ಅಪರಾಧ
Mangaluru-ಮಂಗಳೂರು : ಮೆಡಿಕಲ್ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ ಚಿತ್ರಿಕರಣ
ಮಂಗಳೂರು: ಇಲ್ಲಿನ ವೈದ್ಯಕೀಯ ಕಾಲೇಜೊಂದರಲ್ಲಿ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ ಚಿತ್ರೀಕರಿಸುತ್ತಿದ್ದುದು ಪತ್ತೆಯಾಗಿದೆ. ಈ ಕೃತ್ಯವನ್ನು 17 ವರ್ಷದ ಬಾಲಕನೊಬ್ಬ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವಿಡಿಯೊ ಚಿತ್ರೀಕರಿಸಿರುವ, ಕಾನೂನು ಸಂಘರ್ಷಕ್ಕೆ ಸಿಲುಕಿದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲನ್ಯಾಯ ಮಂಡಳಿ ಮುಂದೆ ಆತನನ್ನು ಹಾಜರುಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಯಾರೂ ಇಲ್ಲದ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ರಿಂಗಾಗುತ್ತಿತ್ತು. ಶೌಚಾಲಯವನ್ನು ಭದ್ರತಾ ಸಿಬ್ಬಂದಿ ಪರಿಶೀಲಿಸಿದಾಗ ಮೊಬೈಲ್ ಪತ್ತೆಯಾಗಿತ್ತು. ಬಾಲಕ ರೋಗಿಯ ಸೋಗಿನಲ್ಲಿ ವೈದ್ಯಕೀಯ ಕಾಲೇಜಿನ ಒಳಗೆ ಬಂದು ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ. ಮೊಬೈಲನ್ನು ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರ ಉತ್ತರ ಠಾಣೆಯಲ್ಲಿ ಮಹಿಳೆಯ ನಗ್ನ ಚಿತ್ರ ಸೆರೆ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ಪತ್ತೆಯಾದ ಮೊಬೈಲ್ ಬಳಸಿ ಶೌಚಾಲಯಕ್ಕೆ ಹೋಗಿದ್ದ ಮಹಿಳೆಯರ ವಿಡಿಯೋ ಚಿತ್ರೀಕರಿಸಲಾಗಿತ್ತೇ ಎಂಬ ವಿವರವನ್ನು ಬಹಿರಂಗಪಡಿಸಿಲ್ಲ
ಅಂತರ ರಾಜ್ಯ
Viral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ನವದೆಹಲಿ: ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ವೈರಲ್ ವಿಡಿಯೋದಲ್ಲಿ ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ಶಂಖ ಊದುತ್ತಾ ಆರತಿ ಮಾಡುತ್ತಿರುವುದು ಕಂಡುಬಂದಿದೆ. ಅವರ ಪಕ್ಕದಲ್ಲಿರುವ ಸಣ್ಣ ಟೇಬಲ್ ಮೇಲೆ ದೀಪ, ದೇವರ ಫೋಟೋ, ಹೂವು ಹಾಗೂ ಇತರ ಪೂಜಾ ಸಾಮಗ್ರಿಗಳನ್ನು ಇರಿಸಲಾಗಿದೆ. ಪಂಚೆ ಧರಿಸಿ, ಹಣೆಗೆ ವಿಭೂತಿ ಹಚ್ಚಿಕೊಂಡಿರುವ ವ್ಯಕ್ತಿ ರೈಲು ಚಲಿಸುತ್ತಿರುವಾಗಲೇ ಪೂಜಾ ವಿಧಿವಿಧಾನಗಳನ್ನು ನಡೆಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ.
ಮುಚ್ಚಿದ ಹಾಗೂ ಜನನಿಬಿಡ ರೈಲು ಬೋಗಿಯೊಳಗೆ ಬೆಂಕಿ ಹಚ್ಚಲು ಅವಕಾಶ ನೀಡಿರುವುದು ಹೇಗೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಧಾರ್ಮಿಕ ಆಚರಣೆ ವೈಯಕ್ತಿಕ ವಿಚಾರವಾದರೂ, ಹಲವು ಪ್ರಯಾಣಿಕರಿರುವ ಬೋಗಿಯೊಳಗೆ ತೆರೆದ ಜ್ವಾಲೆಯೊಂದಿಗೆ ದೀಪ ಹಚ್ಚುವುದು ಅಗ್ನಿ ಅವಘಡಕ್ಕೆ ಕಾರಣವಾಗುವ ಅಪಾಯವಿದೆ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.
ವೈರಲ್ ವಿಡಿಯೋಗೆ ಪ್ರತಿಕ್ರಿಯಿಸಿರುವ ಭಾರತೀಯ ರೈಲ್ವೆ, ಘಟನೆಯ ಬಗ್ಗೆ ಪರಿಶೀಲನೆ ನಡೆಸಲು ಹೆಚ್ಚಿನ ಮಾಹಿತಿಯನ್ನು ಕೇಳಿದೆ. ಪ್ರಯಾಣದ ದಿನಾಂಕ, ರೈಲು ಸಂಖ್ಯೆ ಹಾಗೂ ಪಿಎನ್ಆರ್ (PNR) ಸಂಖ್ಯೆಯಂತಹ ವಿವರಗಳನ್ನು ಹಂಚಿಕೊಳ್ಳುವಂತೆ ರೈಲ್ವೆಯ ಅಧಿಕೃತ ‘ರೈಲ್ವೆ ಸೇವಾ’ ಖಾತೆಯ ಮೂಲಕ ಮನವಿ ಮಾಡಲಾಗಿದೆ.
ಸ್ಥಳೀಯ
Arrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
ಕುಂದಾಪುರ: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
2026ರ ಸೆಪ್ಟೆಂಬರ್ 14ರಂದು ಬೈಂದೂರು ತಾಲೂಕಿನ ನಾಡ ಗುಡ್ಡೆಯಂಗಡಿ ನಿವಾಸಿ ಮುತ್ತು (75) ಅವರು ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ವೇಳೆ ಜನಸಂದಣಿಯ ನಡುವೆ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕೃತ್ಯದಲ್ಲಿ ಭಾಗಿಯಾಗಿದ್ದ ತಮಿಳುನಾಡು ಮೂಲದ ವಲ್ಲಿಯಮ್ಮ, ದೇವಿ ಯಾನೆ ತಿಲೋತ್ತಮ ಹಾಗೂ ಪೊನ್ನಿ ಎಂಬ ಮೂವರು ಮಹಿಳೆಯರನ್ನು ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿ ತಾಲೂಕಿನ ತಿರುನೆಲ್ಲಿ ಪೊಲೀಸರು ಬಂಧಿಸಿರುವ ಮಾಹಿತಿ ಕುಂದಾಪುರ ಪೊಲೀಸರಿಗೆ ಲಭ್ಯವಾಗಿತ್ತು.
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನಿರ್ದೇಶನದಂತೆ, ಕುಂದಾಪುರ ಪೊಲೀಸ್ ಠಾಣೆಯ ನಿರೀಕ್ಷಕರು ನ್ಯಾಯಾಲಯದ ಅನುಮತಿ ಪಡೆದು ಮಾನಂತವಾಡಿ ಜೈಲಿನಲ್ಲಿದ್ದ ಮೂವರು ಆರೋಪಿಗಳನ್ನು ಕುಂದಾಪುರಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ಅಪರಾಧ
Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
Uncategorized2 hours ago
ಪುತ್ತೂರು : ಅಡಿಕೆ ತೆಗೆಯುವಾಗ ಕಂಗಿನಿಂದ ಬಿದ್ದು ಗಂಭೀರ ಗಾಯ: ಚಿಕಿತ್ಸೆಗೆ ₹8 ಲಕ್ಷದ ಅಗತ್ಯ; ದಾನಿಗಳ ನೆರವಿನ ನಿರೀಕ್ಷೆಯಲ್ಲಿ ಬಡ ಕುಟುಂಬ
-
Uncategorized9 hours ago
ಕಾರ್ಯಕರ್ತರ ಶ್ರಮದಲ್ಲಿ ನೆಲಪ್ಪಾಲು ವೀರಾಂಜನೇಯ ಕ್ಷೇತ್ರ ನಿರ್ಮಾಣ: ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ | ಶ್ರೀ ಪಂಚಮುಖಿ ಆಂಜನೇಯ ಯಾಗದ ಅಂಗವಾಗಿ ಧರ್ಮಸಭೆ
-
Uncategorized2 hours ago
ಗ್ರಾಮೀಣ ವಿದ್ಯಾರ್ಥಿಗಳಿಗೆ ಮಡಿಯಾಲದಲ್ಲಿ ಉಚಿತ ಎಐ ಪದವಿ ಶಿಕ್ಷಣ ಕೇಂದ್ರ; ನ. 30ರಂದು ನಾರಾಯಣ ಭಟ್ ಜನ್ಮಶತಾಬ್ದಿ ಸ್ಮರಣಾರ್ಥ ಭೂಮಿಪೂಜೆ; 2027–28ರಿಂದ 30 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಯೋಜನೆ

















