ಸ್ಥಳೀಯ
NOTA-ಬಿಜೆಪಿ ನಾಯಕರ ವಿರುದ್ದ ಆಕ್ರೋಶ : ನೋಟಾ ಒತ್ತಿದ ಮೋದಿ ಅಭಿಮಾನಿ
ಬಾಗಲಕೋಟೆ: ತೇರದಾಳ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯ ಅಪ್ಪಟ ಅಭಿಮಾನಿಯಾಗಿರುವ ಬಿಜೆಪಿ ಮುಖಂಡರೊಬ್ಬರು ಮತದಾನ ಬಹಿರಂಗ ಪಡಿಸಬಾರದು ಎಂದಿದ್ದರೂ ನೋಟಾಗೆ ಮತದಾನ ಮಾಡಿರುವ ವಿಡಿಯೋ ವೈರಲ್ ಆಗಿದೆ. ತಾನೇಕೆ ನೋಟಾಗೆ ಮತ ಹಾಕಿದೆ ಎನ್ನುವುದನ್ನು ಅವರು ಈ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ತೇರದಾಳ ಬಿಜೆಪಿ ನಗರ ಮಂಡಳದ ಕಾರ್ಯದರ್ಶಿ ಕುಮಾರ ಕದಂ ನೋಟಾಗೆ ಮತದಾನ ಮಾಡಿರುವ ವಿಡಿಯೋ ವೈರಲ್ ಆಗಿದೆ. ನಮೋ ಅಭಿಮಾನಿಯಾಗಿರುವ ಕುಮಾರ ಅವರು ತಮ್ಮ ಕೈಮೇಲೆ ನಮೋ ಎಂದು ಟ್ಯಾಟೋ ಹಾಕಿಸಿಕೊಂಡಿದ್ದಾರೆ. ಆದರೆ, ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ‘ರಾಜ್ಯ ಬಿಜೆಪಿ ಮುಖಂಡರ ವರ್ತನೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಕಾರ್ಯಕರ್ತರ ನೋವು ಏನು ಎನ್ನುವುದು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಅವರಿಗೆ ತಲುಪಬೇಕು ಎಂದು ತಾವು ನೋಟಾಗೆ ಮತ ಚಲಾಯಿಸಿದ್ದಾಗಿ ಹೇಳಿಕೊಂಡಿದ್ದಾರೆ.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
-
Uncategorized14 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಮಂಗಳೂರು19 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized16 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ18 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ19 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ23 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಬಿಗ್ ನ್ಯೂಸ್18 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಸ್ಥಳೀಯ23 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು


















