್ಯತೆ ಇದೆ.

Ad Widget

Ad Widget

Ad Widget alt="Ad Widget"/>

Ad Widget

ಅಧಿಕೃತ ಬಿಡುಗಡೆ ದಿನಾಂಕ ಹತ್ತಿರವಾಗುತ್ತಿದ್ದಂತೆಯೇ ಈ ಕಾರು ಮಾರುತಿ ಸುಜುಕಿ ಡೀಲರ್‌ಶಿಪ್‌ಗಳಲ್ಲಿ ಕಾಣಿಸಿಕೊಳ್ಳಲು ಆರಂಭಿಸಿದೆ. ಭಾರತದಲ್ಲಿ ಬಿಡುಗಡೆಯಾಗುತ್ತಿರುವ ಸ್ವಿಫ್ಟ್‌ ವಿಭಿನ್ನವಾಗಿ ವಿನ್ಯಾಸಗೊಳಿಸಲಾದ ಅಲಾಯ್ ವ್ಹೀಲ್‌ಗಳನ್ನು ಪಡೆಯುತ್ತದೆ. ಇನ್ನು ಮರು ವಿನ್ಯಾಸಗೊಳಿಸಲಾದ ಮುಂಭಾಗದ ಬಂಪರ್ ಹಾಗೂ ಹೊಸ ಗ್ರೀಲ್‌ ಬಾಹ್ಯ ವಿನ್ಯಾಸದ ಪ್ರಮುಖ ಅಂಶಗಳಲ್ಲಿ ಒಂದಾಗಿವೆ. ಇದಲ್ಲದೆ ಇದು ಡಿಆರ್‌ಎಲ್‌ಗಳ ಜೊತೆಗೆ ಮರುವಿನ್ಯಾಸಗೊಳಿಸಲಾದ ಸ್ಮೋಕ್ಡ್‌ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳನ್ನೂ ಪಡೆದುಕೊಂಡಿದೆ. ಅದರ ಕೆಳಗೆ ಸ್ಪ್ಲಿಟರ್‌ನೊಂದಿಗೆ ಪರಿಷ್ಕೃತ ಫಾಗ್ ಲ್ಯಾಂಪ್ ಹೌಸಿಂಗ್ ಅನ್ನೂ ಇದು ಹೊಂದಿದೆ.

Ad Widget

Ad Widget <> Ad Widget

ಹೊಸ ಸ್ವಿಫ್ಟ್‌ನ ಇಂಟೀರಿಯರ್‌ ಬಲೆನೋ ಹಾಗೂ ಫ್ರಾಂಕ್ಸ್‌ನಿಂದ ಸ್ಫೂರ್ತಿ ಪಡೆದಂತೆ ಕಾಣುತ್ತಿದೆ. ಇದು ಕೆಳಗೆ ನಯವಾದ ಎಸಿ ವೆಂಟ್‌ಗಳು ಹಾಗೂ ಎಚ್‌ವಿಎಸಿ ಕಂಟ್ರೋಲ್‌ಗಳನ್ನು ಹೊಂದಿದೆ. ಅಲ್ಲದೆ ಫ್ಲೋಟಿಂಗ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ನೊಂದಿಗೆ ಹೊಸ ಡ್ಯಾಶ್‌ಬೋರ್ಡ್ ವಿನ್ಯಾಸವನ್ನು ಇದು ಪಡೆಯುತ್ತದೆ. ಇದಲ್ಲದೆ ವೈರ್‌ಲೆಸ್ ಆಪಲ್‌ ಕಾರ್‌ಪ್ಲೇ/ಆಂಡ್ರಾಯ್ಡ್‌ ಆಟೋ, ಕನೆಕ್ಟೆಡ್ ಕಾರ್‌ ಟೆಕ್‌, ಸ್ಟೀರಿಂಗ್ ಮೌಂಟೆಡ್‌ ಕಂಟ್ರೋಲ್‌ಗಳು, ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್‌ ಸೇರಿ ಸಾಕಷ್ಟು ವೈಶಿಷ್ಟ್ಯಗಳೊಂದಿಗೆ ಇದು ಬರುತ್ತದೆ.



Ad Widget

ಹಿಂಭಾಗದ ಬಾಗಿಲುಗಳ ಡೋರ್ ಹ್ಯಾಂಡಲ್‌ಗಳು ಸಿ-ಪಿಲ್ಲರ್‌ಗೆ ಬದಲಾಗಿ ಅದರ ಈ ಹಿಂದಿನ ಸಾಂಪ್ರದಾಯಿಕ ಸ್ಥಳಗಳಿಗೇ ಮರಳಿವೆ. ಇನ್ನು ಹಿಂಭಾಗದಲ್ಲಿ ಇದು ಮರು-ವಿನ್ಯಾಸಗೊಳಿಸಲಾದ ಟೈಲ್‌ಗೇಟ್ ಮತ್ತು ಕೆಳಗೆ ಸ್ಕಿಡ್ ಪ್ಲೇಟ್‌ನೊಂದಿಗೆ ಹೊಸ ಬಂಪರ್ ಅನ್ನು ಹೊಂದಿರಲಿದೆ. ಸ್ಟಾಪ್ ಲ್ಯಾಂಪ್‌ನೊಂದಿಗೆ ಸಂಯೋಜಿತ ಹಿಂಭಾಗದ ಸ್ಪಾಯ್ಲರ್, ಸಿ-ಆಕಾರದ ಡಿಆರ್‌ಎಲ್‌ಗಳೊಂದಿಗೆ ಎಲ್‌ಇಡಿ ಟೈಲ್‌ಲೈಟ್‌ಗಳು ಮತ್ತು ಕೆಳಗಿನ ರಿಫ್ಲೆಕ್ಟರ್‌ಗಳನ್ನು ಒಳಗೊಂಡಿದೆ.

Ad Widget

Ad Widget

ಹೊಸ ಸ್ವಿಫ್ಟ್‌ನ ದೊಡ್ಡ ಬದಲಾವಣೆಗಳಲ್ಲಿ ಹೊಸ ಪವರ್‌ಟ್ರೇನ್ ಕೂಡಾ ಒಂದಾಗಿರಲಿದೆ. ಹೊಸ ಪೀಳಿಗೆಯ ಈ ಸ್ವಿಫ್ಟ್‌ ಹೊಸದಾದ 1.2-ಲೀಟರ್, ತ್ರಿ ಸಿಲಿಂಡರ್, ಎನ್‌ಎ ಪೆಟ್ರೋಲ್ ಎಂಜಿನ್‌ನೊಂದಿಗೆ ಬರುವ ಸಾಧ್ಯತೆ ಇದೆ. ಈ ಎಂಜಿನ್ ಸದ್ಯ ಇರುವ ಕೆ 12 ಫೋರ್ ಸಿಲಿಂಡರ್‌ ಎಂಜಿನ್‌ನ ಜಾಗವನ್ನು ತುಂಬಲಿದೆ ಎನ್ನಲಾಗುತ್ತಿದೆ. ಹೊಸ ಕಾರಿನ ಬೆಲೆಯ ಬಗ್ಗೆ ಇನ್ನೂ ಮಾಹಿತಿ ಹೊರಬೀಳದೇ ಇದ್ದರೂ, ಬಿಡುಗಡೆಯ ಬಳಿಕ 2024 ಮಾರುತಿ ಸುಜುಕಿ ಸ್ವಿಫ್ಟ್‌ನ ಎಕ್ಸ್‌ಶೋರೂಮ್ ಬೆಲೆ 6.25 ಲಕ್ಷ ರೂಪಾಯಿಯಿಂದ 6.50 ಲಕ್ಷ ರೂಪಾಯಿ ನಡುವೆ ಇರಬಹುದು ಎಂದು ನಿರೀಕ್ಷಿಸಲಾಗಿದೆ.

Ad Widget

ಅಂತರ ರಾಜ್ಯ

Dhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?

Published

on



Ad Widget

Ad Widget

Ad Widget

Ad Widget

ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಗ್ಗೆ ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ 18 ಹಿಂದಿ ವರದಿ ಮಾಡಿದೆ.

Ad Widget

Ad Widget

Ad Widget

Ad Widget

ಗುರುಗ್ರಾಮ, ಅ. 10: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಗ್ಗೆ ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ 18 ಹಿಂದಿ ವರದಿ ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಆಯೋಜಿಸಲು ಉದ್ದೇಶಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಧ್ರುವ್ ರಾಠಿ ದೆಹಲಿಗೆ ತೆರಳಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

Ad Widget

Ad Widget <> Ad Widget

ವರದಿಯ ಪ್ರಕಾರ, ಗುರುಗ್ರಾಮದ ಸೆಕ್ಟರ್ 56ರ ಸೆಂಟ್ರಲ್ ಪಾರ್ಕ್ ವಿಹಾರ್‌ನಲ್ಲಿರುವ ರಾಠಿ ಅವರ ಕುಟುಂಬದ ನಿವಾಸಕ್ಕೆ ಶುಕ್ರವಾರ ತಡರಾತ್ರಿಯಿಂದಲೇ ಸುಮಾರು 50 ಪೊಲೀಸ್ ಸಿಬ್ಬಂದಿ ಜಮಾಯಿಸಿದ್ದರು. ಶನಿವಾರ ಬೆಳಗ್ಗೆ 7.48ರ ಸುಮಾರಿಗೆ ಅವರ ತಾಯಿ ಬಾಗಿಲು ತೆರೆದ ಬಳಿಕ ಪೊಲೀಸರು ಮನೆಯೊಳಗೆ ಪ್ರವೇಶಿಸಿ ರಾಠಿ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.



Ad Widget

ಆದರೆ, ಈ ಬೆಳವಣಿಗೆಗೆ ಸಂಬಂಧಿಸಿದಂತೆ ಪೊಲೀಸರು ಅಧಿಕೃತವಾಗಿ ನೀಡಿರುವ ಹೇಳಿಕೆ ಅಥವಾ ವಶಕ್ಕೆ ಪಡೆಯಲು ಕಾರಣವೇನು ಎಂಬ ಕುರಿತು ಹೆಚ್ಚಿನ ಮಾಹಿತಿ ವರದಿಯಲ್ಲಿ ಲಭ್ಯವಾಗಿಲ್ಲ

Continue Reading

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಮಂಗಳೂರು

MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ

Published

on



Ad Widget

Ad Widget

Ad Widget

Ad Widget

MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.

Ad Widget

Ad Widget <> Ad Widget

ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.



Ad Widget

ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Ad Widget

Ad Widget

ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.

EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading