Connect with us

ಬಿಗ್ ನ್ಯೂಸ್

SSLC RESULT | ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ : ಉಡುಪಿ ಪ್ರಥಮ,ದಕ್ಷಿಣ ಕನ್ನಡ ದ್ವಿತೀಯ : ರಾಜ್ಯದಲ್ಲಿ ಏಕೈಕ ವಿದ್ಯಾರ್ಥಿನಿಗೆ 625/625 – ಕೇವಲ 8 ವಿದ್ಯಾರ್ಥಿಗಳಿಗೆ 624

Published

on



Ad Widget

Ad Widget

Ad Widget

Ad Widget

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ ಎಲ್‌ಸಿ ಪರೀಕ್ಷೆ-1ರ ಫ‌ಲಿತಾಂಶ (SSLC RESULT) ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ https://karresults.nic.in ನಲ್ಲಿ ಫ‌ಲಿತಾಂಶ ವೀಕ್ಷಿಸಬಹುದು.ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ 94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಏಕೈಕ ವಿದ್ಯಾರ್ಥಿನಿ ಬಾಗಲಕೋಟೆಯ ಅಂಕಿತಾ 625/625 ಅಂಕ ಪಡೆದಿರುವುದು ಈ ಬಾರಿಯ ವಿಶೇಷವಾಗಿದೆ. 8 ವಿದ್ಯಾರ್ಥಿಗಳು ಮಾತ್ರ 624 ಅಂಕ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 631204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 73.40 ರಷ್ಟು ಫಲಿತಾಂಶ ದಾಖಲಾಗಿದೆ.

Ad Widget

Ad Widget <> Ad Widget

ಈ ಬಾರಿಯ ಪರೀಕ್ಷೆಯನ್ನು ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಸಲಾಗಿದ್ದು, ಹೀಗಾಗಿ ಶೇಕಡಾ 30ರಷ್ಟು ಫಲಿತಾಂಶ ಕಡಿಮೆಯಾಗಿದೆ. ಹೀಗಾಗಿ ಕೃಪಾಂಕದ ಪ್ರಮಾಣವನ್ನು 10ರಿಂದ 20%ಗೆ ಹೆಚ್ಚಿಸಲಾಗಿದೆ.



Ad Widget

ಮಾ.25ರಿಂದ ಏ.6ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿತ್ತು. ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

ಮಂಗಳೂರು

Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.

Ad Widget

Ad Widget <> Ad Widget

ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



Ad Widget

ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು

Ad Widget

Ad Widget
  1. ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
  2. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
  3. ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು

Published

on



Ad Widget

Ad Widget

Ad Widget

Ad Widget

ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಘಟಕಗಳನ್ನೂ ಸ್ಥಾಪಿಸುವ ಮೂಲಕ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸಮಿತಿಯ ಆಶಯವಾಗಿದೆ.

Ad Widget

Ad Widget <> Ad Widget

ಈ ಕುರಿತು ಸೋಮವಾರ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅಭಿಯಾನದ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಯಿತು.



Ad Widget

120 ಎಕರೆ ಸರ್ಕಾರಿ ಜಮೀನಿನತ್ತ ಗಮನ

ಆಸ್ಪತ್ರೆಗಳ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸುವ ಪ್ರಕ್ರಿಯೆಗೆ ಸಮಿತಿ ಆದ್ಯತೆ ನೀಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿರುವ ಸೇಡಿಯಾಪು ಪ್ರದೇಶದ ಸಮೀಪ ಸುಮಾರು 120 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಆರ್ಯಾಪು ಗ್ರಾಮದಲ್ಲಿಯೂ ಸುಮಾರು 88 ಎಕರೆ ಜಾಗ ಗುರುತಿಸಲಾಗಿದೆ. ಸೂಕ್ತ ಸ್ಥಳ ಆಯ್ಕೆ ಮಾಡಿ ಆಸ್ಪತ್ರೆಗಳ ಘಟಕಗಳಿಗೆ ಜಮೀನು ಮೀಸಲಿಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸಮಿತಿಯ ಸಂಚಾಲಕ ಅಮಳ ರಾಮಚಂದ್ರ ತಿಳಿಸಿದ್ದಾರೆ.

Ad Widget

Ad Widget

ಸಮನ್ವಯದ ಚಿಕಿತ್ಸೆಗೆ ಅವಕಾಶ

ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಸಾಮೆತ್ತಡ್ಕದ ಡಾ. ಸಂದೀಪ್ ನಾಯಕ್ ಮಾತನಾಡಿ, ‘ಒಂದೇ ಆವರಣದಲ್ಲಿ ಹಲವು ಸಂಸ್ಥೆಗಳು, ಸಮನ್ವಯದ ಚಿಕಿತ್ಸೆ’ ಎಂಬ ಪರಿಕಲ್ಪನೆಯೊಂದಿಗೆ ಅಭಿಯಾನ ರೂಪಿಸಲಾಗಿದೆ ಎಂದರು.

ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಲು ಇಂತಹ ವ್ಯವಸ್ಥೆ ನೆರವಾಗಲಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ನಗರಗಳಿಗೆ ಕರೆದೊಯ್ಯುವ ಅಗತ್ಯವೂ ಕಡಿಮೆಯಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಣತಿ ಗಳಿಸಲು ಅವಕಾಶ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ವೈದ್ಯಕೀಯ ಕಾಲೇಜಿನೊಂದಿಗೆ ಸಂಶೋಧನಾ ಕೇಂದ್ರ, ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ವೃದ್ಧಾಪ್ಯ ಆರೈಕೆ ಕೇಂದ್ರಗಳನ್ನೂ ಸ್ಥಾಪಿಸಬೇಕು. ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಸೀಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.

ಸರ್ಕಾರಿ ಸ್ವಾಮ್ಯಕ್ಕೆ ಒತ್ತು

ವೈದ್ಯಕೀಯ ಕಾಲೇಜು ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಯಬೇಕು. ಅಗತ್ಯ ಅನುದಾನ, ವೈದ್ಯಕೀಯ ಸೌಲಭ್ಯ ಹಾಗೂ ಸಿಬ್ಬಂದಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಬೇಕು. ಹೋರಾಟ ರಾಜಕೀಯೇತರ ಮತ್ತು ಜಾತ್ಯತೀತ ನೆಲೆಯಲ್ಲಿ ಮುಂದುವರಿಯಬೇಕು ಎಂಬುದು ಸಮಿತಿಯ ನಿಲುವಾಗಿದೆ.

ಹಿರಿಯ ವೈದ್ಯಕೀಯ ಕಾಲೇಜು ಹೋರಾಟಗಾರ ದಿನೇಶ್ ಭಟ್ ಕೆ. ಮಾತನಾಡಿ, ಪುತ್ತೂರಿನಲ್ಲಿ ಉನ್ನತ ಆರೋಗ್ಯ ಸೇವೆಗಳ ಅಭಿವೃದ್ಧಿ ಅಗತ್ಯ ಎಂದರು. ಸುಳ್ಯ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ಭಾಗದ ಜನರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂಬುದು ಸಮಿತಿಯ ಆಶಯವಾಗಿದೆ.

ಸಭೆಯಲ್ಲಿ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Ad Widget
Continue Reading

ಬಿಗ್ ನ್ಯೂಸ್

Vitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ

Published

on



Ad Widget

Ad Widget

Ad Widget

Ad Widget

ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ: ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗಾಯಗೊಂಡವರನ್ನು ವಿಟ್ಲ ಪಡೂರು ಗ್ರಾಮದ ಕಡಂಬು ನಿವಾಸಿ, ಮೇಸ್ತಿ ಕೆಲಸ ಮಾಡುತ್ತಿದ್ದ ರಾಮಣ್ಣ ಮೂಲ್ಯ (45) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ರಾಮಣ್ಣ ಮೂಲ್ಯ ಅವರು ಕುಡ್ತಮುಗೇರು ಕಡೆಯಿಂದ ಕುಳಾಲು ಕಡೆಗೆ ಆಕ್ಟಿವಾದಲ್ಲಿ ತೆರಳುತ್ತಿದ್ದ ವೇಳೆ, ಬೊಲ್ಪಾದೆಯ ಅಪಾಯಕಾರಿ ತಿರುವಿನ ಏರು ರಸ್ತೆಯಲ್ಲಿ ಎದುರಿನಿಂದ ಬಂದ ಮಾರುತಿ ಕಾರು ಆಕ್ಟಿವಾಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.



Ad Widget

ಅಪಘಾತದ ತೀವ್ರತೆಗೆ ಆಕ್ಟಿವಾ ಸಂಪೂರ್ಣ ಜಖಂಗೊಂಡಿದ್ದು, ರಾಮಣ್ಣ ಮೂಲ್ಯ ಅವರ ಬಲಗೈ ಮೂಳೆ ಮುರಿದಿದೆ. ಡಿಕ್ಕಿಯ ಬಳಿಕ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಧರೆಗೆ ಅಪ್ಪಳಿಸಿ ಚರಂಡಿಗೆ ಬಿದ್ದಿದೆ.

Ad Widget

Ad Widget

ಘಟನೆ ನಡೆದ ತಕ್ಷಣ ಸ್ಥಳೀಯರು ಗಾಯಾಳುವನ್ನು ವಿಟ್ಲದ ಬೆನಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading