Connect with us

ಬಿಗ್ ನ್ಯೂಸ್

Sand Mafia | ಕುಮಾರಧಾರ ನದಿಯಲ್ಲಿ ಅಕ್ರಮ ಮರಳು ದಂಧೆಗೆ ತುಂಬಿದ ಡ್ಯಾಮ್ ಖಾಲಿ..! : ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಚೆನ್ನಪ್ಪ ಗೌಡರ ವಿರುದ್ಧ ಬರೋಬ್ಬರಿ 6 ಎಫ್ಐಆರ್ ದಾಖಲು – ಬೃಹತ್ ಮರಳು ದಂಧೆಯ ಅಡ್ಡೆಗೆ ಪೊಲೀಸ್ ದಾಳಿ ಸಂದರ್ಭ ತಪ್ಪಿಸಿ ಓಡುವಾಗ ಬಿದ್ದು ಎರಡು ಕೈ ಮುರಿತ..!

Published

on



Ad Widget

Ad Widget

Ad Widget

Ad Widget

ಕುಮಾರಧಾರ ನದಿಯಲ್ಲಿ ಮರಳು ಕಳ್ಳತನ ನಡೆಸುತ್ತಿದ್ದ ಬೃಹತ್ ಜಾಲವೊಂದನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮೇ 7 ರಂದು ಬೇಧಿಸಿದ್ದಾರೆ. ಜಿಲ್ಲೆಯ ಪ್ರತಿಷ್ಟಿತ ಜನ ಪ್ರತಿನಿಧಿಯೊಬ್ಬರ ಕೃಪಕಟಾಕ್ಷದಲ್ಲಿ ಬಿಜೆಪಿಯ ಪ್ರಭಾವಿ ನಾಯಕರೊಬ್ಬರ ನೇತೃತ್ವದಲ್ಲಿ ಕಡಬದ ಕುದ್ಮಾರಿನಲ್ಲಿ ಈ ಬೃಹತ್ ಮರಳು ದಂಧೆ (Sand Mafia) ಕಳೆದ ಹಲವಾರು ಸಮಯದಿಂದ ಎಗ್ಗಿಲ್ಲದೆ ನಡೆಯುತಿತ್ತು. ಈ ಬಗ್ಗೆ ಹಲವು ಬಾರಿ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರೂ, ಯಾವುದೇ ಕ್ರಮ ಕೈಗೊಂಡಿರಲಿಲ್ಲ.

Ad Widget

Ad Widget

Ad Widget

Ad Widget

ಪುತ್ತೂರು ಎಪಿಎಂಸಿಯ ಮಾಜಿ ಅಧ್ಯಕ್ಷ ಜಿಲ್ಲೆಯ ಪ್ರಭಾವಿ ಬಿಜೆಪಿ ಮುಖಂಡ ದಿನೇಶ್ ಮೆದು ಈ ಮರಳು ಮಾಫಿಯಾದ ಕಿಂಗ್ ಪಿನ್ ಎನ್ನಲಾಗುತ್ತಿದ್ದು ದಾಳಿಯ ಬಳಿಕ ಆತನ ವಿರುದ್ದ ಪೊಲೀಸರು ಹಲವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳೀಯ ನಿವಾಸಿ ಚೆನ್ನಪ್ಪ ಗೌಡ ಎಂಬಾತನೂ ಅಕ್ರಮ ಮರಳುಗಾರಿಕೆಗೆ ಸಹಕಾರ ನೀಡಿದ್ದು ಆತನ ವಿರುದ್ದವೂ ಹಲವು ಪ್ರಕರಣಗಳು ದಾಖಲಾಗಿವೆ. ಇವರಿಬ್ಬರ ವಿರುದ್ದ ಒಟ್ಟು 6 ಪ್ರಕರಣಗಳು ದಾಖಲಾಗಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕಡಬ ತಾಲೂಕಿನ ಕುದ್ಮಾರಿನಲ್ಲಿರುವ ಶಾಂತಿಮೊಗೇರು ಸೇತುವೆ ಬಳಿ ಈ ಅಕ್ರಮ ಮರಳು ಅಡ್ಡೆ ಕಾರ್ಯಾಚರಿಸುತಿತ್ತು. ಸ್ಥಳೀಯ ನಿವಾಸಿ ಚೆನ್ನಪ್ಪ ಗೌಡ ಎಂಬವರ ಜಮೀನು ಈ ಅಡ್ಡೆಯ ಪಕ್ಕದಲ್ಲಿದ್ದು ಈ ಜಮೀನಿನ ಮೂಲಕ ಆತ ಮರಳು ಸಾಗಾಟಕ್ಕೆ ಅವಕಾಶ ನೀಡುತ್ತಿದ್ದ. ಅಲ್ಲದೇ ಈ ಮರಳು ದಂಧೆಯಲ್ಲೂ ಆತನೂ ಪ್ರಮುಖ ಪಾತ್ರಧಾರಿ ಎನ್ನುವುದು ಸ್ಥಳೀಯರ ಆರೋಪ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜಾಣ ಮೌನದ ರೂಪದಲ್ಲಿ ದಂಧೆಕೋರರಿಗೆ ಸಿಗುತ್ತಿದ್ದ ಸಹಕಾರದಿಂದಲೇ ಇಲ್ಲಿ ಕಳೆದ ಹಲವಾರು ವರ್ಷಗಳಿಂದ ಮರಳು ದಂಧೆ ರಾಜರೋಷವಾಗಿ ನಡೆಯುತಿತ್ತು ಎಂದು ಸಾರ್ವಜನಿಕರು ತಿಳಿಸಿದ್ದಾರೆ.

Ad Widget

Ad Widget <> Ad Widget

ಜಿಲ್ಲೆಯ ಪ್ರಭಾವಿ ಜನಪ್ರತಿನಿಧಿಯೊಬ್ಬರು ಇವರ ಮರಳು ದಂಧೆಗೆ ಬೆಂಗಾವಲು ಆಗಿದ್ದರು ಹಾಗೂ ಈ ಬಾರಿ ಅವರಿಗೆ ಟಿಕೆಟ್ ಕೈ ತಪ್ಪಿದ್ದು ಈ ಮರಳು ದಂಧೆಕೋರರಿಗೆ ದೊಡ್ಡ ಹಿನ್ನಡೆಯಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೇ ಚುನಾವಣೆ ನಿಮಿತ್ತ ಹಲವು ಪೊಲೀಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು , ಹೊಸತಾಗಿ ಬಂದ ಅಧಿಕಾರಿಗಳು ಈ ಮರಳು ಅಡ್ಡೆಯ ಮೇಲೆ ದಾಳಿ ಮಾಡುವ ದೈರ್ಯ ತೋರಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.



Ad Widget

ಬುಧವಾರ ತಡ ರಾತ್ರಿ ಮರಳು ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ಹಲವಾರು ಟಿಪ್ಪರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ದಾಳಿಯ ವೇಳೆ ಮರಳು ರ್ಯಾಂಪ್ ನಲ್ಲಿ 10ಕ್ಕೂ ಹೆಚ್ಚು ಟಿಪ್ಪರ್ ಗಳು ಮರಳು ಸಾಗಿಸಲು ಅಲ್ಲಿ ಬಂದಿದ್ದವು ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಆದರೆ ಪೊಲೀಸರಿಗೆ ಮರಳು ತುಂಬಿದ್ದ 5 ರಿಂದ 6 ಲಾರಿಗಳು ಸಿಕ್ಕಿದ್ದು, ಅದನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯ ವೇಳೆ ಲಕ್ಷಾಂತರ ಮೌಲ್ಯದ ಮರಳು ಹಾಗೂ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

ಇನ್ನು ಮರಳು ಅಡ್ಡೆಗೆ ಪೊಲೀಸ್ ದಾಳಿಯಾಗಿ ತನ್ನ ವಿರುದ್ದ ಪ್ರಕರಣ ದಾಖಲಾದ ಹಾಗೂ ತನ್ನನ್ನು ಬಂಧಿಸಲು ಪೊಲೀಸರು ಬರುವ ಮಾಹಿತಿ ದೊರೆತ ದಿನೇಶ್ ಮೆದು ಅವರು ಮನೆಯ ಅಟ್ಟದಲ್ಲಿ ಅಡಗಿ ಕೂತಿದ್ದರು ಮತ್ತು ಮನೆ ಬಳಿ ಪೊಲೀಸರು ಬರುತ್ತಲೇ ಅಟ್ಟದಿಂದ ಹಾರಿ ತಪ್ಪಿಸಿಕೊಳ್ಳಲು ಹೋದಾಗ ಕೈಗೆ ಬಲವಾದ ಏಟಾಗಿದೆ ಎಂಬ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇನ್ನೂ ಸ್ಥಳೀಯರು ಹಾಗೂ ಪೊಲೀಸ್ ಮೂಲಗಳು ಇದೇ ಮಾತನ್ನು ಪುನರುಚ್ಚರಿಸುತ್ತಿದ್ದಾರೆ. ಸದ್ಯ ದಿನೇಶ್ ಮೆದು ಅವರು ಕೈ ಗಾದ ಗಾಯಕ್ಕೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಅವರ ಆಪ್ತ ಮೂಲಗಳು ತಿಳಿಸಿವೆ. ಇದನ್ನು ಖಚಿತ ಪಡಿಸಿಕೊಳ್ಳಲು ನಿಖರ ವರದಿಗಾರ ಮಾಡಿದ ಕರೆಯನ್ನು ದಿನೇಶ್ ಮೆದು ಸ್ವೀಕರಿಸಿಲ್ಲ.

ಬಂಧನ ಭೀತಿಯಲ್ಲಿ ದಿನೇಶ್ ಮೆದು ಗಾಯಗೊಂಡು ದಿನೇಶ್ ಮೆದು ಆಸ್ಪತ್ರೆ ಸೇರಿರುವುದರಿಂದ ಪೊಲೀಸರು ಆತನನ್ನು ಬಂಧಿಸಿಲ್ಲ ಎಂದು ಹೇಳಲಾಗುತ್ತಿದ್ದು, ಒಂದೊಮ್ಮೆ ಆಸ್ಪತ್ರೆಯಿಂದ ಬಿಡುಗಡೆಗೊಂಡರೆ ಮರಳು ದಂಧೆಯ ಕಿಂಗ್ ಪಿನ್ ಅನ್ನು ಪೊಲೀಸರು ಬಂಧಿಸುವ ಸಾಧ್ಯತೆಯಿದೆ. ಹೀಗಾಗಿ ಮೆದು ಅವರು ಆಸ್ಪತ್ರೆಯಿಂದಲೇ ನಿರೀಕ್ಷಣಾ ಜಾಮೀನಿಗೆ ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಅಣೆಕಟ್ಟಿಗೆ ಕನ್ನ ಕೊರೆದು ಜಲಾಶಯದ ನೀರು ಬರಿದು ಮಾಡಿದ ದಂಧೆಕೋರರು ಜೆಸಿಬಿ ಮೂಲಕ ಕುಮಾರಧಾರ ನದಿಯಿಂದ ಮರಳನ್ನು ತೆಗೆಯುವ ಮರಳು ದಂಧೆಕೋರರು, ಅದನ್ನು ಸ್ವಚ್ಚಗೊಳಿಸಲು ಬೇಕಾದ ನೀರಿಗೆ ಪಕ್ಕದಲ್ಲಿರುವ ಶಾಂತಿಮೊಗರು ಕಿಂಡಿ ಅಣೆಕಟ್ಟಿಗೆ ಕನ್ನ ಕೊರೆಯುತ್ತಾರೆ ಎಂಬ ಗಂಭೀರ ಆರೋಪ ಹಾಗೂ ಅದಕ್ಕೆ ಪುಷ್ಟಿ ನೀಡುವ ವಿಡಿಯೋ ಸಾಕ್ಷಿಗಳು ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ಕೆಲವು ದಿನಗಳಿಂದ ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆಯಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ಹೋರಾಟ ನಡೆಸುತ್ತಿದ್ದಾರೆ.

ಶಾಂತಿಮೊಗರು ಕಿಂಡಿ ಅಣೆಕಟ್ಟಿನ ಮೇಲ್ಬಾಗದಲ್ಲಿ ಹಾಗೂ ಅಣೆಕಟ್ಟಿನ ಕೆಳಭಾಗದಲ್ಲಿ ತಲಾ ಒಂದು ಮರಳು ಅಡ್ಡೆ ಕಾರ್ಯಾಚರಿಸುತ್ತಿದ್ದಾರೆ. ಮೇಲ್ಭಾಗದವರು ಅಣೆಕಟ್ಟಿನಲ್ಲಿ ನೀರು ನಿಂತರೆ ಮರಳು ತೆಗೆಯಲು ಅಡ್ಡಿಯಾಗುತ್ತದೆ ಎಂದು ಆಣೆಕಟ್ಟಿಗೆ ಕನ್ನ ಕೊರೆದು ನೀರು ಸೋರಿ ಹೋಗುವಂತೆ ಮಾಡುತ್ತಿದ್ದಾರೆ. ಕೆಲ ಭಾಗದವರು ಮಣ್ಣನ್ನು ಮರಳಿನಿಂದ ಸೇರ್ಪಡೆಗೊಳಿಸಲು ಬೇಕಾದ ಅಗಾಧ ನೀರಿಗಾಗಿ ಆಣೆಕಟ್ಟಗೆ ತೂತು ಕೊರೆಯುತ್ತಿದ್ದಾರೆ ಎನ್ನುತ್ತಾರೆ ಸ್ಥಳೀಯರು.ಇದರಿಂದ ಅಣೆಕಟ್ಟಿನ ನೀರು ಸಂಪೂರ್ಣವಾಗಿ ಬರಿದಾಗಿದ್ದು ಕೃಷಿಕರು ನೀರಿಲ್ಲದೇ ಪರದಾಡುವಂತೆ ಆಗಿದೆ.

Ad Widget

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಅಂತರ ರಾಜ್ಯ

Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ

Published

on



Ad Widget

Ad Widget

Ad Widget

Ad Widget

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.

Ad Widget

Ad Widget <> Ad Widget

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.



Ad Widget

ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.

Ad Widget

Ad Widget

ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.

ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.

ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.

ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading