Connect with us

ಬಿಗ್ ನ್ಯೂಸ್

Hoskote Brahmotsava | ಹೊಸಕೋಟೆ ಬ್ರಹ್ಮೋತ್ಸವಕ್ಕೆ ಮುಸ್ಲಿಂ ಸಮುದಾಯದ ಸದಸ್ಯ : ಬಿಜೆಪಿ ತೀವ್ರ ವಿರೋಧ – ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಮ್ತಿಯಾಜ್ ಪಾಷಾ ಮತ್ತು ಅಪ್ಸಾರ್ ರನ್ನು ಸದಸ್ಯರಾಗಿದ್ದಾಗ ನಿಮ್ಮ ಹಿಂದೂತ್ವದ ಅಭಿಮಾನ ಎಲ್ಲಿ ಅಡಗಿತ್ತು ಎಂದು ಬಿಜೆಪಿಯನ್ನು ಪ್ರಶ್ನಿಸಿದ ಸಿಎಂ – ದಾಖಲೆ ಸಮೇತ ಮುಖ್ಯಮಂತ್ರಿ ಪ್ರಶ್ನಿಸುತ್ತಿದ್ದಂತೆ ಬಿಜೆಪಿ ಪೋಸ್ಟ್ ಡಿಲೀಟ್ ..!

Published

on



Ad Widget

Ad Widget

Ad Widget

Ad Widget

ಹೊಸಕೋಟೆ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ (Hoskote Brahmotsava) ಸಮಿತಿಗೆ ಮುಸ್ಲಿಂ ಧರ್ಮದ ವ್ಯಕ್ತಿಯ ನೇಮಕ ವಿಷಯ ಹೊಸ ವಿವಾದಕ್ಕೆ ಕಾರಣವಾಗಿದ್ದು , ಕೊನೆಗೆ ಬಿಜೆಪಿ ಹಳೆಯ ಪೋಸ್ಟ್ ಡಿಲೀಟ್ ಮಾಡಿ ಮುಜುಗರಪಡುವಂತಹ ಸಂಗತಿ ನಡೆದಿದೆ.

Ad Widget

Ad Widget

Ad Widget

Ad Widget

ಸಿದ್ದರಾಮಯ್ಯ ಸರ್ಕಾರ ಹೊಸಕೋಟೆ ದೇವಸ್ಥಾನದ ಬ್ರಹ್ಮರಥೋತ್ಸವಕ್ಕೆ ಮುಸ್ಲಿಂ ವ್ಯಕ್ತಿ ನವಾಜ್ ಎನ್ನುವವರನ್ನು ಸಮಿತಿಗೆ ಹಾಕಿ ಇಸ್ಲಾಂ ಓಲೈಕೆಗೆ ಹೊರಟಿದ್ದಾರೆ ಮತ್ತು ಹಿಂದೂಗಳಿಗೆ ದ್ರೋಹ ಬರೆಯುತ್ತಿದ್ದಾರೆ ಎಂದು ಬಲಪಂಥೀಯ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ರಾಜ್ಯ ಬಿಜೆಪಿ ಅಧಿಕೃತ ಖಾತೆಯಲ್ಲೂ ಹಿಂದೂ ದೇವಸ್ಥಾನದ ಲೂಟಿಗೆ ಹಿಂದೂ ವಿರೋಧಿ ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ ಎಂದು ಬಿಂಬಿಸಿ ಪೋಸ್ಟ್ ಹಾಕಿದ್ದರು.

Ad Widget

Ad Widget

Ad Widget alt="Ad Widget"/>

Ad Widget

ಈ ಬಗ್ಗೆ ಇಂದು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದೆ ಕೂಡಲೇ ಬಿಜೆಪಿ ತನ್ನ ಹಳೆಯ ಪೋಸ್ಟ್ ಡಿಲೀಟ್ ಮಾಡಿದೆ. ಸಿಎಂ ಸಿದ್ದರಾಮಯ್ಯನವರು ಬಿಜೆಪಿ ನಾಯಕರನ್ನುದ್ದೇಶಿಸಿ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆಬಡಿದುಕೊಳ್ಳೀರಲ್ಲಾ? ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022ರ ಸಾಲಿನಲ್ಲಿ ಇದೇ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯದ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು? ಎಂದು ಪ್ರಶ್ನಿಸಿದರು.

Ad Widget

Ad Widget <> Ad Widget

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಎಲ್ಲ ಧರ್ಮಗಳ ಜನತೆ ಭಕ್ತಿ-ಗೌರವದಿಂದ ಭಾಗವಹಿಸುತ್ತಾರೆ. 2020ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಈ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಇಮ್ತಿಯಾಜ್ ಪಾಷಾ ಅವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2022ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಈ ಸಮಿತಿಗೆ ಅಪ್ಸರ್ ಅವರನ್ನು ಸದಸ್ಯರನ್ನಾಗಿ ಮಾಡಿತ್ತು ಎಂದು ಅವರು ಹೇಳಿದರು.



Ad Widget

ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಂಪತ್ತು ಲೂಟಿ ಮಾಡುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಮರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಆರೋಪಿಸುವಷ್ಟು ಕೀಳು ಮಟ್ಟಕ್ಕೆ ನಾನು ಇಳಿಯುವುದಿಲ್ಲ. ಎಲ್ಲವನ್ನೂ ಕೇಸರಿ ಕಣ್ಣುಗಳಿಂದ ನೋಡುವ ರೋಗದಿಂದ ಶೀಘ್ರ ಗುಣಮುಖರಾಗಿ ಎಂದು ನಿಮಗೂ ನಿಮ್ಮ ಸರ್ವೋಚ್ಚ ನಾಯಕರಾದ ನರೇಂದ್ರ ಮೋದಿ ಅವರಿಗೆ ಹಾರೈಸುತ್ತೇನೆ ಎಂದು ಅವರು ಹೇಳಿದರು.

Ad Widget

Ad Widget

ರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆದು ರಾಜ್ಯದ ಜಾತ್ಯತೀತ ಕನ್ನಡಿಗರ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯನವರು ಹೇಳಿದರು.

ಸಿಎಂ ಟ್ವೀಟ್ ಮಾಡುತ್ತಿದ್ದಂತೆ ಬಿಜೆಪಿ ಪೋಸ್ಟ್ ಡಿಲೀಟ್ – ಈ ಬಗ್ಗೆ ಸಿಎಂ ತನ್ನ ಟ್ವೀಟರಲ್ಲಿ ಫೋಸ್ಟ್ ಹಾಕಿದ್ದು ಹೀಗಿದೆ, ತಾನು ಹೇಳಿದ ಸುಳ್ಳನ್ನು ಅಳಿಸಿಹಾಕುವುದೆಂದರೆ ವಾಂತಿ ಮಾಡಿ, ಅದನ್ನು ಮಾಡಿದವರೇ ತಿಂದ ಹಾಗೆ. ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ರಾಜ್ಯ BJP Karnataka ನಾವು ಸತ್ಯವನ್ನು ಬಿಚ್ಚಿಟ್ಟ ಕೂಡಲೇ ಸಾಮಾಜಿಕ ಮಾಧ್ಯಮಗಳಲ್ಲಿದ್ದ ತನ್ನ ಸುಳ್ಳು ಆರೋಪದ ಹೇಳಿಕೆಯನ್ನು ಅಳಿಸಿಹಾಕಿದೆ.

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಕಾಂಗ್ರೆಸ್ ಸರ್ಕಾರ ಮುಸ್ಲಿಮ್ ಸಮುದಾಯದ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಿ ಹಿಂದೂಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿದೆ ಎಂಬ ಸುಳ್ಳು ಆರೋಪವನ್ನು ರಾಜ್ಯ ಬಿಜೆಪಿ ಮಾಡಿತ್ತು.ಈ ಬ್ರಹ್ಮರಥೋತ್ಸವ ಸಮಿತಿಗೆ ಬಿಜೆಪಿ ಸರ್ಕಾರದ ಕಾಲದಲ್ಲಿಯೂ ಮುಸ್ಲಿಮ್ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಲಾಗಿತ್ತು ಎಂಬ ಸತ್ಯ ಸಂಗತಿಯನ್ನು ನಾನು ದಾಖಲೆ ಸಮೇತ ಮುಂದಿಟ್ಟದ್ದು ಮಾತ್ರವಲ್ಲ, ಸಾಮಾಜಿಕ ಮಾಧ್ಯಮಗಳಲ್ಲಿನ ತನ್ನ ಹೇಳಿಕೆಯನ್ನು ಬಿಜೆಪಿ ಅಳಿಸಿಹಾಕಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದೆ.

ಬಣ್ಣ ಬಯಲಾದ ಕೂಡಲೇ ಎಚ್ಚೆತ್ತುಗೊಂಡ ಲಜ್ಜೆಗೆಟ್ಟ ಬಿಜೆಪಿ ಸಾಮಾಜಿಕ ಮಾಧ್ಯಮಗಳಲ್ಲಿದ್ದ ತನ್ನ ಹೇಳಿಕೆಯನ್ನು ಅಳಿಸಿಹಾಕಿದೆ. ಈ ಬಗ್ಗೆ ಇನ್ನೂ ರಾಜ್ಯದ ಜನರ ಕ್ಷಮೆ ಕೇಳಿಲ್ಲ.#ಲಜ್ಜೆಗೆಟ್ಟಬಿಜೆಪಿ ಮತ್ತು #ಫೇಕ್‌ನ್ಯೂಸ್‌ಫ್ಯಾಕ್ಟರಿ ಎಂದು ಪೋಸ್ಟ್ ಹಾಕಿದ್ದಾರೆ.

Ad Widget
Click to comment

Leave a Reply

ಮಂಗಳೂರು

Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.

Ad Widget

Ad Widget <> Ad Widget

ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



Ad Widget

ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು

Ad Widget

Ad Widget
  1. ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
  2. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
  3. ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು

Published

on



Ad Widget

Ad Widget

Ad Widget

Ad Widget

ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಘಟಕಗಳನ್ನೂ ಸ್ಥಾಪಿಸುವ ಮೂಲಕ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸಮಿತಿಯ ಆಶಯವಾಗಿದೆ.

Ad Widget

Ad Widget <> Ad Widget

ಈ ಕುರಿತು ಸೋಮವಾರ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅಭಿಯಾನದ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಯಿತು.



Ad Widget

120 ಎಕರೆ ಸರ್ಕಾರಿ ಜಮೀನಿನತ್ತ ಗಮನ

ಆಸ್ಪತ್ರೆಗಳ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸುವ ಪ್ರಕ್ರಿಯೆಗೆ ಸಮಿತಿ ಆದ್ಯತೆ ನೀಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿರುವ ಸೇಡಿಯಾಪು ಪ್ರದೇಶದ ಸಮೀಪ ಸುಮಾರು 120 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಆರ್ಯಾಪು ಗ್ರಾಮದಲ್ಲಿಯೂ ಸುಮಾರು 88 ಎಕರೆ ಜಾಗ ಗುರುತಿಸಲಾಗಿದೆ. ಸೂಕ್ತ ಸ್ಥಳ ಆಯ್ಕೆ ಮಾಡಿ ಆಸ್ಪತ್ರೆಗಳ ಘಟಕಗಳಿಗೆ ಜಮೀನು ಮೀಸಲಿಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸಮಿತಿಯ ಸಂಚಾಲಕ ಅಮಳ ರಾಮಚಂದ್ರ ತಿಳಿಸಿದ್ದಾರೆ.

Ad Widget

Ad Widget

ಸಮನ್ವಯದ ಚಿಕಿತ್ಸೆಗೆ ಅವಕಾಶ

ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಸಾಮೆತ್ತಡ್ಕದ ಡಾ. ಸಂದೀಪ್ ನಾಯಕ್ ಮಾತನಾಡಿ, ‘ಒಂದೇ ಆವರಣದಲ್ಲಿ ಹಲವು ಸಂಸ್ಥೆಗಳು, ಸಮನ್ವಯದ ಚಿಕಿತ್ಸೆ’ ಎಂಬ ಪರಿಕಲ್ಪನೆಯೊಂದಿಗೆ ಅಭಿಯಾನ ರೂಪಿಸಲಾಗಿದೆ ಎಂದರು.

ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಲು ಇಂತಹ ವ್ಯವಸ್ಥೆ ನೆರವಾಗಲಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ನಗರಗಳಿಗೆ ಕರೆದೊಯ್ಯುವ ಅಗತ್ಯವೂ ಕಡಿಮೆಯಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಣತಿ ಗಳಿಸಲು ಅವಕಾಶ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ವೈದ್ಯಕೀಯ ಕಾಲೇಜಿನೊಂದಿಗೆ ಸಂಶೋಧನಾ ಕೇಂದ್ರ, ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ವೃದ್ಧಾಪ್ಯ ಆರೈಕೆ ಕೇಂದ್ರಗಳನ್ನೂ ಸ್ಥಾಪಿಸಬೇಕು. ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಸೀಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.

ಸರ್ಕಾರಿ ಸ್ವಾಮ್ಯಕ್ಕೆ ಒತ್ತು

ವೈದ್ಯಕೀಯ ಕಾಲೇಜು ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಯಬೇಕು. ಅಗತ್ಯ ಅನುದಾನ, ವೈದ್ಯಕೀಯ ಸೌಲಭ್ಯ ಹಾಗೂ ಸಿಬ್ಬಂದಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಬೇಕು. ಹೋರಾಟ ರಾಜಕೀಯೇತರ ಮತ್ತು ಜಾತ್ಯತೀತ ನೆಲೆಯಲ್ಲಿ ಮುಂದುವರಿಯಬೇಕು ಎಂಬುದು ಸಮಿತಿಯ ನಿಲುವಾಗಿದೆ.

ಹಿರಿಯ ವೈದ್ಯಕೀಯ ಕಾಲೇಜು ಹೋರಾಟಗಾರ ದಿನೇಶ್ ಭಟ್ ಕೆ. ಮಾತನಾಡಿ, ಪುತ್ತೂರಿನಲ್ಲಿ ಉನ್ನತ ಆರೋಗ್ಯ ಸೇವೆಗಳ ಅಭಿವೃದ್ಧಿ ಅಗತ್ಯ ಎಂದರು. ಸುಳ್ಯ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ಭಾಗದ ಜನರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂಬುದು ಸಮಿತಿಯ ಆಶಯವಾಗಿದೆ.

ಸಭೆಯಲ್ಲಿ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Ad Widget
Continue Reading

ಬಿಗ್ ನ್ಯೂಸ್

Vitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ

Published

on



Ad Widget

Ad Widget

Ad Widget

Ad Widget

ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ: ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗಾಯಗೊಂಡವರನ್ನು ವಿಟ್ಲ ಪಡೂರು ಗ್ರಾಮದ ಕಡಂಬು ನಿವಾಸಿ, ಮೇಸ್ತಿ ಕೆಲಸ ಮಾಡುತ್ತಿದ್ದ ರಾಮಣ್ಣ ಮೂಲ್ಯ (45) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ರಾಮಣ್ಣ ಮೂಲ್ಯ ಅವರು ಕುಡ್ತಮುಗೇರು ಕಡೆಯಿಂದ ಕುಳಾಲು ಕಡೆಗೆ ಆಕ್ಟಿವಾದಲ್ಲಿ ತೆರಳುತ್ತಿದ್ದ ವೇಳೆ, ಬೊಲ್ಪಾದೆಯ ಅಪಾಯಕಾರಿ ತಿರುವಿನ ಏರು ರಸ್ತೆಯಲ್ಲಿ ಎದುರಿನಿಂದ ಬಂದ ಮಾರುತಿ ಕಾರು ಆಕ್ಟಿವಾಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.



Ad Widget

ಅಪಘಾತದ ತೀವ್ರತೆಗೆ ಆಕ್ಟಿವಾ ಸಂಪೂರ್ಣ ಜಖಂಗೊಂಡಿದ್ದು, ರಾಮಣ್ಣ ಮೂಲ್ಯ ಅವರ ಬಲಗೈ ಮೂಳೆ ಮುರಿದಿದೆ. ಡಿಕ್ಕಿಯ ಬಳಿಕ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಧರೆಗೆ ಅಪ್ಪಳಿಸಿ ಚರಂಡಿಗೆ ಬಿದ್ದಿದೆ.

Ad Widget

Ad Widget

ಘಟನೆ ನಡೆದ ತಕ್ಷಣ ಸ್ಥಳೀಯರು ಗಾಯಾಳುವನ್ನು ವಿಟ್ಲದ ಬೆನಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading